T20 World Cup 2024: ಜೂ.9 ರಂದು ಭಾರತ- ಪಾಕ್ ಫೈಟ್; ಬದ್ಧವೈರಿಗಳ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?

IND vs PAK, T20 World Cup 2024: ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಒಂದೇ ಗುಂಪಿನಲ್ಲಿ ಅಂದರೆ ಎ ಗುಂಪಿನಲ್ಲಿ ಸ್ಥಾನ ಪಡೆದಿವೆ. ಈ ಉಭಯ ತಂಡಗಳ ನಡುವಿನ ಹೈವೋಲ್ಟೇಜ್ ಕದನಕ್ಕೆ ಜೂನ್ 9 ರಂದು ನ್ಯೂಯಾರ್ಕ್ ನಗರ ಸಾಕ್ಷಿಯಾಗಲಿದೆ.

T20 World Cup 2024: ಜೂ.9 ರಂದು ಭಾರತ- ಪಾಕ್ ಫೈಟ್; ಬದ್ಧವೈರಿಗಳ ಮುಖಾಮುಖಿಯಲ್ಲಿ ಯಾರದ್ದು ಮೇಲುಗೈ?
ಭಾರತ- ಪಾಕಿಸ್ತಾನ
Follow us
ಪೃಥ್ವಿಶಂಕರ
|

Updated on: Jan 05, 2024 | 8:13 PM

ಬಹುನಿರೀಕ್ಷಿತ 2024 ರ ಟಿ20 ವಿಶ್ವಕಪ್​ನ (T20 World Cup 2024) ವೇಳಾಪಟ್ಟಿಯನ್ನು ಇಂದು ಪ್ರಕಟಿಸಲಾಗಿದೆ. ಒಂಬತ್ತನೇ ಆವೃತ್ತಿಯ ಟಿ20 ವಿಶ್ವಕಪ್ ಜೂನ್ 1ರಿಂದ ಆರಂಭವಾಗಲಿದೆ. 29 ದಿನಗಳ ಕಾಲ ನಡೆಯಲಿರುವ ಚುಟುಕು ಸಮರದ ಫೈನಲ್ ಪಂದ್ಯ ಜೂನ್ 29 ರಂದು ನಡೆಯಲಿದೆ. ಈ ಮಿನಿ ಸಮರದಲ್ಲಿ 20 ತಂಡಗಳು ಪಾಲ್ಗೊಳ್ಳುತ್ತಿದ್ದು, ಈ 20 ತಂಡಗಳನ್ನು ತಲಾ ಐದರಂತೆ ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ. ಇದರಲ್ಲಿ ಭಾರತ ಮತ್ತು ಪಾಕಿಸ್ತಾನ (India vs Pakistan ತಂಡಗಳು ಒಂದೇ ಗುಂಪಿನಲ್ಲಿ ಅಂದರೆ ಎ ಗುಂಪಿನಲ್ಲಿ ಸ್ಥಾನ ಪಡೆದಿವೆ. ಈ ಉಭಯ ತಂಡಗಳ ನಡುವಿನ ಹೈವೋಲ್ಟೇಜ್ ಕದನಕ್ಕೆ ಜೂನ್ 9 ರಂದು ನ್ಯೂಯಾರ್ಕ್ ನಗರ ಸಾಕ್ಷಿಯಾಗಲಿದೆ.

ಟಿ20ಯಲ್ಲಿ ಭಾರತ- ಪಾಕ್ ಹಣಾಹಣಿ

ಭಾರತ ಮತ್ತು ಪಾಕಿಸ್ತಾನ ತಂಡಗಳು ಟಿ20 ಮಾದರಿಯಲ್ಲಿ ಇದುವರೆಗೆ 12 ಬಾರಿ ಮುಖಾಮುಖಿಯಾಗಿವೆ. ಸಾಂಪ್ರಾದಾಯಿಕ ಎದುರಾಳಿಗಳ ಈ ಮುಖಾಮುಖಿಯಲ್ಲಿ ಭಾರತ ತಂಡವೇ ಮೇಲುಗೈ ಸಾಧಿಸಿದೆ. ಇದುವರೆಗೆ ಆಡಿರುವ 12 ಪಂದ್ಯಗಳಲ್ಲಿ ಟೀಂ ಇಂಡಿಯಾ ಒಂಬತ್ತು ಪಂದ್ಯಗಳನ್ನು ಗೆದ್ದಿದ್ದರೆ, ಪಾಕ್ ತಂಡ ಇದುವರೆಗೆ ಕೇವಲ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ.

T20 World Cup 2024 Schedule: ಟಿ20 ವಿಶ್ವಕಪ್ ವೇಳಾಪಟ್ಟಿ ಪ್ರಕಟ; ಭಾರತ- ಪಾಕ್ ಪಂದ್ಯ ಯಾವಾಗ ಗೊತ್ತಾ?

ತಟಸ್ಥ ಮೈದಾನದಲ್ಲಿ ಉಭಯ ತಂಡಗಳ ದಾಖಲೆ ಹೇಗಿದೆ?

ತಟಸ್ಥ ಸ್ಥಳದಲ್ಲಿಯೂ ಭಾರತ ತಂಡ ಪಾಕಿಸ್ತಾನದ ವಿರುದ್ಧ ಮೇಲುಗೈ ಸಾಧಿಸಿದೆ. ತಟಸ್ಥ ಮೈದಾನದಲ್ಲಿ ಪಾಕ್ ವಿರುದ್ಧ ಟೀಂ ಇಂಡಿಯಾ ಏಳು ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಕೇವಲ ಎರಡು ಪಂದ್ಯಗಳನ್ನು ಮಾತ್ರ ಗೆದ್ದಿದೆ.

ಟಿ20 ವಿಶ್ವಕಪ್‌ನಲ್ಲಿ ಭಾರತ- ಪಾಕ್ ಮುಖಾಮುಖಿ

ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಇದುವರೆಗೆ ಏಳು ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇಲ್ಲಿಯೂ ಭಾರತ ತಂಡ ಎದುರಾಳಿ ತಂಡದ ವಿರುದ್ಧ ಮೇಲುಗೈ ಸಾಧಿಸಿದೆ. ಇಲ್ಲಿ ಟೀಂ ಇಂಡಿಯಾ ಆಡಿರುವ 7 ಪಂದ್ಯಗಳಲ್ಲಿ ಐದು ಪಂದ್ಯಗಳನ್ನು ಗೆದ್ದಿದ್ದರೆ, ಪಾಕ್ ತಂಡ ಒಂದು ಪಂದ್ಯದಲ್ಲಿ ಯಶಸ್ಸು ಕಂಡಿದೆ. ಉಳಿದಂತೆ ಒಂದು ಪಂದ್ಯ ಟೈನಲ್ಲಿ ಅಂತ್ಯಗೊಂಡಿದೆ. ಟೈ ಆದ ಪಂದ್ಯವನ್ನು ಬಾಲ್ ಔಟ್ ನಿಯಮದಡಿಯಲ್ಲಿ ಭಾರತ ತಂಡ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು.

ಲೀಗ್ ಹಂತದಲ್ಲಿ ಭಾರತದ ಪಂದ್ಯಗಳು

  • 5 ಜೂನ್ – ಭಾರತ vs ಐರ್ಲೆಂಡ್ – ನ್ಯೂಯಾರ್ಕ್
  • 9 ಜೂನ್ – ಭಾರತ vs ಪಾಕಿಸ್ತಾನ – ನ್ಯೂಯಾರ್ಕ್
  • 12 ಜೂನ್ – ಭಾರತ vs ಯುಎಸ್ಎ- ನ್ಯೂಯಾರ್ಕ್
  • 15 ಜೂನ್ – ಭಾರತ vs ಕೆನಡಾ – ನ್ಯೂಯಾರ್ಕ್

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!