AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಇಂದಿನಿಂದ ಟೀಮ್ ಇಂಡಿಯಾದ ಟಿ20 ವಿಶ್ವಕಪ್ ಅಭಿಯಾನ ಶುರು

India vs Ireland: ಭಾರತ ಮತ್ತು ಐರ್ಲೆಂಡ್ ತಂಡಗಳು ಟಿ20 ಕ್ರಿಕೆಟ್​ನಲ್ಲಿ ಈವರೆಗೆ 7 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಎಲ್ಲಾ ಪಂದ್ಯಗಳಲ್ಲೂ ಭಾರತ ತಂಡವೇ ಜಯ ಸಾಧಿಸಿದೆ. ಇದಾಗ್ಯೂ ಈ ಬಾರಿ ಟೀಮ್ ಇಂಡಿಯಾಗೆ ಸೋಲುಣಿಸಿ ಐತಿಹಾಸಿಕ ಗೆಲುವು ದಾಖಲಿಸುವ ಇರಾದೆಯಲ್ಲಿದೆ ಐರ್ಲೆಂಡ್ ಪಡೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉತ್ತಮ ಪೈಪೋಟಿಯನ್ನು ನಿರೀಕ್ಷಿಸಬಹುದು.

T20 World Cup 2024: ಇಂದಿನಿಂದ ಟೀಮ್ ಇಂಡಿಯಾದ ಟಿ20 ವಿಶ್ವಕಪ್ ಅಭಿಯಾನ ಶುರು
IND vs IRE
ಝಾಹಿರ್ ಯೂಸುಫ್
|

Updated on: Jun 05, 2024 | 7:21 AM

Share

T20 World Cup 2024: ಟಿ20 ವಿಶ್ವಕಪ್​ನ 8ನೇ ಪಂದ್ಯದಲ್ಲಿ ಭಾರತ ತಂಡವು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಅಭಿಯಾನ ಶುರು ಮಾಡಲಿದೆ. ಟಿ20 ಕ್ರಿಕೆಟ್​ನಲ್ಲಿ ಭಾರತ ತಂಡವು ಐರ್ಲೆಂಡ್ ವಿರುದ್ಧ ಈವರೆಗೆ 7 ಪಂದ್ಯಗಳನ್ನಾಡಿದೆ. ಈ ಏಳೂ ಪಂದ್ಯಗಳಲ್ಲೂ ಟೀಮ್ ಇಂಡಿಯಾ ಗೆದ್ದಿದೆ. ಹೀಗಾಗಿ ಇಂದಿನ ಪಂದ್ಯದಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿದೆ.

ಇದಾಗ್ಯೂ ನಸ್ಸೌ ಮೈದಾನದ ಪಿಚ್ ಅನಿರೀಕ್ಷಿತ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು,​ ಹೀಗಾಗಿ ಐರ್ಲೆಂಡ್ ಕಡೆಯಿಂದಲೂ ಉತ್ತಮ ಪೈಪೋಟಿಯನ್ನು ನಿರೀಕ್ಷಿಸಬಹುದು.

ಟೀಮ್ ಇಂಡಿಯಾ ಪಾಲಿಗೆ ಮಹತ್ವದ ಪಂದ್ಯ:

ಈ ಪಂದ್ಯವು ಭಾರತದ ಪಾಲಿಗೆ ತುಂಬಾ ಮಹತ್ವದ ಪಂದ್ಯ. ಏಕೆಂದರೆ ಈ ಪಂದ್ಯದ ಬಳಿಕ ಟೀಮ್ ಇಂಡಿಯಾ ಪಾಕಿಸ್ತಾನ್ ತಂಡವನ್ನು ಎದುರಿಸಲಿದೆ. ಅಂದರೆ ಜೂನ್ 9 ರಂದು ಇದೇ ಮೈದಾನದಲ್ಲಿ ಪಾಕ್ ವಿರುದ್ಧ ಕಣಕ್ಕಿಳಿಯಬೇಕಿದೆ. ಹಾಗಾಗಿ ಇಂದಿನ ಪಂದ್ಯದಲ್ಲಿ ಎಲ್ಲಾ ವಿಭಾಗಗಳಲ್ಲೂ ಉತ್ತಮ ಪ್ರದರ್ಶನ ನೀಡಬೇಕಾದ ಅನಿವಾರ್ಯತೆ ಇದೆ.

ಅದರಲ್ಲೂ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಬಲಿಷ್ಠ ಪ್ಲೇಯಿಂಗ್ ಇಲೆವೆನ್ ಅನ್ನು ರೂಪಿಸಿಕೊಳ್ಳಬೇಕಿದೆ. ಹೀಗಾಗಿ ಐರ್ಲೆಂಡ್ ವಿರುದ್ದದ ಪಂದ್ಯವು ಟೀಮ್ ಇಂಡಿಯಾ ಪಾಲಿಗೆ ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಸಿಕ್ಕಿರುವ ಸಮರಭ್ಯಾಸ ಎನ್ನಬಹುದು. ಅದರಂತೆ ಈ ಪಂದ್ಯದ ಮೂಲಕ ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ದದ ಪಂದ್ಯಕ್ಕಾಗಿ ಎಲ್ಲಾ ರೀತಿಯಲ್ಲೂ ಸಜ್ಜಾಗಬೇಕಿದೆ.

ಪಂದ್ಯ ಎಷ್ಟು ಗಂಟೆಗೆ ಶುರು?

ನ್ಯೂಯಾರ್ಕ್​​ನ ನಸ್ಸೌ ಕೌಂಟೆ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ. ಇನ್ನು ಟಾಸ್ ಪ್ರಕ್ರಿಯೆ 7.30 ಕ್ಕೆ ನಡೆಯಲಿದೆ. ಹಾಗೆಯೇ ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ಚಾನೆಲ್ಸ್ ಮತ್ತು ಡಿಸ್ನಿ ಹಾಟ್​ ಸ್ಟಾರ್ ಆ್ಯಪ್​ನಲ್ಲಿ ವೀಕ್ಷಿಸಬಹುದು.

ಉಭಯ ತಂಡಗಳು:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

ಇದನ್ನೂ ಓದಿ: Aaron Jones: ಆರೋನ್ ಅಬ್ಬರಕ್ಕೆ ಯುವರಾಜ್ ಸಿಂಗ್ ದಾಖಲೆ ಧೂಳೀಪಟ

ಐರ್ಲೆಂಡ್ ತಂಡ: ಪಾಲ್ ಸ್ಟಿರ್ಲಿಂಗ್ (ನಾಯಕ), ಮಾರ್ಕ್ ಆಡೈರ್, ರಾಸ್ ಅಡೈರ್, ಆಂಡ್ರ್ಯೂ ಬಾಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್, ಹ್ಯಾರಿ ಟೆಕ್ಟರ್, ಲೋರ್ಕನ್ ಟಕರ್, ಬೆನ್ ವೈಟ್, ಕ್ರೇಗ್ ಯಂಗ್.

Follow Us
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​