VIDEO: ಕೊಹ್ಲಿಗೆ ಬೌಲಿಂಗ್ ನೀಡುವಂತೆ ಅಭಿಮಾನಿಗಳ ಆಗ್ರಹ: ವಿಡಿಯೋ ವೈರಲ್
T20 World Cup 2024: ಟಿ20 ವಿಶ್ವಕಪ್ನ ತನ್ನ ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ. ನ್ಯೂಯಾರ್ಕ್ ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 8 ವಿಕೆಟ್ಗಳ ಜಯ ಸಾಧಿಸಿದೆ. ಇನ್ನು ಜೂನ್ 9 ರಂದು ಟೀಮ್ ಇಂಡಿಯಾ ಪಾಕಿಸ್ತಾನ್ ವಿರುದ್ಧ ಆಡಲಿದೆ.
T20 World Cup 2024: ನ್ಯೂಯಾರ್ಕ್ನಲ್ಲಿ ನಡೆದ ಟಿ20 ವಿಶ್ವಕಪ್ನ (T20 World Cup 2024) 8ನೇ ಪಂದ್ಯದಲ್ಲಿ ಭಾರತ ತಂಡವು ಭರ್ಜರಿ ಜಯ ಸಾಧಿಸಿದೆ. ನಸ್ಸೌ ಕೌಂಟಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಐರ್ಲೆಂಡ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಅರ್ಷದೀಪ್ ಸಿಂಗ್, ಹಾರ್ದಿಕ್ ಪಾಂಡ್ಯ, ಬುಮ್ರಾರ ಕರಾರುವಾಕ್ ದಾಳಿಗೆ ತತ್ತರಿಸಿದ ಐರ್ಲೆಂಡ್ ತಂಡವು ಕೇವಲ 44 ರನ್ಗಳಿಗೆ 5 ವಿಕೆಟ್ ಕಳೆದುಕೊಂಡಿತು. ಈ ಆಘಾತದಿಂದ ಪಾರಾಗುವ ಮುನ್ನವೇ ಟೀಮ್ ಇಂಡಿಯಾ ಬೌಲರ್ಗಳು ಪಂದ್ಯದ ಮೇಲೆ ಹಿಡಿತ ಸಾಧಿಸಿದ್ದರು.
ಅತ್ತ ಪಂದ್ಯವು ಟೀಮ್ ಇಂಡಿಯಾದ ಕೈಯಲ್ಲಿರುವುದು ಪಕ್ಕಾ ಆಗುತ್ತಿದ್ದಂತೆ ಇತ್ತ ಕಡೆಯಿಂದ ಅಭಿಮಾನಿಗಳು ವಿರಾಟ್ ಕೊಹ್ಲಿಗೂ ಬೌಲಿಂಗ್ ನೀಡುವಂತೆ ಮನವಿ ಮಾಡಿದರು. ಸ್ಟೇಡಿಯಂನಲ್ಲಿದ್ದ ಕಿಂಗ್ ಕೊಹ್ಲಿ ಫ್ಯಾನ್ಸ್ ಕೊಹ್ಲಿಗೆ ಬೌಲಿಂಗ್ ನೀಡಿ…ಎಂದು ಘೋಷಣೆ ಕೂಗುವ ಮೂಲಕ ಎಲ್ಲರ ಗಮನ ಸೆಳೆದರು.
ಇದೀಗ ಕಿಂಗ್ ಕೊಹ್ಲಿಗೆ ಓವರ್ ನೀಡುವಂತೆ ಅಭಿಮಾನಿಗಳು ಮನವಿ ಮಾಡುತ್ತಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಆದರೆ ಈ ಮನವಿಯ ಹೊರತಾಗಿಯೂ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಓವರ್ ನೀಡಿರಲಿಲ್ಲ.
ಏಕೆಂದರೆ ಇದು ಟಿ20 ವಿಶ್ವಕಪ್ನ ಮೊದಲ ಪಂದ್ಯವಾಗಿದ್ದು, ಇಲ್ಲಿ ಪ್ರತಿ ಓವರ್ಗಳು ಮುಖ್ಯವಾಗುತ್ತದೆ. ಹೀಗಾಗಿ ಅಭಿಮಾನಿಗಳ ಕೋರಿಕೆ ಮಹತ್ವ ನೀಡಿ ದುಸ್ಸಾಹಕ್ಕೆ ಕೈ ಹಾಕಲು ಟೀಮ್ ಇಂಡಿಯಾ ನಾಯಕ ಮುಂದಾಗಲಿಲ್ಲ.
ಗೆದ್ದು ಬೀಗಿದ ಭಾರತ:
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಐರ್ಲೆಂಡ್ ತಂಡವು 16 ಓವರ್ಗಳಲ್ಲಿ 96 ರನ್ಗಳಿಸಿ ಆಲೌಟ್ ಆಯಿತು. 97 ರನ್ಗಳ ಸುಲಭ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ (52) ಅರ್ಧಶತಕ ಬಾರಿಸಿ ಮಿಂಚಿದರು.
ಇನ್ನು ಮೂರನೇ ಕ್ರಮಾಂಕದಲ್ಲಿ ಬಡ್ತಿ ಪಡೆದು ಕಣಕ್ಕಿಳಿದ ರಿಷಭ್ ಪಂತ್ ಅಜೇಯ 36 ರನ್ ಬಾರಿಸಿದರು. ಈ ಮೂಲಕ 12.2 ಓವರ್ಗಳಲ್ಲಿ 97 ರನ್ ಬಾರಿಸಿ ಟೀಮ್ ಇಂಡಿಯಾ 8 ವಿಕೆಟ್ಗಳ ಜಯ ಸಾಧಿಸಿತು.
ಭಾರತ ಪ್ಲೇಯಿಂಗ್ 11: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಬ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್.
ಇದನ್ನೂ ಓದಿ: IPL 2025: CSK ಫ್ರಾಂಚೈಸಿಗೆ ಮರಳಿದ ರವಿಚಂದ್ರನ್ ಅಶ್ವಿನ್
ಐರ್ಲೆಂಡ್ ಪ್ಲೇಯಿಂಗ್ 11: ಪಾಲ್ ಸ್ಟಿರ್ಲಿಂಗ್ (ನಾಯಕ), ಆಂಡ್ರ್ಯೂ ಬಾಲ್ಬಿರ್ನಿ, ಲೋರ್ಕನ್ ಟಕರ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಕರ್ಟಿಸ್ ಕ್ಯಾಂಫರ್, ಜಾರ್ಜ್ ಡಾಕ್ರೆಲ್, ಗರೆಥ್ ಡೆಲಾನಿ, ಮಾರ್ಕ್ ಅಡೇರ್, ಬ್ಯಾರಿ ಮೆಕಾರ್ಥಿ, ಜೋಶ್ ಲಿಟಲ್, ಬೆಂಜಮಿನ್ ವೈಟ್.