NZ vs AFG: ನ್ಯೂಝಿಲೆಂಡ್ ತಂಡವನ್ನು ಮಕಾಡೆ ಮಲಗಿಸಿದ ಅಫ್ಘಾನ್ ಪಡೆ

T20 World Cup 2024: ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡವು 84 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಗ್ರೂಪ್-ಸಿ ಅಂಕ ಪಟ್ಟಿಯಲ್ಲಿ ಅಫ್ಘಾನ್ ಪಡೆಯು ಅಗ್ರಸ್ಥಾನಕ್ಕೇರಿದೆ. ಇದಕ್ಕೂ ಮುನ್ನ ಅಫ್ಘಾನಿಸ್ತಾನ್ ತಂಡವು ಉಗಾಂಡ ವಿರುದ್ಧ 125 ರನ್​ಗಳ ಭರ್ಜರಿ ಜಯ ಸಾಧಿಸಿತ್ತು. ಇದೀಗ ಕಿವೀಸ್ ಪಡೆಗೂ ಸೋಲುಣಿಸುವಲ್ಲಿ ಯಶಸ್ವಿಯಾಗಿದೆ.

NZ vs AFG: ನ್ಯೂಝಿಲೆಂಡ್ ತಂಡವನ್ನು ಮಕಾಡೆ ಮಲಗಿಸಿದ ಅಫ್ಘಾನ್ ಪಡೆ
Afghanistan
Follow us
ಝಾಹಿರ್ ಯೂಸುಫ್
|

Updated on:Jun 08, 2024 | 8:25 AM

T20 World Cup 2024: ಟಿ20 ವಿಶ್ವಕಪ್​ನ 14ನೇ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡ ಅಮೋಘ ಜಯ ಸಾಧಿಸಿದೆ. ಗಯಾನಾದ ಪ್ರಾವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಅಫ್ಘಾನಿಸ್ತಾನ್ ಉತ್ತಮ ಆರಂಭ ಪಡೆದುಕೊಂಡಿತು.

ಆರಂಭಿಕರಾದ ರಹಮಾನುಲ್ಲಾ ಗುರ್ಬಾಝ್ ಮತ್ತು ಇಬ್ರಾಹಿಂ ಝದ್ರನ್ ಮೊದಲ ವಿಕೆಟ್​ಗೆ 103 ರನ್​ಗಳ ಭರ್ಜರಿ ಜೊತೆಯಾಟವಾಡಿದರು. ಈ ಹಂತದಲ್ಲಿ ಮ್ಯಾಟ್ ಹೆನ್ರಿ ಎಸೆದ ಎಸೆತವನ್ನು ಗುರುತಿಸುವಲ್ಲಿ ಎಡವಿ ಇಬ್ರಾಹಿಂ ಝದ್ರಾನ್ (44) ಕ್ಲೀನ್ ಬೌಲ್ಡ್ ಆದರು. ಆ ಬಳಿಕ ಬಂದ ಅಝ್ಮತುಲ್ಲಾ 27 ರನ್​ಗಳಿಸಿ ವಿಕೆಟ್ ಒಪ್ಪಿಸಿದರು.

ಇದಾಗ್ಯೂ ಮತ್ತೊಂದೆಡೆ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ರಹಮಾನುಲ್ಲ ಗುರ್ಬಾಝ್ 56 ಎಸೆತಗಳಲ್ಲಿ 5 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 80 ರನ್ ಸಿಡಿಸಿದರು. ಈ ಮೂಲಕ ಅಫ್ಘಾನಿಸ್ತಾನ್ ತಂಡವು ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು.

160 ರನ್​ಗಳ ಗುರಿ ಪಡೆದ ನ್ಯೂಝಿಲೆಂಡ್ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಎಡಗೈ ವೇಗಿ ಫಝಲ್ಹಕ್ ಫಾರೂಖಿ ಯಶಸ್ವಿಯಾದರು. ಮೊದಲ ಓವರ್​ನ ಮೊದಲ ಎಸೆತದಲ್ಲೇ ಫಿನ್ ಅಲೆನ್ (0) ರನ್ನು ಕ್ಲೀನ್ ಬೌಲ್ಡ್ ಮಾಡಿದ ಫಾರೂಖಿ 3ನೇ ಓವರ್​ನಲ್ಲಿ ಡೆವೊನ್ ಕಾನ್ವೆ (8) ವಿಕೆಟ್ ಪಡೆದರು.

5ನೇ ಓವರ್​ನಲ್ಲಿ ಡೆರಿಲ್ ಮಿಚೆಲ್ (5) ಗೆ ಪೆವಿಲಿಯನ್ ಹಾದಿ ತೋರಿಸುವಲ್ಲಿ ಫಾರೂಖಿ ಯಶಸ್ವಿಯಾದರು. ಕೇವಲ 28 ರನ್​ಗಳಿಗೆ ಅಗ್ರ ಕ್ರಮಾಂಕದ 3 ವಿಕೆಟ್​ಗಳನ್ನು ಕಳೆದುಕೊಂಡು ನ್ಯೂಝಿಲೆಂಡ್ ತಂಡವು ಸಂಕಷ್ಟಕ್ಕೆ ಸಿಲುಕಿತು.

ಈ ಸಂಕಷ್ಟದಿಂದ ಪಾರಾಗುವ ಮುನ್ನವೇ ರಶೀದ್ ಖಾನ್ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು. 7ನೇ ಓವರ್​ನ ಮೊದಲ ಎಸೆತದಲ್ಲಿ ಕೇನ್ ವಿಲಿಯಮ್ಸನ್ (9) ವಿಕೆಟ್ ಪಡೆಯುವಲ್ಲಿ ರಶೀದ್ ಖಾನ್ ಯಶಸ್ವಿಯಾದರು. ಇದರ ಬೆನ್ನಲ್ಲೇ ಮಾರ್ಕ್​ ಚಾಪ್​ಮನ್ (4) ಕೂಡ ಬೌಲ್ಡ್ ಆದರು.

ಆ ಬಳಿಕ ಬಂದ ಮೈಕೆಲ್ ಬ್ರೇಸ್​ವೆಲ್ ರಶೀದ್ ಖಾನ್ ಎಸೆತದಲ್ಲಿ ಎಲ್​ಬಿಡಬ್ಲ್ಯೂ ಆಗಿ ನಿರ್ಗಮಿಸಿದರು. ಮತ್ತೊಂದೆಡೆ ಮೊಹಮ್ಮದ್ ನಬಿ, ಗ್ಲೆನ್ ಫಿಲಿಪ್ಸ್ (18) ಹಾಗೂ ಮಿಚೆಲ್ ಸ್ಯಾಂಟ್ನರ್ ವಿಕೆಟ್ ಕಬಳಿಸಿದರು. ಪರಿಣಾಮ 59 ರನ್​ಗಳಿಗೆ ನ್ಯೂಝಿಲೆಂಡ್ ತಂಡವು 8 ವಿಕೆಟ್ ಕಳೆದುಕೊಂಡಿತು.

ಇದನ್ನೂ ಓದಿ: Babar Azam: ಬಾಬರ್ ಅಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಉಡೀಸ್

ಅಂತಿಮವಾಗಿ ನ್ಯೂಝಿಲೆಂಡ್ ತಂಡವು 15.2 ಓವರ್​ಗಳಲ್ಲಿ 75 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಅಫ್ಘಾನಿಸ್ತಾನ್ ತಂಡವು 84 ರನ್​ಗಳ ಅಮೋಘ ಗೆಲುವು ದಾಖಲಿಸಿದೆ. ಅಫ್ಘಾನಿಸ್ತಾನ್ ಪರ 4 ಓವರ್​ಗಳಲ್ಲಿ ಕೇವಲ 17 ರನ್ ನೀಡಿದ ರಶೀದ್ ಖಾನ್ 4 ವಿಕೆಟ್ ಕಬಳಿಸಿ ಮಿಂಚಿದರೆ, ಎಡಗೈ ವೇಗಿ ಫಝಲ್ಹಕ್ ಫಾರೂಖಿ 3.2 ಓವರ್​ಗಳಲ್ಲಿ 17 ರನ್ ನೀಡಿ 4 ವಿಕೆಟ್ ಕಬಳಿಸಿದರು. ಹಾಗೆಯೇ ಮೊಹಮ್ಮದ್ ನಬಿ 2 ವಿಕೆಟ್ ಪಡೆದರು. ಈ ಗೆಲುವಿನೊಂದಿಗೆ ಅಫ್ಘಾನಿಸ್ತಾನ್ ತಂಡವು ಗ್ರೂಪ್-ಸಿ ಅಂಕ ಪಟ್ಟಿಯಲ್ಲಿ 4 ಪಾಯಿಂಟ್ಸ್​ಗಳೊಂದಿಗೆ ಅಗ್ರಸ್ಥಾನ ಅಲಂಕರಿಸಿದೆ.

Published On - 8:16 am, Sat, 8 June 24

ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಗೆಳೆಯನನ್ನು ಕಚ್ಚಿ ಹಿಡಿದ ಸಿಂಹಕ್ಕೆ ಮನಬಂದಂತೆ ಥಳಿಸಿದ ವ್ಯಕ್ತಿ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಸೋಮನಹಳ್ಳಿಯ ಚಿತಾಗಾರದಿಂದ ಭಾರವಾದ ಹೆಜ್ಜೆಹಾಕುತ್ತ ವಾಪಸ್ಸಾದರು ಪ್ರೇಮ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಒಕ್ಕಲಿಗ ಸಂಪ್ರದಾಯದಂತೆ ನಡೆದ ಅಂತಿಮ ಸಂಸ್ಕಾರದಲ್ಲಿ ಅನೇಕ ಗಣ್ಯರು ಭಾಗಿ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಉಗ್ರಂ ಮಂಜು ನಿಜವಾದ ಮುಖ ಬಯಲು ಮಾಡಿದ ಗೌತಮಿ; ಬದಲಾಯ್ತು ಆಟ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ಮಗಳು ಮತ್ತು ಮೊಮ್ಮಗನೊಂದಿಗೆ ಆಗಮಿಸಿ ತಿರಂಗ ಸ್ವೀಕರಿಸಿದ ಪ್ರೇಮ ಕೃಷ್ಣ
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ವಿಡಿಯೋ: ರಾಜಕೀಯ ಗುರುವಿಗೆ ಹೆಗಲು ಕೊಟ್ಟು ವಿದಾಯ ಹೇಳಿದ ಡಿಕೆ ಬ್ರದರ್ಸ್
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಾಜ್ಯ ಮತ್ತು ರಾಷ್ಟ್ರದ ಹಲವಾರು ನಾಯಕರು ಕೃಷ್ಣರ ಅಂತ್ಯಕ್ರಿಯೆಯಲ್ಲಿ ಭಾಗಿ
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ರಜತ್ ವಿರುದ್ಧ ಮುಗಿಬಿದ್ದ ಮಂಜು, ತ್ರಿವಿಕ್ರಮ್
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ
ಅಂತ್ಯಕ್ರಿಯೆ ಉಸ್ತುವಾರಿ ವಹಿಸಿಕೊಂಡ ಡಿಕೆ ಶಿವಕುಮಾರ್​ರಿಂದ ಚುರುಕು ಓಡಾಟ