ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಹಾಗೂ ಐರ್ಲೆಂಡ್ (India vs Ireland) ನಡುವಿನ ಟಿ20 ವಿಶ್ವಕಪ್ (T20 World Cup 2024) 8ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಐರ್ಲೆಂಡ್ ತಂಡ, ಟೀಂ ಇಂಡಿಯಾ ವೇಗಿಗಳ ಮಾರಕ ದಾಳಿಗೆ ನಲುಗಿ ಕೇವಲ 96 ರನ್ಗಳಿಗೆ ಆಲೌಟ್ ಆಗಿದೆ. ಭಾರತ ವೇಗಿಗಳ ಪರಾಕ್ರಮ ಹೇಗಿತ್ತೆಂದರೆ ಐರ್ಲೆಂಡ್ ತಂಡಕ್ಕೆ ಫೂರ್ಣ 20 ಓವರ್ಗಳನ್ನು ಆಡಲು ಸಾಧ್ಯವಾಗಲಿಲ್ಲ. ಅಂತಿಮವಾಗಿ 16 ಓವರ್‌ಗಳಿಗೆ ತನ್ನೇಲ್ಲ ವಿಕೆಟ್ ಕಳೆದುಕೊಂಡ ಐರ್ಲೆಂಡ್ 96 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಉಪನಾಯಕ ಹಾರ್ದಿಕ್ ಪಾಂಡ್ಯ (Hardik Pandya) ಟೀಂ ಇಂಡಿಯಾ ಪರ ಅತಿ ಹೆಚ್ಚು 3 ವಿಕೆಟ್ ಕಬಳಿಸಿದರು.
ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಐರ್ಲೆಂಡ್ಗೆ ವೇಗದ ಆರಂಭ ಸಿಗಲಿಲ್ಲ. ಎರಡು ಓವರ್‌ಗಳು ಮುಗಿದಾಗ ಐರ್ಲೆಂಡ್ ಸ್ಕೋರ್ ವಿಕೆಟ್ ನಷ್ಟವಿಲ್ಲದೆ ಏಳು ರನ್ ಆಗಿತ್ತು. ಅರ್ಷದೀಪ್ ಸಿಂಗ್ ಎಸೆದ ಮೂರನೇ ಓವರ್‌ನಲ್ಲಿ 2 ವಿಕೆಟ್ ಉರುಳಿದವು. ಮೊದಲ ಎಸೆತದಲ್ಲಿ ಐರ್ಲೆಂಡ್ ನಾಯಕ ಪಾಲ್ ಸ್ಟಿರ್ಲಿಂಗ್, ವಿಕೆಟ್‌ಕೀಪರ್ ರಿಷಬ್ ಪಂತ್ಗೆ ಕ್ಯಾಚ್ ನೀಡಿದರೆ, ಓವರ್ನ ಕೊನೆಯ ಎಸೆತದಲ್ಲಿ ಮಾಜಿ ನಾಯಕ ಆಂಡ್ರ್ಯೂ ಬಲ್ಬಿರ್ನಿ ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು.
ನಂತರ ದಾಳಿಗಿಳಿದ ಉಪನಾಯಕ ಹಾರ್ದಿಕ್ ಪಾಂಡ್ಯ, 10 ರನ್ಗಳಿಸಿದ್ದ ಲೋರ್ಕನ್ ಟಕರ್ಗೆ ಪೆವಿಲಿಯನ್ ಹಾದಿ ತೋರಿಸಿದರೆ, ಬುಮ್ರಾ ಎಸೆತದಲ್ಲಿ ಹ್ಯಾರಿ ಟೆಕ್ಟರ್ ಔಟಾದರು. ತಂಡ ಕೇವಲ 50 ರನ್ಗಳಿಗೆ 8 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಕೊನೆಯಲ್ಲಿ ಹೋರಾಟ ನೀಡಿದ ಗರೆಥ್ ಡೆಲಾನಿ 26 ರನ್ ಬಾರಿಸಿದರೆ, ಜೋಶುವಾ ಲಿಟಲ್ 14 ರನ್ಗಳ ಕಾಣಿಕೆ ನೀಡಿದರು.
IND vs IRE Playing XI: ಟಾಸ್ ಗೆದ್ದ ಭಾರತ; ತಂಡದಲ್ಲಿ ನಾಲ್ಕು ಬದಲಾವಣೆ..!
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಜೋಶುವಾ ಲಿಟಲ್, ಬೆಂಜಮಿನ್ ವೈಟ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:31 pm, Wed, 5 June 24