T20 World Cup 2024: ಮೊದಲ ಪಂದ್ಯದಲ್ಲೇ ಇಂಗ್ಲೆಂಡ್​ಗೆ 1 ಪಾಯಿಂಟ್ ನಷ್ಟ..!

|

Updated on: Jun 05, 2024 | 9:35 AM

T20 World Cup 2024: ಟಿ20 ವಿಶ್ವಕಪ್​ನ 17ನೇ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಶುಭಾರಂಭ ಮಾಡುವ ಇರಾದೆಯಲ್ಲಿದೆ ಆಂಗ್ಲ ಪಡೆ. ಮತ್ತೊಂದೆಡೆ ಹಾಲಿ ಚಾಂಪಿಯನ್ನರಿಗೆ ಸೋಲುಣಿಸಿ ಪಾರುಪತ್ಯ ಮೆರೆಯುವ ವಿಶ್ವಾಸದಲ್ಲಿದ್ದಾರೆ ಆಸ್ಟ್ರೇಲಿಯನ್ನರು. ಹೀಗಾಗಿ ಈ ಪಂದ್ಯದಲ್ಲಿ ರಣರೋಚಕ ಹೋರಾಟವನ್ನು ನಿರೀಕ್ಷಿಸಬಹುದು.

T20 World Cup 2024: ಮೊದಲ ಪಂದ್ಯದಲ್ಲೇ ಇಂಗ್ಲೆಂಡ್​ಗೆ 1 ಪಾಯಿಂಟ್ ನಷ್ಟ..!
England
Follow us on

T20 World Cup 2024: ಟಿ20 ವಿಶ್ವಕಪ್​ 2024 ರಲ್ಲಿ ಭರ್ಜರಿಯಾಗಿ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದ್ದ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡಕ್ಕೆ ಆರಂಭದಲ್ಲೇ ನಿರಾಸೆಯಾಗಿದೆ. ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ ಮೈದಾನದಲ್ಲಿ ಸ್ಕಾಟ್ಲೆಂಡ್ ವಿರುದ್ಧ ನಡೆಯಬೇಕಿದ್ದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದು, ಇದರಿಂದ ಒಂದು ಅಂಕವನ್ನು ಕಳೆದುಕೊಂಡಿದೆ.

ಅಂದರೆ ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ ಗೆದ್ದ ತಂಡಕ್ಕೆ 2 ಪಾಯಿಂಟ್ಸ್ ನೀಡಲಾಗುತ್ತದೆ. ಹಾಗೆಯೇ ಪಂದ್ಯ ರದ್ದಾದರೆ ಉಭಯ ತಂಡಗಳು ತಲಾ ಒಂದೊಂದು ಅಂಕಗಳನ್ನು ಹಂಚಿಕೊಳ್ಳಲಿದ್ದಾರೆ. ಅದರಂತೆ ಇದೀಗ ಸ್ಕಾಟ್ಲೆಂಡ್-ಇಂಗ್ಲೆಂಡ್ ನಡುವಣ ಪಂದ್ಯವು ಮಳೆಯಿಂದಾಗಿ ರದ್ದಾಗಿದೆ.

ಹೀಗಾಗಿ ಉಭಯ ತಂಡಗಳು ತಲಾ ಒಂದೊಂದು ಪಾಯಿಂಟ್ಸ್ ಹಂಚಿಕೊಂಡಿದೆ. ಇತ್ತ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ಗೆಲ್ಲುವ ಫೇವರೇಟ್ ಆಗಿ ಗುರುತಿಸಿಕೊಂಡಿತು. ಹೀಗಾಗಿ ಹಾಲಿ ಚಾಂಪಿಯನ್ನರು 2 ಅಂಕಗಳೊಂದಿಗೆ ಶುಭಾರಂಭ ಮಾಡುವ ನಿರೀಕ್ಷೆಯಲ್ಲಿದ್ದರು. ಆದರೆ ಈ ನಿರೀಕ್ಷೆಯು ಹುಸಿಯಾಗಿದ್ದು, ಕೇವಲ 1 ಅಂಕಕ್ಕೆ ತೃಪ್ತಿಪಟ್ಟುಕೊಂಡಿದೆ.

ಇಂಗ್ಲೆಂಡ್ ತಂಡವು ತನ್ನ 2ನೇ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಆಡಲಿದೆ. ಜೂನ್ 8 ರಂದು ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯದ ಮೂಲಕ ಶುಭಾರಂಭ ಮಾಡುವ ಇರಾದೆಯಲ್ಲಿದೆ ಜೋಸ್ ಬಟ್ಲರ್ ಪಡೆ. ಅದರಲ್ಲೂ ಏಕದಿನ ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ಸೋಲುಣಿಸುವುದು ಸುಲಭವಲ್ಲ. ಹೀಗಾಗಿ ಉಭಯ ತಂಡಗಳಿಂದ ಈ ಪಂದ್ಯದಲ್ಲಿ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಇಂಗ್ಲೆಂಡ್ ಟಿ20 ವಿಶ್ವಕಪ್ ತಂಡ: ಜೋಸ್ ಬಟ್ಲರ್ (ನಾಯಕ), ಮೊಯೀನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಸ್ಯಾಮ್ ಕರನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜಾಕ್ಸ್, ಕ್ರಿಸ್ ಜೋರ್ಡನ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಮಾರ್ಕ್ ವುಡ್.

ಇದನ್ನೂ ಓದಿ: T20 World Cup 2024: ಕೇವಲ ಎರಡೇ ಎರಡು ಎಸೆತಗಳಲ್ಲಿ ವಿಶ್ವ ದಾಖಲೆ ಬರೆದ ರೂಬೆನ್

ಇಂಗ್ಲೆಂಡ್ ತಂಡದ ಪಂದ್ಯಗಳ ವೇಳಾಪಟ್ಟಿ:

ದಿನಾಂಕ  ಪಂದ್ಯಗಳು ಸಮಯ (IST) ಸ್ಥಳ
ಜೂನ್ 04, 2024 ಇಂಗ್ಲೆಂಡ್ vs ಸ್ಕಾಟ್ಲೆಂಡ್ 8:00 PM ಕೆನ್ಸಿಂಗ್ಟನ್ ಓವಲ್, ಬಾರ್ಬಡೋಸ್
ಜೂನ್ 08, 2024 ಇಂಗ್ಲೆಂಡ್ vs ಆಸ್ಟ್ರೇಲಿಯಾ 10:30 PM ಕೆನ್ಸಿಂಗ್ಟನ್ ಓವಲ್, ಬಾರ್ಬಡೋಸ್
ಜೂನ್ 13, 2024 ಇಂಗ್ಲೆಂಡ್ vs ಒಮಾನ್ 12:30 AM ನಾರ್ತ್ ಸೌಂಡ್, ಆಂಟಿಗುವಾ
ಜೂನ್ 15, 2024 ಇಂಗ್ಲೆಂಡ್ vs ನಮೀಬಿಯಾ 10:30 PM ನಾರ್ತ್ ಸೌಂಡ್, ಆಂಟಿಗುವಾ