IND vs USA: ಇಂದು ಭಾರತ ಮತ್ತು ಯುಎಸ್​ಎ ಮುಖಾಮುಖಿ

T20 World Cup 2024: ಬುಧವಾರ ನಡೆಯಲಿರುವ ಟಿ20 ವಿಶ್ವಕಪ್​ನ 2ನೇ ಪಂದ್ಯದಲ್ಲಿ ಭಾರತ ತಂಡ ಯುಎಸ್​ಎ ತಂಡವನ್ನು ಎದುರಿಸಲಿದೆ. ನ್ಯೂಯಾರ್ಕ್​ನಲ್ಲಿ ನಡೆಯಲಿರುವ ಈ ಮ್ಯಾಚ್​ನಲ್ಲಿ ಟೀಮ್ ಇಂಡಿಯಾ ಗೆದ್ದರೆ ಮುಂದಿನ ಹಂತಕ್ಕೇರಲಿದೆ. ಅತ್ತ ಯುಎಸ್​ಎ ತಂಡಕ್ಕೂ ಸೂಪರ್-8 ಹಂತಕ್ಕೇರಲು ಒಂದು ಗೆಲುವಿನ ಅವಶ್ಯಕತೆಯಿದೆ.

IND vs USA: ಇಂದು ಭಾರತ ಮತ್ತು ಯುಎಸ್​ಎ ಮುಖಾಮುಖಿ
IND vs USA
Follow us
|

Updated on:Jun 12, 2024 | 7:26 AM

T20 World Cup 2024: ಟಿ20 ವಿಶ್ವಕಪ್​ನ 25ನೇ ಪಂದ್ಯದಲ್ಲಿ ಭಾರತ ಮತ್ತು ಯುಎಸ್​ಎ ತಂಡಗಳು ಕಣಕ್ಕಿಳಿಯಲಿದೆ. ನ್ಯೂಯಾರ್ಕ್​ನ ನಸ್ಸೌ ಕೌಂಟಿ ಇಂಟರ್​ನ್ಯಾಷನಲ್​ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ (ಜೂ.12) ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೂಪರ್-8 ಹಂತಕ್ಕೇರಲಿದೆ. ಉಭಯ ತಂಡಗಳು ಆಡಿರುವ ಎರಡು ಪಂದ್ಯಗಳಲ್ಲೂ ಜಯ ಸಾಧಿಸಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಮುಂದಿನ ಹಂತಕ್ಕೇರಬಹುದು.

ವಿಶೇಷ ಎಂದರೆ ಭಾರತ ಮತ್ತು ಯುಎಸ್​ಎ ತಂಡಗಳು ಇದೇ ಮೊದಲ ಬಾರಿಗೆ ಟಿ20 ಕ್ರಿಕೆಟ್​ನಲ್ಲಿ ಮುಖಾಮುಖಿಯಾಗುತ್ತಿದೆ. ಇಲ್ಲಿ ಭಾರತ ತಂಡ ಬಲಿಷ್ಠವಾಗಿ ಕಂಡು ಬಂದರೂ ಯುಎಸ್​ಎ ಕಡೆಯಿಂದ ಪೈಪೋಟಿಯನ್ನು ನಿರೀಕ್ಷಿಸಬಹುದು.

ಏಕೆಂದರೆ ಕಳೆದ ಪಂದ್ಯದಲ್ಲಿ ಯುಎಸ್​ಎ ತಂಡ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿ ಇತಿಹಾಸ ಬರೆದಿತ್ತು. ಹೀಗಾಗಿ ಭಾರತದ ವಿರುದ್ಧ ಕೂಡ ಅದೇ ಹುಮ್ಮಸ್ಸಿನಲ್ಲಿ ಕಣಕ್ಕಿಳಿಯಲಿದೆ. ಹೀಗಾಗಿ ಈ ಪಂದ್ಯದಲ್ಲೂ ಕೆಚ್ಚೆದೆಯ ಹೋರಾಟವನ್ನು ಎದುರು ನೋಡಬಹುದು.

ಎಷ್ಟು ಗಂಟೆಗೆ ಮ್ಯಾಚ್ ಶುರು?

ಭಾರತ ಮತ್ತು ಯುಎಸ್​ಎ ನಡುವಣ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ. ಇದಕ್ಕೂ  ಮುನ್ನ 7.30 ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.

ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ ಸ್ಟಾರ್​ ನೆಟ್​ವರ್ಕ್​ನ ಸ್ಪೋರ್ಟ್ಸ್​ ಚಾನೆಲ್​ಗಳಲ್ಲಿ ಈ ಪಂದ್ಯದ ನೇರ ಪ್ರಸಾರ ಇರಲಿದೆ. ಹಾಗೆಯೇ ಡಿಸ್ನಿ ಹಾಟ್​ಸ್ಟಾರ್ ಆ್ಯಫ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಉಭಯ ತಂಡಗಳು:

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್​ಪ್ರೀತ್ ಬುಮ್ರಾ.

ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್​ನಲ್ಲಿ ವಿಶ್ವ ದಾಖಲೆ ಬರೆದ ಉಗಾಂಡ ಬೌಲರ್

ಯುಎಸ್​ಎ ತಂಡ: ಮೊನಾಂಕ್ ಪಟೇಲ್ (ನಾಯಕ), ಆರೋನ್ ಜೋನ್ಸ್, ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಷ್ತುಶ್ ಕೆಂಜಿಗೆ, ಸೌರಭ್ ನೇತ್ರಲ್ವಾಕರ್, ಶಾಡ್ಲಿ ವ್ಯಾನ್ ಸ್ಚಾಲ್ಕ್‌ವಿಕ್, ಸ್ಟೀವನ್ ಟೇಲರ್, ಶಯಾನ್ ಜಹಾಂಗೀರ್. ಮೀಸಲು ಆಟಗಾರರು: ಗಜಾನಂದ್ ಸಿಂಗ್, ಜುವಾನೊಯ್ ಡ್ರೈಸ್‌ಡೇಲ್, ಯಾಸಿರ್ ಮೊಹಮ್ಮದ್.

Published On - 7:23 am, Wed, 12 June 24

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ