IND vs AUS: ಭಾರತ-ಆಸೀನ್ ಪಂದ್ಯದ ವೇಳೆ ಶೇ. 55 ರಷ್ಟು ಮಳೆ; ಪಂದ್ಯ ರದ್ದಾದರೆ ಯಾವ ತಂಡಕ್ಕೆ ಹೆಚ್ಚು ಲಾಭ?

|

Updated on: Jun 23, 2024 | 10:21 PM

IND vs AUS, Saint Lucia Weather Forecast: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಜೂನ್ 24 ರಂದು ಸೇಂಟ್ ಲೂಸಿಯಾದಲ್ಲಿ ಸ್ಥಳೀಯ ಕಾಲಮಾನ ಬೆಳಿಗ್ಗೆ 10.30 ಕ್ಕೆ ನಡೆಯಲಿದೆ. ಅಂದರೆ ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಆರಂಭವಾಗಲಿದೆ. ಹವಾಮಾನ ವರದಿಗಳ ಪ್ರಕಾರ, ಈ ದಿನ ಸೇಂಟ್ ಲೂಸಿಯಾದಲ್ಲಿ ಬೆಳಿಗ್ಗೆ ಶೇ. 55 ರಷ್ಟು ಮಳೆಯಾಗುವ ಸಾಧ್ಯತೆಯಿದೆ.

IND vs AUS: ಭಾರತ-ಆಸೀನ್ ಪಂದ್ಯದ ವೇಳೆ ಶೇ. 55 ರಷ್ಟು ಮಳೆ; ಪಂದ್ಯ ರದ್ದಾದರೆ ಯಾವ ತಂಡಕ್ಕೆ ಹೆಚ್ಚು ಲಾಭ?
ಭಾರತ- ಅಸ್ಟ್ರೇಲಿಯಾ
Follow us on

ಟಿ20 ವಿಶ್ವಕಪ್ 2024 ರ (T20 World Cup 2024 ಸೂಪರ್ 8 ಸುತ್ತಿನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ (India vs Australia) ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲ್ಲಿದೆ. ಸೆಮಿಫೈನಲ್‌ ಸ್ಪರ್ಧೆಯನ್ನು ಪರಿಗಣಿಸಿದರೆ ಈ ಪಂದ್ಯ ಉಭಯ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ಈ ಪಂದ್ಯದ ಮೇಲೆ ಎಲ್ಲರ ದೃಷ್ಟಿ ನೆಟ್ಟಿದೆ. ಆದರೆ ಪಂದ್ಯಕ್ಕೆ ಮಳೆ ಅಡ್ಡಿಪಡಿಸುತ್ತಾ ಆತಂಕ ಎರಡೂ ತಂಡಗಳ ಅಭಿಮಾನಿಗಳಲ್ಲಿ ಮೂಡಿದೆ. ಅವರ ಆತಂಕದಂತೆ ಈ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿ ಮಳೆಯಿಂದಾಗಿ ಈ ಪಂದ್ಯ ರದ್ದಾದರೆ ಒಂದು ತಂಡ ಹೆಚ್ಚು ನಷ್ಟ ಅನುಭವಿಸಲಿದೆ.

ಹವಾಮಾನ ಹೇಗಿರುತ್ತದೆ?

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯ ಜೂನ್ 24 ರಂದು ಸೇಂಟ್ ಲೂಸಿಯಾದಲ್ಲಿ ಸ್ಥಳೀಯ ಕಾಲಮಾನ ಬೆಳಿಗ್ಗೆ 10.30 ಕ್ಕೆ ನಡೆಯಲಿದೆ. ಅಂದರೆ ಈ ಪಂದ್ಯ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಆರಂಭವಾಗಲಿದೆ. ಹವಾಮಾನ ವರದಿಗಳ ಪ್ರಕಾರ, ಈ ದಿನ ಸೇಂಟ್ ಲೂಸಿಯಾದಲ್ಲಿ ಬೆಳಿಗ್ಗೆ ಶೇ. 55 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಇದಲ್ಲದೆ, ಇಲ್ಲಿ ತಾಪಮಾನವು ಸುಮಾರು 32 ಡಿಗ್ರಿ ಇರುತ್ತದೆ. ಅಂದರೆ ಇದರರ್ಥ ಈ ಪಂದ್ಯದ ವೇಳೆ ಮಳೆಯಾಗುವ ಸಾಧ್ಯತೆ ಇದೆ.

IND vs AUS: ಭಾರತ- ಆಸ್ಟ್ರೇಲಿಯಾ ಪಂದ್ಯ ನಡೆಯಲ್ಲಿರುವ ಸೇಂಟ್ ಲೂಸಿಯಾ ಪಿಚ್ ಯಾರಿಗೆ ಸಹಕಾರಿ?

ಮಳೆಯಿಂದ ಯಾರಿಗೆ ಲಾಭ?

ವಾಸ್ತವವಾಗಿ ಎರಡೂ ತಂಡಗಳಿಗೂ ಸೂಪರ್ 8 ಸುತ್ತಿನಲ್ಲಿ ಕೊನೆಯ ಪಂದ್ಯ ಇದಾಗಿದೆ. ಹೀಗಿರುವಾಗ ಮಳೆಯಿಂದಾಗಿ ಈ ಪಂದ್ಯ ರದ್ದಾದರೆ ಉಭಯ ತಂಡಗಳಿಗೂ ತಲಾ ಒಂದೊಂದು ಅಂಕ ಸಿಗಲಿದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ 5 ಅಂಕಗಳೊಂದಿಗೆ ಸೆಮಿಫೈನಲ್‌ನಲ್ಲಿ ಸ್ಥಾನ ಪಡೆಯಲಿದೆ. ಆದರೆ ಸೆಮಿಫೈನಲ್‌ಗೆ ಪ್ರವೇಶಿಸಲು ಆಸ್ಟ್ರೇಲಿಯಾ ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನ ನಡುವಿನ ಪಂದ್ಯಗಳ ಫಲಿತಾಂಶಗಳನ್ನು ಅವಲಂಬಿಸಬೇಕಾಗುತ್ತದೆ. ಈ ಪಂದ್ಯದಲ್ಲಿ ಅಫ್ಘಾನಿಸ್ತಾನ ಗೆದ್ದರೆ ಆಸ್ಟ್ರೇಲಿಯಾ ಟೂರ್ನಿಯಿಂದ ಹೊರಬೀಳಲಿದೆ.

ಎರಡೂ ತಂಡಗಳು

ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಾಲ್, ಅರ್ಶ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ ತಂಡ: ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಜಂಪಾ .

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ