T20 World Cup 2024: ಭಾರತ-ಪಾಕಿಸ್ತಾನ ಪಂದ್ಯಕ್ಕೂ ಮುನ್ನ ಫನ್ನಿ ಮೀಮ್ಸ್ ವೈರಲ್

T20 World Cup 2024: ಭಾನುವಾರ ನ್ಯೂಯಾರ್ಕ್‌ನ ನಸ್ಸೌ ಸ್ಟೇಡಿಯಂನಲ್ಲಿ ನಡೆಯಲಿರುವ ಭಾರತ ಹಾಗೂ ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಬೀದಿ ಬೀದಿಗಳಿಂದ ಹಿಡಿದು ಸೋಶಿಯಲ್ ಮೀಡಿಯಾದಲ್ಲೂ ಕ್ರೇಜ್ ಹೆಚ್ಚಿದೆ. ಈ ನಡುವೆ ಭಾರತ ಮತ್ತು ಪಾಕಿಸ್ತಾನದ ಅಭಿಮಾನಿಗಳ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಮೀಮ್‌ಗಳ ವಾರ್ ಶುರುವಾಗಿದೆ. ಅದರಲ್ಲಿ ಒಂದಿಷ್ಟು ಮೀಮ್ಸ್​ಗಳ ಝಲಕ್ ಇಲ್ಲಿದೆ.

T20 World Cup 2024: ಭಾರತ-ಪಾಕಿಸ್ತಾನ ಪಂದ್ಯಕ್ಕೂ ಮುನ್ನ ಫನ್ನಿ ಮೀಮ್ಸ್ ವೈರಲ್
ಭಾರತ- ಪಾಕಿಸ್ತಾನ
Follow us
|

Updated on: Jun 08, 2024 | 7:47 PM

ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಟಿ20 ವಿಶ್ವಕಪ್ (T20 World Cup 2024) ಪಂದ್ಯಕ್ಕಾಗಿ ಪ್ರಪಂಚದಾದ್ಯಂತದ ಅಭಿಮಾನಿಗಳು ಕಾಯುತ್ತಿದ್ದಾರೆ. ಭಾನುವಾರ ನ್ಯೂಯಾರ್ಕ್‌ನ ನಸ್ಸೌ ಸ್ಟೇಡಿಯಂನಲ್ಲಿ (Nassau County International Cricket Stadium) ನಡೆಯಲಿರುವ ಈ ಪಂದ್ಯಕ್ಕೆ ಬೀದಿ ಬೀದಿಗಳಿಂದ ಹಿಡಿದು ಸೋಶಿಯಲ್ ಮೀಡಿಯಾದಲ್ಲೂ ಕ್ರೇಜ್ ಹೆಚ್ಚಿದೆ. ಈ ನಡುವೆ ಭಾರತ ಮತ್ತು ಪಾಕಿಸ್ತಾನದ ಅಭಿಮಾನಿಗಳ ನಡುವೆ ಸೋಶಿಯಲ್ ಮೀಡಿಯಾದಲ್ಲಿ ಮೀಮ್‌ಗಳ (Memes Viral) ವಾರ್ ಶುರುವಾಗಿದೆ. ಅದರಲ್ಲಿ ಒಂದಿಷ್ಟು ಮೀಮ್ಸ್​ಗಳ ಝಲಕ್ ಇಲ್ಲಿದೆ.

ಸೈಕಲ್ ಏರಿದ ಬಾಬರ್

ಭಾರತ ಹಾಗೂ ಪಾಕ್ ಆಟಗಾರರಿಗೆ ಸಂಬಂಧಿಸಿದಂತೆ ವೈರಲ್ ಆಗುತ್ತಿರುವ ಮೀಮ್ಸ್​ಗಳಲ್ಲಿ ಒಂದು ಮೀಮ್ ಸಾಕಷ್ಟು ವೈರಲ್ ಆಗಿದೆ. ಇದರಲ್ಲಿ ಪಾಕಿಸ್ತಾನದ ನಾಯಕ ಬಾಬರ್ ಆಝಂ, ಟೀಂ ಇಂಡಿಯಾ ಆಟಗಾರರ ದಾಳಿಗೆ ಹೆದರಿ ಸೈಕಲ್‌ ಏರಿ ಪರಾರಿಯಾಗುತ್ತಿರುವುದನ್ನು ಕಾಣಬಹುದಾಗಿದೆ. ಹೆದರಿ ಹೊಡುತ್ತಿರುವ ಬಾಬರ್ ಅವರನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಸೇರಿದಂತೆ ಟೀಂ ಇಂಡಿಯಾದ ಇತರ ಆಟಗಾರರು ಬೆನ್ನಟ್ಟಿದ್ದಾರೆ. ಉಪನಾಯಕ ವಿರಾಟ್ ಕೊಹ್ಲಿ ಎಸ್‌ಯುವಿ ಕಾರಲ್ಲಿ ಬಾಬರ್ ಅವರನ್ನು ಬೆನ್ನಟ್ಟಿದ್ದು, ಕೊಹ್ಲಿ ಕೈಯಲ್ಲಿ ಕೊಡಲಿಯನ್ನು ಕಾಣಬಹುದಾಗಿದೆ. ಈ ಎಸ್‌ಯುವಿಯಲ್ಲಿ ಮೊಹಮ್ಮದ್ ಸಿರಾಜ್ ಡ್ರೈವರ್ ಸೀಟಿನಲ್ಲಿ ಕುಳಿತಿರುವುದನ್ನು ಕಾಣಬಹುದು.ಈ ಫನ್ನಿ ಮೀಮ್ ನೋಡಿದ ಅಭಿಮಾನಿಗಳು ಹುಚ್ಚೆದ್ದು ಕುಣಿದಿದ್ದಾರೆ. ಇದೇ ರೀತಯ ಹಲವು ಮೀಮ್​ಗಳು ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿವೆ.

2012 ರಲ್ಲಿ ಕೊನೆಯ ದ್ವಿಪಕ್ಷೀಯ ಸರಣಿ

ಎರಡು ದೇಶಗಳ ನಡುವಿನ ರಾಜಕೀಯ ಉದ್ವಿಗ್ನತೆಯಿಂದಾಗಿ, ತಂಡಗಳು ಐಸಿಸಿ ಅಥವಾ ದೊಡ್ಡ ಪಂದ್ಯಾವಳಿಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ. ಹಲವು ವರ್ಷಗಳಿಂದ ಉಭಯ ದೇಶಗಳ ನಡುವೆ ಯಾವುದೇ ಪಂದ್ಯಾವಳಿ ನಡೆದಿಲ್ಲ. 2012-ರಲ್ಲಿ ಕೊನೆಯ ಬಾರಿಗೆ ಎರಡು ದೇಶಗಳ ನಡುವೆ ದ್ವಿಪಕ್ಷೀಯ ಸರಣಿ ನಡೆದಿತ್ತು. ಆ ವೇಳೆ ಪಾಕಿಸ್ತಾನ ತಂಡ ಭಾರತ ಪ್ರವಾಸಕ್ಕೆ ಬಂದಿದ್ದು, ಎರಡು ಪಂದ್ಯಗಳ ಟಿ20 ಸರಣಿಯನ್ನು 1-1ರಿಂದ ಡ್ರಾ ಮಾಡಿಕೊಂಡಿದ್ದವು. ಆ ಬಳಿಕ ನಡೆದ ಏಕದಿನ ಸರಣಿಯನ್ನು ಪಾಕಿಸ್ತಾನ 2-1ರಿಂದ ಗೆದ್ದುಕೊಂಡಿತು.

ಮುಖಾಮುಖಿ ವರದಿ

ಇನ್ನು ಉಭಯ ತಂಡಗಳ ನಡುವೆ ಇದುವರೆಗೆ ನಡೆದಿರುವ ಟಿ20 ಮುಖಾಮುಖಿಯಲ್ಲಿ, ಭಾರತ ಯಾವಾಗಲೂ ಮೇಲುಗೈ ಸಾಧಿಸಿದೆ. ಆಡಿರುವ 12 ಪಂದ್ಯಗಳಲ್ಲಿ ಭಾರತ 9ಪಂದ್ಯಗಳನ್ನು ಗೆದ್ದಿದೆ. ಪಾಕಿಸ್ತಾನ ತಂಡ ಕೇವಲ 3 ಪಂದ್ಯಗಳನ್ನು ಗೆಲ್ಲಲು ಶಕ್ತವಾಗಿದೆ. ಕಳೆದ ಟಿ20 ವಿಶ್ವಕಪ್‌ನಲ್ಲಿ ಭಾರತ 4 ವಿಕೆಟ್‌ಗಳಿಂದ ಪಾಕಿಸ್ತಾನವನ್ನು ಸೋಲಿಸಿತ್ತು. ಇದರಲ್ಲಿ ವಿರಾಟ್ ಕೊಹ್ಲಿ 53 ಎಸೆತಗಳಲ್ಲಿ 82 ರನ್‌ಗಳ ಅಜೇಯ ಇನ್ನಿಂಗ್ಸ್ ಆಡುವ ಮೂಲಕ ತಂಡಕ್ಕೆ ಗೆಲುವು ತಂದುಕೊಟ್ಟಿದ್ದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್