T20 World Cup 2024: ಟಿ20 ವಿಶ್ವಕಪ್ನ 24ನೇ ಪಂದ್ಯದಲ್ಲಿ ಆಸ್ಟ್ರೇಲಿಯಾ ತಂಡ ಅಮೋಘ ಗೆಲುವು ದಾಖಲಿಸಿದೆ. ಅಂಟಿಗುವಾದ ಸರ್. ವಿವಿಯನ್ ರಿಚರ್ಡ್ಸ್ ಸ್ಟೇಡಿಯಂನಲ್ಲಿ ನಡೆದ ನಬೀಯಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ನಮೀಬಿಯಾ ತಂಡವು ಆಸೀಸ್ನ ಕರಾರುವಾಕ್ ದಾಳಿಗೆ ಕಂಗಾಲಾದರು.
ಪವರ್ಪ್ಲೇನಲ್ಲೇ ಅತ್ಯುತ್ತಮ ದಾಳಿ ಸಂಘಟಿಸಿದ ಜೋಶ್ ಹ್ಯಾಝಲ್ವುಡ್, ಪ್ಯಾಟ್ ಕಮಿನ್ಸ್ ಹಾಗೂ ಮಾರ್ಕಸ್ ಸ್ಟೋಯಿಸ್ ಆರಂಭದಲ್ಲೇ ನಮೀಬಿಯಾ ಬ್ಯಾಟರ್ಗಳ ಮೇಲೆ ಒತ್ತಡ ಹೇರುವಲ್ಲಿ ಯಶಸ್ವಿಯಾದರು. ಪರಿಣಾಮ ಮೊದಲ 6 ಓವರ್ಗಳಲ್ಲಿ ನಮೀಬಿಯಾ ತಂಡ 3 ವಿಕೆಟ್ ಕಳೆದುಕೊಂಡು 17 ರನ್ ಕಲೆಹಾಕಷ್ಟೇ ಶಕ್ತರಾದರು.
ಇದಾದ ಬಳಿಕ ಸ್ಪಿನ್ ಮೋಡಿ ಆರಂಭಿಸಿದ ಆ್ಯಡಂ ಝಂಪಾ ಬ್ಯಾಕ್ ಟು ಬ್ಯಾಕ್ ವಿಕೆಟ್ ಪಡೆಯಲಾರಂಭಿಸಿದರು. ಈ ಹಂತದಲ್ಲಿ ಮಧ್ಯಮ ಕ್ರಮಾಂಕದಲ್ಲಿ ಕಣಕ್ಕಿಳಿದ ನಾಯಕ ಗೆರ್ಹಾರ್ಡ್ ಎರಾಸ್ಮಸ್ ರಕ್ಷಣಾತ್ಮಕ ಬ್ಯಾಟಿಂಗ್ಗೆ ಒತ್ತು ನೀಡಿದರು. ಅಲ್ಲದೆ 43 ಎಸೆತಗಳಲ್ಲಿ 36 ರನ್ ಬಾರಿಸಿ ತಂಡದ ಮೊತ್ತವನ್ನು 50 ಗಡಿದಾಟಿಸಿದರು.
ಇದಾಗ್ಯೂ ನಮೀಬಿಯಾ ತಂಡವನ್ನು 17 ಓವರ್ಗಳಲ್ಲಿ 72 ರನ್ಗಳಿಗೆ ಆಲೌಟ್ ಮಾಡುವಲ್ಲಿ ಆಸೀಸ್ ಬೌಲರ್ಗಳು ಯಶಸ್ವಿಯಾದರು. ಆಸ್ಟ್ರೇಲಿಯಾ ಪರ ಆ್ಯಂಡ ಝಂಪಾ 4 ಓವರ್ಗಳಲ್ಲಿ ಕೇವಲ 12 ರನ್ ನೀಡಿ 4 ವಿಕೆಟ್ ಪಡೆದರೆ, ಜೋಶ್ ಹ್ಯಾಝಲ್ವುಡ್ ಮತ್ತು ಮಾರ್ಕಸ್ ಸ್ಟೊಯಿನಿಸ್ ತಲಾ 2 ವಿಕೆಟ್ ಪಡೆದರು.
73 ರನ್ಗಳ ಸುಲಭ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ತಂಡಕ್ಕೆ ಟ್ರಾವಿಸ್ ಹೆಡ್ ಹಾಗೂ ಡೇವಿಡ್ ವಾರ್ನರ್ ಸ್ಪೋಟಕ ಆರಂಭ ಒದಗಿಸಿದರು. 1.4 ಓವರ್ಗಳಲ್ಲಿ 21 ರನ್ಗಳ ಜೊತೆಯಾಟವಾಡಿದ ಬಳಿಕ ಡೇವಿಡ್ ವಾರ್ನರ್ (20) ಔಟಾದರು.
ಆ ಬಳಿಕ ಜೊತೆಗೂಡಿದ ಟ್ರಾವಿಸ್ ಹೆಡ್ ಹಾಗೂ ಮಿಚೆಲ್ ಮಾರ್ಷ್ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದರು. 17 ಎಸೆತಗಳನ್ನು ಎದುರಿಸಿದ ಹೆಡ್ 2 ಭರ್ಜರಿ ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ ಅಜೇಯ 34 ರನ್ ಬಾರಿಸಿದರೆ, ಮಿಚೆಲ್ ಮಾರ್ಷ್ 9 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ ಅಜೇಯ 18 ರನ್ ಸಿಡಿಸಿದರು. ಈ ಮೂಲಕ ಆಸ್ಟ್ರೇಲಿಯಾ ತಂಡ ಕೇವಲ 5.4 ಓವರ್ಗಳಲ್ಲಿ 74 ರನ್ ಬಾರಿಸಿ 9 ವಿಕೆಟ್ಗಳ ಭರ್ಜರಿ ಜಯ ಸಾಧಿಸಿತು.
ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್ನಿಂದ 2 ತಂಡಗಳು ಔಟ್
ಈ ಪಂದ್ಯದ ಗೆಲುವಿನೊಂದಿಗೆ ಆಸ್ಟ್ರೇಲಿಯಾ ತಂಡವು ಸೂಪರ್-8 ಹಂತಕ್ಕೇರಿದೆ. ಗ್ರೂಪ್-ಬಿ ನಲ್ಲಿ ಕಣಕ್ಕಿಳಿದಿರುವ ಆಸೀಸ್ ಪಡೆ ಆಡಿರುವ ಮೂರು ಪಂದ್ಯಗಳಲ್ಲೂ ಜಯ ಸಾಧಿಸಿದ್ದು, ಈ ಮೂಲಕ ಒಟ್ಟು 6 ಅಂಕಗಳನ್ನು ಕಲೆಹಾಕಿದೆ. ಅಲ್ಲದೆ ಸ್ಕಾಟ್ಲೆಂಡ್ ವಿರುದ್ಧದ ಕೊನೆಯ ಪಂದ್ಯಕ್ಕೂ ಮುನ್ನವೇ ಮುಂದಿನ ಸುತ್ತಿಗೆ ಅರ್ಹತೆ ಪಡೆಯುವಲ್ಲಿ ಯಶಸ್ವಿಯಾಗಿದೆ.