
ನ್ಯೂಯಾರ್ಕ್‌ನಲ್ಲಿ ನಡೆದ ಟಿ20 ವಿಶ್ವಕಪ್ (T20 World Cup 2024) 19ನೇ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು 6 ರನ್‌ಗಳಿಂದ ಮಣಿಸಿದ ಟೀಂ ಇಂಡಿಯಾ (India vs Pakistan) ಐಸಿಸಿ ಟೂರ್ನಿಗಳಲ್ಲಿ ಪಾಕ್ ವಿರುದ್ಧ ತನ್ನ ಪಾರುಪತ್ಯವನ್ನು ಮುಂದುವರೆಸಿದೆ. ಬದ್ಧವೈರಿಯ ವಿರುದ್ಧದ ಈ ಜಯವನ್ನು ಇಡೀ ಭಾರತದಾದ್ಯಂತ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಇದಲ್ಲದೇ ಟೀಂ ಇಂಡಿಯಾದ ಈ ಗೆಲುವಿಗೆ ಮಾಜಿ ಕ್ರಿಕೆಟಿಗರು ಕೂಡ ಸಂತಸ ವ್ಯಕ್ತಪಡಿಸಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ (Jay Shah) ಕೂಡ ಪಾಕಿಸ್ತಾನದ ವಿರುದ್ಧ ಭಾರತದ ವಿಜಯವನ್ನು ವಿಭಿನ್ನವಾಗಿ ಸಂಭ್ರಮಿಸಿದ್ದಾರೆ. ಟೀಂ ಇಂಡಿಯಾ ಗೆಲುವಿನ ನಂತರ ಜಯ್ ಶಾ ಅವರು ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಂಭ್ರಮಾಚರಣೆ ಮಾಡಿದರು. ಇದರ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಕತ್ ವೈರಲ್ ಆಗುತ್ತಿದೆ.
ಜೂನ್ 9, ಭಾನುವಾರದಂದು ನಡೆದ ರೋಚಕ ಪಂದ್ಯದಲ್ಲಿ ಟೀಂ ಇಂಡಿಯಾ ಪಾಕಿಸ್ತಾನವನ್ನು 6 ರನ್‌ಗಳಿಂದ ಸೋಲಿಸಿತು. ಈ ಗೆಲುವಿನ ನಂತರ ಕ್ರೀಡಾಂಗಣದಲ್ಲಿ ಕುಳಿತಿದ್ದ ಸಾವಿರಾರು ಪ್ರೇಕ್ಷಕರ ಖುಷಿಗೆ ಪಾರವೇ ಇರಲಿಲ್ಲ. ಸ್ಟೇಡಿಯಂನಲ್ಲಿದ್ದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಕೂಡ ಟೀಂ ಇಂಡಿಯಾ ಗೆಲುವಿಗೆ ಎದ್ದು ನಿಂತು ಚಪ್ಪಾಳೆ ತಟ್ಟಿದರು. ಇದರ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಇದೀಗ ವೈರಲ್ ಆಗುತ್ತಿದೆ. ಇಷ್ಟೇ ಅಲ್ಲ, ಜಯ್ ಶಾ ಕೂಡ ಟೀಂ ಇಂಡಿಯಾ ಗೆಲುವಿಗೆ ಪೋಸ್ಟ್ ಶೇರ್ ಮಾಡುವ ಮೂಲಕ ಅಭಿನಂದಿಸಿದ್ದಾರೆ.
Jay Shah killed it 😂😂🔥🔥#INDvsPAK pic.twitter.com/8xd9z5vdmE
— Cricpedia. (@_Cricpedia) June 10, 2024
One more WIN, and this one… means a little more! 🇮🇳
Let’s keep this going 🔥 @BCCI #T20WorldCup #INDPAK pic.twitter.com/G3aPTsl8O6— Jay Shah (@JayShah) June 9, 2024
ಈ ಪಂದ್ಯದಲ್ಲಿ ಟೀಂ ಇಂಡಿಯಾದ ಬ್ಯಾಟಿಂಗ್ ವಿಶೇಷವೇನೂ ಆಗಿರಲಿಲ್ಲ. ವಿಶ್ವಕಪ್‌ನಲ್ಲಿ ಮೊದಲ ಬಾರಿಗೆ ಪಾಕಿಸ್ತಾನ ವಿರುದ್ಧ ಟೀಂ ಇಂಡಿಯಾ ಆಲೌಟ್ ಆದ ಬೇಡದ ದಾಖಲೆಯನ್ನು ಬರೆಯಿತು. ಇಡೀ ತಂಡ 19 ಓವರ್‌ಗಳಲ್ಲಿ 119 ರನ್ ಗಳಿಸಲಷ್ಟೇ ಶಕ್ತವಾಯಿತು. ರಿಷಭ್ ಪಂತ್ ಭಾರತದ ಪರ ಗರಿಷ್ಠ 42 ರನ್‌ಗಳ ಇನ್ನಿಂಗ್ಸ್ ಆಡಿದರು.
ಟಿ20 ವಿಶ್ವಕಪ್ ಇತಿಹಾಸದಲ್ಲಿ ಹೀನಾಯ ಸೋಲು ಕಂಡ ತಂಡ ಯಾವುದು ಗೊತ್ತಾ?
ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ ಉತ್ತಮ ಆರಂಭದ ಹೊರತಾಗಿಯೂ ಸತತ ವಿಕೆಟ್ಗಳ ಪತನದ ಕಾರಣ ಹಾಗೂ ಭಾರತದ ವೇಗಿಗಳ ಕರಾರುವಕ್ಕಾದ ದಾಳಿಯಿಂದಾಗಿ 20 ಓವರ್‌ಗಳಲ್ಲಿ 113 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಭಾರತದ ಪರ ಬುಮ್ರಾ ಮೂರು ವಿಕೆಟ್ ಪಡೆದು ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ಹಾರ್ದಿಕ್ ಎರಡು ವಿಕೆಟ್, ಅರ್ಷದೀಪ್ ಮತ್ತು ಅಕ್ಷರ್ ತಲಾ ಒಂದು ವಿಕೆಟ್ ಪಡೆದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 3:40 pm, Mon, 10 June 24