T20 World Cup 2024: ಭಾರತ vs ಸೌತ್ ಆಫ್ರಿಕಾ: ಈ ಸಲ ಕಪ್ ನಮ್ದೆ

|

Updated on: Jun 28, 2024 | 2:54 PM

T20 World Cup 2024: ಸೌತ್ ಆಫ್ರಿಕಾ ತಂಡವು ಮೊದಲ ಸುತ್ತಿನಲ್ಲಿ 4 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ದ್ವಿತೀಯ ಸುತ್ತಿನಲ್ಲಿ 3 ಪಂದ್ಯಗಳಲ್ಲಿ ಗೆಲುವು ದಾಖಲಿಸಿತ್ತು. ಇನ್ನು ಸೆಮಿಫೈನಲ್​ನಲ್ಲಿ ಗೆಲ್ಲುವ ಮೂಲಕ ಒಟ್ಟು 8 ಮ್ಯಾಚ್​ಗಳಲ್ಲಿ ವಿಜಯ ಸಾಧಿಸಿದೆ. ಟೀಮ್ ಇಂಡಿಯಾ ಮೊದಲ ಸುತ್ತಿನಲ್ಲಿ 3 ಜಯ ಸಾಧಿಸಿದರೆ ( ಮಳೆಯ ಕಾರಣ 1 ಪಂದ್ಯ ರದ್ದಾಗಿದೆ), ದ್ವಿತೀಯ ಸುತ್ತಿನಲ್ಲಿ 3 ಗೆಲುವು ದಾಖಲಿಸಿದೆ. ಇದೀಗ ಸೆಮಿಫೈನಲ್​ನಲ್ಲೂ ಜಯ ಸಾಧಿಸಿ ಸತತ 7 ಗೆಲುವುಗಳ ಮೂಲಕ ಫೈನಲ್​ಗೆ ಪ್ರವೇಶಿಸಿದೆ.

T20 World Cup 2024: ಭಾರತ vs ಸೌತ್ ಆಫ್ರಿಕಾ: ಈ ಸಲ ಕಪ್ ನಮ್ದೆ
IND vs SA
Image Credit source: Sports360
Follow us on

T20 World Cup 2024: ಟಿ20 ವಿಶ್ವಕಪ್​ನ ಫೈನಲ್ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ಶನಿವಾರ (ಜೂ.29) ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪೈಪೋಟಿಯಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ (IND vs SA) ತಂಡಗಳು ಮುಖಾಮುಖಿಯಾಗಲಿದೆ. ಈ ಬಾರಿಯ ವಿಶ್ವಕಪ್​ನಲ್ಲಿ ಉಭಯ ತಂಡಗಳು ಸೋಲಿಲ್ಲದ ಸರದಾರರಾಗಿ ಫೈನಲ್​ಗೆ ಪ್ರವೇಶಿಸಿದೆ. ಇದಾಗ್ಯೂ ಆಫ್ರಿಕನ್ನರ ವಿರುದ್ಧ ಭಾರತವೇ ಗೆಲ್ಲುವ ಫೇವರೇಟ್ ತಂಡವಾಗಿ ಗುರುತಿಸಿಕೊಂಡಿದೆ. ಏಕೆಂದರೆ…

ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು ಟಿ20 ಕ್ರಿಕೆಟ್​ನಲ್ಲಿ ಈವರೆಗೆ 26 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಸೌತ್ ಆಫ್ರಿಕಾ ತಂಡ 11 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ 13 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದೆ. ಅಂದರೆ ಇಲ್ಲಿ ಉಭಯ ತಂಡಗಳ ಮುಖಾಮುಖಿಯಲ್ಲಿ ಟೀಮ್ ಇಂಡಿಯಾ ಮೇಲುಗೈ ಹೊಂದಿರುವುದು ಸ್ಪಷ್ಟ.

ಇನ್ನು ಟಿ20 ವಿಶ್ವಕಪ್​ನಲ್ಲಿ ಉಭಯ ತಂಡಗಳು ಒಟ್ಟು 6 ಬಾರಿ ಪರಸ್ಪರ ಕಣಕ್ಕಿಳಿದಿದೆ. ಈ ವೇಳೆ ಟೀಮ್ ಇಂಡಿಯಾ 4 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಸೌತ್ ಆಫ್ರಿಕಾ ಗೆದ್ದಿರುವುದು ಕೇವಲ 2 ಬಾರಿ ಮಾತ್ರ. ಐಸಿಸಿ ಟೂರ್ನಿಗಳಲ್ಲೂ ಸೌತ್ ಆಫ್ರಿಕಾ ವಿರುದ್ಧ ಟೀಮ್ ಇಂಡಿಯಾ ಪ್ರಾಬಲ್ಯ ಹೊಂದಿರುವುದಕ್ಕೆ ಈ ಅಂಕಿ ಅಂಶಗಳು ಸಾಕ್ಷಿ.

ಹಾಗೆಯೇ ಭಾರತ ಮತ್ತು ಸೌತ್ ಆಫ್ರಿಕಾ ಕೊನೆಯ ಬಾರಿ ಮುಖಾಮುಖಿಯಾಗಿದ್ದು ಡಿಸೆಂಬರ್ 14, 2023 ರಲ್ಲಿ. ಸೌತ್ ಆಫ್ರಿಕಾದ ವಾಂಡರರ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಗೆಲುವು ದಾಖಲಿಸಿತ್ತು.

ಅಂದರೆ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 201 ರನ್ ಕಲೆಹಾಕಿತ್ತು. ಈ ಮೊತ್ತವನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು ಕೇವಲ 95 ರನ್​ಗಳಿಗೆ ಆಲೌಟ್ ಆಗಿ ಹೀನಾಯ ಸೋಲನುಭವಿಸಿತು. ಅಂದರೆ ಉಭಯ ತಂಡಗಳ ಕೊನೆಯ ಮುಖಾಮುಖಿಯಲ್ಲಿ ಭಾರತ ತಂಡವು 106 ರನ್​ಗಳ ಅಮೋಘ ಜಯ ಸಾಧಿಸಿದೆ.

ಈ ಎಲ್ಲಾ ಕಾರಣಗಳಿಂದಾಗಿ ಈ ಬಾರಿ ಕೂಡ ಸೌತ್ ಆಫ್ರಿಕಾ ವಿರುದ್ಧ ಗೆಲ್ಲುವ ಫೇವರೇಟ್ ತಂಡವಾಗಿ ಟೀಮ್ ಇಂಡಿಯಾ ಗುರುತಿಸಿಕೊಂಡಿದೆ. ಅದರಂತೆ ಫೈನಲ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಭಾರತ ತಂಡವು 2ನೇ ಬಾರಿ ಟಿ20 ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಳ್ಳುವ ವಿಶ್ವಾಸದಲ್ಲಿದ್ದಾರೆ ಟೀಮ್ ಇಂಡಿಯಾ ಅಭಿಮಾನಿಗಳು.

ಉಭಯ ತಂಡಗಳು:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್-ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್-ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್ , ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಇದನ್ನೂ ಓದಿ: T20 World Cup 2024: ಭಾರತ ತಂಡ ಮೋಸದಿಂದ ಗೆದ್ದಿದೆ: ಪಾಕ್ ಮಾಜಿ ನಾಯಕನ ಗಂಭೀರ ಆರೋಪ

ಸೌತ್ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರೀಝ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟನ್ ಸ್ಟಬ್ಸ್, ಮಾರ್ಕೊ ಯಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಅನ್ರಿಕ್ ನೋಕಿಯಾ, ತಬ್ರೇಝ್ ಶಮ್ಸಿ, ಒಟ್ನೀಲ್ ಬಾರ್ಟ್‌ಮನ್, ಗೆರಾಲ್ಡ್ ಕೋಯಟ್ಝಿ, ಜಾರ್ನ್ ಫಾರ್ಚುಯಿನ್, ರಯಾನ್ ರಿಕೆಲ್ಟನ್.