AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಪವರ್​ಪ್ಲೇನಲ್ಲೇ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ

T20 World Cup 2024: ನಮೀಬಿಯಾ ವಿರುದ್ಧದ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು ಸೂಪರ್-8 ಹಂತಕ್ಕೇರಿದೆ. ಗ್ರೂಪ್-ಬಿ ನಲ್ಲಿ ಕಣಕ್ಕಿಳಿದಿರುವ ಮಿಚೆಲ್ ಮಾರ್ಷ್ ಪಡೆ ಆಡಿರುವ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿದ್ದು, ಈ ಮೂಲಕ ಒಟ್ಟು 6 ಅಂಕಗಳನ್ನು ಕಲೆಹಾಕಿದೆ. ಅಲ್ಲದೆ ತನ್ನ ಕೊನೆಯ ಪಂದ್ಯಕ್ಕೂ ಮುನ್ನವೇ ಮುಂದಿನ ಸುತ್ತಿಗೆ ಅರ್ಹತೆ ಪಡೆದುಕೊಂಡಿದೆ.

T20 World Cup 2024: ಪವರ್​ಪ್ಲೇನಲ್ಲೇ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ
Australia
ಝಾಹಿರ್ ಯೂಸುಫ್
|

Updated on: Jun 12, 2024 | 8:43 AM

Share

T20 World Cup 2024: ಟಿ20 ವಿಶ್ವಕಪ್​ನ 24ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಅಮೋಘ ಗೆಲುವು ದಾಖಲಿಸಿದೆ. ಅಂಟಿಗುವಾದ ಸರ್. ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ನಬೀಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ನಮೀಬಿಯಾ ತಂಡವು ಆಸೀಸ್​ನ ಕರಾರುವಾಕ್ ದಾಳಿಗೆ ಕಂಗಾಲಾದರು.

ಪವರ್​ಪ್ಲೇನಲ್ಲೇ ಅತ್ಯುತ್ತಮ ದಾಳಿ ಸಂಘಟಿಸಿದ ಜೋಶ್ ಹ್ಯಾಝಲ್​ವುಡ್, ಪ್ಯಾಟ್ ಕಮಿನ್ಸ್ ಹಾಗೂ ಮಾರ್ಕಸ್ ಸ್ಟೋಯಿಸ್ ಆರಂಭದಲ್ಲೇ ನಮೀಬಿಯಾ ಬ್ಯಾಟರ್​ಗಳ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಪರಿಣಾಮ ಮೊದಲ 6 ಓವರ್​ಗಳಲ್ಲಿ ನಮೀಬಿಯಾ ತಂಡ 3 ವಿಕೆಟ್ ಕಳೆದುಕೊಂಡು 17 ರನ್​ ಕಲೆಹಾಕಷ್ಟೇ ಶಕ್ತರಾದರು.

ಇದಾದ ಬಳಿಕ ಸ್ಪಿನ್ ಮೋಡಿ ಆರಂಭಿಸಿದ ಆ್ಯಡಂ ಝಂಪಾ ಬ್ಯಾಕ್ ಟು ಬ್ಯಾಕ್ ವಿಕೆಟ್ ಪಡೆಯಲಾರಂಭಿಸಿದರು. ಈ ಹಂತದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಗೆರ್ಹಾರ್ಡ್ ಎರಾಸ್ಮಸ್ ರಕ್ಷಣಾತ್ಮಕ ಬ್ಯಾಟಿಂಗ್​ಗೆ ಒತ್ತು ನೀಡಿದರು. ಅಲ್ಲದೆ 43 ಎಸೆತಗಳಲ್ಲಿ 36 ರನ್ ಬಾರಿಸಿ ತಂಡದ ಮೊತ್ತವನ್ನು 50 ಗಡಿದಾಟಿಸಿದರು.

ಇದಾಗ್ಯೂ ನಮೀಬಿಯಾ ತಂಡವನ್ನು 17 ಓವರ್​ಗಳಲ್ಲಿ 72 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಆಸೀಸ್ ಬೌಲರ್​ಗಳು ಯಶಸ್ವಿಯಾದರು. ಆಸ್ಟ್ರೇಲಿಯಾ ಪರ ಆ್ಯಂಡ ಝಂಪಾ 4 ಓವರ್​ಗಳಲ್ಲಿ ಕೇವಲ 12 ರನ್ ನೀಡಿ 4 ವಿಕೆಟ್ ಪಡೆದರೆ, ಜೋಶ್ ಹ್ಯಾಝಲ್​ವುಡ್ ಮತ್ತು ಮಾರ್ಕಸ್ ಸ್ಟೊಯಿನಿಸ್ ತಲಾ 2 ವಿಕೆಟ್ ಪಡೆದರು.

ಪವರ್​ಪ್ಲೇನಲ್ಲೇ ಚೇಸ್:

73 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡಕ್ಕೆ ಟ್ರಾವಿಸ್ ಹೆಡ್ ಹಾಗೂ ಡೇವಿಡ್ ವಾರ್ನರ್ ಸ್ಪೋಟಕ ಆರಂಭ ಒದಗಿಸಿದರು. 1.4 ಓವರ್​ಗಳಲ್ಲಿ 21 ರನ್​ಗಳ ಜೊತೆಯಾಟವಾಡಿದ ಬಳಿಕ ಡೇವಿಡ್ ವಾರ್ನರ್ (20) ಔಟಾದರು.

ಆ ಬಳಿಕ ಜೊತೆಗೂಡಿದ ಟ್ರಾವಿಸ್ ಹೆಡ್ ಹಾಗೂ ಮಿಚೆಲ್ ಮಾರ್ಷ್ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದರು. 17 ಎಸೆತಗಳನ್ನು ಎದುರಿಸಿದ ಹೆಡ್ 2 ಭರ್ಜರಿ ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ ಅಜೇಯ 34 ರನ್ ಬಾರಿಸಿದರೆ, ಮಿಚೆಲ್ ಮಾರ್ಷ್ 9 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 3 ಫೋರ್​ಗಳೊಂದಿಗೆ ಅಜೇಯ 18 ರನ್ ಸಿಡಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡ ಕೇವಲ 5.4 ಓವರ್​ಗಳಲ್ಲಿ 74 ರನ್ ಬಾರಿಸಿ 9 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿತು.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ನಿಂದ 2 ತಂಡಗಳು ಔಟ್

ಸೂಪರ್-8 ಹಂತಕ್ಕೆ ಆಸ್ಟ್ರೇಲಿಯಾ:

ಈ ಪಂದ್ಯದ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು ಸೂಪರ್-8 ಹಂತಕ್ಕೇರಿದೆ. ಗ್ರೂಪ್-ಬಿ ನಲ್ಲಿ ಕಣಕ್ಕಿಳಿದಿರುವ ಆಸೀಸ್ ಪಡೆ ಆಡಿರುವ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿದ್ದು, ಈ ಮೂಲಕ ಒಟ್ಟು 6 ಅಂಕಗಳನ್ನು ಕಲೆಹಾಕಿದೆ. ಅಲ್ಲದೆ ಸ್ಕಾಟ್ಲೆಂಡ್ ವಿರುದ್ಧದ ಕೊನೆಯ ಪಂದ್ಯಕ್ಕೂ ಮುನ್ನವೇ ಮುಂದಿನ ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದೆ.

Follow Us
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಯುದ್ಧ ಕಾರ್ಮೊಡದ ನಡುವೆ ಯುಎಇಯಿಂದ ಡಾಂಬರು ಹೊತ್ತು ಕಾರವಾರಕ್ಕೆ ಬಂದ ಹಡಗು
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
ಪಾಕ್ ಕ್ರಿಕೆಟಿಗನ ಖರೀದಿ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಬಿಸಿಸಿಐ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
‘ಆಕಾಶ್’ ಸಿನಿಮಾ ಮರುಬಿಡುಗಡೆ: ಪುನೀತ್ ಕಟೌಟ್​ಗೆ ಹಾಲಿನ ಅಭಿಷೇಕ
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು
ಬಜೆಟ್​​ ಕುರಿತ ಹೇಳಿಕೆಗೆ ಇಕ್ಬಾಲ್ ಸಮರ್ಥನೆ: ರಾಮನಗರ MLA ಹೇಳಿದ್ದಿಷ್ಟು