AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್‌ಗಾಗಿ ಯುಎಇಗೆ ಹಾರಿದ ಟೀಂ ಇಂಡಿಯಾ

T20 World Cup 2024: ಮಹಿಳೆಯರ ಟಿ20 ವಿಶ್ವಕಪ್​ನಲ್ಲಿ ಪಾಲ್ಗೊಳ್ಳಲು ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ಮಹಿಳಾ ತಂಡ ಕೂಡ ಯುನೈಟೆಡ್ ಅರಬ್ ಎಮಿರೇಟ್ಸ್​ಗೆ ತೆರಳಿದೆ. ಟೀಂ ಇಂಡಿಯಾ ಯುಎಇಗೆ ತೆರಳುತ್ತಿರುವ ಫೋಟೋವನ್ನು ಬಿಸಿಸಿಐ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

T20 World Cup 2024: ಟಿ20 ವಿಶ್ವಕಪ್‌ಗಾಗಿ ಯುಎಇಗೆ ಹಾರಿದ ಟೀಂ ಇಂಡಿಯಾ
ಭಾರತ ಮಹಿಳಾ ತಂಡ
ಪೃಥ್ವಿಶಂಕರ
|

Updated on: Sep 25, 2024 | 3:16 PM

Share

ಮಹಿಳೆಯರ ಟಿ20 ವಿಶ್ವಕಪ್ ಇದೇ ಅಕ್ಟೋಬರ್ 3 ರಿಂದ ಪ್ರಾರಂಭವಾಗಲಿದೆ. ಈ ಬಾರಿ ಬಾಂಗ್ಲಾದೇಶ ಈ ಪಂದ್ಯಾವಳಿಯನ್ನು ಆಯೋಜಿಸಬೇಕಿತ್ತು. ಆದರೆ ಹದಗೆಟ್ಟ ರಾಜಕೀಯ ಪರಿಸ್ಥಿತಿಯಿಂದಾಗಿ ಈ ಪಂದ್ಯಾವಳಿಯನ್ನು ಬಾಂಗ್ಲಾದೇಶದಿಂದ ಯುಎಇ ಗೆ ಸ್ಥಳಾಂತರಿಸಲಾಗಿದೆ. ಇದೀಗ ಭಾರತ ಸೇರಿದಂತೆ ಎಲ್ಲಾ ತಂಡಗಳು ಯುಎಇಯಲ್ಲಿ ಪ್ರಶಸ್ತಿಗಾಗಿ ಸೆಣಸಾಟ ನಡೆಸಲಿವೆ. ಈ ಟೂರ್ನಿಯಲ್ಲಿ ಪಾಲ್ಗೊಳ್ಳಲು ಹರ್ಮನ್‌ಪ್ರೀತ್ ಕೌರ್ ನಾಯಕತ್ವದ ಭಾರತ ತಂಡ ಕೂಡ ಯುನೈಟೆಡ್ ಅರಬ್ ಎಮಿರೇಟ್ಸ್​ಗೆ ತೆರಳಿದೆ. ಟೀಂ ಇಂಡಿಯಾ ಯುಎಇಗೆ ತೆರಳುತ್ತಿರುವ ಫೋಟೋವನ್ನು ಬಿಸಿಸಿಐ ತನ್ನ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಂಡಿದೆ.

ಪ್ರಶಸ್ತಿ ಗೆಲ್ಲುತ್ತೇವೆ; ನಾಯಕಿಯ ಭರವಸೆ

ಇನ್ನು ಯುಎಇಗೆ ತೆರಳುವ ಮುನ್ನ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಟೀಂ ಇಂಡಿಯಾ ನಾಯಕಿ ಹರ್ಮನ್‌ಪ್ರೀತ್ ಕೌರ್, ‘ಟೀಂ ಇಂಡಿಯಾ ಈ ಬಾರಿ ಪ್ರಶಸ್ತಿ ಗೆಲ್ಲುವ ಪ್ರಬಲ ಸ್ಪರ್ಧಿಗಳಲ್ಲಿ ಒಂದಾಗಿದೆ. ಈ ಬಾರಿ ವಿಶ್ವಕಪ್ ಗೆಲ್ಲಲು ನಮಗೆ ಉತ್ತಮ ಅವಕಾಶವಿದೆ. ನಾವು ಆಸ್ಟ್ರೇಲಿಯಾವನ್ನೂ ಸೋಲಿಸುವ ಸಾಮರ್ಥ್ಯ ಹೊಂದಿದ್ದೇವೆ. 2020 ರ ಟಿ20 ವಿಶ್ವಕಪ್ ಫೈನಲ್​ನಲ್ಲಿ ನಾವು ಆಸ್ಟ್ರೇಲಿಯಾ ವಿರುದ್ಧ ಸೋತಿದ್ದೇವು. ಆಸ್ಟ್ರೇಲಿಯಾ ಬಲಿಷ್ಠ ತಂಡ, ಆದರೆ ನಾವು ಅವರಿಗೆ ಕಠಿಣ ಪೈಪೋಟಿ ನೀಡಬಲ್ಲೆವು ಎಂದರು.

ಎರಡು ಬಾರಿ ಪ್ರಶಸ್ತಿ ವಂಚಿತ

ಮಹಿಳೆಯ ಟಿ20 ವಿಶ್ವಕಪ್​ನಲ್ಲಿ ಇದುವರೆಗೆ ಎರಡು ಬಾರಿ ಫೈನಲ್​ಗೇರಿರುವ ಟೀಂ ಇಂಡಿಯಾ, ಎರಡು ಬಾರಿಯೂ ಸೋಲನುಭವಿಸಿದೆ. 2020 ರ ಟಿ20 ವಿಶ್ವಕಪ್‌ ಫೈನಲ್​ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತಿದ್ದ ಭಾರತ, 2022 ರ ಟಿ20 ವಿಶ್ವಕಪ್​ ಫೈನಲ್​ನಲ್ಲೂ ಅದೇ ಆಸ್ಟ್ರೇಲಿಯಾ ವಿರುದ್ಧ ಸೋತು ಪ್ರಶಸ್ತಿಯಿಂದ ವಂಚಿತವಾಗಿತ್ತು. ಆದರೆ ಈ ಬಾರಿ ಬಲಿಷ್ಠ ಪಡೆಯನ್ನು ಕಟ್ಟಿಕೊಂಡು ವಿಶ್ವಕಪ್ ಅಂಗಳಕ್ಕೆ ಕಾಲಿಡುತ್ತಿರುವ ಹರ್ಮನ್‌ಪ್ರೀತ್ ಪಡೆ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವೆನಿಸಿಕೊಂಡಿದೆ.

2024ರ ಟಿ20 ವಿಶ್ವಕಪ್‌ಗೆ ಭಾರತ ಮಹಿಳಾ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶೆಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ ಮತ್ತು ಯಾಸ್ತಿಕಾ ಭಾಟಿಯಾ (ವಿಕೆಟ್‌ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಲನ್ ಹೇಮಲತಾ, ಆಶಾ ಶೋಭನಾ, ಶ್ರೇಯಾಂಕಾ ಪಾಟೀಲ್ (ಫಿಟ್ ಆಗಿದ್ದರೆ) ಮತ್ತು ಸಜ್ನಾ ಸಜೀವನ್.

ಮೀಸಲು ಪಡೆ: ಉಮಾ ಛೆಟ್ರಿ (ವಿಕೆಟ್‌ಕೀಪರ್), ತನುಜಾ ಕನ್ವರ್, ಸೈಮಾ ಠಾಕೂರ್. ರಾಘ್ವಿ ಬಿಷ್ತ್ ಮತ್ತು ಪ್ರಿಯಾ ಮಿಶ್ರಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ