T20 World Cup 2024: ರಣರೋಚಕ ಪಂದ್ಯ; ಸೂಪರ್ ಓವರ್​ನಲ್ಲಿ ಪಾಕ್ ತಂಡವನ್ನು ಮಣಿಸಿದ ಅಮೆರಿಕ

T20 World Cup 2024: ಸೂಪರ್ ಓವರ್‌ನಲ್ಲಿ ಪಾಕಿಸ್ತಾನವನ್ನು ಹೀನಾಯವಾಗಿ ಸೋಲಿಸುವ ಮೂಲಕ ಅಮೇರಿಕಾ ತಂಡ ಇತಿಹಾಸ ನಿರ್ಮಿಸಿದೆ. ಈ ಪಂದ್ಯ ಕ್ರಿಕೆಟ್ ಪ್ರೇಮಿಗಳಲ್ಲಿ ಅಚ್ಚರಿ ಮೂಡಿಸಿದೆ. ಟೆಕ್ಸಾಸ್‌ನ ಗ್ರ್ಯಾಂಡ್ ಪ್ರೈರಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ವಿಶ್ವಕಪ್‌ನ 11ನೇ ಪಂದ್ಯದಲ್ಲಿ ಪಾಕಿಸ್ತಾನಕ್ಕೆ ಅಮೆರಿಕ ಭಾರಿ ಹೊಡೆತ ನೀಡಿದೆ. ವಿಶ್ವಕಪ್‌ನಲ್ಲಿ ತನ್ನ ಮೊದಲ ಪಂದ್ಯವನ್ನು ಆಡುತ್ತಿರುವ ಪಾಕಿಸ್ತಾನ ತಂಡ ಸೂಪರ್ ಓವರ್‌ನಲ್ಲಿ 5 ರನ್‌ಗಳಿಂದ ಸೋತಿದೆ.

T20 World Cup 2024: ರಣರೋಚಕ ಪಂದ್ಯ; ಸೂಪರ್ ಓವರ್​ನಲ್ಲಿ ಪಾಕ್ ತಂಡವನ್ನು ಮಣಿಸಿದ ಅಮೆರಿಕ
ಅಮೆರಿಕ ತಂಡ
Follow us
ಪೃಥ್ವಿಶಂಕರ
|

Updated on:Jun 07, 2024 | 1:44 AM

ಟೆಕ್ಸಾಸ್‌ನ ಗ್ರ್ಯಾಂಡ್ ಪ್ರೈರಿ ಕ್ರೀಡಾಂಗಣದಲ್ಲಿ ನಡೆದ ಪಾಕಿಸ್ತಾನ ಹಾಗೂ ಅಮೆರಿಕ (Pakistan vs America) ನಡುವಿನ ರಣರೋಚಕ ಪಂದ್ಯದಲ್ಲಿ ಆತಿಥೇಯ ಅಮೆರಿಕ ತಂಡ ಸೂಪರ್​ ಓವರ್​ನಲ್ಲಿ (Super Over) ಪಂದ್ಯವನ್ನು ಗೆದ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡ ನಿಗದಿತ 20 ಓವರ್​​ಗಳಲ್ಲಿ 7 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು. ಗೆಲುವಿಗೆ 160 ರನ್​ಗಳ ಟಾರ್ಗೆಟ್ ಬೆನ್ನಟ್ಟಿದ ಅಮೆರಿಕ ಕೂಡ 20 ಓವರ್​​ಗಳಲ್ಲಿ 3 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು. ಹೀಗಾಗಿ ಪಂದ್ಯ ಸೂಪರ್​ ಓವರ್​ನತ್ತ ಸಾಗಿತು. ಸೂಪರ್ ಓವರ್​ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕ ತಂಡ 19 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ ತಂಡ 1 ವಿಕೆಟ್ ಕಳೆದುಕೊಂಡು 13 ರನ್​ಗಳನಷ್ಟೇ ಕಲೆಹಾಕಲು ಶಕ್ತವಾಗಿ 5 ರನ್​​ಗಳಿಂದ ಸೋಲೊಪ್ಪಿಕೊಂಡಿತು.

ಪಾಕ್ ತಂಡಕ್ಕೆ ಕಳಪೆ ಆರಂಭ

ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಲು ಬಂದ ಪಾಕಿಸ್ತಾನ ತಂಡಕ್ಕೆ ಉತ್ತಮ ಆರಂಭ ಸಿಗಲಿಲ್ಲ. ತಂಡದ ಮೂವರು ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು 5 ಓವರ್‌ಗಳೊಳಗೆ ಪೆವಿಲಿಯನ್ ಸೇರಿಕೊಂಡರು. ಹೀಗಾಗಿ ತಂಡ 5 ಓವರ್​ಗಳಲ್ಲಿ 3 ವಿಕೆಟ್ ಕಳೆದುಕೊಂಡು ಕೇವಲ 26 ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಮೊದಲ 10 ಓವರ್​ಗಳವರೆಗೂ ಪಂದ್ಯದಲ್ಲಿ ಅಮೆರಿಕ ತಂಡ ಹಿಡಿತ ಸಾಧಿಸಿತ್ತು. ಆದರೆ ಆ ಬಳಿಕ ನಾಯಕ ಬಾಬರ್ ಆಝಂ ಹಾಗೂ ಶಾದಾಬ್ ಖಾನ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಈ ವೇಳೆ ಬಾಬರ್ 43 ರನ್​ಗಳ ಇನ್ನಿಂಗ್ಸ್ ಆಡಿದರೆ, ಶಾದಾಬ್ 40 ರನ್​ಗಳ ಕಾಣಿಕೆ ನೀಡಿದರು. ಕೊನೆಯಲ್ಲಿ ಶಾಹೀನ್ ಆಫ್ರಿದಿ 23 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದರು. ಹೀಗಾಗಿ ಪಾಕ್ ತಂಡ 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 159 ರನ್ ಕಲೆಹಾಕಿತು.

T20 World Cup 2024: USA ಆಟಗಾರನ ಅದ್ಭುತ ಫೀಲ್ಡಿಂಗ್​ಗೆ ಸಲ್ಯೂಟ್ ಹೊಡೆದ ಕ್ರಿಕೆಟ್ ಜಗತ್ತು! ವಿಡಿಯೋ

ನಾಯಕನ ಇನ್ನಿಂಗ್ಸ್ ಆಡಿದ ಮೊನಾಂಕ್

ಇದಾದ ಬಳಿಕ ಗುರಿ ಬೆನ್ನತ್ತಿದ ಅಮೆರಿಕ ತಂಡ ಅಮೋಘ ಆರಂಭ ಪಡೆದುಕೊಂಡಿತು. ತಂಡ 5 ಓವರ್‌ಗಳವರೆಗೆ ಯಾವುದೇ ವಿಕೆಟ್ ಕಳೆದುಕೊಳ್ಳದೆ 36 ರನ್ ಕಲೆಹಾಕಿತು. ಆ ನಂತರ ಆರಂಭಿಕ ಸ್ಟೀವನ್ ಟೇಲರ್ 12 ರನ್​ಗಳಿಗೆ ಇನ್ನಿಂಗ್ಸ್ ಮುಗಿಸಿದರು. ಆ ಬಳಿಕ ಒಂದಾದ ನಾಯಕ ಮೊನಾಂಕ್ ಪಟೇಲ್ ಮತ್ತು ಆಂಡ್ರೀಸ್ ಗೂಸ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಇಬ್ಬರು ಒಟ್ಟಾಗಿ 68 ರನ್​ಗಳ ಜೊತೆಯಾಟ ಕಟ್ಟಿದರು. ಈ ಹಂತದಲ್ಲಿ ಆಂಡ್ರೀಸ್ ಗೂಸ್ 35 ರನ್​ಗಳಿಗೆ ವಿಕೆಟ್ ಒಪ್ಪಿಸಿದರು. ಇವರು ಔಟಾದ ಬೆನ್ನಲ್ಲೇ ಅರ್ಧಶತಕದ ಇನ್ನಿಂಗ್ಸ್ ಆಡಿದ್ದ ನಾಯಕ ಮೊನಾಂಕ್ ಪಟೇಲ್ ಕೂಡ ಔಟಾದರು. ಸುಲಭವಾಗಿ ಗುರಿ ಬೆನ್ನಟ್ಟುವಂತೆ ತೊರುತ್ತಿದ್ದ ಅಮೆರಿಕ ತಂಡ, ಇಲ್ಲಿಂದ ಸೋಲಿನ ಸುಳಿಯತ್ತ ಸಾಗಿತು. ಇದಕ್ಕೆ ಕೊನೆಯಲ್ಲಿ ಪಾಕ್ ವೇಗಿಗಳ ಕರಾರುವಕ್ಕಾದ ದಾಳಿಯೂ ಕಾರಣವಾಗಿತ್ತು.

ಪಾಕ್ ಬೌಲರ್​ಗಳ ಎಡವಟ್ಟೇ ತಂಡದ ಸೋಲಿಗೆ ಕಾರಣ

ಹೀಗಾಗಿ ಕೊನೆಯ ಓವರ್​ನ ಕೊನೆಯ ಎಸೆತದಲ್ಲಿ ಅಮೆರಿಕ ತಂಡಕ್ಕೆ ಗೆಲ್ಲಲು 5 ರನ್​ಗಳ ಅವಶ್ಯಕತೆ ಇತ್ತು. ಈ ವೇಳೆ ಸ್ಟ್ರೈಕ್​ನಲ್ಲಿದ್ದ ನಿತಿಶ್ ಕುಮಾರ್ ಬೌಂಡರಿ ಬಾರಿಸಿ ಪಂದ್ಯವನ್ನು ಟೈ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು. ಹೀಗಾಗಿ ಪಂದ್ಯ ಸೂಪರ್​ ಓವರ್​ನತ್ತ ಸಾಗಿತು. ಇಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಮೆರಿಕ ತಂಡ 19 ರನ್ ಕಲೆಹಾಕಿತು. ಪಾಕ್ ಪರ ಬೌಲಿಂಗ್ ಮಾಡಿದ ಮೊಹಮ್ಮದ್ ಅಮಿರ್ ಕೇವಲ 1 ಬೌಂಡರಿ ನೀಡಿದರಾದರೂ, ವೈಡ್ ಮೂಲಕವೇ 7 ರನ್ ಬಿಟ್ಟುಕೊಟ್ಟರು. ಇದು ತಂಡದ ಸೋಲಿಗೆ ಪ್ರಮುಖ ಕಾರಣ ಎಂದು ಹೇಳಬಹುದು. ನಂತರ ಈ ಗುರಿ ಬೆನ್ನಟ್ಟಿದ ಪಾಕ್ ತಂಡಕ್ಕೆ ಇಫ್ತಿಕರ್ ಅಹಮದ್ ಭರ್ಜರಿ ಬೌಂಡರಿ ಬಾರಿಸುವ ಮೂಲಕ ಗೆಲುವಿನ ಆಸೆ ಮೂಡಿಸಿದರು. ಆದರೆ ಸೂಪರ್​ ಓವರ್​ನ ಮೂರನೇ ಎಸೆತದಲ್ಲಿ ಅವರ ವಿಕೆಟ್ ಪತನವಾಯಿತು. ಎರಡನೇ ಬ್ಯಾಟರ್ ಆಗಿ ಕಣಕ್ಕಿಳಿದ ಶಾದಾಬ್ ಖಾನ್​ಗೆ ಬಿಗ್ ಶಾಟ್​​ಗಳನ್ನು ಹೊಡೆಯಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಪಾಕಿಸ್ತಾನ ತಂಡ ಕೇವಲ 13 ರನ್ ಗಳಿಸಲಷ್ಟೇ ಶಕ್ತವಾಯಿತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:27 am, Fri, 7 June 24

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ