T20 World Cup 2024: ಆರಂಭಿಕನಾಗಿ ಸಂಜು ಫೇಲ್, ಜೈಸ್ವಾಲ್ ಸ್ಥಾನಕ್ಕೂ ಕುತ್ತು! ಕೊಹ್ಲಿ ಓಪನರ್?

T20 World Cup 2024: ಅಭ್ಯಾಸ ಪಂದ್ಯದಲ್ಲಿ ಕೇವಲ 6 ಎಸೆತಗಳನ್ನು ಎದುರಿಸಿದ ಸಂಜು ಸ್ಯಾಮ್ಸನ್ ಕೇವಲ 1 ರನ್​ಗೆ ಸುಸ್ತಾದರು. ಎರಡನೇ ಓವರ್‌ನ ಐದನೇ ಎಸೆತದಲ್ಲಿ ಶೋರಿಫುಲ್ ಇಸ್ಲಾಂ, ಸಂಜುರನ್ನು ಎಲ್‌ಬಿಡಬ್ಲ್ಯೂ ಔಟ್ ಮಾಡುವ ಮೂಲಕ ಪೆವಿಲಿಯನ್ ಹಾದಿ ತೋರಿಸಿದರು.

T20 World Cup 2024: ಆರಂಭಿಕನಾಗಿ ಸಂಜು ಫೇಲ್, ಜೈಸ್ವಾಲ್ ಸ್ಥಾನಕ್ಕೂ ಕುತ್ತು! ಕೊಹ್ಲಿ ಓಪನರ್?
ಸಂಜು ಸ್ಯಾಮ್ಸನ್
Follow us
ಪೃಥ್ವಿಶಂಕರ
|

Updated on:Jun 01, 2024 | 11:40 PM

ಟಿ20 ವಿಶ್ವಕಪ್‌ಗೆ (T20 World Cup 2024) ತಯಾರಿ ನಡೆಸಲು ಎಲ್ಲಾ ತಂಡಗಳು ಅಭ್ಯಾಸ ಪಂದ್ಯಗಳನ್ನು ಆಡುತ್ತಿವೆ . ಟೀಂ ಇಂಡಿಯಾ ತನ್ನ ಸಿದ್ಧತೆಗಾಗಿ ಕೇವಲ ಒಂದು ಅಭ್ಯಾಸ ಪಂದ್ಯವನ್ನು ಇಂದು ಬಾಂಗ್ಲಾದೇಶ (India vs Bangladesh) ವಿರುದ್ಧ ಆಡುತ್ತಿದೆ. ಅಭ್ಯಾಸ ಪಂದ್ಯಗಳು ತಂಡಗಳ ಸಿದ್ಧತೆಯನ್ನು ಬಹಿರಂಗಪಡಿಸುತ್ತವೆ. ಶನಿವಾರ ನ್ಯೂಯಾರ್ಕ್‌ನಲ್ಲಿ ನಡೆದ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ (Team India) ಹೇಗೆ ವಿಶ್ವಕಪ್​ಗೆ ಸಿದ್ಧಗೊಂಡಿದೆ ಎಂಬುದು ಜಗಜ್ಜಾಹೀರಾಗಿದೆ. ಅದರಲ್ಲೂ ತಂಡದ ಆರಂಭಿಕ ಜೋಡಿ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ. ಐಪಿಎಲ್​ನಲ್ಲಿ 500 ಕ್ಕೂ ಅಧಿಕ ರನ್ ಕಲೆಹಾಕಿದ್ದ ಸಂಜು ಸ್ಯಾಮ್ಸನ್ (Sanju Samson) ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಜೊತೆ ಓಪನಿಂಗ್ ಮಾಡಿದರು. ಆದರೆ, ರನ್ ಕಲೆಹಾಕಲು ತಿಣುಕಾಡಿ 1 ರನ್​ಗೆ ಪೆವಿಲಿಯನ್ ಸೇರಿಕೊಂಡರು.

6 ಎಸೆತಗಳಲ್ಲಿ 1 ರನ್

ಅಭ್ಯಾಸ ಪಂದ್ಯದಲ್ಲಿ ಕೇವಲ 6 ಎಸೆತಗಳನ್ನು ಎದುರಿಸಿದ ಸಂಜು ಸ್ಯಾಮ್ಸನ್ ಕೇವಲ 1 ರನ್​ಗೆ ಸುಸ್ತಾದರು. ಎರಡನೇ ಓವರ್‌ನ ಐದನೇ ಎಸೆತದಲ್ಲಿ ಶೋರಿಫುಲ್ ಇಸ್ಲಾಂ, ಸಂಜುರನ್ನು ಎಲ್‌ಬಿಡಬ್ಲ್ಯೂ ಔಟ್ ಮಾಡುವ ಮೂಲಕ ಪೆವಿಲಿಯನ್ ಹಾದಿ ತೋರಿಸಿದರು. ಸಂಜು ಅವರು ಹಾರ್ಡ್ ಲೆಂಗ್ತ್ ಬಾಲ್ ಅನ್ನು ಫ್ಲಿಕ್ ಮಾಡಲು ಪ್ರಯತ್ನಿಸುವ ಯತ್ನದಲ್ಲಿ ವಿಕೆಟ್ ಕಳೆದುಕೊಂಡರು. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ, ನಾಯಕ ರೋಹಿತ್ ಶರ್ಮಾ ಸಂಜು ಜೊತೆ ಓಪನಿಂಗ್ ಮಾಡುವ ಮೂಲಕ ಪ್ರಯೋಗಕ್ಕೆ ಮುಂದಾಗಿದ್ದರು. ಆದರೆ ಈ ಪ್ರಯೋಗ ಸಂಪೂರ್ಣವಾಗಿ ವಿಫಲವಾಯಿತು.

T20 World Cup 2024: ಪಾಂಡ್ಯ ಪಂಚ್​​ಗೆ ನೆತ್ತರು ಚೆಲ್ಲಿದ ಬಾಂಗ್ಲಾ ಬೌಲರ್! ವಿಡಿಯೋ ನೋಡಿ

ಐಪಿಎಲ್​ನಲ್ಲಿ ಮಿಂಚಿದ್ದ ಸಂಜು

ವಾಸ್ತವವಾಗಿ ಈ ಪಂದ್ಯದಲ್ಲಿ ಸಂಜುರನ್ನು ಆರಂಭಿಕನಾಗಿ ಕಣಕ್ಕಿಳಿಸಲು ಕಾರಣವೂ ಇತ್ತು. ಏಕೆಂದರೆ ಐಪಿಎಲ್‌ನಲ್ಲಿ ಸಂಜು ಅದ್ಭುತ ಫಾರ್ಮ್​ನಲ್ಲಿದ್ದರು. ಆಡಿದ 15 ಪಂದ್ಯಗಳಲ್ಲಿ 150ಕ್ಕಿಂತ ಸ್ಟ್ರೈಕ್ ರೇಟ್ ಹಾಗೂ 48.27 ಸರಾಸರಿಯಲ್ಲಿ 531 ರನ್ ಕಲೆಹಾಕಿದ್ದರು. ಹೀಗಾಗಿ ಉತ್ತಮ ಫಾರ್ಮ್​ನಲ್ಲಿರುವ ಸಂಜುಗೆ ಪ್ಲೇಯಿಂಗ್ 11 ನಲ್ಲಿ ಅವಕಾಶ ನೀಡುವ ಸಲುವಾಗಿ ಅಭ್ಯಾಸ ಪಂದ್ಯದಲ್ಲಿ ಅವರನ್ನು ಆರಂಭಿಕನಾಗಿ ಕಣಕ್ಕಿಳಿಸಿತ್ತು. ಆದರೆ ಸಂಜು ಆಡಳಿತ ಮಂಡಳಿಯ ನಂಬಿಕೆ ಉಳಿಸಿಕೊಳ್ಳುವಲ್ಲಿ ವಿಫಲರಾದರು.

ಜೈಸ್ವಾಲ್ ಸ್ಥಾನಕ್ಕೂ ಕುತ್ತು

ಈ ಬಾರಿಯ ಟಿ20 ವಿಶ್ವಕಪ್​ಗೆ ಆಯ್ಕೆಯಾಗಿರುವ ತಂಡದಲ್ಲಿ ಆರಂಭಿಕ ಸ್ಥಾನಕ್ಕೆ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್​ರನ್ನು ಆಯ್ಕೆ ಮಾಡಲಾಗಿತ್ತು. ಆದರೆ ಇಂದು ನಡೆದ ಅಭ್ಯಾಸ ಪಂದ್ಯದಲ್ಲಿ ಅವರನ್ನು ಆರಂಭಿಕನಾಗಿ ಇರಲಿ, ತಂಡದಲ್ಲೂ ಆಡಿಸುವ ಯೋಚನೆಗೆ ನಾಯಕ ರೋಹಿತ್ ಹೊಗಲಿಲ್ಲ. ಇದರರ್ಥ ಅವರು ಇಡೀ ಟೂರ್ನಿಯಲ್ಲಿ ಬೆಂಚ್ ಕಾಯುವ ಸಾಧ್ಯತಗಳು ಹೆಚ್ಚಾಗಿವೆ. ಜೈಸ್ವಾಲ್​ರನ್ನು ಇಂದಿನ ಪಂದ್ಯದಲ್ಲಿ ಆಡಿಸದಿರುವುದರಿಂದ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ವಿರಾಟ್ ಕೊಹ್ಲಿ ಆರಂಭಿಕರಾಗಿ ಕಣಕ್ಕಿಳಿಯುವುದು ಖಚಿತ ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:35 pm, Sat, 1 June 24

ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?