AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs BAN: ಇಂದು ಭಾರತ ಮತ್ತು ಬಾಂಗ್ಲಾದೇಶ್ ಮುಖಾಮುಖಿ

T20 World Cup 2024: ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಟಿ20 ಕ್ರಿಕೆಟ್​ನಲ್ಲಿ ಈವರೆಗೆ 13 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 12 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಬಾಂಗ್ಲಾದೇಶ್ ಗೆದ್ದಿರುವುದು ಕೇವಲ ಒಂದು ಬಾರಿ ಮಾತ್ರ. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ತಂಡವಾಗಿ ಟೀಮ್ ಇಂಡಿಯಾ ಗುರುತಿಸಿಕೊಂಡಿದೆ.

IND vs BAN: ಇಂದು ಭಾರತ ಮತ್ತು ಬಾಂಗ್ಲಾದೇಶ್ ಮುಖಾಮುಖಿ
IND vs BAN
ಝಾಹಿರ್ ಯೂಸುಫ್
|

Updated on: Jun 22, 2024 | 7:21 AM

Share

T20 World Cup 2024: ಟಿ20 ವಿಶ್ವಕಪ್​ ಸೂಪರ್-8 ಸುತ್ತಿನ ತನ್ನ ಎರಡನೇ ಪಂದ್ಯದಲ್ಲಿ ಭಾರತ ತಂಡವು ಬಾಂಗ್ಲಾದೇಶ್ ವಿರುದ್ಧ ಸೆಣಸಲಿದೆ. ಅಂಟಿಗುವಾದ ಸರ್ ವಿವಿಯನ್ ರಿಚರ್ಡ್ಸ್​ ಸ್ಟೇಡಿಯಂನಲ್ಲಿ ಇಂದು (ಜೂ.22) ನಡೆಯಲಿರುವ ಈ ಪಂದ್ಯದಲ್ಲಿ ಗೆದ್ದರೆ ಟೀಮ್ ಇಂಡಿಯಾ ಸೆಮಿಫೈನಲ್​ಗೇರುವುದು ಬಹುತೇಕ ಖಚಿತವಾಗಲಿದೆ. ಏಕೆಂದರೆ ಇದಕ್ಕೂ ಮುನ್ನ ಭಾರತ ತಂಡವು ಅಫ್ಘಾನಿಸ್ತಾನ್ ವಿರುದ್ಧ ಜಯ ಸಾಧಿಸಿ 2 ಅಂಕಗಳನ್ನು ಕಲೆಹಾಕಿದೆ. ಇದೀಗ ಬಾಂಗ್ಲಾದೇಶ್ ವಿರುದ್ಧ ಗೆದ್ದರೆ ಮತ್ತೆರಡು ಅಂಕಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ.

ಈ ಮೂಲಕ ಟೀಮ್ ಇಂಡಿಯಾ ಇಂದು ಸೆಮಿಫೈನಲ್​ಗೇರುವ ಹಾದಿಯನ್ನು ಸುಗಮಗೊಳಿಸಬಹುದು. ಅತ್ತ ಬಾಂಗ್ಲಾದೇಶ್ ತಂಡವು ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿದ್ದು, ಇಂದು ಭಾರತದ ವಿರುದ್ಧ ಪರಾಜಯಗೊಂಡರೆ ಟೂರ್ನಿಯಿಂದ ಹೊರಬೀಳಲಿದೆ. ಹೀಗಾಗಿ ಇಂದಿನ ಪಂದ್ಯವು ಬಾಂಗ್ಲಾ ಪಾಲಿಗೆ ಮಾಡು ಇಲ್ಲವೇ ಮಡಿ ಪಂದ್ಯ.

ಉಭಯ ತಂಡಗಳ ಮುಖಾಮುಖಿ:

ಭಾರತ ಮತ್ತು ಬಾಂಗ್ಲಾದೇಶ್ ತಂಡಗಳು ಟಿ20 ಕ್ರಿಕೆಟ್​ನಲ್ಲಿ ಈವರೆಗೆ 13 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಟೀಮ್ ಇಂಡಿಯಾ 12 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಬಾಂಗ್ಲಾದೇಶ್ ಗೆದ್ದಿರುವುದು ಕೇವಲ ಒಂದು ಬಾರಿ ಮಾತ್ರ.

ಹಾಗೆಯೇ ಈ ಬಾರಿಯ ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲೂ ಬಾಂಗ್ಲಾ ತಂಡವನ್ನು ಬಗ್ಗು ಬಡಿಯುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿತ್ತು. ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ಫೇವರೇಟ್ ತಂಡವಾಗಿ ಟೀಮ್ ಇಂಡಿಯಾ ಗುರುತಿಸಿಕೊಂಡಿದೆ.

ಪಂದ್ಯ ಎಷ್ಟು ಗಂಟೆಗೆ ಶುರು?

ಅಂಟಿಗುವಾದಲ್ಲಿ ನಡೆಯಲಿರುವ ಭಾರತ ಮತ್ತು ಬಾಂಗ್ಲಾದೇಶ್ ನಡುವಣ ಪಂದ್ಯವು ಹಗಲಿನಲ್ಲಿ ನಡೆಯಲಿದ್ದು, ಬೆಳಿಗ್ಗೆ 10.30 ರಿಂದ ಶುರುವಾಗಲಿದೆ. ಅಂದರೆ ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ನೇರ ಪ್ರಸಾರ ಇರಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಭಾರತ-ಬಾಂಗ್ಲಾದೇಶ್ ನಡುವಣ ಈ ಪಂದ್ಯದ ನೇರ ಪ್ರಸಾರ ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ ಸ್ಟಾರ್ ನೆಟ್​ವರ್ಕ್​ನ ಸ್ಪೋರ್ಟ್ಸ್ ಚಾನೆಲ್​ಗಳಲ್ಲಿ ಇರಲಿದೆ.

ಉಚಿತವಾಗಿ ವೀಕ್ಷಿಸುವುದು ಹೇಗೆ?

ಈ ಪಂದ್ಯವನ್ನು ಡಿಸ್ನಿ ಹಾಟ್ ಸ್ಟಾರ್ ಮೊಬೈಲ್ ಆ್ಯಪ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್ ಸ್ಟಾರ್ ವೆಬ್​ಸೈಟ್​ನಲ್ಲೂ ಲೈವ್ ಸ್ಟ್ರೀಮಿಂಗ್ ಇರಲಿದ್ದು, ಇದಕ್ಕಾಗಿ ರಿಜಾರ್ಜ್​ ಮಾಡಬೇಕಾಗುತ್ತದೆ.

ಉಭಯ ತಂಡಗಳು:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಇದನ್ನೂ ಓದಿ: Lockie Ferguson: ಟಿ20 ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಲಾಕಿ ಫರ್ಗುಸನ್

ಬಾಂಗ್ಲಾದೇಶ ತಂಡ: ತಂಝಿದ್ ಹಸನ್, ಲಿಟ್ಟನ್ ದಾಸ್ (ವಿಕೆಟ್ ಕೀಪರ್), ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತೌಹಿದ್ ಹೃದೋಯ್, ಶಕೀಬ್ ಅಲ್ ಹಸನ್, ಮಹಮ್ಮದುಲ್ಲಾ, ರಿಶಾದ್ ಹೊಸೈನ್, ಮಹೇದಿ ಹಸನ್, ತಸ್ಕಿನ್ ಅಹ್ಮದ್, ತಂಝಿಮ್ ಹಸನ್ ಸಾಕಿಬ್, ಮುಸ್ತಫಿಜುರ್ ರೆಹಮಾನ್, ಜಾಕರ್ ಅಲಿ, ತನ್ವೀರ್ ಇಸ್ಲಾಂ, ಶೋರಿಫುಲ್ ಇಸ್ಲಾಂ, ಸೌಮ್ಯ ಸರ್ಕಾರ್.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ