ಕರಾಚಿ ಏರ್​ಪೋರ್ಟ್​ಗೆ ಅರ್ಹತೆ ಪಡೆದ ಪಾಕಿಸ್ತಾನ್: ಫುಲ್ ಟ್ರೋಲ್ ಆದ ಬಾಬರ್ ಪಡೆ

T20 World Cup 2024: ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ಆರ್ಮಿ ಟ್ರೈನಿಂಗ್​ನೊಂದಿಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದ ಪಾಕಿಸ್ತಾನ್ ತಂಡವು ಲೀಗ್ ಹಂತದಲ್ಲೇ ಮುಗ್ಗರಿಸಿದೆ. ಅದರಲ್ಲೂ ಈ ಬಾರಿ ಪಾಕ್ ಪಡೆಯು ಯುಎಸ್​ಎ ವಿರುದ್ಧ ಹೀನಾಯವಾಗಿ ಸೋಲನುಭವಿಸುವ ಮೂಲಕ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಇದೀಗ ಟೂರ್ನಿಯಿಂದಲೇ ಹೊರಬಿದ್ದಿರುವ ಪಾಕಿಸ್ತಾನ್ ತಂಡವನ್ನು ಟ್ರೋಲ್ ಮಾಡಲಾಗುತ್ತಿದೆ.

ಕರಾಚಿ ಏರ್​ಪೋರ್ಟ್​ಗೆ ಅರ್ಹತೆ ಪಡೆದ ಪಾಕಿಸ್ತಾನ್: ಫುಲ್ ಟ್ರೋಲ್ ಆದ ಬಾಬರ್ ಪಡೆ
Pakistan Team
Follow us
ಝಾಹಿರ್ ಯೂಸುಫ್
|

Updated on:Jun 15, 2024 | 11:38 AM

T20 World Cup 2024: ಟಿ20 ವಿಶ್ವಕಪ್​ನಿಂದ ಪಾಕಿಸ್ತಾನ್ ತಂಡ ಹೊರಬಿದ್ದಿದೆ. ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಹೀನಾಯವಾಗಿ ಸೋತಿದ್ದ ಬಾಬರ್ ಪಡೆಯು, ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಮುಂದೆ ಮುಂಡಿಯೂರಿತ್ತು. ಇದಾಗ್ಯೂ ಕೊನೆಯ ಎರಡು ಪಂದ್ಯಗಳ ಮೂಲಕ ದ್ವಿತೀಯ ಸುತ್ತಿಗೆ ಪ್ರವೇಶಿಸುವ ಆಶಾಭಾವನೆಯಲ್ಲಿದ್ದ ಪಾಕಿಸ್ತಾನ್ ಪಾಲಿಗೆ ವರುಣ ಅವಕೃಪೆ ತೋರಿದ್ದಾನೆ.

ಯುಎಸ್​ಎ ಮತ್ತು ಐರ್ಲೆಂಡ್ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾಗಿದ್ದು, ಇದರೊಂದಿಗೆ ಯುಎಸ್​ಎ ತಂಡವು 5 ಅಂಕಗಳೊಂದಿಗೆ ಸೂಪರ್-8 ಹಂತಕ್ಕೆ ಅರ್ಹತೆ ಪಡೆದುಕೊಂಡಿದೆ. ಇನ್ನು ಪಾಕಿಸ್ತಾನ್ ತಂಡವು ತನ್ನ ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಗೆದ್ದರೂ ಒಟ್ಟು 4 ಅಂಕಗಳನ್ನು ಮಾತ್ರ ಸಂಪಾದಿಸಲಿದೆ. ಹೀಗಾಗಿ ಅಂತಿಮ ಪಂದ್ಯಕ್ಕೂ ಮುನ್ನವೇ ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದೆ.

ಅತ್ತ ಪಾಕ್ ಪಡೆ ಟಿ20 ವಿಶ್ವಕಪ್​ನಿಂದ ಹೊರಬೀಳುತ್ತಿದ್ದಂತೆ ಇತ್ತ ಸೋಷಿಯಲ್ ಮೀಡಿಯಾದಲ್ಲಿ ಮೀಮ್ಸ್​​ಗಳ ಸುರಿಮಳೆ ಶುರುವಾಗಿತ್ತು. ಈ ಮೂಲಕ ಪಾಕ್ ತಂಡದ ನಾಯಕ ಬಾಬರ್ ಆಝಂ ಹಾಗೂ ಪಾಕಿಸ್ತಾನ್ ತಂಡವನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಮೀಮ್ಸ್ ಮತ್ತು ಟ್ರೋಲ್​ಗಳ ಝಲಕ್ ಇಲ್ಲಿದೆ…

ಟಿ20 ವಿಶ್ವಕಪ್​ಗೂ ಮುನ್ನ ಆರ್ಮಿ ಟ್ರೈನಿಂಗ್ ಪಡೆದಿದ್ದ ಪಾಕ್ ಆಟಗಾರರನ್ನು ಸ್ಟೇಡಿಯಂ ನವೀಕರಣಕ್ಕಾಗಿ ಬಳಸಿಕೊಳ್ಳಬೇಕೆಂದು ಅಭಿಮಾನಿಯೊಬ್ಬರು ಸೋಷಿಯಲ್ ಮೀಡಿಯಾ ಮೂಲಕ ಆಗ್ರಹಿಸಿದ್ದಾರೆ.

ಈ ವಿಡಿಯೋದಲ್ಲಿ ಪಾಕಿಸ್ತಾನ್ ತಂಡವನ್ನು ಬಿಟ್ಟು ಉಳಿದ ಏಷ್ಯಾ ತಂಡಗಳು ಸೂಪರ್-8 ಹಂತಕ್ಕೆ ಹೋಗುತ್ತಿರುವುದನ್ನು ತೋರಿಸಲಾಗಿದೆ.

ಈ ಪೋಸ್ಟ್​ನಲ್ಲಿ ಪಾಕಿಸ್ತಾನ್ ತಂಡವು ಕರಾಚಿ ಏರ್​ಪೋರ್ಟ್​ಗೆ ಅರ್ಹತೆ ಪಡೆದುಕೊಂಡಿದೆ ಎಂದು ಟ್ರೋಲ್ ಮಾಡಲಾಗಿದೆ.

ಒಟ್ಟಿನಲ್ಲಿ ಟಿ20 ವಿಶ್ವಕಪ್​ ಆರಂಭಕ್ಕೂ ಮುನ್ನ ಆರ್ಮಿ ಟ್ರೈನಿಂಗ್​ನೊಂದಿಗೆ ಸಕಲ ಸಿದ್ಧತೆ ಮಾಡಿಕೊಂಡಿದ್ದ ಪಾಕಿಸ್ತಾನ್ ತಂಡವು ಲೀಗ್ ಹಂತದಲ್ಲೇ ಮುಗ್ಗರಿಸಿ ಇದೀಗ ಭಾರೀ ಮುಖಭಂಗಕ್ಕೆ ಒಳಗಾಗಿದೆ. ಅದರಲ್ಲೂ ಬಾಬರ್ ಪಡೆಯ ಈ ಹೀನಾಯ ಪ್ರದರ್ಶನವನ್ನು ಪಾಕಿಸ್ತಾನ್ ಕ್ರಿಕೆಟ್ ಪ್ರೇಮಿಗಳೇ ಟ್ರೋಲ್ ಮಾಡುತ್ತಿದ್ದಾರೆ.

Published On - 11:31 am, Sat, 15 June 24

ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
ಚನ್ನಪಟ್ಟಣದಲ್ಲಿ ಬಿಜೆಪಿಯೇ ಕುಮಾರಸ್ವಾಮಿಗೆ ಮೋಸ ಮಾಡಿದೆ: ಕೃಷ್ಣ ಭೈರೇಗೌಡ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
‘ಈಗಿನ್ನೂ ಆಡೋಕೆ ಬರುತ್ತಿದೆ, ಅಡ್ಡಗಾಲು ಹಾಕಿದ್ರು’: ಚೈತ್ರಾ ಹಳೇ ರಾಗ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಡಿನ್ನರ್​ ಸಭೆ ಗದ್ದಲದ ಮಧ್ಯ ಡಿಕೆಶಿ, ಸತೀಶ್, ಪರಮೇಶ್ವರ್ ಸುದ್ದಿಗೋಷ್ಠಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
ಸಿದ್ದರಾಮಯ್ಯ ಅವರನ್ನು ‘ಹೀರೋ’ ಎಂದು ಕರೆಯುತ್ತಿದ್ದರು ಈ ಹಿರಿಯ ನಟಿ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
Video: ಕೇರಳ ಉತ್ಸವದಲ್ಲಿ ಕೆರಳಿದ ಆನೆ, 20ಕ್ಕೂ ಅಧಿಕ ಮಂದಿಗೆ ಗಾಯ
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಗರದಲ್ಲಿ ನಾಲ್ಕು ಕಡೆ ನಿರ್ಮಿಸಲಾಗಿದೆ ಹೊಸ ಪೊಲೀಸ್ ಠಾಣೆಗಳು!
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ನಮ್ಮ ಸಭೆ ರದ್ದಾಗಿಲ್ಲ ಮುಂದೂಡಲ್ಪಟ್ಟಿದೆ ಅಷ್ಟೇ: ಪರಮೇಶ್ವರ್, ಗೃಹ ಸಚಿವ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ