IND vs AUS: 6,6,4,6,6..! ಒಂದೇ ಓವರ್​ನಲ್ಲಿ ಸ್ಟಾರ್ಕ್​ ಬೆವರಿಳಿಸಿದ ರೋಹಿತ್ ಶರ್ಮಾ! ವಿಡಿಯೋ ನೋಡಿ

T20 World Cup 2024 Rohit Sharma: ಈ ಪಂದ್ಯದಲ್ಲಿ ನಾಯಕನ ಇನ್ನಿಂಗ್ಸ್ ಆಡುತ್ತಿರುವ ರೋಹಿತ್ ಶರ್ಮಾ, ಸ್ಟಾರ್ಕ್​ ಬೌಲ್ ಮಾಡಿದ 3ನೇ ಓವರ್​ನಲ್ಲಿ ಬರೋಬ್ಬರಿ 28 ರನ್ ಕಲೆಹಾಕುವ ಮೂಲಕ ಆಸೀಸ್​ ತಂಡಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ. ಅಲ್ಲದೆ ಕೇವಲ 19 ಎಸೆತಗಳಲ್ಲಿ ಅಜೇಯ ಅರ್ಧಶತಕ ಸಿಡಿಸಿ ಮಿಂಚಿದ್ದಾರೆ.

IND vs AUS: 6,6,4,6,6..! ಒಂದೇ ಓವರ್​ನಲ್ಲಿ ಸ್ಟಾರ್ಕ್​ ಬೆವರಿಳಿಸಿದ ರೋಹಿತ್ ಶರ್ಮಾ! ವಿಡಿಯೋ ನೋಡಿ
ರೋಹಿತ್ ಶರ್ಮಾ
Follow us
|

Updated on:Jun 24, 2024 | 9:01 PM

ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ (Daren Sammy National Cricket Stadium)  ಭಾರತ ಹಾಗೂ ಆಸ್ಟ್ರೇಲಿಯಾ (India vs Australia) ನಡುವೆ ಸೂಪರ್ 8 ಸುತ್ತಿನ ಕೊನೆಯ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ನಾಯಕ ಮಿಚೆಲ್ ಮಾರ್ಷ್​ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಅದರಂತೆ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾಕ್ಕೆ ಉತ್ತಮ ಆರಂಭ ಸಿಕ್ಕಿಲ್ಲ. ತಂಡ ಎರಡನೇ ಓವರ್​ನ ನಾಲ್ಕನೇ ಎಸೆತದಲ್ಲೇ ವಿರಾಟ್ ಕೊಹ್ಲಿ ಅವರ ವಿಕೆಟ್ ಕಳೆದುಕೊಂಡಿತು. ಈ ಪಂದ್ಯದಲ್ಲಿ ಕೊಹ್ಲಿಗೆ ಖಾತೆ ಕೂಡ ತೆರೆಯಲು ಸಾಧ್ಯವಾಗಲಿಲ್ಲ. ಅದಾಗ್ಯೂ ನಾಯಕನ ಇನ್ನಿಂಗ್ಸ್ ಆಡುತ್ತಿರುವ ರೋಹಿತ್ ಶರ್ಮಾ (Rohit Sharma), ಸ್ಟಾರ್ಕ್​ ಬೌಲ್ ಮಾಡಿದ 3ನೇ ಓವರ್​ನಲ್ಲಿ ಬರೋಬ್ಬರಿ 28 ರನ್ ಕಲೆಹಾಕುವ ಮೂಲಕ ಆಸೀಸ್​ ತಂಡಕ್ಕೆ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.

ಒಂದೇ ಓವರ್​ನಲ್ಲಿ 28 ರನ್

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಭಾರತಕ್ಕೆ ಮತ್ತೆ ಉತ್ತಮ ಆರಂಭ ನೀಡುವಲ್ಲಿ ಆರಂಭಿಕ ಜೋಡಿ ವಿಫಲವಾಯಿತು. ಕೊಹ್ಲಿಗೆ ಖಾತೆ ತೆರೆಯಲು ಸಾಧ್ಯವಾಗಲಿಲ್ಲ. ಅದಾಗ್ಯೂ ತನ್ನ ಎಂದಿನ ಆಟವನ್ನು ಮುಂದುವರೆಸಿದ ರೋಹಿತ್, ಸ್ಟಾರ್ಕ್​ ಬೌಲ್ ಮಾಡಿದ 3ನೇ ಓವರ್​ನಲ್ಲಿ ರೌದ್ರವತಾರ ತಾಳಿದರು. ಈ ಓವರ್​ನ ಮೊದಲ ಎರಡು ಎಸೆತಗಳನ್ನು ಕವರ್ಸ್​ ದಿಕ್ಕಿನಲ್ಲಿ ಸಿಕ್ಸರ್​ಗಟ್ಟಿದರು. ಮೂರನೇ ಎಸೆತವನ್ನು ಮಿಡ್ ಆನ್​ನಲ್ಲಿ ಬೌಂಡರಿ ಗಟ್ಟಿದ ರೋಹಿತ್, ನಾಲ್ಕನೇ ಎಸೆತವನ್ನು ಒವರ್ ಮಿಡ್ ವಿಕೆಟ್​ ಮೇಲೆ ಸಿಕ್ಸರ್​ಗಟ್ಟಿದರು. ಐದನೇ ಎಸೆತದಲ್ಲಿ ಯಾವುದೇ ರನ್ ಬರಲಿಲ್ಲ. ಆ ಬಳಿಕ 6ನೇ ಎಸೆತವನ್ನು ಶಾರ್ಟ್​ ಥರ್ಡ್​ನಲ್ಲಿ ಸಿಕ್ಸರ್​ಗಟ್ಟಿದರು. ಈ ಮೂಲಕ ಈ ಓವರ್​ನಲ್ಲಿ 28 ರನ್ ಕಲೆಹಾಕಿದರು.

36 ಎಸೆತಗಳಲ್ಲಿ ಅಜೇಯ 88 ರನ್

ಆ ಬಳಿಕವೂ ಇಲ್ಲಿಗೆ ನಿಲ್ಲದ ರೋಹಿತ್ ಮೈದಾನದಲ್ಲಿ ಬೌಂಡರಿ, ಸಿಕ್ಸರ್​ಗಳ ಮಳೆಗರೆಯುವ ಮೂಲಕ ಕೇವಲ 19 ಎಸೆತಗಳಲ್ಲಿ ತಮ್ಮ ಅರ್ಧಶತಕವನ್ನು ಪೂರೈಸಿದರು. ಇಷ್ಟೇ ಅಲ್ಲದೆ ರೋಹಿತ್ ಇದೀಗ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನಲ್ಲಿ 200 ಕ್ಕೂ ಅಧಿಕ ಸಿಕ್ಸರ್ ಸಿಡಿಸಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಪ್ರಸ್ತುತ ಈ ಸುದ್ದಿ ಬರೆಯುವ ವೇಳೆಗೆ ಟೀಂ ಇಂಡಿಯಾ 2 ವಿಕೆಟ್ ಕಳೆದುಕೊಂಡಿದ್ದು, 10 ಓವರ್ ಅಂತ್ಯಕ್ಕೆ 114 ರನ್ ಕಲೆಹಾಕಿದೆ. ತಂಡದ ಪರ ರೋಹಿತ್ ಶರ್ಮಾ 36 ಎಸೆತಗಳಲ್ಲಿ ಅಜೇಯ 88 ರನ್ ಬಾರಿಸಿದ್ದರೆ, ಸೂರ್ಯಕುಮಾರ್ ಯಾದವ್ 7 ರನ್ ಬಾರಿಸಿ ಆಡುತ್ತಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:49 pm, Mon, 24 June 24

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ