AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA vs AFG Semi Final: ಎರಡಂಕಿ ಮೊತ್ತಕ್ಕೆ ಅಫ್ಘಾನಿಸ್ತಾನ್ ಆಲೌಟ್

T20 World Cup 2024: ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಅತೀ ಕಡಿಮೆ ಮೊತ್ತಕ್ಕೆ ಆಲೌಟ್ ಆಗುವ ಮೂಲಕ ಅಫ್ಘಾನಿಸ್ತಾನ್ ತಂಡ ಅತ್ಯಂತ ಕೆಟ್ಟ ದಾಖಲೆ ಬರೆದಿದೆ. ಟ್ರಿನಿಡಾಡ್​ನಲ್ಲಿ ನಡೆದ ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಅಫ್ಘಾನ್ ಪಡೆ ಕೇವಲ 56 ರನ್​ಗಳಿಗೆ ಸರ್ವಪತನ ಕಂಡಿದೆ. ಈ ಮೂಲಕ ಟಿ20 ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ಅತೀ ಕಡಿಮೆ ರನ್ ಕಲೆಹಾಕಿದ ತಂಡ ಎನಿಸಿಕೊಂಡಿದೆ.

SA vs AFG Semi Final: ಎರಡಂಕಿ ಮೊತ್ತಕ್ಕೆ ಅಫ್ಘಾನಿಸ್ತಾನ್ ಆಲೌಟ್
AFG vs SA
ಝಾಹಿರ್ ಯೂಸುಫ್
|

Updated on:Jun 27, 2024 | 7:25 AM

Share

ಟ್ರಿನಿಡಾಡ್​ನ ಬ್ರಿಯಾನ್ ಲಾರಾ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್​ನ (T20 World Cup 2024) ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಅಫ್ಘಾನಿಸ್ತಾನ್ ತಂಡ ಅಲ್ಪ ಮೊತ್ತಕ್ಕೆ ಆಲೌಟ್ ಆಗಿದೆ. ಸೌತ್ ಆಫ್ರಿಕಾ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ರಶೀದ್ ಖಾನ್ ಬ್ಯಾಟಿಂಗ್ ಆಯ್ದುಕೊಂಡಿದ್ದರು. ಆದರೆ ನಾಯಕನ ಈ ನಿರ್ಧಾರ ತಪ್ಪು ಎಂಬುದನ್ನು ಸೌತ್ ಆಫ್ರಿಕಾ ಬೌಲರ್​ಗಳು ಪವರ್​ಪ್ಲೇನಲ್ಲೇ ನಿರೂಪಿಸಿದ್ದರು. ಮೊದಲ ಓವರ್​ನಲ್ಲೇ ರಹಮಾನುಲ್ಲಾ ಗುರ್ಬಾಝ್ (0) ವಿಕೆಟ್ ಕಬಳಿಸಿ ಮಾರ್ಕೊ ಯಾನ್ಸೆನ್ ಮೊದಲ ಯಶಸ್ಸು ತಂದುಕೊಟ್ಟರೆ, ಮೂರನೇ ಓವರ್​ನಲ್ಲಿ ಗುಲ್ಬದ್ದೀಣ್ ನೈಬ್ (9) ಔಟಾದರು. ಇದರ ಬೆನ್ನಲ್ಲೇ ಅಝ್ಮತುಲ್ಲಾ ಒವರ್​ಝಾಹಿ (10) ಕೂಡ ವಿಕೆಟ್ ಕೈಚೆಲ್ಲಿದರು.

ಇನ್ನು ಇಬ್ರಾಹಿಂ ಝದ್ರಾನ್ (2), ಮೊಹಮ್ಮದ್ ನಬಿ (0), ನಂಗೆಯಲಿಯಾ ಖರೋಟೆ (2) ಮತ್ತು ಕರೀಮ್ ಜನ್ನತ್ (8) ಬಂದ ವೇಗದಲ್ಲೇ ಹಿಂತಿರುಗಿದರು. ಪರಿಣಾಮ 50 ರನ್​ಗಳಿಸುವಷ್ಟರಲ್ಲಿ ಅಫ್ಘಾನಿಸ್ತಾನ್ ತಂಡ 7 ವಿಕೆಟ್ ಕಳೆದುಕೊಂಡಿತು.

ಆ ಬಳಿಕ ಬಂದ ರಶೀದ್ ಖಾನ್ 8 ರನ್​ಗಳಿಸಿ ಔಟಾದರೆ, ನೂರ್ ಅಹ್ಮದ್ ಸೊನ್ನೆ ಸುತ್ತಿದರು. ಅಂತಿಮವಾಗಿ ನವೀನ್ ಉಲ್ ಹಕ್ ಎಲ್​ಬಿಡಬ್ಲ್ಯೂ ಆಗುವ ಮೂಲಕ ಹೊರ ನಡೆದರು. ಇದರೊಂದಿಗೆ ಅಫ್ಘಾನಿಸ್ತಾನ್ ತಂಡ 11.5 ಓವರ್​ಗಳಲ್ಲಿ ಕೇವಲ 56 ರನ್​ಗಳಿಗೆ ಆಲೌಟ್ ಆಯಿತು.

ಸೌತ್ ಆಫ್ರಿಕಾ ಪರ ಕರಾರುವಾಕ್ ದಾಳಿ ಸಂಘಟಿಸಿದ ಮಾರ್ಕೊ ಯಾನ್ಸೆನ್ 3 ಓವರ್​ಗಳಲ್ಲಿ 16 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ತಬ್ರೇಝ್ ಶಂಸಿ 1.5 ಓವರ್​ನಲ್ಲಿ 6 ರನ್ ನೀಡಿ 3 ವಿಕೆಟ್ ಪಡೆದರು. ಇನ್ನು ಕಗಿಸೊ ರಬಾಡ ಹಾಗೂ ಅನ್ರಿಕ್ ನೋಕಿಯಾ ತಲಾ ಎರಡು ವಿಕೆಟ್ ಕಬಳಿಸಿ ಮಿಂಚಿದರು.

ಅತ್ಯಂತ ಕೆಟ್ಟ ದಾಖಲೆ ಬರೆದ ಅಫ್ಘಾನಿಸ್ತಾನ್:

ಈ ಪಂದ್ಯದಲ್ಲಿ ಕೇವಲ 56 ರನ್​ಗಳಿಗೆ ಆಲೌಟ್ ಆಗುವ ಮೂಲಕ ಟಿ20 ವಿಶ್ವಕಪ್ ಇತಿಹಾಸದಲ್ಲೇ ಸೆಮಿಫೈನಲ್ ಪಂದ್ಯದಲ್ಲಿ ಅತೀ ಕಡಿಮೆ ಮೊತ್ತಕ್ಕೆ ಆಲೌಟ್ ಆದ ತಂಡವೆಂಬ ಕೆಟ್ಟ ದಾಖಲೆಯೊಂದನ್ನು ಅಫ್ಘಾನಿಸ್ತಾನ್ ತನ್ನದಾಗಿಸಿಕೊಂಡಿದೆ.

ಹಾಗೆಯೇ ಇದು ಟಿ20 ಕ್ರಿಕೆಟ್​ನಲ್ಲಿ ಅಫ್ಘಾನಿಸ್ತಾನ್ ತಂಡ ಕಲೆಹಾಕಿದ ಅತೀ ಕಡಿಮೆ ಮೊತ್ತ ಎಂಬುದು ವಿಶೇಷ. ಇದಕ್ಕೂ ಮುನ್ನ 2014 ರಲ್ಲಿ ಬಾಂಗ್ಲಾದೇಶ್ ವಿರುದ್ಧ 71 ರನ್​ಗಳಿಗೆ ಆಲೌಟ್ ಆಗಿದ್ದು ಕೆಟ್ಟ ದಾಖಲೆಯಾಗಿತ್ತು. ಇದೀಗ ನಿರ್ಣಾಯಕ ಪಂದ್ಯದಲ್ಲಿ ಎರಡಂಕಿ ಮೊತ್ತಕ್ಕೆ ಆಲೌಟ್ ಆಗಿ ಭಾರೀ ಮುಖಭಂಗಕ್ಕೆ ಒಳಗಾಗಿದೆ.

ಇದನ್ನೂ ಓದಿ: IND vs ENG: ಇಂಗ್ಲೆಂಡ್ ತಂಡದ ಚಿಂತೆ ಹೆಚ್ಚಿಸಿದ 4 ಗಂಟೆ 16 ನಿಮಿಷಗಳು..!

ಇದಲ್ಲದೆ ಸೌತ್ ಆಫ್ರಿಕಾ ವಿರುದ್ಧ ಟಿ20 ಕ್ರಿಕೆಟ್​ನಲ್ಲಿ ಅತೀ ಕಡಿಮೆ ಮೊತ್ತ ಕಲೆಹಾಕಿದ ತಂಡವೆಂಬ ಅಪಖ್ಯಾತಿ ಕೂಡ ಅಫ್ಘಾನಿಸ್ತಾನ್ ತಂಡದ ಪಾಲಾಗಿದೆ. ಇದಕ್ಕೂ ಮುನ್ನ 2024ರಲ್ಲಿ ಶ್ರೀಲಂಕಾ ತಂಡವನ್ನು 77 ರನ್​ಗಳಿಗೆ ಆಲೌಟ್ ಮಾಡಿದ್ದು ಸೌತ್ ಆಫ್ರಿಕಾ ಬೌಲರ್​ಗಳ ಇದುವರೆಗಿನ ಸಾಧನೆಯಾಗಿತ್ತು. ಇದೀಗ ನಾಕೌಟ್ ಪಂದ್ಯದಲ್ಲಿ ಅಫ್ಘಾನ್ ಪಡೆಯನ್ನು ಕೇವಲ 56 ರನ್​ಗಳಿಗೆ ನಿಯಂತ್ರಿಸಿ ಹೊಸ ಇತಿಹಾಸ ಬರೆದಿದೆ.

Published On - 7:06 am, Thu, 27 June 24

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ