ಪ್ರಧಾನಿ ಮೋದಿಯೊಂದಿಗೆ ವಿಶ್ವಕಪ್ ಪ್ರಯಾಣವನ್ನು ಮೆಲುಕು ಹಾಕಿದ ಟೀಂ ಇಂಡಿಯಾ; ವಿಡಿಯೋ ನೋಡಿ
Team India: ಜುಲೈ 04 ರಂದು ವಿಶ್ವಕಪ್ನೊಂದಿಗೆ ಭಾರತಕ್ಕೆ ಬಂದಿಳಿದಿದ್ದ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಗಿತ್ತು. ಇದಾದ ಬಳಿಕ ಟೀಂ ಇಂಡಿಯಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ಇದೀಗ ಪ್ರಧಾನಿ ಮೋದಿ ಹಾಗೂ ಟೀಂ ಇಂಡಿಯಾ ಆಟಗಾರರ ನಡುವೆ ನಡೆದಿದ್ದ ಸಂಭಾಷಣೆಯ ವಿಡಿಯೋವನ್ನು ಪ್ರಧಾನಿ ಮೋದಿ ಅವರ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.
ರೋಹಿತ್ ಶರ್ಮಾ ನಾಯಕತ್ವದಲ್ಲಿ 17 ವರ್ಷಗಳ ನಂತರ ಟಿ20 ವಿಶ್ವಕಪ್ ಪ್ರಶಸ್ತಿ ಗೆದ್ದುಕೊಂಡಿದ್ದ ಟೀಂ ಇಂಡಿಯಾ, ಈ ಗೆಲುವಿನೊಂದಿಗೆ ಕೋಟ್ಯಂತರ ಭಾರತೀಯ ಅಭಿಮಾನಿಗಳ ವಿಶ್ವಕಪ್ ಗೆಲ್ಲುವ ಕನಸನ್ನು ನನಸು ಮಾಡಿತ್ತು. ಟೀಂ ಇಂಡಿಯಾದ ಈ ಸಾಧನೆಗೆ ಇಡೀ ಭಾರತವೇ ಸಂಭ್ರಮದಲ್ಲಿ ಮಿಂದೆದಿತ್ತು. ಆ ನಂತರ ಜುಲೈ 04 ರಂದು ವಿಶ್ವಕಪ್ನೊಂದಿಗೆ ಭಾರತಕ್ಕೆ ಬಂದಿಳಿದಿದ್ದ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ಭವ್ಯ ಸ್ವಾಗತ ನೀಡಲಾಗಿತ್ತು. ಇದಾದ ಬಳಿಕ ಟೀಂ ಇಂಡಿಯಾ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿತ್ತು. ಈ ವೇಳೆ ಎಲ್ಲಾ ಆಟಗಾರರು ಪ್ರಧಾನಿ ಮೋದಿಯವರೊಂದಿಗೆ ಫೋಟೋ ಕ್ಲಿಕ್ಕಿಸಿಕೊಂಡಿದ್ದರು. ಪ್ರಧಾನಿ ಮೋದಿ ಕೂಡ ಆಟಗಾರರೊಂದಿಗೆ ಮಾತುಕತೆ ನಡೆಸಿ ಕೆಲ ಪ್ರಶ್ನೆಗಳನ್ನು ಕೇಳಿದ್ದರು. ಇದೀಗ ಪ್ರಧಾನಿ ಮೋದಿ ಹಾಗೂ ಟೀಂ ಇಂಡಿಯ ಆಟಗಾರರ ನಡುವೆ ನಡೆದಿದ್ದ ಸಂಭಾಷಣೆಯ ವಿಡಿಯೋವನ್ನು ಪ್ರಧಾನಿ ಮೋದಿ ಅವರ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಅದರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.