T20 World Cup 2024: ಅಫ್ಘಾನ್ ವಿರುದ್ಧ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಟೀಂ ಇಂಡಿಯಾ

IND vs AFG: ಭಾರತದ ಮಾಜಿ ವೇಗದ ಬೌಲರ್ ಡೇವಿಡ್ ಜಾನ್ಸನ್ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಹೀಗಾಗಿ ಡೇವಿಡ್ ಜಾನ್ಸನ್ ಅವರಿಗೆ ಗೌರವ ಸಮರ್ಪಣೆ ಮಾಡುವ ಸಲುವಾಗಿ  ಭಾರತದ ಎಲ್ಲಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ.

T20 World Cup 2024: ಅಫ್ಘಾನ್ ವಿರುದ್ಧ ಕಪ್ಪು ಪಟ್ಟಿ ಧರಿಸಿ ಕಣಕ್ಕಿಳಿದ ಟೀಂ ಇಂಡಿಯಾ
ಟೀಂ ಇಂಡಿಯಾ
Follow us
ಪೃಥ್ವಿಶಂಕರ
|

Updated on: Jun 20, 2024 | 9:11 PM

ಟಿ20 ವಿಶ್ವಕಪ್​ನಲ್ಲಿ (T20 World Cup 2024) ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವೆ ಸೂಪರ್ 8 ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾಕ್ಕೆ ಆರಂಭಿಕ ಆಘಾತ ಎದುರಾಗಿದೆ. ತಂಡ ಮೊದಲ 10 ಓವರ್​​ಗಳಲ್ಲಿ 79 ರನ್ ಕಲೆಹಾಕಿ ಪ್ರಮುಖ 3 ವಿಕೆಟ್ ಕಳೆದುಕೊಂಡಿದೆ. ಇದು ಪಂದ್ಯದ ಸಾರಾಂಶವಾದರೆ, ಇನ್ನೊಂದೆಡೆ ಇದೇ ಪಂದ್ಯದಲ್ಲಿ ಟೀಂ ಇಂಡಿಯಾದ (Team India) ಎಲ್ಲಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ. ಹಾಗಾದರೆ ಟೀಂ ಇಂಡಿಯಾದ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದು ಏಕೆ ಎಂಬುದನ್ನು ನೋಡುವುದಾದರೆ..

ಮಾಜಿ  ಟೀಂ ಇಂಡಿಯಾ ಆಟಗಾರ ನಿಧನ

ವಾಸ್ತವವಾಗಿ, ಭಾರತದ ಮಾಜಿ ವೇಗದ ಬೌಲರ್ ಡೇವಿಡ್ ಜಾನ್ಸನ್ ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಂಗಳೂರಿನಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾರೆ. ಹೀಗಾಗಿ ಡೇವಿಡ್ ಜಾನ್ಸನ್ ಅವರಿಗೆ ಗೌರವ ಸಮರ್ಪಣೆ ಮಾಡುವ ಸಲುವಾಗಿ  ಭಾರತದ ಎಲ್ಲಾ ಆಟಗಾರರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ. ದೀರ್ಘಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಡೇವಿಡ್ ಜಾನ್ಸನ್ ಇತ್ತೀಚೆಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ವರದಿಗಳ ಪ್ರಕಾರ ಖಿನ್ನತೆಯಿಂದ ಬಳಲುತ್ತಿದ್ದ ಅವರು ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 1996 ರಲ್ಲಿ ಟೀಂ ಇಂಡಿಯಾಕ್ಕೆ ಪಾದಾರ್ಪಣೆ ಮಾಡಿದ್ದ ಡೇವಿಡ್ ಜಾನ್ಸನ್ ಭಾರತದ ಪರ ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಇನ್ನು ದೇಶೀ ಕ್ರಿಕೆಟ್​ನಲ್ಲಿ ಕರ್ನಾಟಕ ಪರ ಅವರು 39 ಪ್ರಥಮ ದರ್ಜೆ ಪಂದ್ಯಗಳು ಮತ್ತು 33 ಲಿಸ್ಟ್ ಎ ಪಂದ್ಯಗಳನ್ನು ಆಡಿದ್ದಾರೆ.

ತಂಡದಲ್ಲಿ 1 ಬದಲಾವಣೆ

ಇನ್ನು ಪಂದ್ಯದ ಬಗ್ಗೆ ಹೇಳುವುದಾದರೆ ಅಫ್ಘಾನಿಸ್ತಾನ ವಿರುದ್ಧ ಟೀಂ ಇಂಡಿಯಾ ತಂಡದಲ್ಲಿ ಒಂದು ಬದಲಾವಣೆ ಮಾಡಿದೆ. ಅದರಂತೆ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಆಡುವ ಹನ್ನೊಂದರ ಬಳಗದಿಂದ ಹೊರಗಿಟ್ಟು, ಅವರ ಬದಲಿಗೆ ಕುಲ್ದೀಪ್ ಯಾದವ್ ಅವರಿಗೆ ತಂಡದಲ್ಲಿ ಅವಕಾಶ ನೀಡಿದೆ. ಇದಲ್ಲದೇ ಅಫ್ಘಾನಿಸ್ತಾನ ತಂಡದಲ್ಲೂ 1 ಬದಲಾವಣೆಯಾಗಿದ್ದು, ಕರೀಂ ಜನತ್ ಬದಲಿಗೆ ಹಜರತುಲ್ಲಾ ಝಜೈ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ.

ಉಭಯ ತಂಡಗಳ ಪ್ಲೇಯಿಂಗ್ 11

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲ್ದೀಪ್ ಯಾದವ್, ಅರ್ಷ್‌ದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.

ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್ (ವಿಕೆಟ್ ಕೀಪರ್), ಇಬ್ರಾಹಿಂ ಜದ್ರಾನ್, ನಜಿಬುಲ್ಲಾ ಝದ್ರಾನ್, ಹಜರತುಲ್ಲಾ ಝಜೈ, ಗುಲ್ಬದಿನ್ ನೈಬ್, ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ರಶೀದ್ ಖಾನ್ (ನಾಯಕ), ನೂರ್ ಅಹ್ಮದ್, ನವೀನ್ ಉಲ್ ಹಕ್, ಫಜಲ್ಹಕ್ ಫರೂಕ್.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ