IND vs AUS: ಸೇಡಿನ ಸಮರದಲ್ಲಿ ಆಸೀಸ್​ಗೆ ಮಣ್ಣು ಮುಕ್ಕಿಸಿದ ಟೀಂ ಇಂಡಿಯಾ..!

IND vs AUS, T20 World Cup 2024: ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಸೂಪರ್ ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ ಅಮೋಘ ಗೆಲುವು ದಾಖಲಿಸಿದೆ. ಇದರೊಂದಿಗೆ ಅಜೇಯ ತಂಡವಾಗಿ ಸೆಮಿಫೈನಲ್​ಗೆ ಲಗ್ಗೆ ಇಟ್ಟಿದೆ.

IND vs AUS: ಸೇಡಿನ ಸಮರದಲ್ಲಿ ಆಸೀಸ್​ಗೆ ಮಣ್ಣು ಮುಕ್ಕಿಸಿದ ಟೀಂ ಇಂಡಿಯಾ..!
ಟೀಂ ಇಂಡಿಯಾ
Follow us
|

Updated on:Jun 25, 2024 | 12:15 AM

ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಸೂಪರ್ ಸುತ್ತಿನ ಕೊನೆಯ ಪಂದ್ಯದಲ್ಲಿ ಟೀಂ ಇಂಡಿಯಾ (India vs Australia) ಅಮೋಘ ಗೆಲುವು ದಾಖಲಿಸಿದೆ. ಇದರೊಂದಿಗೆ ಅಜೇಯ ತಂಡವಾಗಿ ಸೆಮಿಫೈನಲ್​ಗೆ ಲಗ್ಗೆ ಇಟ್ಟಿದೆ. ಇಷ್ಟು ಮಾತ್ರವಲ್ಲದೆ, ಏಕದಿನ ವಿಶ್ವಕಪ್​ನ ಫೈನಲ್​ (ODI World Cup 2023) ಸೋಲಿಗೆ ಟೀಂ ಇಂಡಿಯಾ ಸರಿಯಾಗಿ ಸೇಡು ತೀರಿಸಿಸಿಕೊಂಡಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ (Team India) 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 206 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 20 ಓವರ್​ಗಳಲ್ಲಿ ಅಂತಿಮವಾಗಿ 7 ವಿಕೆಟ್ ಕಳೆದುಕೊಂಡು 181 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಇದೀಗ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ, ಇಂಗ್ಲೆಂಡ್​ ತಂಡವನ್ನು ಎದುರಿಸಲಿದೆ.

ರೋಹಿತ್ ಸಿಡಿಲಬ್ಬರದ ಬ್ಯಾಟಿಂಗ್

ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿದ ಟೀಂ ಇಂಡಿಯಾ ನಿರಾಶಾದಾಯಕ ಆರಂಭ ಕಂಡಿತು. ಟೀಂ ಇಂಡಿಯಾ 6 ರನ್ ಗಳಿಸಿದ್ದಾಗ ವಿರಾಟ್ ಕೊಹ್ಲಿ ಶೂನ್ಯ ರನ್ ಗಳಿಸಿ ಔಟಾದರು. ನಂತರ ತಂಡದ ಇನ್ನಿಂಗ್ಸ್ ಕೈಗೆತ್ತಿಕೊಂಡ ನಾಯಕ ರೋಹಿತ್ ಅಬ್ಬರದ ಬ್ಯಾಟಿಂಗ್ ಆರಂಭಿಸಿ ಕೇವಲ 19 ಎಸೆತಗಳಲ್ಲಿ ತಮ್ಮ ಅರ್ಧಶತಕವನ್ನು ಪೂರ್ಣಗಿಳಿಸಿದರು. ಇದು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್​ನ ರೋಹಿತ್ ವೃತ್ತಿಜೀವನದಲ್ಲಿ ಅತ್ಯಂತ ವೇಗದ ಅರ್ಧಶತಕ ಎನಿಸಿಕೊಂಡಿತು. ಇನ್ನೊಂದು ಬದಿಯಲ್ಲಿ ರಿಷಬ್ ಪಂತ್ ಕೂಡ ಅವಕಾಶ ಸಿಕ್ಕಾಗ ಬಿಗ್ ಶಾಟ್ ಆಡಿ ತಂಡದ ಇನ್ನಿಂಗ್ಸ್​ನ ವೇಗ ಹೆಚ್ಚಿಸಿದರು. ಹೀಗಾಗಿ ಈ ಜೋಡಿ ಆಸ್ಟ್ರೇಲಿಯಾಕ್ಕೆ ತಲೆನೋವಾಗಿ ಪರಿಣಮಿಸಿದ್ದರು. ಆದರೆ ಈ ವೇಳೆ 15 ರನ್ ಬಾರಿಸಿದ್ದ ಪಂತ್, ಮಾರ್ಕಸ್ ಸ್ಟೊಯಿನಿಸ್​ಗೆ ಬಲಿಯಾದರು. ಇಷ್ಟರೊಳಗೆ ರೋಹಿತ್ ಮತ್ತು ಪಂತ್ ನಡುವೆ ಎರಡನೇ ವಿಕೆಟ್‌ಗೆ 87 ರನ್‌ಗಳ ಜೊತೆಯಾಟ ಕಂಡು ಬಂದಿತ್ತು.

ನರ್ವಸ್ 90ಗೆ ಬಲಿಯಾದ ರೋಹಿತ್

ಪಂತ್ ವಿಕೆಟ್ ಬಳಿಕ ಅಖಾಡಕ್ಕಿಳಿದ ಸೂರ್ಯಕುಮಾರ್ ಯಾದವ್, ರೋಹಿತ್ ಜೊತೆಗೂಡಿ ವೇಗವಾಗಿ ರನ್ ಕಲೆಹಾಕಿದರು. ಈ ವೇಳೆ ರೋಹಿತ್‌ಗೆ ವಿಶ್ವಕಪ್‌ನಲ್ಲಿ ವೇಗದ ಶತಕ ಬಾರಿಸುವ ಅವಕಾಶವಿತ್ತು. ಆದರೆ ರೋಹಿತ್ ನರ್ವಸ್ ನೈಂಟಿಗೆ ಬಲಿಯಾದರು. ರೋಹಿತ್ 41 ಎಸೆತಗಳಲ್ಲಿ 7 ಬೌಂಡರಿ ಹಾಗೂ 8 ಸಿಕ್ಸರ್ ನೆರವಿನಿಂದ 90 ರನ್ ಗಳಿಸಿ ಮಿಚೆಲ್ ಸ್ಟಾರ್ಕ್​ ಎಸೆತದಲ್ಲಿ ಔಟಾದರು. ರೋಹಿತ್ ನಂತರ ಸೂರ್ಯಕುಮಾರ್ ಯಾದವ್, ಶಿವಂ ದುಬೆ ಮತ್ತು ಹಾರ್ದಿಕ್ ಪಾಂಡ್ಯ ಸಣ್ಣ ಆದರೆ ಪ್ರಮುಖ ನಾಕ್‌ಗಳನ್ನು ಆಡಿದರು. ಇದರಿಂದಾಗಿ ಟೀಂ ಇಂಡಿಯಾ 200ರ ಗಡಿ ತಲುಪಲು ಸಾಧ್ಯವಾಯಿತು.

Rohit Sharma: 8 ಸಿಕ್ಸರ್, 7 ಬೌಂಡರಿ, 92 ರನ್! ಕಾಂಗರೂಗಳ ಸೊಕ್ಕಡಗಿಸಿದ ರೋಹಿತ್ ಶರ್ಮಾ

ತಂಡದ ಪರ ಸೂರ್ಯಕುಮಾರ್ ಯಾದವ್ 31 ರನ್ ಮತ್ತು ಶಿವಂ ದುಬೆ 28 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ತಲಾ 27 ರನ್ ಮತ್ತು 9 ರನ್ ಬಾರಿಸಿ ಅಜೇಯರಾಗಿ ಮರಳಿದರು. ಆಸ್ಟ್ರೇಲಿಯಾ ಪರ ಮಿಚೆಲ್ ಸ್ಟಾರ್ಕ್ ಮತ್ತು ಮಾರ್ಕಸ್ ಸ್ಟೊಯಿನಿಸ್ ತಲಾ 2 ವಿಕೆಟ್ ಪಡೆದರೆ, ಜೋಶ್ ಹ್ಯಾಜಲ್‌ವುಡ್ 1 ವಿಕೆಟ್ ಪಡೆದರು.

ಹೆಡ್- ಮಾರ್ಷ್​ ಜೊತೆಯಾಟ

206 ರನ್​ಗಳ ಬೃಹತ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾಕ್ಕೂ ಉತ್ತಮ ಆರಂಭ ಸಿಗಲಿಲ್ಲ. ಅನುಭವಿ ಡೇವಿಡ್ ವಾರ್ನರ್ 6 ರನ್ ಬಾರಿಸಿ ಔಟಾದರು. ಆ ಬಳಿಕ ಜೊತೆಯಾದ ಟ್ರಾವಿಸ್ ಹೆಡ್ ಹಾಗೂ ನಾಯಕ ಮಿಚೆಲ್ ಮಾರ್ಷ್ ಎರಡನೇ ವಿಕೆಟ್‌ಗೆ 81 ರನ್‌ಗಳ ಜೊತೆಯಾಟವನ್ನು ಮಾಡಿದರು. ಹೀಗಾಗಿ ಒಂದು ಹಂತದಲ್ಲಿ ಆಸ್ಟ್ರೇಲಿಯಾ ತಂಡವು ಈ ಪಂದ್ಯವನ್ನು ಗೆಲ್ಲುತ್ತದೆ ಎಂದು ತೋರುತ್ತಿತ್ತು. ಆದರೆ ಭಾರತೀಯ ಬೌಲರ್‌ಗಳು ಬಲವಾದ ಪುನರಾಗಮನವನ್ನು ಮಾಡಿ, ಪಂದ್ಯಾವಳಿಯಲ್ಲಿ ತಮ್ಮ ಗೆಲುವಿನ ಅಭಿಯಾನವನ್ನು ಮುಂದುವರೆಸಿದರು. ಭಾರತದ ಪರ ವೇಗಿ ಅರ್ಷದೀಪ್ ಸಿಂಗ್ ಮೂರು ವಿಕೆಟ್ ಪಡೆದರೆ, ಕುಲ್ದೀಪ್ ಯಾದವ್ ಎರಡು ವಿಕೆಟ್ ಪಡೆದರು.

ಹೆಡ್ ಸ್ಫೋಟಕ ಬ್ಯಾಟಿಂಗ್

ಇನ್ನು ಆಸ್ಟ್ರೇಲಿಯಾ ಪರ ಟ್ರಾವಿಸ್ ಹೆಡ್ 43 ಎಸೆತಗಳಲ್ಲಿ ಒಂಬತ್ತು ಬೌಂಡರಿ ಹಾಗೂ 4 ಸಿಕ್ಸರ್‌ಗಳ ನೆರವಿನಿಂದ 76 ರನ್ ಗಳಿಸಿದರೆ, ಎರಡೆರಡು ಜೀವದಾನಗಳ ಲಾಭ ಪಡೆದ ಮಿಚೆಲ್ ಮಾರ್ಷ್​ 28 ಎಸೆತಗಳಲ್ಲಿ 37 ರನ್​ ಬಾರಿಸಿ ಔಟಾದರು. ಗ್ಲೆನ್ ಮ್ಯಾಕ್ಸ್​ವೆಲ್ ಇನ್ನಿಂಗ್ಸ್ 20 ರನ್​ಗಳಿಗೆ ಅಂತ್ಯಗೊಂಡರೆ, ಆ ಬಳಿಕ ಬಂದ ಯಾವೊಬ್ಬ ಬ್ಯಾಟರ್​ನಿಂದಲೂ ಗಮನಾರ್ಹ ಪ್ರದರ್ಶನ ಕಂಡುಬರಲಿಲ್ಲ. ಹೀಗಾಗಿ ಆಸೀಸ್ ತಂಡ ಭಾರತದ ಮುಂದೆ ಮಂಡಿಯೂರಬೇಕಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:45 pm, Mon, 24 June 24

ತಾಜಾ ಸುದ್ದಿ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ಕಾಂಗ್ರೆಸ್ ನಾಯಕರು ಯಾರನ್ನೇ ಸಿಎಂ ಮಾಡಿದರೂ ನಂಗೆ ಸಂಬಂಧಿಸದ ವಿಷಯ: ರೇವಣ್ಣ
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ವಿನಯ್
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಡಿಕೆ ಸುರೇಶ್​ರನ್ನು ಸೋಲಿಸಿದ್ದು ಸಿದ್ದರಾಮಯ್ಯ; ಅಶೋಕರಿಂದ ಅಸಂಬದ್ಧ ಹೇಳಿಕೆ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸಿಎಂ ಮತ್ತು ಡಿಸಿಎಂ ಆಯ್ಕೆ ಮಾಡೋದು ಸ್ವಾಮೀಜಿಗಳಲ್ಲ: ಸಿದ್ದರಾಮಯ್ಯ, ಸಿಎಂ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ