AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟೀಂ ಇಂಡಿಯಾಗೆ ಆರಂಭದಲ್ಲೇ ವಿಘ್ನ; ಬಿಸಿಸಿಐ ಮನವಿ ಒಪ್ಪದ ಐಸಿಸಿ

T20 World Cup 2024: ಟೀಂ ಇಂಡಿಯಾ ನ್ಯೂಯಾರ್ಕ್​ನಲ್ಲಿ ಅಭ್ಯಾಸ ಪಂದ್ಯ ಆಡಿದರೆ ಅದು ತಂಡಕ್ಕೆ ನಿಸ್ಸಂಶಯವಾಗಿ ಲಾಭ ತರಲಿದೆ. ಏಕೆಂದರೆ ಇದೇ ಮೈದಾನದಲ್ಲಿ ರೋಹಿತ್ ಪಡೆ, ಪಾಕಿಸ್ತಾನದ ವಿರುದ್ಧ ಪಂದ್ಯ ಆಡಬೇಕಿದೆ. ಒಂದು ವೇಳೆ ಈ ಮೈದಾನದಲ್ಲಿ ಅಭ್ಯಾಸ ಪಂದ್ಯ ನಡೆದರೆ, ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಆಟಗಾರರು ನ್ಯೂಯಾರ್ಕ್‌ನ ಪರಿಸ್ಥಿತಿಗೆ ಹೊಂದಿಕೊಳ್ಳಲು ಸಾಧ್ಯವಾಗುತ್ತದೆ. ಆದರೆ ಐಸಿಸಿ ಅದಕ್ಕೆ ಅವಕಾಶ ನೀಡುತ್ತಿಲ್ಲ.

T20 World Cup 2024: ಟೀಂ ಇಂಡಿಯಾಗೆ ಆರಂಭದಲ್ಲೇ ವಿಘ್ನ; ಬಿಸಿಸಿಐ ಮನವಿ ಒಪ್ಪದ ಐಸಿಸಿ
ಟೀಂ ಇಂಡಿಯಾ
ಪೃಥ್ವಿಶಂಕರ
|

Updated on:May 16, 2024 | 5:00 PM

Share

ಟಿ20 ವಿಶ್ವಕಪ್‌ಗೆ (T20 World Cup 2024) ಕೌಂಟ್‌ಡೌನ್ ಶುರುವಾಗಿದೆ. ಜೂನ್ 2 ರಿಂದ ಮಿನಿ ವಿಶ್ವಸಮರ 20 ತಂಡಗಳ ನಡುವೆ ಪ್ರಾರಂಭವಾಗಲಿದೆ. ಟೀಂ ಇಂಡಿಯಾದ (Team India) ಮೊದಲ ಪಂದ್ಯ ಜೂನ್ 5 ರಂದು ಐರ್ಲೆಂಡ್ ವಿರುದ್ಧ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಅಭ್ಯಾಸ ಪಂದ್ಯ ಆಡಬೇಕಿದೆ. ಕುತೂಹಲಕಾರಿ ಸಂಗತಿಯೆಂದರೆ ಟೀಂ ಇಂಡಿಯಾ ಈ ಅಭ್ಯಾಸ ಪಂದ್ಯವನ್ನು ನ್ಯೂಯಾರ್ಕ್‌ನಲ್ಲಿ (new york) ಆಡಲು ಬಯಸಿದೆ. ಆದರೆ ಟೀಂ ಇಂಡಿಯಾದ ಈ ಮನವಿಯನ್ನು ತಿರಸ್ಕರಿಸಿರುವ ಐಸಿಸಿ, ಅಭ್ಯಾಸ ಪಂದ್ಯವನ್ನು ಫ್ಲೋರಿಡಾದಲ್ಲಿ ಆಯೋಜನೆ ಮಾಡುತ್ತಿದೆ. ವಾಸ್ತವವಾಗಿ ಟೀಂ ಇಂಡಿಯಾ ತನ್ನ ಮೊದಲ 4 ಪಂದ್ಯಗಳಲ್ಲಿ 3 ಪಂದ್ಯಗಳನ್ನು ನ್ಯೂಯಾರ್ಕ್‌ನಲ್ಲಿ ಆಡಬೇಕಾಗಿದೆ. ಹೀಗಾಗಿ ಟಿ20 ವಿಶ್ವಕಪ್‌ಗೂ ಮುನ್ನ ಟೀಂ ಇಂಡಿಯಾ ನ್ಯೂಯಾರ್ಕ್‌ನಲ್ಲಿ ಅಭ್ಯಾಸ ಪಂದ್ಯಗಳನ್ನು ಆಡಲು ಬಯಸಿದೆ. ಆದರೆ ವರದಿಗಳ ಪ್ರಕಾರ ಐಸಿಸಿ (ICC) ಮತ್ತು ವೆಸ್ಟ್ ಇಂಡೀಸ್ ಕ್ರಿಕೆಟ್, ಬಿಸಿಸಿಐನ (BCCI) ಈ ಮನವಿಗೆ ಗ್ರೀನ್ ಸಿಗ್ನಲ್ ನೀಡುತ್ತಿಲ್ಲ ಎಂದು ವರದಿಯಾಗಿದೆ.

ಐಸಿಸಿ ವಿರೋಧಕ್ಕೆ ಕಾರಣವೇನು?

ಟೀಂ ಇಂಡಿಯಾ ನ್ಯೂಯಾರ್ಕ್​ನಲ್ಲಿ ಅಭ್ಯಾಸ ಪಂದ್ಯ ಆಡಿದರೆ ಅದು ತಂಡಕ್ಕೆ ನಿಸ್ಸಂಶಯವಾಗಿ ಲಾಭ ತರಲಿದೆ. ಏಕೆಂದರೆ ಇದೇ ಮೈದಾನದಲ್ಲಿ ರೋಹಿತ್ ಪಡೆ, ಪಾಕಿಸ್ತಾನದ ವಿರುದ್ಧ ಪಂದ್ಯ ಆಡಬೇಕಿದೆ. ಒಂದು ವೇಳೆ ಈ ಮೈದಾನದಲ್ಲಿ ಅಭ್ಯಾಸ ಪಂದ್ಯ ನಡೆದರೆ, ಪಾಕ್ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾ ಆಟಗಾರರು ನ್ಯೂಯಾರ್ಕ್‌ನ ಪರಿಸ್ಥಿತಿಗೆ ಹೊಂದಿಕೊಳ್ಳಲು ಸಾಧ್ಯವಾಗುತ್ತದೆ. ಆದರೆ ಐಸಿಸಿ ಅದಕ್ಕೆ ಅವಕಾಶ ನೀಡುತ್ತಿಲ್ಲ. ವಾಸ್ತವವಾಗಿ ಬಿಸಿಸಿಐ ಮನವಿಯನ್ನು ಐಸಿಸಿ ತಿರಸ್ಕರಿಸಲು ಬಲವಾದ ಕಾರಣವೂ ಇದೆ. ಆ ಕಾರಣವೆಂದರೆ, ಟೀಂ ಇಂಡಿಯಾಗೆ ಈ ಮೈದಾನದಲ್ಲಿ ಅಭ್ಯಾಸ ಪಂದ್ಯ ಆಡಲು ಅವಕಾಶ ಕೊಟ್ಟರೆ, ಇದರಿಂದ ತಂಡಕ್ಕೆ ಲಾಭವಾಗುವ ಸಾಧ್ಯತೆಗಳಿವೆ. ಅಲ್ಲದೆ ಈ ವಿಚಾರದಲ್ಲಿ ವಿವಾದ ಉಂಟಾಗಬಹುದು ಎಂಬುದು ಐಸಿಸಿಯ ಈ ವಿರೋಧಕ್ಕೆ ಕಾರಣವಾಗಿದೆ.

T20 World Cup 2024: ಒಲ್ಲದ ಮನಸ್ಸಿನಲ್ಲಿ ಟಿ20 ವಿಶ್ವಕಪ್ ತಂಡಕ್ಕೆ ಹಾರ್ದಿಕ್ ಪಾಂಡ್ಯ ಆಯ್ಕೆ..!

ಅಭ್ಯಾಸ ಪಂದ್ಯ ಯಾವಾಗ?

ಮೇ 25 ಅಥವಾ 26ರಂದು ಟೀಂ ಇಂಡಿಯಾದ ಅಭ್ಯಾಸ ಪಂದ್ಯ ನಡೆಯಲಿದೆ. ಮೇ 21 ರಂದು ಟೀಂ ಇಂಡಿಯಾದ ಕೆಲವು ಆಟಗಾರರು ವಿಶ್ವಕಪ್‌ಗೆ ತೆರಳಲಿದ್ದಾರೆ ಎಂದು ಈ ಹಿಂದೆ ವರದಿಗಳು ಬಂದಿದ್ದವು. ಆದರೆ ನಂತರ ಈ ದಿನಾಂಕವನ್ನು ಮುಂದೂಡಲಾಯಿತು. ಇದೀಗ ಐಪಿಎಲ್ ಪ್ಲೇಆಫ್ ರೇಸ್‌ನಿಂದ ಹೊರಗುಳಿದ ಕೆಲವು ಆಟಗಾರರು ಮೇ 24 ರಂದು ಅಮೆರಿಕಕ್ಕೆ ಹೊರಡಲಿದ್ದಾರೆ. ಇವರಲ್ಲಿ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ಶುಭ್​ಮನ್ ಗಿಲ್ ಮುಂತಾದ ಆಟಗಾರರು ಸೇರಿದ್ದಾರೆ.

ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ 4 ಲೀಗ್ ಪಂದ್ಯಗಳನ್ನು ಆಡಲಿದೆ. ಟೀಂ ಇಂಡಿಯಾದ ಗುಂಪಿನಲ್ಲಿ ಐರ್ಲೆಂಡ್, ಪಾಕಿಸ್ತಾನ, ಅಮೆರಿಕ ಮತ್ತು ಕೆನಡಾ ಸೇರಿವೆ. ಈ ಗುಂಪಿನ ನಂತರ ಮತ್ತೊಂದು ಸೂಪರ್ 8 ಸುತ್ತು ನಡೆಯಲಿದ್ದು, ಈ ಗುಂಪಿನ ಅಗ್ರ 4 ತಂಡಗಳು ಸೆಮಿಫೈನಲ್‌ಗೆ ಪ್ರವೇಶಿಸಲಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Thu, 16 May 24

Follow Us
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್