T20 World Cup 2024: ಪಾಕ್​ ಪಡೆಗೆ ಇಂದು ನಿರ್ಣಾಯಕ ಪಂದ್ಯ

T20 World Cup 2024: ಟಿ20 ವಿಶ್ವಕಪ್​ನ 22ನೇ ಪಂದ್ಯದಲ್ಲಿ ಪಾಕಿಸ್ತಾನ್ ಮತ್ತು ಕೆನಡಾ ತಂಡಗಳು ಮುಖಾಮುಖಿಯಾಗಲಿದೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಜರುಗಲಿರುವ ಈ ಪಂದ್ಯವು ಪಾಕ್ ಪಾಲಿಗೆ ನಿರ್ಣಾಯಕ. ಏಕೆಂದರೆ ಇಂದಿನ ಪಂದ್ಯದಲ್ಲಿ ಪಾಕಿಸ್ತಾನ್ ತಂಡ ಸೋತರೆ ಟಿ20 ವಿಶ್ವಕಪ್​ನಿಂದ ಅಧಿಕೃತವಾಗಿ ಹೊರಬೀಳಲಿದೆ.

T20 World Cup 2024: ಪಾಕ್​ ಪಡೆಗೆ ಇಂದು ನಿರ್ಣಾಯಕ ಪಂದ್ಯ
Pakistan
Follow us
|

Updated on: Jun 11, 2024 | 3:39 PM

T20 World Cup 2024: ಟಿ20 ವಿಶ್ವಕಪ್​ ರೇಸ್​ನಲ್ಲಿ ಉಳಿಯಬೇಕಿದ್ದರೆ ಪಾಕಿಸ್ತಾನ್ ತಂಡ ಇಂದು (ಜೂ.11) ಗೆಲ್ಲಲೇಬೇಕು. ಕೆನಡಾ ವಿರುದ್ಧದ ಈ ಪಂದ್ಯದಲ್ಲಿ ಜಯ ಸಾಧಿಸಿದರೆ ಮಾತ್ರ ಪಾಕ್ ತಂಡ ಸೂಪರ್-8 ಹಂತಕ್ಕೇರುವ ಆಸೆಯನ್ನು ಜೀವಂತವಿರಿಸಿಕೊಳ್ಳಬಹುದು. ಏಕೆಂದರೆ ಆಡಿರುವ ಮೊದಲೆರಡು ಪಂದ್ಯಗಳಲ್ಲೂ ಪಾಕಿಸ್ತಾನ್ ತಂಡ ಸೋಲನುಭವಿಸಿದೆ.

ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಹೀನಾಯವಾಗಿ ಸೋತಿದ್ದ ಪಾಕಿಸ್ತಾನ್, 2ನೇ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ ಮಂಡಿಯೂರಿತ್ತು. ಇದೀಗ ಮೂರನೇ ಪಂದ್ಯದಲ್ಲಿ ಕೆನಾಡ ತಂಡವನ್ನು ಎದುರಿಸಲಿದೆ.

ಸೋತರೆ ಔಟ್:

ನ್ಯೂಯಾರ್ಕ್​ನ ನಸ್ಸೌ ಕೌಂಟಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಕೆನಡಾ ವಿರುದ್ಧದ ಈ ಮ್ಯಾಚ್​ನಲ್ಲಿ ಪಾಕಿಸ್ತಾನ್ ತಂಡ ಸೋತರೆ ಟಿ20 ವಿಶ್ವಕಪ್​ನಿಂದ ಅಧಿಕೃತವಾಗಿ ಹೊರಬೀಳಲಿದೆ. ಹೀಗಾಗಿ ಇಂದಿನ ಪಂದ್ಯವು ಬಾಬರ್ ಆಝಂ ಪಡೆಗೆ ನಿರ್ಣಾಯಕ.

ಗ್ರೂಪ್-ಎ ಲೆಕ್ಕಾಚಾರ:

ಗ್ರೂಪ್​-ಎ ಅಂಕ ಪಟ್ಟಿಯಲ್ಲಿ ಭಾರತ ತಂಡ ಅಗ್ರಸ್ಥಾನದಲ್ಲಿದ್ದರೆ, ಯುಎಸ್​ಎ ತಂಡ ದ್ವಿತೀಯ ಸ್ಥಾನದಲ್ಲಿದೆ. ಇನ್ನು ಕೆನಡಾ ತಂಡ ಮೂರನೇ ಸ್ಥಾನದಲ್ಲಿ ಕಾಣಿಸಿಕೊಂಡರೆ, ಪಾಕಿಸ್ತಾನ್ ತಂಡ 4ನೇ ಸ್ಥಾನದಲ್ಲಿದೆ. ಹಾಗೆಯೇ ಕೊನೆಯ ಸ್ಥಾನದಲ್ಲಿ ಐರ್ಲೆಂಡ್ ತಂಡವಿದೆ.

ಇಲ್ಲಿ ಭಾರತ ಮತ್ತು ಯುಎಸ್​ಎ ತಂಡಗಳು ಒಟ್ಟು 4 ಅಂಕಗಳನ್ನು ಕಲೆಹಾಕಿರುವ ಕಾರಣ ಮುಂದಿನ 2 ಪಂದ್ಯಗಳಲ್ಲಿ ಒಂದು ಜಯ ಸಾಧಿಸಿದರೆ ಸಾಕು. ಅಂದರೆ ಮುಂದಿನ ಪಂದ್ಯಗಳಲ್ಲಿ ಒಂದು ಗೆಲುವು ದಾಖಲಿಸಿದರೆ ಉಭಯ ತಂಡಗಳು ಸೂಪರ್-8 ಹಂತಕ್ಕೇರಲಿದೆ.

ಅತ್ತ ಭಾರತ ಮತ್ತು ಯುಎಸ್​ಎ ತಂಡಗಳು ಮುಂದಿನ 2 ಪಂದ್ಯಗಳಲ್ಲಿ ಒಂದು ಗೆಲುವು ದಾಖಲಿಸಿದರೆ, ಇತ್ತ ಕೆನಡಾ, ಐರ್ಲೆಂಡ್ ಮತ್ತು ಪಾಕಿಸ್ತಾನ್ ತಂಡಗಳು ಟಿ20 ವಿಶ್ವಕಪ್​ನಿಂದ ಹೊರಬೀಳಲಿದೆ.

ಸೂಪರ್-8 ಹಂತಕ್ಕೇರುವುದು ಹೇಗೆ?

ಭಾರತ ತಂಡವು ಯುಎಸ್​ಎ ವಿರುದ್ಧ ಜಯ ಸಾಧಿಸಿದರೆ ಸೂಪರ್-8 ಹಂತಕ್ಕೇರಲಿದೆ. ಅತ್ತ ಯುಎಸ್​ಎ ತಂಡ ತನ್ನ ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಗೆದ್ದರೆ ಮುಂದಿನ ಹಂತಕ್ಕೇರಬಹುದು.

ಒಂದು ವೇಳೆ ಭಾರತ ಮತ್ತು ಐರ್ಲೆಂಡ್ ವಿರುದ್ಧ ಯುಎಸ್​ಎ ತಂಡ ಸೋತರೆ ಪಾಕಿಸ್ತಾನ್ ತಂಡಕ್ಕೆ ಸೂಪರ್-8 ಹಂತಕ್ಕೇರಲು ಅವಕಾಶ ಇರಲಿದೆ. ಅದಕ್ಕೂ ಮುನ್ನ ಪಾಕಿಸ್ತಾನ್ ತಂಡ ಕೆನಡಾ ವಿರುದ್ಧ ಜಯಗಳಿಸಬೇಕು. ಅಲ್ಲದೆ ತನ್ನ ಕೊನೆಯ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಭಾರೀ ಅಂತರದಿಂದ ಗೆಲುವು ದಾಖಲಿಸಬೇಕು.

ಈ ಮೂಲಕ ಉತ್ತಮ ನೆಟ್ ರನ್ ರೇಟ್​ ಸಹಾಯದಿಂದ ಯುಎಸ್​ಎ ತಂಡವನ್ನು ಹಿಂದಿಕ್ಕಿ ಪಾಕಿಸ್ತಾನ್ ತಂಡ ಅಂಕ ಪಟ್ಟಿಯಲ್ಲಿ 2ನೇ ಸ್ಥಾನದೊಂದಿಗೆ ಸೂಪರ್-8 ಹಂತಕ್ಕೇರಬಹುದು.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಉಗಾಂಡ ಬೌಲರ್

ಹೀಗಾಗಿ ಪಾಕ್ ಪಾಲಿಗೆ ಮುಂದಿನ 2 ಪಂದ್ಯಗಳು ನಿರ್ಣಾಯಕ. ಅದರಲ್ಲೂ ಇಂದಿನ ಪಂದ್ಯದಲ್ಲಿ ಕೆನಡಾ ವಿರುದ್ಧ ಸೋತರೆ ಟೂರ್ನಿಯಿಂದಲೇ ಹೊರಬೀಳಲಿದೆ. ಹಾಗಾಗಿ ಸೂಪರ್-8 ಹಂತಕ್ಕೇರುವ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಪಾಕಿಸ್ತಾನ್ ತಂಡವು ಇಂದು ಕೆನಡಾ ವಿರುದ್ಧ ಗೆಲ್ಲಲೇಬೇಕು.

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ