India vs Pakistan: ಭಾರತ vs ಪಾಕಿಸ್ತಾನ್: ಹೈವೊಲ್ಟೇಜ್ ಪಂದ್ಯಕ್ಕೆ ಕೌಂಟ್ ಡೌನ್ ಶುರು

T20 World Cup 2024: ಭಾರತ ಮತ್ತು ಪಾಕಿಸ್ತಾನ್ ತಂಡಗಳು ಟಿ20 ಕ್ರಿಕೆಟ್​ನಲ್ಲಿ ಒಟ್ಟು 12 ಬಾರಿ ಮುಖಾಮುಖಿಯಾಗಿದೆ. ಈ ವೇಳೆ ಪಾಕಿಸ್ತಾನ್ ತಂಡ ಗೆದ್ದಿರುವುದು ಕೇವಲ 3 ಬಾರಿ ಮಾತ್ರ. ಅದೇ ಟೀಮ್ ಇಂಡಿಯಾ 9 ಬಾರಿ ವಿಜಯದ ಪಾತಾಕೆ ಹಾರಿಸಿದೆ. ಹೀಗಾಗಿ ಈ ಬಾರಿ ಕೂಡ ಗೆಲ್ಲುವ ಫೇವರೇಟ್ ತಂಡವಾಗಿ ಟೀಮ್ ಇಂಡಿಯಾ ಗುರುತಿಸಿಕೊಂಡಿದೆ.

India vs Pakistan: ಭಾರತ vs ಪಾಕಿಸ್ತಾನ್: ಹೈವೊಲ್ಟೇಜ್ ಪಂದ್ಯಕ್ಕೆ ಕೌಂಟ್ ಡೌನ್ ಶುರು
IND vs PAK
Follow us
ಝಾಹಿರ್ ಯೂಸುಫ್
|

Updated on: Jun 09, 2024 | 7:43 AM

T20 World Cup 2024: ಭಾರತ ಮತ್ತು ಪಾಕಿಸ್ತಾನ್ (India vs Pakistan) ನಡುವಣ ಹೈವೊಲ್ಟೇಜ್ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ಭಾನುವಾರ (ಜೂ.9) ನ್ಯೂಯಾರ್ಕ್​ನ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವನ್ನು ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಕಳೆದ ಬಾರಿಯ ಟಿ20 ವಿಶ್ವಕಪ್​ನಲ್ಲಿ ರಣರೋಚಕ ಹೋರಾಟ ನಡೆಸಿದ್ದ ಉಭಯ ತಂಡಗಳು ಇಂದೂ ಸಹ ಭರ್ಜರಿ ಪೈಪೋಟಿ ನೀಡುವ ನಿರೀಕ್ಷೆಯಿದೆ.

ಅದರಲ್ಲೂ ನಸ್ಸೌ ಕೌಂಟಿ ಪಿಚ್​ ಬೌಲರ್​ಗಳಿಗೆ ಸಹಕಾರಿ ಎಂಬುದು ಈಗಾಗಲೇ ಸಾಬೀತಾಗಿದೆ. ಅತ್ತ ಪಾಕಿಸ್ತಾನ್ ತಂಡದಲ್ಲಿ ಅತ್ಯುತ್ತಮ ಬೌಲರ್​ಗಳಿದ್ದರೆ, ಇತ್ತ ಭಾರತ ತಂಡದಲ್ಲಿ ಬಲಿಷ್ಠ ದಾಂಡಿಗರ ದಂಡೇ ಇದೆ. ಹೀಗಾಗಿ ಇಂದಿನ ಪಂದ್ಯವು ಬ್ಯಾಟರ್ ಮತ್ತು ಬೌಲರ್​ಗಳ ನಡುವಣ ಅಸಲಿ ಕದನವಾಗಿ ಮಾರ್ಪಡಲಿದೆ.

ಎಷ್ಟು ಗಂಟೆಗೆ ಪಂದ್ಯ ಶುರು?

ಈ ಪಂದ್ಯವು ಅಮೆರಿಕ ಕಾಲಮಾನ ಬೆಳಿಗ್ಗೆ 10.30 ರಿಂದ ಶುರುವಾಗಲಿದೆ. ಅಲ್ಲಿ ಡೇ ಪಂದ್ಯವಾಗಿದ್ದರೂ, ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಪಂದ್ಯದ ನೇರ ಪ್ರಸಾರ ಇರಲಿದೆ.

ಯಾವ ಚಾನೆಲ್​ನಲ್ಲಿ ವೀಕ್ಷಿಸಬಹುದು?

ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ ಸ್ಟಾರ್ ನೆಟ್​ವರ್ಕ್​ನ ಬಹುತೇಕ ಸ್ಪೋರ್ಟ್ಸ್ ಚಾನೆಲ್​ಗಳಲ್ಲಿ ಈ ಪಂದ್ಯದ ನೇರ ಪ್ರಸಾರ ಇರಲಿದೆ.

ಹಾಟ್​ಸ್ಟಾರ್​ನಲ್ಲೂ ಲಭ್ಯ:

ಈ ಪಂದ್ಯವನ್ನು ಡಿಸ್ನಿ ಹಾಟ್​ಸ್ಟಾರ್​ನ ವೆಬ್​ ಸೈಟ್​ನಲ್ಲೂ ವೀಕ್ಷಿಸಬಹುದು. ಹಾಗೆಯೇ ಡಿಸ್ನಿ ಹಾಟ್​ಸ್ಟಾರ್​​ನ ಮೊಬೈಲ್ ಆ್ಯಪ್​ನಲ್ಲಿ ಈ ಪಂದ್ಯದ ಉಚಿತ ಪ್ರಸಾರ ಇರಲಿದೆ.

ಉಭಯ ತಂಡಗಳು:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಮೀಸಲು ಆಟಗಾರರು: ಶುಭ್​ಮನ್ ಗಿಲ್, ಅವೇಶ್ ಖಾನ್, ರಿಂಕು ಸಿಂಗ್, ಖಲೀಲ್ ಅಹ್ಮದ್.

ಇದನ್ನೂ ಓದಿ: Babar Azam: ಬಾಬರ್ ಅಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಉಡೀಸ್

ಪಾಕಿಸ್ತಾನ್ ತಂಡ: ಬಾಬರ್ ಆಝಂ (ನಾಯಕ), ಅಬ್ರಾರ್ ಅಹ್ಮದ್, ಆಝಂ ಖಾನ್, ಫಖರ್ ಝಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಝ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾ ಅಫ್ರಿದಿ, ಉಸ್ಮಾನ್ ಖಾನ್.

Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
Daily Horoscope: ಈ ರಾಶಿಯವರು ಭೂ ವ್ಯಾಪಾರದಲ್ಲಿ ಅಧಿಕ ಲಾಭ ಗಳಿಸುವರು
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು