AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

VIDEO: ಬಣ್ಣದೋಕುಳಿ, ರಸ್ತೆಗಳು ಬಂದ್… ಕುಣಿದು ಕುಪ್ಪಳಿಸಿದ ಅಫ್ಘಾನಿಸ್ತಾನ್ ಅಭಿಮಾನಿಗಳು

T20 World Cup 2024: ಟಿ20 ವಿಶ್ವಕಪ್​ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ, ಅಫ್ಘಾನಿಸ್ತಾನ್, ಇಂಗ್ಲೆಂಡ್ ಮತ್ತು ಸೌತ್ ಆಫ್ರಿಕಾ ತಂಡಗಳು ಕಣಕ್ಕಿಳಿಯಲಿದೆ. ಇಲ್ಲಿ ಅಫ್ಘಾನಿಸ್ತಾನ್ ತಂಡಕ್ಕೆ ಸೌತ್ ಆಫ್ರಿಕಾ ಎದುರಾಳಿಯಾದರೆ, ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯಗಳಲ್ಲಿ ಗೆಲ್ಲುವ ತಂಡ ಫೈನಲ್​ಗೆ ಪ್ರವೇಶಿಸಲಿದೆ.

VIDEO: ಬಣ್ಣದೋಕುಳಿ, ರಸ್ತೆಗಳು ಬಂದ್... ಕುಣಿದು ಕುಪ್ಪಳಿಸಿದ ಅಫ್ಘಾನಿಸ್ತಾನ್ ಅಭಿಮಾನಿಗಳು
Afghanistan
ಝಾಹಿರ್ ಯೂಸುಫ್
|

Updated on: Jun 25, 2024 | 7:03 PM

Share

ಐಸಿಸಿ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನ್ (Afghanistan) ತಂಡ ಸೆಮಿಫೈನಲ್​ಗೇರಿದೆ. ಕಿಂಗ್ಸ್​ಟೌನ್​ನಲ್ಲಿ ನಡೆದ ನಿರ್ಣಾಯಕ ಪಂದ್ಯದಲ್ಲಿ ಬಾಂಗ್ಲಾದೇಶ್ ವಿರುದ್ಧ ರೋಚಕ ಜಯ ಸಾಧಿಸಿ ಅಫ್ಘಾನ್ ಪಡೆ ನಾಕೌಟ್ ಹಂತಕ್ಕೇರಿದೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ್ ತಂಡದ ನಾಯಕ ರಶೀದ್ ಖಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಅಫ್ಘಾನಿಸ್ತಾನ್ ತಂಡಕ್ಕೆ ಆರಂಭಿಕರಾದ ರಹಮಾನುಲ್ಲಾ ಗುರ್ಬಾಝ್ ಹಾಗೂ ಇಬ್ರಾಹಿಂ ಝದ್ರಾನ್ ಉತ್ತಮ ಆರಂಭ ಒದಗಿಸಿದ್ದರು. ಮೊದಲ ವಿಕೆಟ್​ಗೆ 59 ರನ್​ಗಳ ಜೊತೆಯಾಟವಾಡಿದ ಬಳಿಕ ಇಬ್ರಾಹಿಂ ಝದ್ರಾನ್ (18) ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ಅಝ್ಮತುಲ್ಲಾ (10) ಬೇಗನೆ ನಿರ್ಗಮಿಸಿದರೆ, ರಹಮಾನುಲ್ಲಾ ಗುರ್ಬಾಝ್ 43 ರನ್ ಬಾರಿಸಿ ಔಟಾದರು. ಅಂತಿಮ ಹಂತದಲ್ಲಿ ರಶೀದ್ ಖಾನ್ 10 ಎಸೆತಗಳಲ್ಲಿ 3 ಭರ್ಜರಿ ಸಿಕ್ಸ್​​ನೊಂದಿಗೆ 19 ರನ್ ಸಿಡಿಸಿದರು. ಈ ಮೂಲಕ ಅಫ್ಘಾನಿಸ್ತಾನ್ ತಂಡ 20 ಓವರ್​ಗಳಲ್ಲಿ 5 ವಿಕೆಟ್ ಕಳೆದುಕೊಂಡು 115 ರನ್ ಕಲೆಹಾಕಿತು.

ಈ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಅಫ್ಘಾನ್ ಬೌಲರ್​ಗಳು ಯಶಸ್ವಿಯಾದರು. ಕೇವಲ 23 ರನ್​ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾಗ, ಮಳೆ ಕೂಡ ಬರಲಾರಂಭಿಸಿತು.

ಹೀಗಾಗಿ ಒಂದು ಓವರ್​ ಕಡಿತದೊಂದಿಗೆ ಬಾಂಗ್ಲಾದೇಶ್ ತಂಡಕ್ಕೆ 114 ರನ್​ಗಳ ಗುರಿ ನೀಡಲಾಯಿತು. ಈ ಗುರಿಯನ್ನು ಬೆನ್ನತ್ತುವ ವಿಶ್ವಾಸದೊಂದಿಗೆ ಬ್ಯಾಟ್ ಬೀಸಿದ ಲಿಟ್ಟನ್ ದಾಸ್ ಒಂದೆಡೆ ಗಟ್ಟಿಯಾಗಿ ನೆಲೆಯೂರಿದರೆ, ಮತ್ತೊಂದು ತುದಿಯಲ್ಲಿ ಬಾಂಗ್ಲಾ ಬ್ಯಾಟರ್​ಗಳು ಪೆವಿಲಿಯನ್ ಪರೇಡ್ ನಡೆಸಿದರು.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್ ಸೆಮಿಫೈನಲ್ ವೇಳಾಪಟ್ಟಿ

ಪರಿಣಾಮ ಲಿಟ್ಟನ್ ದಾಸ್ (54) ಅರ್ಧಶತಕ ಬಾರಿಸಿ ಅಜೇಯರಾಗಿ ಉಳಿದರು. ಆದರೆ ಬಾಂಗ್ಲಾದೇಶ್ ತಂಡವು 17.5 ಓವರ್​ಗಳಲ್ಲಿ 105 ರನ್​ಗಳಿಸಿ ಆಲೌಟ್ ಆಯಿತು. ಈ ಮೂಲಕ ಅಫ್ಘಾನಿಸ್ತಾನ್ ತಂಡ ಡಕ್​ವರ್ತ್​ ಲೂಯಿಸ್ ನಿಯಮದ ಪ್ರಕಾರ 8 ರನ್​ಗಳ ರೋಚಕ ಜಯ ಸಾಧಿಸಿ ಸೆಮಿಫೈನಲ್​ಗೆ ಪ್ರವೇಶಿಸಿತು.

ತಾಲಿಬಾನಿಗಳ ನಾಡಲ್ಲಿ ಕ್ರಿಕೆಟ್ ಕಲರವ:

ಕೆರಿಬಿಯನ್ ದ್ವೀಪದ ಕಿಂಗ್ಸ್​ಟೌನ್​ನಲ್ಲಿ ಅಫ್ಘಾನಿಸ್ತಾನ್ ತಂಡ ವಿಜಯ ಸಾಧಿಸುತ್ತಿದ್ದಂತೆ, ಅತ್ತ ತಾಲಿಬಾನಿಗಳ ನಾಡದಲ್ಲಿ ಸಂಭ್ರಮ ಮಾಡಿತ್ತು. ಕಾಬೂಲ್ ಸೇರಿದಂತೆ ಅಫ್ಘಾನಿಸ್ತಾನದ ಪ್ರಮುಖ ನಗರಗಳಲ್ಲಿ ಅಭಿಮಾನಿಗಳು ಕುಣಿದು ಕುಪ್ಪಳಿಸಿದರು. ಬಣ್ಣದೋಕುಳಿಯೊಂದಿಗೆ ಸಂಭ್ರಮಿಸಿದರು. ಇದೀಗ ಅಫ್ಘಾನಿಸ್ತಾನಿಗಳ ಸಖತ್ ಸಂಭ್ರಮದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕ್ರಿಕೆಟ್​ ಪ್ರೇಮಿಗಳಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಇನ್ನು ಸೆಮಿಫೈನಲ್​ಗೇರಿರುವ ಅಫ್ಘಾನಿಸ್ತಾನ್ ತಂಡವು ನಾಕೌಟ್ ಪಂದ್ಯದಲ್ಲಿ ಸೌತ್ ಆಫ್ರಿಕಾ ತಂಡವನ್ನು ಎದುರಿಸಲಿದೆ. ಜೂನ್ 26 ರಂದು (ಭಾರತದಲ್ಲಿ ಜೂನ್ 27) ನಡೆಯಲಿರುವ ಈ ಪಂದ್ಯವು ಟ್ರಿನಿಡಾಡ್- ಟೊಬಾಗೊದ ಬ್ರಿಯಾನ್ ಲಾರಾ ಕ್ರಿಕೆಟ್ ಅಕಾಡೆಮಿ ಸ್ಟೇಡಿಯಂನಲ್ಲಿ ನಡೆಯಲಿದೆ. ಈ ಪಂದ್ಯದಲ್ಲೂ ಗೆಲ್ಲುವ ಮೂಲಕ ಅಫ್ಘಾನ್ ಪಡೆ ಫೈನಲ್​ಗೆ ಪ್ರವೇಶಿಸಲಿದೆಯಾ ಕಾದು ನೋಡಬೇಕಿದೆ.

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್