IND vs IRE: ಮೊದಲ ಪಂದ್ಯಕ್ಕೆ ಟೀಮ್ ಇಂಡಿಯಾ ಪ್ಲೇಯಿಂಗ್ 11 ಹೀಗಿರಲಿದೆ
India vs Ireland: ಭಾರತ ಮತ್ತು ಐರ್ಲೆಂಡ್ ತಂಡಗಳು ಈವರೆಗೆ 7 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಏಳು ಪಂದ್ಯಗಳಲ್ಲೂ ಟೀಮ್ ಇಂಡಿಯಾ ಜಯ ಸಾಧಿಸಿದೆ. ಹೀಗಾಗಿ ಬುಧವಾರ ನ್ಯೂಯಾರ್ಕ್ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ ಪಂದ್ಯದಲ್ಲೂ ಭಾರತ ತಂಡವೇ ಗೆಲ್ಲುವ ಫೇವರೇಟ್ ಎನಿಸಿಕೊಂಡಿದೆ.
ನ್ಯೂಯಾರ್ಕ್ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್ನ (T20 World Cup 2024) 8ನೇ ಪಂದ್ಯದಲ್ಲಿ ಭಾರತ ಮತ್ತು ಐರ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಬುಧವಾರ (ಜೂನ್.5) ನಡೆಯಲಿರುವ ಈ ಪಂದ್ಯದ ಮೂಲಕ ಭಾರತ ತಂಡವು ಟಿ20 ವಿಶ್ವಕಪ್ ಅಭಿಯಾನ ಪ್ರಾರಂಭಿಸಲಿದೆ. ಹೀಗಾಗಿ ಮೊದಲ ಪಂದ್ಯದಲ್ಲೇ ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಲಿದೆ.
ಇಲ್ಲಿ ಟೀಮ್ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯುವ ಜೋಡಿ ಯಾರೆಂಬುದೇ ಕುತೂಹಲ. ಏಕೆಂದರೆ ರೋಹಿತ್ ಶರ್ಮಾ, ಯಶಸ್ವಿ ಜೈಸ್ವಾಲ್ ಹಾಗೂ ವಿರಾಟ್ ಕೊಹ್ಲಿ… ಆರಂಭಿಕರಾಗಿ ನಮ್ಮ ಮುಂದೆ ಮೂವರ ಆಯ್ಕೆಗಳಿವೆ. ಹೀಗಾಗಿ ಯಾರನ್ನು ಕಣಕ್ಕಿಳಿಸಬೇಕೆಂದು ಅಂತಿಮ ಹಂತದಲ್ಲಿ ನಿರ್ಧರಿಸಲಿದ್ದೇವೆ ಎಂದು ಕೋಚ್ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.
ಅದರಂತೆ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿದರೆ ಯಶಸ್ವಿ ಜೈಸ್ವಾಲ್ ಹೊರಬೀಳಲಿದ್ದಾರೆ. ಅಲ್ಲದೆ ಕೊಹ್ಲಿಯ ಸ್ಥಾನದಲ್ಲಿ ಆಲ್ರೌಂಡರ್ ಶಿವಂ ದುಬೆಗೆ ಚಾನ್ಸ್ ಸಿಗಬಹುದು. ಇನ್ನು ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಓಪನರ್ಗಳಾಗಿ ಕಣಕ್ಕಿಳಿದರೆ ವಿರಾಟ್ ಕೊಹ್ಲಿ 3ನೇ ಕ್ರಮಾಂಕದಲ್ಲಿ ಆಡಬಹುದು.
ಇನ್ನು 4ನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಕಣಕ್ಕಿಳಿಯುವುದು ಖಚಿತ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ಆಗಿ ರಿಷಭ್ ಪಂತ್ಗೆ ಸ್ಥಾನ ಸಿಗಲಿದೆ. ಇನ್ನು ಆಲ್ರೌಂಡರ್ಗಳಾಗಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ಕಣಕ್ಕಿಳಿಯಲಿದ್ದಾರೆ. ಅದೇ ರೀತಿ ಪ್ರಮುಖ ಸ್ಪಿನ್ನರ್ ಆಗಿ ಕುಲ್ದೀಪ್ ಯಾದವ್ಗೆ ಚಾನ್ಸ್ ಸಿಗುವ ಸಾಧ್ಯತೆ ಹೆಚ್ಚಿದೆ.
ಅದೇ ರೀತಿ ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಸಿರಾಜ್ ಕಣಕ್ಕಿಳಿಯಬಹುದು. ಇಲ್ಲಿ ಕುಲ್ದೀಪ್ ಯಾದವ್ ಅವರನ್ನು 4ನೇ ಬೌಲರ್ ಆಗಿ ಬಳಸಿಕೊಂಡರೆ, ಹೆಚ್ಚುವರಿ ಬೌಲರ್ಗಳಾಗಿ ಹಾರ್ದಿಕ್ ಪಾಂಡ್ಯ ಮತ್ತು ರವೀಂದ್ರ ಜಡೇಜಾ ತಂಡದಲ್ಲಿದ್ದಾರೆ. ಈ ಮೂಲಕ ಒಟ್ಟು 6 ಬೌಲರ್ಗಳನ್ನು ಬಳಸಿಕೊಳ್ಳುವ ಅವಕಾಶ ರೋಹಿತ್ ಶರ್ಮಾ ಮುಂದಿರಲಿದೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿರಲಿದೆ…
- ರೋಹಿತ್ ಶರ್ಮಾ
- ಯಶಸ್ವಿ ಜೈಸ್ವಾಲ್
- ವಿರಾಟ್ ಕೊಹ್ಲಿ
- ಸೂರ್ಯಕುಮಾರ್ ಯಾದವ್
- ರಿಷಭ್ ಪಂತ್
- ಹಾರ್ದಿಕ್ ಪಾಂಡ್ಯ
- ರವೀಂದ್ರ ಜಡೇಜಾ
- ಕುಲ್ದೀಪ್ ಯಾದವ್
- ಜಸ್ಪ್ರೀತ್ ಬುಮ್ರಾ
- ಅರ್ಷದೀಪ್ ಸಿಂಗ್
- ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: Anrich Nortje: 18 ಡಾಟ್ ಬಾಲ್, 4 ವಿಕೆಟ್: ವಿಶ್ವ ದಾಖಲೆ ಬರೆದ ಅನ್ರಿಕ್ ನೋಕಿಯಾ
ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಮೀಸಲು ಆಟಗಾರರು: ಶುಭ್ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.