USA vs SA: ದಕ್ಷಿಣ ಆಫ್ರಿಕಾ ವಿರುದ್ಧ ಅಮೆರಿಕಕ್ಕೆ ವಿರೋಚಿತ ಸೋಲು..!

T20 World Cup 2024: ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿರುವ 2024ರ ಟಿ20 ವಿಶ್ವಕಪ್‌ನಲ್ಲಿ ಸೂಪರ್-8 ಸುತ್ತು ಆರಂಭವಾಗಿದೆ. ಈ ಸುತ್ತಿನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು ಎದುರಿಸಿದ್ದ ದಕ್ಷಿಣ ಆಫ್ರಿಕಾ ತಂಡ 18 ರನ್‌ಗಳ ಜಯ ಸಾಧಿಸಿದೆ. ತೀವ್ರ ಕುತೂಹಲ ಮೂಡಿಸಿದ್ದ ಈ ಪಂದ್ಯದಲ್ಲಿ ಅಮೆರಿಕ ವಿರೋಚಿತ ಸೋಲು ಕಂಡಿತು.

USA vs SA: ದಕ್ಷಿಣ ಆಫ್ರಿಕಾ ವಿರುದ್ಧ ಅಮೆರಿಕಕ್ಕೆ ವಿರೋಚಿತ ಸೋಲು..!
ದಕ್ಷಿಣ ಆಫ್ರಿಕಾ ತಂಡ
Follow us
|

Updated on:Jun 19, 2024 | 11:46 PM

ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿರುವ 2024ರ ಟಿ20 ವಿಶ್ವಕಪ್‌ನಲ್ಲಿ (T20 World Cup 2024) ಸೂಪರ್-8 ಸುತ್ತು ಆರಂಭವಾಗಿದೆ. ಈ ಸುತ್ತಿನ ಮೊದಲ ಪಂದ್ಯದಲ್ಲಿ ಅಮೆರಿಕ ತಂಡವನ್ನು ಎದುರಿಸಿದ್ದ ದಕ್ಷಿಣ ಆಫ್ರಿಕಾ ತಂಡ (South Africa vs United States) 18 ರನ್‌ಗಳ ಜಯ ಸಾಧಿಸಿದೆ. ತೀವ್ರ ಕುತೂಹಲ ಮೂಡಿಸಿದ್ದ ಈ ಪಂದ್ಯದಲ್ಲಿ ಅಮೆರಿಕ ವಿರೋಚಿತ ಸೋಲು ಕಂಡಿತು. ಒಂದು ಹಂತದಲ್ಲಿ ಆಂಡ್ರೆಸ್ ಗೌಸ್ ಹಾಗೂ ಹರ್ಮೀತ್ ಸಿಂಗ್ (Andries Gous, Harmeet Singh) ಬ್ಯಾಟಿಂಗ್ ಮಾಡುತ್ತಿದ್ದಾಗ ಗೆಲುವು ಅಮೆರಿಕದತ್ತ ಸಾಗುವಂತಿತ್ತು.ಆದರೆ 19ನೇ ಓವರ್​ನಲ್ಲಿ ಇಡೀ ಪಂದ್ಯದ ಚಿತ್ರಣ ಬದಲಾಯಿತು. ರಬಾಡ (Kagiso Rabada) ಬೌಲ್ ಮಾಡಿದ ಈ ಓವರ್​ನಲ್ಲಿ ಹರ್ಮೀತ್ ಸಿಂಗ್ ವಿಕೆಟ್ ಒಪ್ಪಿಸುವ ಮೂಲಕ ಅಮೆರಿಕ ಗೆಲುವಿನ ಕನಸಿಗೆ ನೀರೇರಚಿದರು. ಕೊನೆಯವರೆಗೂ ಗೆಲುವಿಗಾಗಿ ಹೋರಾಡಿದ ಆಂಡ್ರೆಸ್ ಗೌಸ್ 57 ಎಸೆತಗಳಲ್ಲಿ ಅಜೇಯ 80 ರನ್ ಬಾರಿಸಿದರಾದರೂ ತಂಡವನ್ನು ಗೆಲುವಿನತ್ತ ಕೊಂಡೊಯ್ಯಲು ಸಾಧ್ಯವಾಗಲಿಲ್ಲ.

ಡಿ ಕಾಕ್- ಮಾರ್ಕ್ರಾಮ್ ಶತಕದ ಜೊತೆಯಾಟ

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 195 ರನ್​ಗಳ ಟಾರ್ಗೆಟ್ ನೀಡಿತು. ಆದರೆ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ಅಮೆರಿಕದ ವೇಗಿ ಸೌರಭ್ ನೇತ್ರವಾಲ್ಕರ್ ಮತ್ತೊಮ್ಮೆ ಅದ್ಭುತ ಪ್ರದರ್ಶನ ನೀಡಿ ಆಫ್ರಿಕನ್ ಆರಂಭಿಕ ಜೋಡಿಯನ್ನು ಮುರಿದರು. ರೀಜಾ ಹೆಂಡ್ರಿಕ್ಸ್ ಕೇವಲ 11 ರನ್ ಗಳಿಸಿ ಔಟಾದರು. ಆದರೆ, ಇದಾದ ಬಳಿಕ ವಿಕೆಟ್ ಕೀಪರ್ ಕ್ವಿಂಟನ್ ಡಿ ಕಾಕ್ ಹಾಗೂ ನಾಯಕ ಏಡನ್ ಮಾರ್ಕ್ರಾಮ್ ಶತಕದ ಜೊತೆಯಾಟ ನಡೆಸಿ ದಕ್ಷಿಣ ಆಫ್ರಿಕಾವನ್ನು ಬಲಿಷ್ಠ ಸ್ಥಿತಿಗೆ ತಂದರು. ಕ್ವಿಂಟನ್ ಡಿ ಕಾಕ್ ಅದ್ಭುತ ಇನ್ನಿಂಗ್ಸ್ ಆಡಿ 26 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ಅಂತಿಮವಾಗಿ ಡಿ ಕಾಕ್ 40 ಎಸೆತಗಳಲ್ಲಿ 74 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಅಮೆರಿಕದ ಸ್ಪಿನ್ನರ್ ಹರ್ಮೀತ್ ಸಿಂಗ್ ಮೊದಲು ಕ್ವಿಂಟನ್ ಡಿ ಕಾಕ್ ಮತ್ತು ನಂತರ ಡೇವಿಡ್ ಮಿಲ್ಲರ್ ಅವರನ್ನು ಔಟ್ ಮಾಡುವ ಮೂಲಕ ಆಫ್ರಿಕಾ ರನ್​ ವೇಗಕ್ಕೆ ಕಡಿವಾಣ ಹಾಕಿದರು. ಆದರೆ ಕೊನೆಯಲ್ಲಿ ಹೆನ್ರಿಚ್ ಕ್ಲಾಸೆನ್ ಔಟಾಗದೆ 36 ಮತ್ತು ಟ್ರಿಸ್ಟಾನ್ ಸ್ಟಬ್ಸ್ ಔಟಾಗದೆ 20 ರನ್ ಗಳಿಸಿ ತಂಡದ ಸ್ಕೋರನ್ನು 194ಕ್ಕೆ ಕೊಂಡೊಯ್ದರು.

ಆಂಡ್ರೆಸ್ ಗೌಸ್ ಹಾಗೂ ಹರ್ಮೀತ್ ಸಿಂಗ್ ಹೋರಾಟ

ಆ ಬಳಿಕ 195 ರನ್‌ಗಳ ಗುರಿ ಬೆನ್ನತ್ತಿದ ಅಮೆರಿಕ ಭರವಸೆಯ ಆರಂಭ ಪಡೆಯಿತು. ಸ್ಟೀವನ್ ಟೇಲರ್ ಮತ್ತು ಆಂಡ್ರೀಸ್ ಗಾಸ್ 33 ರನ್ ಆರಂಭಿಕ ಜೊತೆಯಾಟವನ್ನು ಹಂಚಿಕೊಂಡರು. ನಂತರ ಅಮೇರಿಕಾ ನಿಯಮಿತ ಅಂತರದಲ್ಲಿ 5 ವಿಕೆಟ್ ಕಳೆದುಕೊಂಡಿತು. ಸ್ಟೀವನ್ 24, ನಿತೀಶ್ ಕುಮಾರ್ 8, ಆರೋನ್ ಜೋನ್ಸ್ 0, ಕೋರಿ ಆಂಡರ್ಸನ್ 12 ಮತ್ತು ಶಯಾನ್ ಜಹಾಂಗೀರ್ 3 ರನ್ ಗಳಿಸಿ ಔಟಾದರು. ಈ ವೇಳೆಗೆ ತಂಡದ ಸ್ಕೋರ್ 5 ವಿಕೆಟ್‌ಗೆ 76 ಆಗಿತ್ತು. ಆದರೆ ನಂತರ ಆಂಡ್ರೆಸ್ ಗೌಸ್ ಮತ್ತು ಹರ್ಮೀತ್ ಸಿಂಗ್ ಆರನೇ ವಿಕೆಟ್‌ಗೆ 93 ರನ್‌ಗಳ ಜೊತೆಯಾಟವನ್ನು ಹಂಚಿಕೊಂಡರು. ಇವರಿಬ್ಬರೂ ಅಮೆರಿಕ ತಂಡವನ್ನು ಗೆಲುವಿನ ಸನಿಹಕ್ಕೆ ಕೊಂಡೊಯ್ದರು. ಆದರೆ ಹರ್ಮೀತ್ 38 ರನ್ ಗಳಿಸಿ ಔಟಾಗಿದ್ದರಿಂದ ಪಂದ್ಯದ ತಿರುವು ಸಿಕ್ಕಿತು. ಕಗಿಸೊ ರಬಾಡ ಕೊನೆಯ ಕ್ಷಣದಲ್ಲಿ ಬಿಗಿ ಬೌಲಿಂಗ್‌ನೊಂದಿಗೆ ಆಟ ಬದಲಾಯಿಸುವ ಪ್ರದರ್ಶನ ನೀಡಿದರು. ರಬಾಡ 4 ಓವರ್ ಗಳಲ್ಲಿ 18 ರನ್ ನೀಡಿ 3 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:37 pm, Wed, 19 June 24

ತಾಜಾ ಸುದ್ದಿ
Daily Devotional: ಮನೆ, ಆಸ್ತಿ ಖರೀದಿಸುವ ಮುನ್ನ ಈ ವಿಡಿಯೋ ನೋಡಿ
Daily Devotional: ಮನೆ, ಆಸ್ತಿ ಖರೀದಿಸುವ ಮುನ್ನ ಈ ವಿಡಿಯೋ ನೋಡಿ
ಕಳೆದುಕೊಂಡಿದ್ದರ ಕುರಿತು ಚಿಂತಿಸುತ್ತ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ
ಕಳೆದುಕೊಂಡಿದ್ದರ ಕುರಿತು ಚಿಂತಿಸುತ್ತ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹೈಕಮಾಂಡ್ ಹೇಳಿದ್ದನ್ನು ರಾಜ್ಯದ ನಾಯಕರಿಗೆ ಜ್ಞಾಪಿಸುತ್ತಿದ್ದೇನೆ: ರಾಜಣ್ಣ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಹಾಲಿನ ದರ ಏರಿಕೆ ಹಣ ರೈತರಿಗೆ ಹೋಗೋದು ಬಿಜೆಪಿ ನಾಯಕರಿಗೆ ಇಷ್ಟವಿಲ್ಲ:ಡಿಕೆಶಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಕೆಂಪೇಗೌಡ ಜಯಂತಿ; ನಮ್ಮ ಹೆಸರಿಲ್ಲದಿರುವುದು ದೊಡ್ಡ ವಿಷಯವಲ್ಲ: ಕುಮಾರಸ್ವಾಮಿ
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಮುಸ್ಲಿಂ ವೋಟು ವನ್-ಸೈಡೆಡ್ ಆಗಿ ಸಾಗರ್ ಸಿಕ್ಕಿದ್ದು ಅಂತ ಹೇಳಿದ್ದು: ಜಮೀರ್
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಉಡುಪಿ: ಬಿರುಸುಗೊಂಡ ಮುಂಗಾರು ಮಳೆ; ಕಾಪು, ಮಲ್ಪೆ ಕಡಲ ಕಿನಾರೆ ಪ್ರಕ್ಷುಬ್ಧ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ
ಸಂಸತ್ ಭವನದಲ್ಲಿ ಪರಸ್ಪರ ಕೈ ಕುಲುಕಿದ ಪ್ರಧಾನಿ ಮೋದಿ ಮತ್ತು ರಾಹುಲ್ ಗಾಂಧಿ