T20 World Cup 2024: ಬಾರ್ಬಡೋಸ್‌ ಪಿಚ್ ಯಾರಿಗೆ ಸಹಕಾರಿ? ಈ ಮೈದಾನದಲ್ಲಿ ಭಾರತದ ಪ್ರದರ್ಶನ ಹೇಗಿದೆ?

T20 World Cup 2024 IND vs SA, Barbados Pitch Report: ವೆಸ್ಟ್ ಇಂಡೀಸ್‌ನ ಈ ಮೈದಾನದಲ್ಲಿ ಭಾರತ ಇದುವರೆಗೆ ಕೇವಲ 3 ಟಿ20 ಪಂದ್ಯಗಳನ್ನು ಮಾತ್ರ ಆಡಿದೆ. ಈ ಪೈಕಿ ಭಾರತ ಕೇವಲ 1 ಪಂದ್ಯವನ್ನು ಮಾತ್ರ ಗೆದ್ದಿದೆ. ಉಳಿದಂತೆ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಇತ್ತೀಚೆಗಷ್ಟೇ ಭಾರತ ಇಲ್ಲಿ ಅಫ್ಘಾನಿಸ್ತಾನ ವಿರುದ್ಧ 47 ರನ್‌ಗಳಿಂದ ಗೆದ್ದಿತ್ತು. ಆದರೆ 2010ರಲ್ಲಿ ಈ ಮೈದಾನದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 14 ರನ್‌ಗಳಿಂದ ಮತ್ತು ಆಸ್ಟ್ರೇಲಿಯಾ ವಿರುದ್ಧ 49 ರನ್‌ಗಳಿಂದ ಸೋಲನುಭವಿಸಿತ್ತು.

T20 World Cup 2024: ಬಾರ್ಬಡೋಸ್‌ ಪಿಚ್ ಯಾರಿಗೆ ಸಹಕಾರಿ? ಈ ಮೈದಾನದಲ್ಲಿ ಭಾರತದ ಪ್ರದರ್ಶನ ಹೇಗಿದೆ?
ಬಾರ್ಬಡೋಸ್‌ ಪಿಚ್ ವರದಿ
Follow us
|

Updated on: Jun 28, 2024 | 9:42 PM

2024 ರ ಟಿ20 ವಿಶ್ವಕಪ್‌ನಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಪ್ರಶಸ್ತಿ ಪಂದ್ಯ ನಡೆಯಲಿದೆ . ವೆಸ್ಟ್ ಇಂಡೀಸ್‌ನ ಬಾರ್ಬಡೋಸ್‌ನಲ್ಲಿರುವ ಕೆನ್ಸಿಂಗ್ಟನ್ ಓವಲ್ ಮೈದಾನ ಈ ಪಂದ್ಯಕ್ಕೆ ಆತಿಥ್ಯವಹಿಸುತ್ತಿದೆ. ಭಾರತ ತಂಡ ಈ ಮೈದಾನದಲ್ಲಿ ಇಲ್ಲಿಯವರೆಗೆ ಒಟ್ಟು 3 ಪಂದ್ಯಗಳನ್ನು ಆಡಿದ್ದರೆ, ಈ ಮೈದಾನದಲ್ಲಿ ಇಲ್ಲಿಯವರೆಗೆ ಈ ವಿಶ್ವಕಪ್‌ನಲ್ಲಿ ಒಟ್ಟು 8 ಪಂದ್ಯಗಳು ನಡೆದಿವೆ. ಹೀಗಾಗಿ ಈ ಮೈದಾನದ ಪಿಚ್ ಯಾರಿಗೆ ಸಹಕಾರಿ? ಈ ವಿಶ್ವಕಪ್​ನಲ್ಲಿ ನಡೆದ ಪಂದ್ಯಗಳ ಫಲಿತಾಂಶ ಹೇಗಿತ್ತು ಎಂಬುದನ್ನು ನೋಡುವುದಾದರೆ..

ಪಿಚ್ ವರದಿ

ಬಾರ್ಬಡೋಸ್‌ನ ಈ ಕ್ರೀಡಾಂಗಣದಲ್ಲಿ ಬ್ಯಾಟ್ಸ್‌ಮನ್‌ಗಳು ಮತ್ತು ಬೌಲರ್‌ಗಳಿಬ್ಬರೂ ಪ್ರಾಬಲ್ಯ ಹೊಂದಿದ್ದಾರೆ. ಇಲ್ಲಿ ಸ್ಪಿನ್ನರ್‌ಗಳಿಗೆ ಮಧ್ಯಮ ಓವರ್‌ಗಳಲ್ಲಿ ಹೆಚ್ಚುವರಿ ಸಹಾಯ ಸಿಗುತ್ತದೆ. ಹಾಗೆಯೇ ವೇಗದ ಬೌಲರ್‌ಗಳಿಗೂ ಕೊಂಚ ಸ್ವಿಂಗ್ ಸಿಗುತ್ತದೆ. ವೇಗದ ಔಟ್‌ಫೀಲ್ಡ್‌ನಿಂದಾಗಿ, ಇಲ್ಲಿ 150 ಕ್ಕಿಂತ ಹೆಚ್ಚಿನ ರನ್​ಗಳನ್ನು ಸುಲಭವಾಗಿ ಸ್ಕೋರ್ ಮಾಡಬಹುದಾಗಿದೆ. ಸಾಮಾನ್ಯವಾಗಿ ಇಲ್ಲಿನ ತಂಡ ಟಾಸ್ ಗೆದ್ದು ಬ್ಯಾಟಿಂಗ್ ಮಾಡಲು ಆದ್ಯತೆ ನೀಡುತ್ತದೆ. ಈ ಕ್ರೀಡಾಂಗಣದಲ್ಲಿ ಇದುವರೆಗೆ ಒಟ್ಟು 32 ಅಂತಾರಾಷ್ಟ್ರೀಯ ಟಿ20 ಪಂದ್ಯಗಳು ನಡೆದಿವೆ. ಇದರಲ್ಲಿ ಮೊದಲು ಬ್ಯಾಟ್ ಮಾಡಿದ ತಂಡ 19 ಬಾರಿ ಗೆದ್ದಿದ್ದರೆ, 11 ಬಾರಿ ಗುರಿ ಬೆನ್ನಟ್ಟಿದ ತಂಡ ಗೆದ್ದಿದೆ. 2 ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ.

ಭಾರತದ ಪ್ರದರ್ಶನ ಹೇಗಿದೆ?

ವೆಸ್ಟ್ ಇಂಡೀಸ್‌ನ ಈ ಮೈದಾನದಲ್ಲಿ ಭಾರತ ಇದುವರೆಗೆ ಕೇವಲ 3 ಟಿ20 ಪಂದ್ಯಗಳನ್ನು ಮಾತ್ರ ಆಡಿದೆ. ಈ ಪೈಕಿ ಭಾರತ ಕೇವಲ 1 ಪಂದ್ಯವನ್ನು ಮಾತ್ರ ಗೆದ್ದಿದೆ. ಉಳಿದಂತೆ ಎರಡು ಪಂದ್ಯಗಳಲ್ಲಿ ಸೋಲು ಕಂಡಿದೆ. ಇತ್ತೀಚೆಗಷ್ಟೇ ಭಾರತ ಇಲ್ಲಿ ಅಫ್ಘಾನಿಸ್ತಾನ ವಿರುದ್ಧ 47 ರನ್‌ಗಳಿಂದ ಗೆದ್ದಿತ್ತು. ಆದರೆ 2010ರಲ್ಲಿ ಈ ಮೈದಾನದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 14 ರನ್‌ಗಳಿಂದ ಮತ್ತು ಆಸ್ಟ್ರೇಲಿಯಾ ವಿರುದ್ಧ 49 ರನ್‌ಗಳಿಂದ ಸೋಲನುಭವಿಸಿತ್ತು.

ವಿಶ್ವಕಪ್ ಪಂದ್ಯಗಳ ಸ್ಥಿತಿ ಹೇಗಿತ್ತು?

2024ರ ಟಿ20 ವಿಶ್ವಕಪ್‌ನಲ್ಲಿ ಇದುವರೆಗೆ ಈ ಮೈದಾನದಲ್ಲಿ ಒಟ್ಟು 8 ಪಂದ್ಯಗಳನ್ನು ಆಡಲಾಗಿದೆ. ಅದರಲ್ಲಿ ಸೂಪರ್-8 ಸುತ್ತಿನಲ್ಲಿ ಆಡಿದ 3 ಪಂದ್ಯಗಳಲ್ಲಿ ಮೊದಲ ಪಂದ್ಯವು ಜೂನ್ 23 ರಂದು ಭಾರತ ಮತ್ತು ಅಫ್ಘಾನಿಸ್ತಾನ ನಡುವೆ ನಡೆಯಿತು. ಇದರಲ್ಲಿ ಭಾರತ 47 ರನ್‌ಗಳ ಜಯ ಸಾಧಿಸಿತು. ಎರಡನೇ ಪಂದ್ಯ ಜೂನ್ 21 ರಂದು ವೆಸ್ಟ್ ಇಂಡೀಸ್ ಮತ್ತು ಯುಎಸ್ಎ ನಡುವೆ ನಡೆಯಿತು. ಇದರಲ್ಲಿ ವೆಸ್ಟ್ ಇಂಡೀಸ್ 9 ವಿಕೆಟ್​ಗಳ ಜಯ ಸಾಧಿಸಿತು. ಅದೇ ಸಮಯದಲ್ಲಿ, ಈ ಮೈದಾನದಲ್ಲಿ ಕೊನೆಯ ಪಂದ್ಯವನ್ನು ಜೂನ್ 23 ರಂದು ಆಡಲಾಯಿತು. ಈ ಪಂದ್ಯ ನಡೆದಿದ್ದು ಅಮೆರಿಕ ಮತ್ತು ಇಂಗ್ಲೆಂಡ್ ನಡುವೆ. ಇದರಲ್ಲಿ ಇಂಗ್ಲೆಂಡ್ 10 ವಿಕೆಟ್‌ಗಳ ಜಯ ಸಾಧಿಸಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್