IND vs BAN: 50 ರನ್ಗಳಿಂದ ಬಾಂಗ್ಲಾ ತಂಡವನ್ನು ಮಣಿಸಿ ಸೆಮಿಫೈನಲ್‌ಗೇರಿದ ಟೀಂ ಇಂಡಿಯಾ..!
IND vs BAN, T20 World Cup 2024: ಆ್ಯಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಬಾಂಗ್ಲಾದೇಶ ನಡುವಿನ ಸೂಪರ್ 8 ಸುತ್ತಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ 50 ರನ್‌ಗಳ ಅಮೋಘ ಜಯ ಸಾಧಿಸಿದೆ. ಇದರೊಂದಿಗೆ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಮುಂದಿನ ಸುತ್ತಿಗೆ ಅಂದರೆ 2024 ರ ಟಿ20 ವಿಶ್ವಕಪ್ನ ಸೆಮಿಫೈನಲ್ಗೆ ಲಗ್ಗೆ ಇಟ್ಟಿದೆ.

ಆ್ಯಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಬಾಂಗ್ಲಾದೇಶ (IND vs BAN) ನಡುವಿನ ಸೂಪರ್ 8 ಸುತ್ತಿನ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಂ ಇಂಡಿಯಾ 50 ರನ್‌ಗಳ ಅಮೋಘ ಜಯ ಸಾಧಿಸಿದೆ. ಇದರೊಂದಿಗೆ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಮುಂದಿನ ಸುತ್ತಿಗೆ ಅಂದರೆ 2024 ರ ಟಿ20 ವಿಶ್ವಕಪ್ನ (T20 World Cup 2024) ಸೆಮಿಫೈನಲ್ಗೆ ಬಹುತೇಕ ಲಗ್ಗೆ ಇಟ್ಟಿದೆ. ಸೂಪರ್ 8 ಸುತ್ತಿನಲ್ಲಿ ಭಾರತ ಇದುವರೆಗೆ 2 ಪಂದ್ಯಗಳನ್ನು ಆಡಿದ್ದು, ಎರಡೂ ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಅಷ್ಟೇ ಇಲ್ಲದೆ ಈ ಎರಡು ಪಂದ್ಯಗಳನ್ನು ಅತ್ಯುತ್ತಮ ನೆಟ್ ರನ್ರೇಟ್ನೊಂದಿಗೆ ಗೆದ್ದಿದೆ. ಹೀಗಾಗಿ ಭಾರತ ಸೆಮೀಸ್ಗೇರುವುದು ಖಚಿತವಾಗಿದೆ. ಇನ್ನು ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ (Team India) 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಕಲೆಹಾಕಿತು. ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 146 ರನ್ ಗಳಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು. ಈ ಮೂಲಕ ಬಾಂಗ್ಲಾ ತಂಡದ ಸೆಮಿಫೈನಲ್ ಕನಸು ಭಗ್ನಗೊಂಡಿತು.
ಅಮೋಘ ಬ್ಯಾಟಿಂಗ್ ಪ್ರದರ್ಶನ
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 196 ರನ್ ಗಳಿಸಿತು. ಬಾಂಗ್ಲಾದೇಶದ ವಿರುದ್ಧ ಟೀಂ ಇಂಡಿಯಾದ ಎಲ್ಲಾ ಬ್ಯಾಟ್ಸ್‌ಮನ್‌ಗಳು ಸ್ಫೋಟಕ ಬ್ಯಾಟಿಂಗ್ ನಡೆಸಿದರು. ಸೂರ್ಯಕುಮಾರ್ ಯಾದವ್ ಹೊರತುಪಡಿಸಿ ಉಳಿದವರೆಲ್ಲರೂ ಎರಡಂಕಿ ಮೊತ್ತ ಕಲೆಹಾಕಿದರು. ತಂಡದ ಪರ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಉತ್ತಮ ಆರಂಭ ನೀಡಿದರು. ಈ ಆರಂಭದ ಲಾಭವನ್ನು ಪಡೆದುಕೊಂಡು ಪ್ರತಿಯೊಬ್ಬ ಬ್ಯಾಟ್ಸ್‌ಮನ್‌ಗಳು ಟಾಪ್ ಗೇರ್‌ನಲ್ಲಿ ಬ್ಯಾಟ್ ಮಾಡಿದರು. ಹೀಗಾಗಿ ಟೀಂ ಇಂಡಿಯಾ ಬೃಹತ್ ಮೊತ್ತ ಕಲೆಹಾಕಿತು.
𝘼 𝙘𝙡𝙞𝙣𝙞𝙘𝙖𝙡 𝙨𝙝𝙤𝙬 𝙞𝙣 𝘼𝙣𝙩𝙞𝙜𝙪𝙖 𝙛𝙧𝙤𝙢 #𝙏𝙚𝙖𝙢𝙄𝙣𝙙𝙞𝙖! 👏 👏
A 5⃣0⃣-run win over Bangladesh for @ImRo45 & Co as they seal their 2️⃣nd win on the bounce in Super Eight. 🙌 🙌
Scorecard ▶️ https://t.co/QZIdeg3h22 #T20WorldCup | #INDvBAN pic.twitter.com/GJ4eZzDUaA
— BCCI (@BCCI) June 22, 2024
ಹಾರ್ದಿಕ್ ಆಲ್ರೌಂಡರ್ ಆಟ
ಟೀಂ ಇಂಡಿಯಾ ಪರ ಉಪನಾಯಕ ಹಾರ್ದಿಕ್ ಪಾಂಡ್ಯ ಇನಿಂಗ್ಸ್ನ ಕೊನೆಯ ಎಸೆತದಲ್ಲಿ ಬೌಂಡರಿ ಬಾರಿಸುವ ಮೂಲಕ ಅರ್ಧಶತಕ ಪೂರೈಸಿದರು. ಅಂತಿಮವಾಗಿ ಹಾರ್ದಿಕ್ 24 ಎಸೆತಗಳಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ಗಳ ನೆರವಿನಿಂದ ಅಜೇಯ 50 ರನ್ ಬಾರಿಸಿದರು. ನಾಯಕ ರೋಹಿತ್ ಶರ್ಮಾ 23, ವಿರಾಟ್ ಕೊಹ್ಲಿ 37, ರಿಷಬ್ ಪಂತ್ 36, ಸೂರ್ಯಕುಮಾರ್ ಯಾದವ್ 6 ಮತ್ತು ಶಿವಂ ದುಬೆ 34 ರನ್‌ಗಳ ಕಾಣಿಕೆ ನೀಡಿದರು. ಬಾಂಗ್ಲಾದೇಶ ಪರ ರಿಷಾದ್ ಹೊಸೈನ್ ಮತ್ತು ತಂಜಿಮ್ ಹಸನ್ ಸಾಕಿಬ್ ತಲಾ 2 ವಿಕೆಟ್ ಪಡೆದರೆ, ಶಕೀಬ್ ಅಲ್ ಹಸನ್ 1 ವಿಕೆಟ್ ಪಡೆದರು.
IND vs BAN: 6 ತಂಡಗಳ ವಿರುದ್ಧ ಈ ಸಾಧನೆ ಮಾಡಿದ ವಿಶ್ವದ ಏಕೈಕ ಬ್ಯಾಟರ್ ರೋಹಿತ್ ಶರ್ಮಾ..!
ಬಾಂಗ್ಲಾ ತಂಡದ ಬ್ಯಾಟಿಂಗ್ ವಿಫಲ
197 ರನ್‌ಗಳ ಗುರಿಗೆ ಉತ್ತರವಾಗಿ ಬಾಂಗ್ಲಾದೇಶ ತಂಡ 146 ರನ್ ಗಳಿಸಲಷ್ಟೇ ಶಕ್ತವಾಯಿತು. ಈ ವೇಳೆ ನಜ್ಮುಲ್ ಹುಸೇನ್ ಶಾಂಟೊ ತಂಡದ ಪರ ಗರಿಷ್ಠ 40 ರನ್ ಬಾರಿಸಿದರೆ, ರಿಶಾದ್ ಹೊಸೈನ್ 24 ರನ್ ಕೊಡುಗೆ ನೀಡಿದರು. ಮತ್ತೊಂದೆಡೆ, ಕುಲ್ದೀಪ್ ಯಾದವ್ ಟೀಮ್ ಇಂಡಿಯಾ ಪರ ಗರಿಷ್ಠ 3 ವಿಕೆಟ್ ಪಡೆದರೆ, ಅರ್ಷದೀಪ್ ಸಿಂಗ್-ಜಸ್ಪ್ರೀತ್ ಬುಮ್ರಾ ತಲಾ 2 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಹಾರ್ದಿಕ್ ಪಾಂಡ್ಯ ಕೂಡ 1 ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 11:17 pm, Sat, 22 June 24
