T20 World Cup 2024: ಟಿ20 ವಿಶ್ವಕಪ್ನ 25ನೇ ಪಂದ್ಯದಲ್ಲಿ ಭಾರತ ಮತ್ತು ಯುಎಸ್ಎ ತಂಡಗಳು ಕಣಕ್ಕಿಳಿಯಲಿದೆ. ನ್ಯೂಯಾರ್ಕ್ನ ನಸ್ಸೌ ಕೌಂಟಿ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಬುಧವಾರ (ಜೂ.12) ನಡೆಯಲಿರುವ ಈ ಪಂದ್ಯದಲ್ಲಿ ಗೆಲ್ಲುವ ತಂಡ ಸೂಪರ್-8 ಹಂತಕ್ಕೇರಲಿದೆ. ಉಭಯ ತಂಡಗಳು ಆಡಿರುವ ಎರಡು ಪಂದ್ಯಗಳಲ್ಲೂ ಜಯ ಸಾಧಿಸಿದ್ದು, ಹೀಗಾಗಿ ಇಂದಿನ ಪಂದ್ಯದಲ್ಲಿ ಗೆಲ್ಲುವ ಮೂಲಕ ಮುಂದಿನ ಹಂತಕ್ಕೇರಬಹುದು.
ವಿಶೇಷ ಎಂದರೆ ಭಾರತ ಮತ್ತು ಯುಎಸ್ಎ ತಂಡಗಳು ಇದೇ ಮೊದಲ ಬಾರಿಗೆ ಟಿ20 ಕ್ರಿಕೆಟ್ನಲ್ಲಿ ಮುಖಾಮುಖಿಯಾಗುತ್ತಿದೆ. ಇಲ್ಲಿ ಭಾರತ ತಂಡ ಬಲಿಷ್ಠವಾಗಿ ಕಂಡು ಬಂದರೂ ಯುಎಸ್ಎ ಕಡೆಯಿಂದ ಪೈಪೋಟಿಯನ್ನು ನಿರೀಕ್ಷಿಸಬಹುದು.
ಏಕೆಂದರೆ ಕಳೆದ ಪಂದ್ಯದಲ್ಲಿ ಯುಎಸ್ಎ ತಂಡ ಪಾಕಿಸ್ತಾನ್ ತಂಡಕ್ಕೆ ಸೋಲುಣಿಸಿ ಇತಿಹಾಸ ಬರೆದಿತ್ತು. ಹೀಗಾಗಿ ಭಾರತದ ವಿರುದ್ಧ ಕೂಡ ಅದೇ ಹುಮ್ಮಸ್ಸಿನಲ್ಲಿ ಕಣಕ್ಕಿಳಿಯಲಿದೆ. ಹೀಗಾಗಿ ಈ ಪಂದ್ಯದಲ್ಲೂ ಕೆಚ್ಚೆದೆಯ ಹೋರಾಟವನ್ನು ಎದುರು ನೋಡಬಹುದು.
ಭಾರತ ಮತ್ತು ಯುಎಸ್ಎ ನಡುವಣ ಈ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 8 ಗಂಟೆಯಿಂದ ಶುರುವಾಗಲಿದೆ. ಇದಕ್ಕೂ ಮುನ್ನ 7.30 ಕ್ಕೆ ಟಾಸ್ ಪ್ರಕ್ರಿಯೆ ನಡೆಯಲಿದೆ.
ಸ್ಟಾರ್ ಸ್ಪೋರ್ಟ್ಸ್ ಕನ್ನಡ ಸೇರಿದಂತೆ ಸ್ಟಾರ್ ನೆಟ್ವರ್ಕ್ನ ಸ್ಪೋರ್ಟ್ಸ್ ಚಾನೆಲ್ಗಳಲ್ಲಿ ಈ ಪಂದ್ಯದ ನೇರ ಪ್ರಸಾರ ಇರಲಿದೆ. ಹಾಗೆಯೇ ಡಿಸ್ನಿ ಹಾಟ್ಸ್ಟಾರ್ ಆ್ಯಫ್ನಲ್ಲಿ ಉಚಿತವಾಗಿ ವೀಕ್ಷಿಸಬಹುದು.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಸಂಜು ಸ್ಯಾಮ್ಸನ್, ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್ದೀಪ್ ಯಾದವ್, ಯುಜ್ವೇಂದ್ರ ಚಹಲ್, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ.
ಇದನ್ನೂ ಓದಿ: T20 World Cup 2024: ಟಿ20 ವಿಶ್ವಕಪ್ನಲ್ಲಿ ವಿಶ್ವ ದಾಖಲೆ ಬರೆದ ಉಗಾಂಡ ಬೌಲರ್
ಯುಎಸ್ಎ ತಂಡ: ಮೊನಾಂಕ್ ಪಟೇಲ್ (ನಾಯಕ), ಆರೋನ್ ಜೋನ್ಸ್, ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಷ್ತುಶ್ ಕೆಂಜಿಗೆ, ಸೌರಭ್ ನೇತ್ರಲ್ವಾಕರ್, ಶಾಡ್ಲಿ ವ್ಯಾನ್ ಸ್ಚಾಲ್ಕ್‌ವಿಕ್, ಸ್ಟೀವನ್ ಟೇಲರ್, ಶಯಾನ್ ಜಹಾಂಗೀರ್. ಮೀಸಲು ಆಟಗಾರರು: ಗಜಾನಂದ್ ಸಿಂಗ್, ಜುವಾನೊಯ್ ಡ್ರೈಸ್‌ಡೇಲ್, ಯಾಸಿರ್ ಮೊಹಮ್ಮದ್.
Published On - 7:23 am, Wed, 12 June 24