IND vs SA: ಬಾರ್ಬಡೋಸ್‌ನಲ್ಲಿ ಶೇ.70 ರಷ್ಟು ಮಳೆ; ಫೈನಲ್ ಪಂದ್ಯ ರದ್ದಾದರೆ ವಿಜೇತರ ಆಯ್ಕೆ ಹೇಗೆ? ಇಲ್ಲಿದೆ ವಿವರ
IND vs SA Final, Barbados Weather Update: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಪಂದ್ಯ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ನಡೆಯಲಿದೆ. ಅದೇ ಹೊತ್ತಿಗೆ ಈ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. weather.com ಪ್ರಕಾರ, ಜೂನ್ 29 ರಂದು ಬಾರ್ಬಡೋಸ್‌ನಲ್ಲಿ ಬೀರುಗಾಳಿ ಮತ್ತು ಭಾರೀ ಮಳೆ ನಿರೀಕ್ಷಿಸಲಾಗಿದೆ. ಪಂದ್ಯದ ವೇಳೆ ಮಳೆ ಬೀಳುವ ಸಾಧ್ಯತೆ ಶೇ.70ರಷ್ಟಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವುದು ಖಚಿತವಾಗಿದೆ.
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ 2024 ರ ಟಿ20 ವಿಶ್ವಕಪ್‌ನ ಫೈನಲ್ ಪಂದ್ಯ ಬಾರ್ಬಡೋಸ್‌ನಲ್ಲಿ ಜೂನ್ 29 ರಂದು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ನಡೆಯಲಿದೆ. ಒಂದೆಡೆ ಟೀಂ ಇಂಡಿಯಾ ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ತಂಡವನ್ನು ಸೋಲಿಸಿ ಫೈನಲ್‌ಗೆ ಲಗ್ಗೆ ಇಟ್ಟಿದ್ದರೆ, ಮತ್ತೊಂದೆಡೆ ದಕ್ಷಿಣ ಆಫ್ರಿಕಾ ತಂಡ ಅಫ್ಘಾನಿಸ್ತಾನವನ್ನು ಸೋಲಿಸಿ ಫೈನಲ್‌ಗೆ ತಲುಪಿದೆ. ಇದೀಗ ಈ ಎರಡೂ ತಂಡಗಳು ವಿಶ್ವಕಪ್‌ನ ಫೈನಲ್‌ನಲ್ಲಿ ಮೊದಲ ಬಾರಿಗೆ ಮುಖಾಮುಖಿಯಾಗಲಿವೆ. ಸೆಮಿಫೈನಲ್ ಪಂದ್ಯಗಳಂತೆಯೇ ಫೈನಲ್ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. ಫೈನಲ್ ಪಂದ್ಯದ ದಿನದಂದು ಬಾರ್ಬಡೋಸ್‌ನಲ್ಲಿನ ಹವಾಮಾನದ ಕುರಿತು ದೊಡ್ಡ ಅಪ್ಡೇಟ್ ಹೊರಬಂದಿದೆ.
ಫೈನಲ್ ಮೇಲೂ ಮಳೆಯ ನೆರಳು
ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಪಂದ್ಯ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ನಡೆಯಲಿದೆ. ಅದೇ ಹೊತ್ತಿಗೆ ಈ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. weather.com ಪ್ರಕಾರ, ಜೂನ್ 29 ರಂದು ಬಾರ್ಬಡೋಸ್‌ನಲ್ಲಿ ಬೀರುಗಾಳಿ ಮತ್ತು ಭಾರೀ ಮಳೆ ನಿರೀಕ್ಷಿಸಲಾಗಿದೆ. ಪಂದ್ಯದ ವೇಳೆ ಮಳೆ ಬೀಳುವ ಸಾಧ್ಯತೆ ಶೇ.70ರಷ್ಟಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವುದು ಖಚಿತವಾಗಿದೆ.
Barbados weather not looking good 😔#INDvsSA #T20WorldCupFinal #T20WorldCup2024 pic.twitter.com/aoUl7pdKwJ
— Manav…45🇮🇳💙 (@RO45XMANAV45) June 28, 2024
ಫೈನಲ್‌ಗೆ ಮೀಸಲು ದಿನ
ಐಸಿಸಿ ಫೈನಲ್ ಪಂದ್ಯಕ್ಕಾಗಿ ಮೀಸಲು ದಿನವನ್ನು ಸಹ ಇರಿಸಿದೆ. ಜೂನ್ 29 ರಂದು ಮಳೆಯಿಂದಾಗಿ ಪಂದ್ಯ ರದ್ದಾದರೆ ಜೂನ್ 30 ರಂದು ಫೈನಲ್ ಪಂದ್ಯ ನಡೆಯಲಿದೆ. ಇದಲ್ಲದೇ ಫೈನಲ್ ಪಂದ್ಯಕ್ಕೆ 190 ನಿಮಿಷಗಳ ಹೆಚ್ಚುವರಿ ಸಮಯವನ್ನು ಕೂಡ ಇರಿಸಲಾಗಿದೆ. ಇದರ ಹೊರತಾಗಿಯೂ, ಮೀಸಲು ದಿನದಂದು ಸಹ ಮಳೆಯಿಂದಾಗಿ ಪಂದ್ಯವನ್ನು ರದ್ದುಗೊಳಿಸಿದರೆ, ನಂತರ ಭಾರತ ಮತ್ತು ದಕ್ಷಿಣ ಆಫ್ರಿಕಾವನ್ನು ಜಂಟಿ ವಿಜೇತರೆಂದು ಘೋಷಿಸಲಾಗುತ್ತದೆ.
IND vs SA: ವಿಶ್ವ ಕಿರೀಟ ತೊಡಲು ಬಾರ್ಬಡೋಸ್ಗೆ ಬಂದಿಳಿದ ರೋಹಿತ್ ಪಡೆ; ವಿಡಿಯೋ ನೋಡಿ
ಎರಡೂ ತಂಡಗಳು ಅಜೇಯ
ಈ ಬಾರಿಯ ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಟೀಂ ಇಂಡಿಯಾ ಒಂದೇ ಒಂದು ಪಂದ್ಯವನ್ನು ಸೋತಿಲ್ಲ. ದಕ್ಷಿಣ ಆಫ್ರಿಕಾ 8 ಪಂದ್ಯಗಳನ್ನಾಡಿದ್ದರೆ, ಟೀಂ ಇಂಡಿಯಾ 7 ಪಂದ್ಯಗಳನ್ನಾಡಿದೆ. ಟೀಂ ಇಂಡಿಯಾದ ಒಂದು ಪಂದ್ಯ ಕೂಡ ಮಳೆಯಿಂದಾಗಿ ರದ್ದಾಗಿತ್ತು. ಟೀಂ ಇಂಡಿಯಾ ಮೂರನೇ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಇತ್ತ ವಿಶ್ವಕಪ್ ಆರಂಭದ ನಂತರ ದಕ್ಷಿಣ ಆಫ್ರಿಕಾ ಮೊದಲ ಬಾರಿಗೆ ಫೈನಲ್‌ಗೆ ಲಗ್ಗೆ ಇಡುವಲ್ಲಿ ಯಶಸ್ವಿಯಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ