IND vs SA: ಬಾರ್ಬಡೋಸ್‌ ಪ್ರಸ್ತುತ ಹವಾಮಾನ ಹೇಗಿದೆ? ಸ್ಥಳೀಯರು ನೀಡಿದ ಅಪ್​ಡೇಟ್ ಇಲ್ಲಿದೆ

IND vs SA Barbados Weather Latest Update: ಇತ್ತೀಚಿನ ಮಾಹಿತಿಯ ಪ್ರಕಾರ, ಬಾರ್ಬಡೋಸ್‌ನ ಹವಾಮಾನ ತಿಳಿಯಾಗಿದೆ, ಆದರೆ ಮೋಡ ಕವಿದ ವಾತಾವರಣ ಮುಂದುವರೆದಿದೆ. ಕೊಂಚ ಬಿಸಿಲು ಕಾಣಿಸಿಕೊಂಡಿದೆಯಾದರೂ ಗಾಳಿ ಕೂಡ ಜೋರಾಗಿ ಬೀಸುತ್ತಿದೆ. ಈ ಪಂದ್ಯ ಬಾರ್ಬಡೋಸ್‌ನಲ್ಲಿ ಸ್ಥಳೀಯ ಕಾಲಮಾನ ಬೆಳಗ್ಗೆ 10.30ಕ್ಕೆ ಆರಂಭವಾಗಲಿದೆ.

IND vs SA: ಬಾರ್ಬಡೋಸ್‌ ಪ್ರಸ್ತುತ ಹವಾಮಾನ ಹೇಗಿದೆ? ಸ್ಥಳೀಯರು ನೀಡಿದ ಅಪ್​ಡೇಟ್ ಇಲ್ಲಿದೆ
ಬಾರ್ಬಡೋಸ್‌ ಪ್ರಸ್ತುತ ಹವಾಮಾನ ವರದಿ
Follow us
|

Updated on: Jun 29, 2024 | 6:07 PM

ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳು ಬಹಳ ದಿನಗಳಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯ ಇನ್ನು ಕೆಲವೇ ಗಂಟೆಗಳಲ್ಲಿ ಆರಂಭವಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಪಂದ್ಯ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ. ಹೀಗಿರುವಾಗ ಇಲ್ಲಿನ ವಾತಾವರಣ ಉಭಯ ತಂಡಗಳ ಟೆನ್ಷನ್ ಹೆಚ್ಚಿಸಿದೆ. ಬಾರ್ಬಡೋಸ್‌ನ ಹವಾಮಾನದ ಕುರಿತು ದೊಡ್ಡ ಅಪ್​ಡೇಟ್ ಇದೀಗ ಹೊರಬಂದಿದೆ.

ಬಾರ್ಬಡೋಸ್‌ ಹವಾಮಾನ ವರದಿ

ಇತ್ತೀಚಿನ ಮಾಹಿತಿಯ ಪ್ರಕಾರ, ಬಾರ್ಬಡೋಸ್‌ನ ಹವಾಮಾನ ತಿಳಿಯಾಗಿದೆ, ಆದರೆ ಮೋಡ ಕವಿದ ವಾತಾವರಣ ಮುಂದುವರೆದಿದೆ. ಕೊಂಚ ಬಿಸಿಲು ಕಾಣಿಸಿಕೊಂಡಿದೆಯಾದರೂ ಗಾಳಿ ಕೂಡ ಜೋರಾಗಿ ಬೀಸುತ್ತಿದೆ. ಈ ಪಂದ್ಯ ಬಾರ್ಬಡೋಸ್‌ನಲ್ಲಿ ಸ್ಥಳೀಯ ಕಾಲಮಾನ ಬೆಳಗ್ಗೆ 10.30ಕ್ಕೆ ಆರಂಭವಾಗಲಿದೆ. ಹೀಗಾಗಿ ಈ ಪಂದ್ಯದ ಮೇಲೆ ಇಬ್ಬನಿ ಪ್ರಭಾವ ಬೀರುವ ಅವಕಾಶವಿಲ್ಲ. ಆದರೆ ಒದ್ದೆಯಾದ ಔಟ್‌ಫೀಲ್ಡ್‌ನಿಂದಾಗಿ ಉಭಯ ತಂಡಗಳಿಗೂ ಸಮಸ್ಯೆ ಎದುರಾಗಬಹುದು.

ಡಿಕೆ ಅಪ್​ಡೇಟ್ ಏನು?

ಕ್ರಿಕೆಟಿಗ ಮತ್ತು ಕಾಮೆಂಟೇಟರ್ ದಿನೇಶ್ ಕಾರ್ತಿಕ್ ಕೂಡ ಬಾರ್ಬಡೋಸ್‌ನ ಇತ್ತೀಚಿನ ಪರಿಸ್ಥಿತಿಯನ್ನು ತಮ್ಮ ಸೋಶೀಯಲ್ ಮೀಡಿಯಾ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿ ಹಂಚಿಕೊಂಡಿದ್ದಾರೆ. ಇದರಲ್ಲಿ ಹವಾಮಾನವು ಸಾಕಷ್ಟು ಸ್ಪಷ್ಟವಾಗಿ ಕಾಣುತ್ತದೆ. ಕಾರ್ತಿಕ್ ಪ್ರಕಾರ, ಹವಾಮಾನವು ಸ್ಪಷ್ಟವಾಗಿದ್ದು, ಪಂದ್ಯವು ನಿಗದಿತ ಸಮಯಕ್ಕೆ ಪ್ರಾರಂಭವಾಗುವ ಸಾಧ್ಯತೆಯಿದೆ.

ಮೀಸಲು ದಿನ ನಿಗದಿ

ಶುಕ್ರವಾರ ಬಾರ್ಬಡೋಸ್‌ನಲ್ಲಿ ಮಳೆಯಾಗಿದೆ. ಇದು ಅಭಿಮಾನಿಗಳ ಟೆನ್ಷನ್ ಹೆಚ್ಚಿಸಿದೆ. ಆದರೆ, ಪಂದ್ಯದ ವೇಳೆ ಶೇ.60ರಷ್ಟು ಮಳೆಯಾಗುವ ಸಾಧ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಈ ಪಂದ್ಯಕ್ಕೆ ಮೀಸಲು ದಿನ ಇಡಲಾಗಿದೆ. ಅಲ್ಲದೆ, ಶನಿವಾರವೂ ಪಂದ್ಯವನ್ನು ಪೂರ್ಣಗೊಳಿಸಲು 190 ನಿಮಿಷಗಳ ಹೆಚ್ಚುವರಿ ಸಮಯ ಲಭ್ಯವಿರುತ್ತದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಶೇ 60 ರಷ್ಟು ಕನ್ನಡ ಕಡ್ಡಾಯ; ಸರ್ಕಾರದಿಂದ  ಸೂಕ್ತ ಕ್ರಮ: ನಾರಾಯಣಗೌಡ, ಕರವೇ
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಪ್ರಜ್ವಲ್​ ಮಾತಾಡಿಸಲು ಜೈಲಿಗೆ ಬಂದ ಭವಾನಿ ಮಾಧ್ಯಮಗಳಿಗೆ ಮುಖ ತೋರಿಸಲಿಲ್ಲ!
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ಸ್ಟಿಕ್ ಹಿಡಿದು ಕುಂಟುತ್ತ ಪ್ರಜ್ವಲ್​ ನೋಡಲು ಬಂದ ಭವಾನಿ ರೇವಣ್ಣ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ರಾಹುಲ್ ಎಂದಿಗೂ ಹಿಂದೂ ವಿರೋಧಿಯಲ್ಲ; ಪ್ರಿಯಾಂಕಾ ಗಾಂಧಿ ಸ್ಪಷ್ಟನೆ
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಪಕ್ಷದ ಶಿಸ್ತು ಮೀರುವವರಿಗೆ ಶೋಕಾಸ್ ನೋಟೀಸ್ ನೀಡಲಾಗುವುದು: ಡಿಕೆ ಶಿವಕುಮಾರ್
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ಧೂಮಪಾನ ಕ್ಯಾನ್ಸರ್ ಗೆ ಮೂಲ ಅಂತ ಗೊತ್ತಿದ್ದರೂ ಸಿಗರೇಟು ಸೇದುತ್ತೇವೆ: ಸಿಎಂ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದು ಕಣ್ಣೀರು ಹಾಕಿದ ತಾಯಿ ಮೀನಾ
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ವರದಕ್ಷಿಣೆಗಾಗಿ ಹೆಂಡತಿ ಕತೆಯನ್ನು ಮುಗಿಸಿದನೇ ಪೊಲೀಸ್ ಕಾನ್​ಸ್ಟೇಬಲ್?
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ನಡು ರಸ್ತೆಯಲ್ಲೇ ಟಿಎಂಸಿ ಮುಖಂಡನಿಂದ ಮಹಿಳೆಗೆ ಥಳಿತ; ವಿಡಿಯೋ ವೈರಲ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್
ವಾಲ್ಮೀಕಿ ನಿಗಮದ ಹಗರಣಕ್ಕೆ ಸಿದ್ದರಾಮಯ್ಯ ಸಹ ಜವಾಬ್ದಾರರು: ಬಸನಗೌಡ ಯತ್ನಾಳ್