IND vs USA: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ ಒಂದು ಬದಲಾವಣೆ ಸಾಧ್ಯತೆ
T20 World Cup 2024: ಬುಧವಾರ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಮತ್ತು ಯುಎಸ್ಎ ತಂಡಗಳು ಮುಖಾಮುಖಿಯಾಗಲಿದೆ. ನ್ಯೂಯಾರ್ಕ್ನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯಗಳಿಸಿದರೆ ಸೂಪರ್-8 ಹಂತಕ್ಕೇರಲಿದೆ. ಹಾಗಾಗಿ 3ನೇ ಪಂದ್ಯದ ಮೂಲಕ ಭಾರತ ತಂಡವು ಸೂಪರ್-8 ಹಂತಕ್ಕೇರುವುದನ್ನು ಎದುರು ನೋಡಬಹುದು.
T20 World Cup 2024: ಟಿ20 ವಿಶ್ವಕಪ್ನ 25ನೇ ಪಂದ್ಯದಲ್ಲಿ ಭಾರತ ಮತ್ತು ಯುಎಸ್ಎ ತಂಡಗಳು ಮುಖಾಮುಖಿಯಾಗಲಿದೆ. ನ್ಯೂಯಾರ್ಕ್ನ ನಸ್ಸೌ ಕೌಂಟಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಭಾರತ ತಂಡ ಒಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಕಳೆದ ಎರಡು ಪಂದ್ಯಗಳಲ್ಲಿ ಕಣಕ್ಕಿಳಿದ ಟೀಮ್ ಇಂಡಿಯಾ ಆಟಗಾರ ಶಿವಂ ದುಬೆ ಕಡೆಯಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಅದರಲ್ಲೂ ಪಾಕಿಸ್ತಾನ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ದುಬೆ ಕಲೆಹಾಕಿದ್ದು ಕೇವಲ 3 ರನ್ಗಳು ಮಾತ್ರ.
ಹಾಗೆಯೇ ಇದೇ ಪಂದ್ಯದಲ್ಲಿ ಮೊಹಮ್ಮದ್ ರಿಝ್ವಾನ್ ನೀಡಿದ ಸುಲಭ ಕ್ಯಾಚ್ ಅನ್ನು ಕೂಡ ಕೈ ಚೆಲ್ಲಿದ್ದರು. ಅಂದರೆ ಅತ್ತ ಬ್ಯಾಟಿಂಗ್ನಲ್ಲಿ ವಿಫಲರಾಗಿದ್ದ ದುಬೆ ಫೀಲ್ಡಿಂಗ್ನಲ್ಲೂ ಕಳಪೆ ಪ್ರದರ್ಶನ ನೀಡಿದ್ದರು.
ಹೀಗಾಗಿ ಯುಎಸ್ಎ ವಿರುದ್ಧದ ಪಂದ್ಯದಿಂದ ಶಿವಂ ದುಬೆಯನ್ನು ಕೈ ಬಿಡುವ ಸಾಧ್ಯತೆಯಿದೆ. ಅವರ ಬದಲಿಗೆ ಸಂಜು ಸ್ಯಾಮ್ಸನ್ ಅವರನ್ನು ಕಣಕ್ಕಿಳಿಸಬಹುದು. ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಕಣಕ್ಕಿಳಿಯಬಹುದು. ಇನ್ನು ಮೂರನೇ ಕ್ರಮಾಂಕದಲ್ಲಿ ರಿಷಭ್ ಪಂತ್ ಮುಂದುವರೆಯಲಿದ್ದಾರೆ.
ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್, ಐದನೇ ಕ್ರಮಾಂಕದಲ್ಲಿ ಸಂಜು ಸ್ಯಾಮ್ಸನ್ ಬ್ಯಾಟ್ ಬೀಸಬಹುದು. ಇನ್ನು ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಕಣಕ್ಕಿಳಿಯಲಿದ್ದಾರೆ.
ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಅರ್ಷದೀಪ್ ಸಿಂಗ್ ಮುಂದುವರೆಯಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಹೀಗಿರಲಿದೆ…
- ರೋಹಿತ್ ಶರ್ಮಾ
- ವಿರಾಟ್ ಕೊಹ್ಲಿ
- ರಿಷಭ್ ಪಂತ್ (ವಿಕೆಟ್ ಕೀಪರ್)
- ಸೂರ್ಯಕುಮಾರ್ ಯಾದವ್
- ಸಂಜು ಸ್ಯಾಮ್ಸನ್
- ಹಾರ್ದಿಕ್ ಪಾಂಡ್ಯ
- ರವೀಂದ್ರ ಜಡೇಜಾ
- ಅಕ್ಷರ್ ಪಟೇಲ್
- ಜಸ್ಪ್ರೀತ್ ಬುಮ್ರಾ
- ಮೊಹಮ್ಮದ್ ಸಿರಾಜ್
- ಅರ್ಷದೀಪ್ ಸಿಂಗ್
ಇದನ್ನೂ ಓದಿ: Abhishek Sharma: 25 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ಅಭಿಷೇಕ್ ಶರ್ಮಾ