IND vs BAN: ಭಾರತ- ಬಾಂಗ್ಲಾ ನಡುವೆ ಹೈವೋಲ್ಟೇಜ್ ಕದನ; ಪಂದ್ಯಕ್ಕೆ ಮಳೆಯ ಆತಂಕ
IND vs BAN, Antigua Weather: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ಆಂಟಿಗುವಾದಲ್ಲಿ ನಡೆಯಲಿದೆ. ಈ ಪಂದ್ಯ ಸ್ಥಳೀಯ ಕಾಲಮಾನ ಬೆಳಗ್ಗೆ 10.30ಕ್ಕೆ ಆರಂಭವಾಗಲಿದೆ. ಅಂದರೆ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ. ನಾವು ಹವಾಮಾನದ ಬಗ್ಗೆ ಮಾತನಾಡಿದರೆ, ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ.
ಟಿ20 ವಿಶ್ವಕಪ್ನ (T20 World Cup 2024) ಸೂಪರ್ 8 ಸುತ್ತಿನಲ್ಲಿ ಟೀಂ ಇಂಡಿಯಾ ತನ್ನ ಮುಂದಿನ ಪಂದ್ಯದಲ್ಲಿ ಬಾಂಗ್ಲಾದೇಶವನ್ನು (IND vs BAN) ಎದುರಿಸಲಿದೆ. ಉಭಯ ತಂಡಗಳ ಮುಖಾಮುಖಿಗೆ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣ ಆತಿಥ್ಯವಹಿಸುತ್ತಿದೆ. ಭಾರತ ತಂಡ ಈ ಪಂದ್ಯದಲ್ಲಿ ಗೆದ್ದರೆ ಬಹುತೇಕ ಸೆಮಿಫೈನಲ್ ತಲುಪಲಿದೆ. ಒಂದು ವೇಳೆ ಬಾಂಗ್ಲಾದೇಶ ಸೋತರೆ ಟೂರ್ನಿಯಿಂದ ಹೊರಬೀಳಬಹುದು. ಈ ಕಾರಣಕ್ಕೆ ಈ ಪಂದ್ಯ ಅತ್ಯಂತ ಮಹತ್ವ ಪಡೆದುಕೊಂಡಿದೆ. ಆದರೆ, ಆಂಟಿಗುವಾದ ಹವಾಮಾನ ವರದಿ (Antigua Weather Update) ಅಭಿಮಾನಿಗಳಿಗೆ ಕೊಂಚ ನಿರಾಸೆ ಮೂಡಿಸಿದೆ. ಹೀಗಾಗಿ ಈ ಮಹತ್ವದ ಪಂದ್ಯಕ್ಕೂ ಮುನ್ನ ಶನಿವಾರ ನಡೆಯಲಿರುವ ಭಾರತ-ಬಾಂಗ್ಲಾದೇಶ ಪಂದ್ಯದ ವೇಳೆ ಆ್ಯಂಟಿಗುವಾ ಹವಾಮಾನ ಹೇಗಿರಲಿದೆ ಎಂಬುದನ್ನು ನೋಡೋಣ
ಆಂಟಿಗುವಾದಲ್ಲಿ ಹವಾಮಾನ ಹೇಗಿರುತ್ತದೆ?
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯ ಆಂಟಿಗುವಾದಲ್ಲಿ ನಡೆಯಲಿದೆ. ಈ ಪಂದ್ಯ ಸ್ಥಳೀಯ ಕಾಲಮಾನ ಬೆಳಗ್ಗೆ 10.30ಕ್ಕೆ ಆರಂಭವಾಗಲಿದೆ. ಅಂದರೆ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪಂದ್ಯ ಆರಂಭವಾಗಲಿದೆ. ನಾವು ಹವಾಮಾನದ ಬಗ್ಗೆ ಮಾತನಾಡಿದರೆ, ಈ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಸಾಧ್ಯತೆಗಳಿವೆ. ವಾಸ್ತವವಾಗಿ, ಹಗಲಿನಲ್ಲಿ 23% ಮಳೆಯಾಗುವ ಮುನ್ಸೂಚನೆ ಇದೆ. ಮಳೆಯಾದರೆ ಭಾರತ-ಬಾಂಗ್ಲಾದೇಶ ಪಂದ್ಯಕ್ಕೆ ಅಡ್ಡಿಯಾಗುವ ಸಾಧ್ಯತೆ ಇದೆ. ಆದರೆ, ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ಸೌಲಭ್ಯಗಳು ಉತ್ತಮವಾಗಿವೆ. ಆದ್ದರಿಂದ, ಮಳೆ ನಿಂತ ಸ್ವಲ್ಪ ಸಮಯದ ನಂತರ ಪಂದ್ಯವನ್ನು ಪ್ರಾರಂಭಿಸಬಹುದು.
ಈ ಮೈದಾನದಲ್ಲಿ ದಾಖಲೆ ಹೇಗಿದೆ?
ಈ ಟಿ20 ವಿಶ್ವಕಪ್ 2024 ರಲ್ಲಿ ಇದುವರೆಗೆ 6 ಪಂದ್ಯಗಳನ್ನು ಆಡಲಾಗಿದ್ದು, ಇದರಲ್ಲಿ ಗುರಿಯನ್ನು ಬೆನ್ನಟ್ಟಿದ ತಂಡವು 4 ಪಂದ್ಯಗಳಲ್ಲಿ ಗೆದ್ದಿದ್ದರೆ, ಕೇವಲ 2 ಪಂದ್ಯಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ ಗೆಲುವು ಸಾಧಿಸಿದೆ. ಆಂಟಿಗುವಾದ ಈ ಮೈದಾನದಲ್ಲಿ ಇದುವರೆಗೆ 19 ಟಿ20 ಪಂದ್ಯಗಳು ನಡೆದಿದ್ದು, ಇವುಗಳಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 12 ಪಂದ್ಯಗಳನ್ನು ಗೆದ್ದಿದ್ದರೆ, ಗುರಿ ಬೆನ್ನಟ್ಟಿದ ತಂಡ 7 ಬಾರಿ ಪಂದ್ಯ ಗೆದ್ದಿದೆ.
ಸಂಭಾವ್ಯ ಉಭಯ ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್/ ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.
ಬಾಂಗ್ಲಾದೇಶ: ತಂಜೀದ್ ಹಸನ್, ಲಿಟನ್ ದಾಸ್ (ವಿಕೆಟ್ ಕೀಪರ್), ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ಶಕೀಬ್ ಅಲ್ ಹಸನ್, ತೌಹೀದ್ ಹೃದಯೋಯ್, ಮಹಮ್ಮದುಲ್ಲಾ, ಮಹೇದಿ ಹಸನ್, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ತಂಜೀಮ್ ಹಸನ್ ಶಕೀಬ್, ಮುಸ್ತಾಫಿಜುರ್ ರಹಮಾನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:46 pm, Fri, 21 June 24