IND vs IRE: ಭಾರತ vs ಐರ್ಲೆಂಡ್ ನಡುವಣ ಪಂದ್ಯ ಎಷ್ಟು ಗಂಟೆಗೆ ಶುರು? ಇಲ್ಲಿದೆ ಮಾಹಿತಿ
T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯವಾಡಲು ಸಜ್ಜಾಗಿ ನಿಂತಿದೆ. ಬುಧವಾರ ನಡೆಯಲಿರುವ ಟಿ20 ವಿಶ್ವಕಪ್ನ 8ನೇ ಪಂದ್ಯದಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಇನ್ನು ಜೂನ್ 9 ರಂದು ನಡೆಯಲಿರುವ ತನ್ನ 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ.
T20 World Cup 2024: ಟಿ20 ವಿಶ್ವಕಪ್ನ 8ನೇ ಪಂದ್ಯದಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ನಾಳೆ (ಜೂನ್ 5) ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ನ್ಯೂಯಾರ್ಕ್ನ ನಸ್ಸೌ ಕೌಂಟಿ ಕ್ರೀಡಾಂಗಣದಲ್ಲಿ ನಡೆಯಲಿರುವ ಈ ಪಂದ್ಯವು ಅಮೆರಿಕ ಕಾಲಮಾನ ಬೆಳಗ್ಗೆ 10:30 ರಿಂದ ಶುರುವಾಗಲಿದೆ. ಅಂದರೆ ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಲಿದೆ.
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ನೇರ ಪ್ರಸಾರ ಇರಲಿದೆ. ಹಾಗೆಯೇ ದೂರದರ್ಶನ (DD) ಚಾನೆಲ್ನಲ್ಲಿ ಉಚಿತವಾಗಿ ವೀಕ್ಷಿಸಬಹುದು.
ಯಾವ ಆ್ಯಪ್ನಲ್ಲಿ ವೀಕ್ಷಿಸಬಹುದು?
ಡಿಸ್ನಿ ಹಾಟ್ ಸ್ಟಾರ್ ಆ್ಯಪ್ನಲ್ಲಿ ಈ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದು. ಇನ್ನು ಡಿಸ್ನಿ ಹಾಟ್ ಸ್ಟಾರ್ ವೆಬ್ಸೈಟ್ನಲ್ಲೂ ಪಂದ್ಯದ ಪ್ರಸಾರ ಇರಲಿದ್ದು, ಇದಕ್ಕಾಗಿ ಎಕ್ಸ್ಟ್ರಾ ರಿಚಾರ್ಜ್ ಮಾಡಬೇಕಾಗುತ್ತದೆ.
ಎಷ್ಟು ಗಂಟೆಗೆ ಪಂದ್ಯ ಶುರು?
ಟಾಸ್ ಪ್ರಕ್ರಿಯೆ- ರಾತ್ರಿ 7.30 ಕ್ಕೆ ಪಂದ್ಯ ಶುರು- ರಾತ್ರಿ 8 ಗಂಟೆಗೆ (ಭಾರತೀಯ ಕಾಲಮಾನ)
ಉಭಯ ತಂಡಗಳು:
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಮೀಸಲು ಆಟಗಾರರು: ಶುಭ್ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.
ಇದನ್ನೂ ಓದಿ: Anrich Nortje: 18 ಡಾಟ್ ಬಾಲ್, 4 ವಿಕೆಟ್: ವಿಶ್ವ ದಾಖಲೆ ಬರೆದ ಅನ್ರಿಕ್ ನೋಕಿಯಾ
ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಮಾರ್ಕ್ ಆಡೈರ್, ರಾಸ್ ಅಡೈರ್, ಆಂಡ್ರ್ಯೂ ಬಾಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಬೆನ್ ವೈಟ್, ಕ್ರೇಗ್ ಯಂಗ್.
ಟೀಮ್ ಇಂಡಿಯಾದ ವೇಳಾಪಟ್ಟಿ ಇಲ್ಲಿದೆ:
ದಿನಾಂಕ | ಪಂದ್ಯಗಳು | ಸಮಯ (IST) | ಸ್ಥಳ |
05-ಜೂನ್-24 | ಭಾರತ vs ಐರ್ಲೆಂಡ್ | 8:00 PM | ನ್ಯೂಯಾರ್ಕ್ |
09-ಜೂನ್-24 | ಭಾರತ vs ಪಾಕಿಸ್ತಾನ್ | 8:00 PM | ನ್ಯೂಯಾರ್ಕ್ |
12-ಜೂನ್-24 | ಭಾರತ vs ಯುಎಸ್ಎ | 8:00 PM | ನ್ಯೂಯಾರ್ಕ್ |
15-ಜೂನ್-24 | ಭಾರತ vs ಕೆನಡಾ | 8:00 PM | ಫ್ಲೋರಿಡಾ |