IND vs AUS: ಭಾರತ- ಆಸ್ಟ್ರೇಲಿಯಾ ಪಂದ್ಯ ನಡೆಯಲ್ಲಿರುವ ಸೇಂಟ್ ಲೂಸಿಯಾ ಪಿಚ್ ಯಾರಿಗೆ ಸಹಕಾರಿ?

IND vs AUS, Daren Sammy Stadium Pitch Report: ಈ ಟಿ20 ವಿಶ್ವಕಪ್​ನ ಅತಿದೊಡ್ಡ ಸ್ಕೋರ್ ದಾಖಲಾಗಿರುವುದು ಡ್ಯಾರೆನ್ ಸಾಮಿ ಸ್ಟೇಡಿಯಂನಲ್ಲಿ. ಈ ಮೈದಾನದಲ್ಲಿ ಇದುವರೆಗೆ 5 ಪಂದ್ಯಗಳನ್ನು ಆಡಲಾಗಿದ್ದು, 180 ಅಥವಾ ಅದಕ್ಕಿಂತ ಹೆಚ್ಚಿನ ಸ್ಕೋರ್ 6 ಬಾರಿ ದಾಖಲಾಗಿದೆ. ಆದರೆ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ನಡುವಿನ ಕೊನೆಯ ಪಂದ್ಯದಲ್ಲಿ ಪಿಚ್ ಬ್ಯಾಟಿಂಗ್‌ಗೆ ಕಷ್ಟಕರವಾಗಿತ್ತು.

IND vs AUS: ಭಾರತ- ಆಸ್ಟ್ರೇಲಿಯಾ ಪಂದ್ಯ ನಡೆಯಲ್ಲಿರುವ ಸೇಂಟ್ ಲೂಸಿಯಾ ಪಿಚ್ ಯಾರಿಗೆ ಸಹಕಾರಿ?
ಡ್ಯಾರೆನ್ ಸಾಮಿ ಸ್ಟೇಡಿಯಂನ ಪಿಚ್ ವರದಿ
Follow us
|

Updated on: Jun 23, 2024 | 8:05 PM

ಅಜೇಯ ಟೀಂ ಇಂಡಿಯಾ 2024 ರ ಟಿ20 ವಿಶ್ವಕಪ್‌ನ (T20 World Cup 2024) ಸೂಪರ್ 8 ಹಂತದ ತನ್ನ ಕೊನೆಯ ಪಂದ್ಯದಲ್ಲಿ ಆಸ್ಟ್ರೇಲಿಯಾವನ್ನು (India vs Australia) ನಾಳೆ ಅಂದರೆ ಜೂನ್ 24 ರಂದು ಎದುರಿಸಲಿದೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿದರೆ ಭಾರತ ಸೆಮಿಫೈನಲ್‌ಗೆ ಲಗ್ಗೆ ಇಡಲಿದೆ. ಅಫ್ಘಾನಿಸ್ತಾನ ವಿರುದ್ಧ ಅನಿರೀಕ್ಷಿತ ಸೋಲಿನ ನಂತರ ಆಸ್ಟ್ರೇಲಿಯಾಕ್ಕೆ ಇದು ‘ಮಾಡು ಇಲ್ಲವೇ ಮಡಿ’ ಪಂದ್ಯವಾಗಿದೆ. ಇತ್ತ ಭಾರತ ತಂಡ ಸತತ ಮೂರನೇ ಗೆಲುವಿನೊಂದಿಗೆ ಗುಂಪಿನಲ್ಲಿ ಅಗ್ರಸ್ಥಾನ ಪಡೆಯುವ ಮೂಲಕ ಸೆಮಿಫೈನಲ್ ತಲುಪಲು ಬಯಸಿದೆ. ಈ ಪಂದ್ಯಕ್ಕೆ ಸೇಂಟ್ ಲೂಸಿಯಾದ ಗ್ರಾಸ್ ಐಲೆಟ್‌ನಲ್ಲಿರುವ ಡ್ಯಾರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ (Daren Sammy National Cricket Stadium) ಆತಿಥ್ಯವಹಿಸುತ್ತಿದೆ.

ಡ್ಯಾರೆನ್ ಸಾಮಿ ಸ್ಟೇಡಿಯಂನ ಪಿಚ್ ವರದಿ

ಈ ಟಿ20 ವಿಶ್ವಕಪ್​ನ ಅತಿದೊಡ್ಡ ಸ್ಕೋರ್ ದಾಖಲಾಗಿರುವುದು ಡ್ಯಾರೆನ್ ಸಾಮಿ ಸ್ಟೇಡಿಯಂನಲ್ಲಿ. ಈ ಮೈದಾನದಲ್ಲಿ ಇದುವರೆಗೆ 5 ಪಂದ್ಯಗಳನ್ನು ಆಡಲಾಗಿದ್ದು, 180 ಅಥವಾ ಅದಕ್ಕಿಂತ ಹೆಚ್ಚಿನ ಸ್ಕೋರ್ 6 ಬಾರಿ ದಾಖಲಾಗಿದೆ. ಆದರೆ ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್ ನಡುವಿನ ಕೊನೆಯ ಪಂದ್ಯದಲ್ಲಿ ಪಿಚ್ ಬ್ಯಾಟಿಂಗ್‌ಗೆ ಕಷ್ಟಕರವಾಗಿತ್ತು. ಹಗಲಿನಲ್ಲಿ ನಡೆದ ಈ ಮೈದಾನದಲ್ಲಿ ಇದೊಂದೇ ಪಂದ್ಯವಾಗಿತ್ತು. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಪಂದ್ಯವೂ ಹಗಲಿನಲ್ಲಿ ನಡೆಯಲಿದೆ. ಅಂತಹ ಪರಿಸ್ಥಿತಿಯಲ್ಲಿ, ಪಿಚ್ ಸ್ಪಿನ್ ಬೌಲರ್‌ಗಳಿಗೆ ಸಹಕಾರಿಯಾಗುವ ಸಾಧ್ಯತೆಗಳಿವೆ.

ಭಾರತ ಗೆದ್ದರೆ ಆಸ್ಟ್ರೇಲಿಯಾ ಔಟ್

ಅಫ್ಘಾನಿಸ್ತಾನ ವಿರುದ್ಧ ಸೋತಿರುವ ಆಸ್ಟ್ರೇಲಿಯಾ ತಂಡ ಇದೀಗ ಭಾರತ ವಿರುದ್ಧ ಗೆಲ್ಲಲೇಬೇಕಾಗದ ಒತ್ತಡದ ಜೊತೆಗೆ ಸೋಮವಾರ ರಾತ್ರಿ ನಡೆಯಲ್ಲಿರುವ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ರಶೀದ್ ಖಾನ್ ಪಡೆ ಸೋಲಲಿ ಎ ಎಂದು ಪ್ರಾರ್ಥಿಸಬೇಕಾಗಿದೆ. ಇತ್ತ ಐಸಿಸಿ ಟೂರ್ನಮೆಂಟ್‌ಗಳಲ್ಲಿ ಆಗಾಗ್ಗೆ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸುವ ಭಾರತ ತಂಡ ಈ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾವನ್ನು ಮಣಿಸಲು ಪಣತೊಟ್ಟಿದೆ.

ಎರಡೂ ತಂಡಗಳು ಹೀಗಿವೆ

ಭಾರತ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಷ್ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ: ಮಿಚೆಲ್ ಮಾರ್ಷ್ (ನಾಯಕ), ಆಷ್ಟನ್ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆಡಮ್ ಝಂಪಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
‘ದರ್ಶನ್ ನೋಡಿದ್ರೆ ಧರ್ಮಸ್ಥಳ ಮಂಜುನಾಥ ಸ್ವಾಮಿ ನೋಡಿದಂತೆ’: ಅಭಿಮಾನಿ
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
ಬಿಜೆಪಿಯವರು ಇದನ್ನ ಪ್ರೂವ್​ ಮಾಡಿದ್ರೆ ರಾಜಕೀಯ ನಿವೃತ್ತಿ: ಜಮೀರ್ ಅಹ್ಮದ್‌
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
‘6 ತಿಂಗಳಲ್ಲಿ ಕನ್ನಡಕ್ಕೆ ಹೊಸ ಒಟಿಟಿ’: ಸಿಹಿ ಸುದ್ದಿ ನೀಡಿದ ಸಾಧು ಕೋಕಿಲ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಲೋಕಲ್​ನವರನ್ನ ಹಿಡಿದ್ರೆ ಮನೆಗೆ ಕಳಿಸ್ತೇನೆ: ಪೊಲೀಸ್​ ಮೇಲೆ ಮಂಜು ದರ್ಪ
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಆಗಾಗ ಸಿಎಂ ಸಿದ್ದರಾಮಯ್ಯರ ತಲೆ ತಿನ್ನುತ್ತಿರಬೇಕು: ಜಗ್ಗೇಶ್
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಸಿದ್ದರಾಮಯ್ಯ-ಡಿಕೆಶಿ ವಿರಾಟ್ ಕೊಹ್ಲಿ-ರೋಹಿತ್ ಇದ್ದಂತೆ: ವಚನಾನಂದ ಶ್ರೀ
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಅಶೋಕ್​ ನಮ್ಮ ಪಕ್ಷದ ಆಂತರಿಕದ ಬಗ್ಗೆ ನಿಮಗ್ಯಾಕೆ ತೆವಲು?: ಪ್ರದೀಪ್​ ಈಶ್ವರ್
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಬಸ್​ ಪಲ್ಟಿ.. 20ಕ್ಕೂ ಹೆಚ್ಚು ಜನರಿಗೆ ಗಾಯ: ಆಕ್ಸಿಡೆಂಟ್ ಆಗಿದ್ದೇಗೆ?
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭೋರ್ಗರೆಯುತ್ತಿದೆ ಚುಂಚನಕಟ್ಟೆ ಜಲಪಾತ, ವೈಭವ ನೋಡಲು ಪ್ರವಾಸಿಗರ ದಂಡು
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?
ಭಾರತ ಫೈನಲ್​ ಮ್ಯಾಚ್​ ಗೆಲುವಿಗೆ ಈ ಐದು ಕಾರಣಗಳು, ಯಾವುವು ಗೊತ್ತಾ?