T20 World Cup 2024: ಸೆಮಿಫೈನಲ್‌ ಪಂದ್ಯಗಳು ಮಳೆಯಿಂದ ರದ್ದಾದರೆ ಯಾವ 2 ತಂಡಗಳು ಫೈನಲ್​ಗೇರಲಿವೆ ಗೊತ್ತಾ?

T20 World Cup 2024: ಐಸಿಸಿ ನಿಯಮಗಳ ಪ್ರಕಾರ ಸೆಮಿಫೈನಲ್ ಪಂದ್ಯದ ವೇಳೆ ಮಳೆ ಸುರಿದು ಪಂದ್ಯ ರದ್ದಾದರೆ ಅದರ ಗುಂಪಿನಲ್ಲಿ ಅಗ್ರಸ್ಥಾನದಲ್ಲಿರುವ ತಂಡ ಫೈನಲ್‌ಗೆ ಲಗ್ಗೆ ಇಡಲಿದೆ. ಗುಂಪಿನಲ್ಲಿ ಎರಡನೇ ಸ್ಥಾನ ಪಡೆಯುವ ತಂಡ ವಿಶ್ವಕಪ್‌ನಿಂದ ಹೊರಗುಳಿಯಲಿದೆ. ಇದರರ್ಥ 2 ಗುಂಪುಗಳಲ್ಲಿ ಅಗ್ರಸ್ಥಾನದಲ್ಲಿರುವ ಭಾರತ ಹಾಗೂ ದಕ್ಷಿಣ ಆಫ್ರಿಕಾ ಫೈನಲ್ ಆಡಲಿವೆ.

T20 World Cup 2024: ಸೆಮಿಫೈನಲ್‌ ಪಂದ್ಯಗಳು ಮಳೆಯಿಂದ ರದ್ದಾದರೆ ಯಾವ 2 ತಂಡಗಳು ಫೈನಲ್​ಗೇರಲಿವೆ ಗೊತ್ತಾ?
ಟಿ20 ವಿಶ್ವಕಪ್ ಸೆಮಿಫೈನಲ್
Follow us
ಪೃಥ್ವಿಶಂಕರ
|

Updated on: Jun 26, 2024 | 4:45 PM

ಟಿ20 ವಿಶ್ವಕಪ್‌ ಮುಕ್ತಾಯಕ್ಕೆ ಇನ್ನು ಕೇವಲ 3 ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಈ ಮೂರು ಪಂದ್ಯಗಳಲ್ಲಿ ಎರಡು ಸೆಮಿಫೈನಲ್‌ ಪಂದ್ಯಗಳು ನಾಳೆ ಅಂದರೆ ಜೂನ್ 27 ರಂದು ನಡೆಯಲಿವೆ. ಮೊದಲ ಸೆಮಿಫೈನಲ್ ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ನಡುವೆ ನಡೆಯಲಿದ್ದು, ಎರಡನೇ ಸೆಮಿಫೈನಲ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ಮುಖಾಮುಖಿಯಾಗಲಿವೆ. ವೆಸ್ಟ್ ಇಂಡೀಸ್‌ನಲ್ಲಿ ನಡೆದ ಸೂಪರ್ 8 ಸುತ್ತಿನ ಹಲವು ಪಂದ್ಯಗಳಿಗೆ ಮಳೆ ಹಾಜರಿ ಹಾಕಿತ್ತು. ಹಾಗಾಗಿ ಸೆಮಿಫೈನಲ್‌ ಪಂದ್ಯಕ್ಕೂ ಮಳೆಯ ಅವಕೃಪೆ ಎದುರಾಗುವ ಸಾಧ್ಯತೆಗಳಿವೆ. ವೇಳಾಪಟ್ಟಿಯ ಪ್ರಕಾರ ಮೊದಲ ಸೆಮಿಫೈನಲ್‌ ಫೈನಲ್ ಪಂದ್ಯಕ್ಕೆ ಮೀಸಲು ದಿನವಿದೆ. ಆದರೆ ಎರಡನೇ ಸೆಮಿಫೈನಲ್‌ ಪಂದ್ಯಕ್ಕೆ ಮೀಸಲು ದಿನವಿಲ್ಲ. ಹೀಗಾಗಿ ಈ ಪಂದ್ಯ ನಾಳೆಯೇ ನಡೆಯಬೇಕಿದೆ. ಒಂದು ವೇಳೆ ಈ ಎರಡೂ ಸೆಮಿಫೈನಲ್‌ ಪಂದ್ಯಗಳು ಮಳೆಯಿಂದಾಗಿ ರದ್ದಾದರೆ ಯಾವ ತಂಡಗಳಿಗೆ ಲಾಭ? ಯಾವ ತಂಡಗಳು ಫೈನಲ್​ಗೆ ಹೋಗುತ್ತವೆ ಎಂಬ ಪ್ರಶ್ನೆ ಅಭಿಮಾನಿಗಳ ಮನದಲ್ಲಿ ಮೂಡಿದೆ.

ಮಳೆ ಬಂದರೆ ಯಾವೆರಡು ತಂಡಗಳಿಗೆ ಲಾಭ?

ವಿಶ್ವಕಪ್‌ನ ಮೊದಲ ಸೆಮಿಫೈನಲ್ ಪಂದ್ಯ ದಕ್ಷಿಣ ಆಫ್ರಿಕಾ ಮತ್ತು ಅಫ್ಘಾನಿಸ್ತಾನ ನಡುವೆ ಟ್ರಿನಿಡಾಡ್‌ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ಭಾರತೀಯ ಕಾಲಮಾನ ಬೆಳಿಗ್ಗೆ 6 ಗಂಟೆಗೆ ನಡೆಯಲಿದೆ. ಸದ್ಯ ಗುಂಪು-2ರಲ್ಲಿ ದಕ್ಷಿಣ ಆಫ್ರಿಕಾ ಮೊದಲ ಸ್ಥಾನದಲ್ಲಿದ್ದು, ಅಫ್ಘಾನಿಸ್ತಾನ ಎರಡನೇ ಸ್ಥಾನದಲ್ಲಿದೆ. ಒಂದು ವೇಳೆ ಮಳೆಯಿಂದಾಗಿ ಪಂದ್ಯ ರದ್ದುಗೊಂಡರೆ ಈ ಎರಡು ತಂಡಗಳಲ್ಲಿ ಯಾರು ಫೈನಲ್‌ಗೆ ಲಗ್ಗೆ ಇಡಬಹುದು ಎಂಬುದು ಈಗ ದೊಡ್ಡ ಪ್ರಶ್ನೆಯಾಗಿದೆ.

ICC T20I rankings: ಟಿ20 ರ‍್ಯಾಂಕಿಂಗ್​ನಲ್ಲಿ ಸೂರ್ಯನ ಅಧಿಪತ್ಯ ಅಂತ್ಯ..! ಅಗ್ರಸ್ಥಾನಕ್ಕೇರಿದ್ಯಾರು ಗೊತ್ತಾ?

ಐಸಿಸಿ ನಿಯಮಗಳ ಪ್ರಕಾರ ಸೆಮಿಫೈನಲ್ ಪಂದ್ಯದ ವೇಳೆ ಮಳೆ ಸುರಿದು ಪಂದ್ಯ ರದ್ದಾದರೆ ಅದರ ಗುಂಪಿನಲ್ಲಿ ಅಗ್ರಸ್ಥಾನದಲ್ಲಿರುವ ತಂಡ ಫೈನಲ್‌ಗೆ ಲಗ್ಗೆ ಇಡಲಿದೆ. ಗುಂಪಿನಲ್ಲಿ ಎರಡನೇ ಸ್ಥಾನ ಪಡೆಯುವ ತಂಡ ವಿಶ್ವಕಪ್‌ನಿಂದ ಹೊರಗುಳಿಯಲಿದೆ. ಇದೇ ಪರಿಸ್ಥಿತಿ ಭಾರತ ಮತ್ತು ಇಂಗ್ಲೆಂಡ್‌ ನಡುವಿನ ಪಂದ್ಯಕ್ಕೂ ಅನ್ವಯಿಸುತ್ತದೆ. ಈ ಎರಡೂ ತಂಡಗಳ ನಡುವಿನ ಹೈವೋಲ್ಟೇಜ್ ಪಂದ್ಯಕ್ಕೆ ಗಯಾನಾದ ಪ್ರಾವಿಡೆನ್ಸ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಒಂದು ವೇಳೆ ಮಳೆಯಿಂದಾಗಿ ಈ ಪಂದ್ಯ ರದ್ದಾದರೆ, ಟೀಂ ಇಂಡಿಯಾ ನೇರವಾಗಿ ಫೈನಲ್‌ಗೆ ಪ್ರವೇಶಿಸಲಿದ್ದು, ಇಂಗ್ಲೆಂಡ್ ತಂಡ ವಿಶ್ವಕಪ್‌ನಿಂದ ಹೊರಬೀಳಲಿದೆ.

ಸೆಮಿಫೈನಲ್ ಪ್ರಯಾಣ ಹೀಗಿತ್ತು

ನಿನ್ನೆ ನಡೆದ ರೋಚಕ ಪಂದ್ಯದಲ್ಲಿ ಅಫ್ಘಾನಿಸ್ತಾನ, ಬಾಂಗ್ಲಾದೇಶವನ್ನು ಸೋಲಿಸಿ ಸೆಮಿಫೈನಲ್ ಪ್ರವೇಶಿಸಿದೆ. ಅಫ್ಘಾನಿಸ್ತಾನದ ಗೆಲುವಿನೊಂದಿಗೆ ಆಸ್ಟ್ರೇಲಿಯಾ ಮತ್ತು ಬಾಂಗ್ಲಾದೇಶ ಟೂರ್ನಿಯಿಂದ ಹೊರಬಿದ್ದಿವೆ. ಇತ್ತ ಆಸ್ಟ್ರೇಲಿಯಾವನ್ನು ಸೋಲಿಸುವ ಮೂಲಕ ಟೀಂ ಇಂಡಿಯಾ ಸೆಮಿಫೈನಲ್‌ಗೆ ಅರ್ಹತೆ ಪಡೆದಿದೆ. ಇಂಗ್ಲೆಂಡ್ ತಂಡವನ್ನು ಸೋಲಿಸಿ ದಕ್ಷಿಣ ಆಫ್ರಿಕಾ ಸೆಮಿಫೈನಲ್‌ನಲ್ಲಿ ಸ್ಥಾನ ಪಡೆದಿದ್ದರೆ, ಇಂಗ್ಲೆಂಡ್ ಅಮೆರಿಕ ತಂಡವನ್ನು ಸೋಲಿಸಿ ಸೆಮಿಫೈನಲ್‌ಗೆ ಲಗ್ಗೆ ಇಟ್ಟಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ