T20 World Cup 2024: ಮುಂದಿನ ಹಂತಕ್ಕೇರಲು ಟೀಮ್ ಇಂಡಿಯಾಗೆ ಒಂದೆಜ್ಜೆ ದೂರ

T20 World Cup 2024: ಟಿ20 ವಿಶ್ವಕಪ್​ 2024 ರಲ್ಲಿ ಈವರೆಗೆ 21 ಪಂದ್ಯಗಳು ಮುಗಿದಿವೆ. ಈ ಪಂದ್ಯಗಳ ಮೂಲಕ ಸೂಪರ್-8 ಹಂತಕ್ಕೇರಿರುವುದು ಸೌತ್ ಆಫ್ರಿಕಾ ತಂಡ ಮಾತ್ರ. ಅಂದರೆ ಗ್ರೂಪ್-ಡಿ ನಲ್ಲಿ ಕಣಕ್ಕಿಳಿದಿರುವ ಸೌತ್ ಆಫ್ರಿಕಾ ಮೂರು ಪಂದ್ಯಗಳಲ್ಲಿ ಜಯ ಸಾಧಿಸಿ ಮುಂದಿನ ಹಂತಕ್ಕೇರಿದೆ. ಇನ್ನು ಟೀಮ್ ಇಂಡಿಯಾ ಯುಎಸ್​ಎ ವಿರುದ್ಧ ಜಯ ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ.

T20 World Cup 2024: ಮುಂದಿನ ಹಂತಕ್ಕೇರಲು ಟೀಮ್ ಇಂಡಿಯಾಗೆ ಒಂದೆಜ್ಜೆ ದೂರ
Team India
Follow us
|

Updated on:Jun 15, 2024 | 2:46 PM

T20 World Cup 2024: ಟಿ20 ವಿಶ್ವಕಪ್​ನಲ್ಲಿ ಉತ್ತಮ ಪ್ರದರ್ಶನ ಮುಂದುವರೆಸಿರುವ ಸೌತ್ ಆಫ್ರಿಕಾ ತಂಡ ಸೂಪರ್-8 ಹಂತಕ್ಕೇರಿದೆ. ಆಡಿರುವ ಮೂರು ಪಂದ್ಯಗಳಲ್ಲೂ ಗೆಲುವು ದಾಖಲಿಸಿರುವ ಸೌತ್ ಆಫ್ರಿಕಾ ಒಟ್ಟು 6 ಅಂಕಗಳೊಂದಿಗೆ ಮುಂದಿನ ಹಂತಕ್ಕೆ ಅರ್ಹತೆ ಗಿಟ್ಟಿಸಿಕೊಂಡಿದೆ. ಇನ್ನು ಭಾರತ ತಂಡ ಸೂಪರ್-8 ಹಂತಕ್ಕೇರಲು ಒಂದೆಜ್ಜೆ ದೂರಲ್ಲಿದೆ.

ಅಂದರೆ ಬುಧವಾರ ಯುಎಸ್​ಎ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದರೆ, ಸೂಪರ್​-8 ಹಂತಕ್ಕೇರಲಿದೆ. ಏಕೆಂದರೆ ಟೀಮ್ ಇಂಡಿಯಾ ಈಗಾಗಲೇ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದು, ಒಟ್ಟು 4 ಅಂಕಗಳೊಂದಿಗೆ ಗ್ರೂಪ್-ಎ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಇದೀಗ ಮೂರನೇ ಗೆಲುವು ದಾಖಲಿಸಿದರೆ ಸೂಪರ್-8 ಹಂತಕ್ಕೇರುವುದು ಖಚಿತವಾಗಲಿದೆ. ಹೀಗಾಗಿ ಬುಧವಾರ (ಜೂ.12) ನಡೆಯಲಿರುವ ಪಂದ್ಯದ ಮೂಲಕ ಭಾರತ ತಂಡವು ಮುಂದಿನ ಹಂತಕ್ಕೇರುವುದನ್ನು ಎದುರು ನೋಡಬಹುದು.

ಸೂಪರ್-8 ಎಂದರೇನು?

ಈ ಬಾರಿಯ ಟಿ20 ವಿಶ್ವಕಪ್​ನಲ್ಲಿ 20 ತಂಡಗಳನ್ನು 4 ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಇಲ್ಲಿ ಪ್ರತಿ ಗ್ರೂಪ್​ನಲ್ಲಿ 5 ತಂಡಗಳಿವೆ. ಅಲ್ಲದೆ ಆಯಾ ಗ್ರೂಪ್​ನಲ್ಲಿ ಪಂದ್ಯಗಳನ್ನಾಡಲಾಗುತ್ತದೆ.

ಅಂದರೆ, ಭಾರತ, ಪಾಕಿಸ್ತಾನ್, ಯುಎಸ್​ಎ, ಕೆನಡಾ ಮತ್ತು ಐರ್ಲೆಂಡ್ ತಂಡಗಳು ಗ್ರೂಪ್​ ಎ ನಲ್ಲಿದೆ. ಈ ಗ್ರೂಪ್​ನಲ್ಲಿ 4 ತಂಡಗಳ ವಿರುದ್ಧ ಭಾರತ ಲೀಗ್ ಪಂದ್ಯಗಳನ್ನಾಡುತ್ತಿದೆ.

ಇಲ್ಲಿ ಆಯಾ ಗ್ರೂಪ್​ಗೆ ಅಂಕ ಪಟ್ಟಿಯನ್ನು ಕೂಡ ನೀಡಲಾಗುತ್ತದೆ. ಲೀಗ್​ ಹಂತದ ಪಂದ್ಯಗಳ ಮುಕ್ತಾಯದ ವೇಳೆಗೆ ಈ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ ತಂಡ ಮುಂದಿನ ಹಂತಕ್ಕೇರಲಿದೆ.

ಸೂಪರ್-8 ಹಂತ:

ಲೀಗ್ ಹಂತದ 4 ಗುಂಪುಗಳಿಂದ ಒಟ್ಟು 8 ತಂಡಗಳು ಮುಂದಿನ ಹಂತಕ್ಕೆ ಅರ್ಹತೆ ಪಡೆಯಲಿದೆ. ಇದನ್ನೇ ಇಲ್ಲಿ ಸೂಪರ್-8 ಹಂತ ಎನ್ನಲಾಗಿದೆ. ಇನ್ನು ಸೂಪರ್-8 ಹಂತದಲ್ಲಿ ಮೇಲೆ ಹೇಳಿದಂತೆ ಒಟ್ಟು 8 ತಂಡಗಳು ಕಣಕ್ಕಿಳಿಯಲಿದೆ. ಇಲ್ಲಿ ಈ ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗುತ್ತದೆ. ಇಲ್ಲಿ ಗಮನಿಸಬೇಕಾದ ಮುಖ್ಯ ಅಂಶ ಎಂದರೆ ಲೀಗ್​ ಹಂತದಲ್ಲಿ ಒಂದೇ ಗ್ರೂಪ್​ನಲ್ಲಿ ಕಾಣಿಸಿಕೊಂಡ ತಂಡಗಳು ಇಲ್ಲಿ ಪರಸ್ಪರ ಮುಖಾಮುಖಿಯಾಗುವುದಿಲ್ಲ ಎಂಬುದು. ಬದಲಾಗಿ ಉಳಿದ ತಂಡಗಳ ವಿರುದ್ಧ ಆಡಲಿದೆ.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಉಗಾಂಡ ಬೌಲರ್

ಹಾಗೆಯೇ ಸೂಪರ್-8 ಹಂತದಲ್ಲೂ ಎರಡು ಗ್ರೂಪ್​ಗಳಿಗೂ ಅಂಕ ಪಟ್ಟಿ ಇರಲಿದೆ. ಈ ಅಂಕ ಪಟ್ಟಿಯಲ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸುವ 4 ತಂಡಗಳು ಸೆಮಿಫೈನಲ್ ಹಂತಕ್ಕೇರಲಿದೆ.

ಸೆಮಿಫೈನಲ್​ನಲ್ಲಿ ಗೆಲ್ಲುವ 2 ತಂಡಗಳು ಫೈನಲ್​ಗೆ ಅರ್ಹತೆ ಪಡೆಯಲಿದೆ. ಅದರಂತೆ ಜೂನ್ 29 ರಂದು ನಡೆಯುವ ಫೈನಲ್​ ಪಂದ್ಯದಲ್ಲಿ ಈ ತಂಡಗಳು ಮುಖಾಮುಖಿಯಾಗಲಿದೆ.

Published On - 4:28 pm, Tue, 11 June 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್
ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್