IND vs SA: ಭಾರತವನ್ನು ಚಾಂಪಿಯನ್ ಮಾಡಿದ ಸೂರ್ಯ ಹಿಡಿದ ಅದೊಂದು ಕ್ಯಾಚ್..! ವಿಡಿಯೋ ನೋಡಿ

T20 World Cup 2024, Suryakumar Yadav: ವಾಸ್ತವವಾಗಿ ದಕ್ಷಿಣ ಆಫ್ರಿಕಾ ಗೆಲುವಿಗೆ 6 ಎಸೆತಗಳಲ್ಲಿ 16 ರನ್‌ಗಳ ಅಗತ್ಯವಿದ್ದಾಗ, ಡೇವಿಡ್ ಮಿಲ್ಲರ್ ಮೊದಲ ಎಸೆತದಲ್ಲಿ ಬೃಹತ್ ಸಿಕ್ಸರ್ ಬಾರಿಸಲು ಯತ್ನಿಸಿದರು. ಆದರೆ ಬೌಂಡರಿಯಲ್ಲಿದ್ದ ಸೂರ್ಯಕುಮಾರ್ ಯಾದವ್ ಯಾವುದೇ ತಪ್ಪು ಮಾಡದೆ ಅಮೋಘ ಕ್ಯಾಚ್ ಪಡೆದರು. ಈ ಕ್ಯಾಚ್ ಹಿಡಿಯುವಲ್ಲಿ ಸೂರ್ಯಕುಮಾರ್ ಯಾದವ್ ಸಣ್ಣ ತಪ್ಪು ಮಾಡಿದ್ದರೆ ವಿಶ್ವಕಪ್ ಕನಸು ಭಗ್ನವಾಗುತ್ತಿತ್ತು.

IND vs SA: ಭಾರತವನ್ನು ಚಾಂಪಿಯನ್ ಮಾಡಿದ ಸೂರ್ಯ ಹಿಡಿದ ಅದೊಂದು ಕ್ಯಾಚ್..! ವಿಡಿಯೋ ನೋಡಿ
ಸೂರ್ಯಕುಮಾರ್ ಯಾದವ್
Follow us
ಪೃಥ್ವಿಶಂಕರ
|

Updated on:Jun 30, 2024 | 12:44 AM

ಕೊನೆಗೂ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದುಕೊಂಡಿದೆ. ಕಳೆದ ಒಂದು ತಿಂಗಳಿನಿಂದ ಪ್ರಶಸ್ತಿ ಬೆನ್ನು ಹತ್ತಿದ್ದ ಟೀಂ ಇಂಡಿಯಾ ಕೊನೆಗೂ ಟ್ರೋಫಿ ಮೇಲೆ ತನ್ನ ಹೆಸರನ್ನು ನಮೂದಿಸಿದೆ. ಈ ಮೂಲಕ ಟೀಂ ಇಂಡಿಯಾ 11 ವರ್ಷಗಳ ಐಸಿಸಿ ಟ್ರೋಫಿಯ ಬರವನ್ನು ನೀಗಿಸಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ಅದರಂತೆ ನಿಗದಿತ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿ ಗೆಲುವಿಗೆ 177 ರನ್​ಗಳ ಸವಾಲನ್ನು ನೀಡಿತು. ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ ಕೊನೆಯ 5 ಓವರ್​ಗಳವರೆಗೂ ಗೆಲುವಿನ ಫೇವರೇಟ್ ಎನಿಸಿಕೊಂಡಿತ್ತು. ಆದರೆ ಸ್ಫೋಟಕ ಬ್ಯಾಟಿಂಗ್ ನಡೆಸುತ್ತಿದ್ದ ಹೆನ್ರಿಚ್ ಕ್ಲಾಸೆನ್ ಅವರನ್ನು ಹಾರ್ದಿಕ್ ಪಾಂಡ್ಯ ಔಟ್ ಮಾಡುವ ಮೂಲಕ ಪಂದ್ಯಕ್ಕೆ ತಿರುವು ನೀಡಿದರು. ಇದಲ್ಲದೆ ಕೊನೆಯ ಓವರ್​ನ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಬಾರಿಸಿದ ಬಿಗ್ ಶಾಟ್ ಅನ್ನು ಕ್ಯಾಚ್ ಆಗಿ ಪರಿವರ್ತಿಸುವಲ್ಲಿ ಯಶಸ್ವಿಯಾದ ಸೂರ್ಯಕುಮಾರ್ ಯಾದವ್ ಪಂದ್ಯ ಭಾರತದ ಬತ್ತಳಿಕೆಗೆ ಬೀಳುವಂತೆ ಮಾಡಿದರು.

ಅದ್ಭುತ ಕ್ಯಾಚ್ ಹಿಡಿದ ಸೂರ್ಯ

ವಾಸ್ತವವಾಗಿ ದಕ್ಷಿಣ ಆಫ್ರಿಕಾ ಗೆಲುವಿಗೆ 6 ಎಸೆತಗಳಲ್ಲಿ 16 ರನ್‌ಗಳ ಅಗತ್ಯವಿದ್ದಾಗ, ಡೇವಿಡ್ ಮಿಲ್ಲರ್ ಮೊದಲ ಎಸೆತದಲ್ಲಿ ಬೃಹತ್ ಸಿಕ್ಸರ್ ಬಾರಿಸಲು ಯತ್ನಿಸಿದರು. ಆದರೆ ಬೌಂಡರಿಯಲ್ಲಿದ್ದ ಸೂರ್ಯಕುಮಾರ್ ಯಾದವ್ ಯಾವುದೇ ತಪ್ಪು ಮಾಡದೆ ಅಮೋಘ ಕ್ಯಾಚ್ ಪಡೆದರು. ಈ ಕ್ಯಾಚ್ ಹಿಡಿಯುವಲ್ಲಿ ಸೂರ್ಯಕುಮಾರ್ ಯಾದವ್ ಸಣ್ಣ ತಪ್ಪು ಮಾಡಿದ್ದರೆ ವಿಶ್ವಕಪ್ ಕನಸು ಭಗ್ನವಾಗುತ್ತಿತ್ತು. ಮೊದಲ ಎಸೆತದಲ್ಲಿಯೇ ಹಾರ್ದಿಕ್ ಪಾಂಡ್ಯ ವೈಡ್ ಫುಲ್ ಟಾಸ್ ಬೌಲ್ಡ್ ಮಾಡಿದರು. ಅದನ್ನು ಡೇವಿಡ್ ಮಿಲ್ಲರ್ ಸಿಕ್ಸರ್ ಬಾರಿಸಲು ಯತ್ನಿಸಿದರು. ಮಿಲ್ಲರ್ ಬ್ಯಾಟಿಗೆ ತಾಕಿದ ಚೆಂಡು ಗಗನದೆತ್ತರಕ್ಕೆ ಹಾರಿತು. ಹಾಗಾಗಿ ಇದು ಸಿಕ್ಸರ್ ಆಗಲಿದೆ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಸೂರ್ಯ ಬೌಂಡರಿ ಒಳಗೆ ಆ ಚೆಂಡನ್ನು ಕ್ಯಾಚ್ ಮಾಡಿದ ಸೂರ್ಯ, ತಾನು ಬೌಂಡರಿ ದಾಟುವ ಮುನ್ನವೇ ಚೆಂಡನ್ನು ಒಳಗೆ ಎಸೆದು ಮತ್ತೆ ಕ್ಯಾಚ್ ಪಡೆದರು. ಈ ಕ್ಯಾಚ್‌ನಿಂದಾಗಿ ಇಡೀ ಪಂದ್ಯ ಭಾರತದ ಪರ ವಾಲಿತು.

ಭಾರತಕ್ಕೆ 7 ರನ್ ಜಯ

ಡೇವಿಡ್ ಮಿಲ್ಲರ್ ಔಟಾದ ನಂತರ ದಕ್ಷಿಣ ಆಫ್ರಿಕಾ ತಂಡದ ಸೋಲು ಖಚಿತವಾಯಿತು. ಈ ವಿಕೆಟ್ ಬಳಿಕ ಆಫ್ರಿಕಾ ತಂಡದ ಯಾವುದೇ ಬ್ಯಾಟ್ಸ್ಮನ್ 5 ಎಸೆತಗಳಲ್ಲಿ 16 ರನ್ ಗಳಿಸಲು ಸಾಧ್ಯವಾಗಲಿಲ್ಲ.ಹೀಗಾಗಿ ಕೊನೆಗೂ ದಕ್ಷಿಣ ಆಫ್ರಿಕಾ ತಮ್ಮ ಚೋಕರ್ಸ್​ ಹಣೆಪಟ್ಟವನ್ನು ತನ್ನಲ್ಲೇ ಉಳಿಸಿಕೊಂಡಿತು. ಕೊನೆಯಲ್ಲಿ ರಬಾಡ ಮೊದಲ ಎಸೆತದಲ್ಲೇ ಬೌಂಡರಿ ಬಾರಿಸುವ ಮೂಲಕ ಮತ್ತೆ ಪಂದ್ಯವನ್ನು ರೋಚಕಗೊಳಿಸಿದರು. ಆದರೂ ತಮ್ಮ ಕರಾರುವಕ್ಕಾದ ದಾಳಿಯನ್ನು ಮುಂದುವರೆಸಿದ ಪಾಂಡ್ಯ ಪಂದ್ಯವನ್ನು 7 ರನ್‌ಗಳಿಂದ ಗೆಲ್ಲಿಸಿಕೊಡುವಲ್ಲಿ ಯಶಸ್ವಿಯಾದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:22 am, Sun, 30 June 24

ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕರ್ನಾಟಕದ ಬಳಿಕ ಅಹಮದಾಬಾದ್​ ಶಾಲೆಯಲ್ಲೂ 3ನೇ ಕ್ಲಾಸ್​ ಬಾಲಕಿಗೆ ಹೃದಯಾಘಾತ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಕನ್ನೌಜ್​ನಲ್ಲಿ ರೈಲ್ವೆ ನಿಲ್ದಾಣದ ಕಟ್ಟಡ ಕುಸಿದು 20 ಜನರಿಗೆ ಗಾಯ
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ಸಿಎಂ ಯಾರೇ ಆದರೂ ಅನುದಾನಕ್ಕಾಗಿ ಹೋರಾಟ ನಿಲ್ಲಲ್ಲ: ಸುನೀಲ ಕುಮಾರ್
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ರಜತ್​ಗೆ ಕಿಚ್ಚನ ಮಾತಿನ ಗುದ್ದು, ಕಣ್ಣೀರು ಹಾಕಿದ ಭವ್ಯಾ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಶಾಲಾ ಬ್ಯಾಂಡ್​ನೊಂದಿಗೆ ಮಕ್ಕಳಿಂದಲೂ ರವಿಚಂದ್ರ ತಳವಾರಗೆ ಶ್ರದ್ಧಾಂಜಲಿ
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಕಲಬುರಗಿ: ರಾಷ್ಟ್ರ ಧ್ವಜ ಸ್ತಂಭದಲ್ಲಿ ಮುಸ್ಲಿಂ ಧ್ವಜಾರೋಹಣ, ಅಪಮಾನ ಆರೋಪ‌
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ಬಂತು ಶನಿವಾರ, ಕಳ್ಳಾಟ ಆಡಿದ ರಜತ್, ಭವ್ಯಾಗೆ ಕಾದಿದೆ ಗಂಡಾಂತರ?
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಣ್ಣ ಹೇಳೋದನ್ನು ಯಾರಾದರೂ ನಂಬುತ್ತಾರೆಯೇ? ಜಗದೀಶ್ ಶೆಟ್ಟರ್
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಜಕಾರಣದಲ್ಲಿ ಯಾರೂ ಶತ್ರುಗಳಲ್ಲ, ಪ್ರತಿಸ್ಪರ್ಧಿಗಳು ಅಷ್ಟೇ: ಜೋಶಿ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ
ರಾಮ ಮಂದಿರದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ; ರಾಮಲಲ್ಲಾಗೆ ಮಹಾ ಅಭಿಷೇಕ