SL vs BAN: ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶ್​ಗೆ ರೋಚಕ ಜಯ

T20 World Cup 2024: ಶ್ರೀಲಂಕಾ ವಿರುದ್ಧದ ಈ ಪಂದ್ಯದಲ್ಲಿ ಬಾಂಗ್ಲಾದೇಶ್ ಪರ ಉತ್ತಮ ದಾಳಿ ಸಂಘಟಿಸಿದ ಮುಸ್ತಫಿಜುರ್ ರೆಹಮಾನ್ 4 ಓವರ್​ಗಳಲ್ಲಿ 17 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಉತ್ತಮ ಸಾಥ್ ನೀಡಿದ ರಿಶಾದ್ ಹೊಸೈನ್ 4 ಓವರ್​ಗಳಲ್ಲಿ 22 ರನ್ ನೀಡಿ 3 ವಿಕೆಟ್ ಪಡೆದರು. ಈ ಮೂಲಕ ಲಂಕಾ ತಂಡವನ್ನು 124 ರನ್​ಗಳಿಗೆ ನಿಯಂತ್ರಿಸುವಲ್ಲಿ ಪ್ರಮುಖ ಪಾತ್ರವಹಿಸಿದರು.

SL vs BAN: ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶ್​ಗೆ ರೋಚಕ ಜಯ
Bangladesh
Follow us
|

Updated on: Jun 08, 2024 | 10:34 AM

T20 World Cup 2024: ಡಲ್ಲಾಸ್​ನ ಗ್ರ್ಯಾಂಡ್ ಪ್ರೈರೀ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ 15ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಬಾಂಗ್ಲಾದೇಶ್ ತಂಡ ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ್ ತಂಡವು ಶ್ರೀಲಂಕಾ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಲಂಕಾ ತಂಡಕ್ಕೆ ಆರಂಭಿಕ ಆಟಗಾರ ಪಾತುಮ್ ನಿಸ್ಸಂಕಾ ಉತ್ತಮ ಆರಂಭ ಒದಗಿಸಿದ್ದರು. 28 ಎಸೆತಗಳನ್ನು ಎದುರಿಸಿದ ನಿಸ್ಸಂಕಾ 1 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 47 ರನ್ ಬಾರಿಸಿ ಔಟಾದರು.

ಆದರೆ ನಿಸ್ಸಂಕಾ ನಿರ್ಗಮನದ ಬಳಿಕ ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಧನಂಜಯ ಡಿಸಿಲ್ವಾ 21 ರನ್ ಬಾರಿಸಿದ್ದು ಬಿಟ್ಟರೆ ಉಳಿದ ಬ್ಯಾಟರ್​ಗಳು ರನ್​ಗಳಿಸಲು ಪರದಾಡಿದರು. ಪರಿಣಾಮ ಶ್ರೀಲಂಕಾ ತಂಡವು 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 124 ರನ್​ಗಳಿಸಲಷ್ಟೇ ಶಕ್ತವಾಯಿತು.

ಬಾಂಗ್ಲಾದೇಶ್ ಪರ ಉತ್ತಮ ದಾಳಿ ಸಂಘಟಿಸಿದ ಮುಸ್ತಫಿಜುರ್ ರೆಹಮಾನ್ 4 ಓವರ್​ಗಳಲ್ಲಿ 17 ರನ್ ನೀಡಿ 3 ವಿಕೆಟ್ ಕಬಳಿಸಿದರೆ, ಉತ್ತಮ ಸಾಥ್ ನೀಡಿದ ರಿಶಾದ್ ಹೊಸೈನ್ 4 ಓವರ್​ಗಳಲ್ಲಿ 22 ರನ್ ನೀಡಿ 3 ವಿಕೆಟ್ ಪಡೆದರು.

ಇನ್ನು 125 ರನ್​ಗಳ ಸುಲಭ ಗುರಿಯನ್ನು ಬೆನ್ನತ್ತಿದ ಬಾಂಗ್ಲಾದೇಶ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಕೇವಲ 6 ರನ್​ಗಳಿಸುವಷ್ಟರಲ್ಲಿ ಇಬ್ಬರು ಆರಂಭಿಕರನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಈ ಹಂತದಲ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಲಿಟ್ಟನ್ ದಾಸ್ 38 ಎಸೆತಗಳಲ್ಲಿ 36 ರನ್ ಬಾರಿಸಿ ತಂಡಕ್ಕೆ ಆಸರೆಯಾಗಿ ನಿಂತರು. ಮತ್ತೊಂದೆಡೆ ತೌಹಿದ್ ಹೃದೋಯ್ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದರು.

20 ಎಸೆತಗಳನ್ನು ಎದುರಿಸಿದ ಹೃದೋಯ್ 4 ಭರ್ಜರಿ ಸಿಕ್ಸ್ ಹಾಗೂ 1 ಫೋರ್​ನೊಂದಿಗೆ 40 ರನ್ ಕಲೆಹಾಕಿದರು. ಆದರೆ ಅಂತಿಮ ಓವರ್​ಗಳ ವೇಳೆ ಲಿಟ್ಟನ್ ದಾಸ್ ಹಾಗೂ ತೌಹಿದ್ ಹೃದೋಯ್ ವಿಕೆಟ್ ಕಬಳಿಸುವ ಮೂಲಕ ಶ್ರೀಲಂಕಾ ಬೌಲರ್​ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದರು.

ಪರಿಣಾಮ ಕೊನೆಯ 12 ಎಸೆತಗಳಲ್ಲಿ ಬಾಂಗ್ಲಾದೇಶ್ ತಂಡಕ್ಕೆ 11 ರನ್​ಗಳ ಅವಶ್ಯಕತೆಯಿತ್ತು. ಅತ್ತ ಶ್ರೀಲಂಕಾ ತಂಡಕ್ಕೆ 2 ವಿಕೆಟ್​ಗಳ ಅಗತ್ಯತೆಯಿತ್ತು. ಆದರೆ ದಸುನ್ ಶಾನಕ ಎಸೆದ 19ನೇ ಓವರ್​ನ ಮೊದಲ ಎಸೆತದಲ್ಲೇ ಸಿಕ್ಸ್ ಸಿಡಿಸುವ ಮೂಲಕ ಮಹಮ್ಮದುಲ್ಲಾ ತಂಡವನ್ನು ಗೆಲುವಿನತ್ತ ಮುನ್ನಡೆಸಿದರು.

ಅಲ್ಲದೆ ಇದೇ ಓವರ್​ನಲ್ಲಿ 11 ರನ್ ಬಾರಿಸುವ ಮೂಲಕ ಬಾಂಗ್ಲಾದೇಶ್ ತಂಡವು 19 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗುರಿ ಮುಟ್ಟಿತು. ಈ ಮೂಲಕ ಬಾಂಗ್ಲಾ ಪಡೆ 2 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಬಾಂಗ್ಲಾದೇಶ್ ತಂಡವು ಟಿ20 ವಿಶ್ವಕಪ್​ನಲ್ಲಿ ಶುಭಾರಂಭ ಮಾಡಿದೆ.

ಶ್ರೀಲಂಕಾ ಪ್ಲೇಯಿಂಗ್ 11: ಪಾತುಮ್ ನಿಸ್ಸಾಂಕಾ , ಕುಸಲ್ ಮೆಂಡಿಸ್ (ವಿಕೆಟ್ ಕೀಪರ್) , ಕಮಿಂದು ಮೆಂಡಿಸ್ , ಧನಂಜಯ ಡಿ ಸಿಲ್ವ , ಚರಿತ್ ಅಸಲಂಕ , ವನಿಂದು ಹಸರಂಗ (ನಾಯಕ) , ಏಂಜೆಲೊ ಮ್ಯಾಥ್ಯೂಸ್ , ದಾಸುನ್ ಶಾನಕ , ಮಹೀಶ್ ತೀಕ್ಷಣ , ನುವಾನ್ ತುಷಾರ , ಮತೀಶ ಪತಿರಾಣ.

ಇದನ್ನೂ ಓದಿ: Babar Azam: ಬಾಬರ್ ಅಬ್ಬರಕ್ಕೆ ಕಿಂಗ್ ಕೊಹ್ಲಿಯ ದಾಖಲೆ ಉಡೀಸ್

ಬಾಂಗ್ಲಾದೇಶ್ ಪ್ಲೇಯಿಂಗ್ 11: ತಂಝಿದ್ ಹಸನ್ , ಸೌಮ್ಯ ಸರ್ಕಾರ್ , ಲಿಟ್ಟನ್ ದಾಸ್ (ವಿಕೆಟ್ ಕೀಪರ್) , ನಜ್ಮುಲ್ ಹೊಸೈನ್ ಶಾಂಟೋ (ನಾಯಕ) , ತೌಹಿದ್ ಹೃದೋಯ್, ಶಾಕಿಬ್ ಅಲ್ ಹಸನ್ , ಮಹಮದುಲ್ಲಾ , ರಿಶಾದ್ ಹೊಸೈನ್ , ತಸ್ಕಿನ್ ಅಹ್ಮದ್ , ಮುಸ್ತಾಫಿಜುರ್ ರೆಹಮಾನ್ , ತನ್ಜಿಮ್ ಹಸನ್.

ತಾಜಾ ಸುದ್ದಿ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
Daily Devotional: ದೇವಸ್ಥಾನದ ಹಿಂಭಾಗ ನಮಸ್ಕಾರ ಮಾಡುವುದರ ಮಹತ್ವ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ಸ್ತ್ರೀಯರಿಗೆ ತವರು ಮನೆಯ ಕಡೆಯಿಂದ ಶುಭವಾದ ಸುದ್ದಿಯು ಬರಲಿದೆ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ದರ್ಶನ್​ ಕೇಸ್: ಮಾಧ್ಯಮದ ಪ್ರಶ್ನೆ ಕೇಳಿಸಿಕೊಳ್ಳದೇ ಕಾಲ್ಕಿತ್ತ ನಟ ಚಿಕ್ಕಣ್ಣ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ವೇದಿಕೆಯಲ್ಲೇ ಕಾರ್ಯಕರ್ತರ ಮೇಲೆ ಸಿಟ್ಟಿಗೆದ್ದ ಹೆಚ್​ಡಿ ಕುಮಾರಸ್ವಾಮಿ
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ಮಂಕಾಗಿ ಬಂದು ವ್ಯಾನ್​ ಹತ್ತಿದ ದರ್ಶನ್; ರೇಣುಕಾ ಸ್ವಾಮಿ ಕೊಲೆ ಕೇಸ್​ ಮಹಜರು
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ದರ್ಶನ್​ ಕಾರಣಕ್ಕೆ ಅರೆಸ್ಟ್​ ಆದ ಅನು ಮನೆ ಎಂಥಾ ದುಸ್ಥಿತಿಯಲ್ಲಿದೆ ನೋಡಿ..
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಪೋಕ್ಸೋ ಕೇಸ್​: ಸಿಐಡಿ ವಿಚಾರಣೆಗೆ ಹಾಜರಾದ ಬಿಎಸ್ ಯಡಿಯೂರಪ್ಪ
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಕಾಂಚನಜುಂಗಾ ಎಕ್ಸ್​ಪ್ರೆಸ್​ಗೆ ಗೂಡ್ಸ್​ ರೈಲು ಡಿಕ್ಕಿ, ಐದು ಸಾವು
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
ಮುಸ್ಲಿಂ ಟೋಪಿ ಧರಿಸಿ ಈದ್ಗ ಮೈದಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿದ್ದರಾಮಯ್ಯ
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?
‘ನಾನು ಇದರಲ್ಲಿ ಮುಗ್ಧ’; ಬ್ಯಾನ್ ವಿಚಾರದಲ್ಲಿ ಸುದೀಪ್ ಹೀಗೆ ಹೇಳಿದ್ಯಾಕೆ?