Shaheen Afridi: ನಮ್ದು ಗಲ್ಲಿ ಕ್ರಿಕೆಟ್ ತಂಡವಲ್ಲ: ಶಾಹೀನ್ ಅಫ್ರಿದಿ ಬೇಸರ..!

T20 World Cup 2024: ಟಿ20 ವಿಶ್ವಕಪ್​ನಿಂದ ಈಗಾಗಲೇ ಹೊರಬಿದ್ದಿರುವ ಪಾಕಿಸ್ತಾನ್ ತಂಡವು ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದೆ. ಭಾನುವಾರ ಫ್ಲೋರಿಡಾದಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಮಳೆ ಭೀತಿ ಎದುರಾಗಿದ್ದು, ಹೀಗಾಗಿ ಪಾಕಿಸ್ತಾನ್ ಮತ್ತು ಐರ್ಲೆಂಡ್ ನಡುವಣ ಪಂದ್ಯ ನಡೆಯುವುದು ಅನುಮಾನ.

Shaheen Afridi: ನಮ್ದು ಗಲ್ಲಿ ಕ್ರಿಕೆಟ್ ತಂಡವಲ್ಲ: ಶಾಹೀನ್ ಅಫ್ರಿದಿ ಬೇಸರ..!
Shaheen Afridi
Follow us
ಝಾಹಿರ್ ಯೂಸುಫ್
|

Updated on: Jun 16, 2024 | 11:36 AM

T20 World Cup 2024: ಟಿ20 ವಿಶ್ವಕಪ್ ಗೆದ್ದೇ ಗೆಲ್ಲುತ್ತೇವೆ ಎಂದು ಬಂದ ಪಾಕಿಸ್ತಾನ್ ತಂಡವು ಮೊದಲ ಸುತ್ತಿನಲ್ಲೇ ಮುಗ್ಗರಿಸಿದೆ. ಲೀಗ್ ಹಂತದ ಮೊದಲ ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಹೀನಾಯವಾಗಿ ಸೋತಿದ್ದ ಬಾಬರ್ ಪಡೆ ಆ ಬಳಿಕ ಬಲಿಷ್ಠ ಭಾರತದ ಮುಂದೆ ಮುಂಡಿಯೂರಿತ್ತು. ಇನ್ನು ಮೂರನೇ ಪಂದ್ಯದಲ್ಲಿ ಕೆನಡಾ ವಿರುದ್ಧ ಜಯ ಸಾಧಿಸಿದರೂ, ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನ ಅಲಂಕರಿಸುವ ಮೂಲಕ ಪಾಕಿಸ್ತಾನ್ ತಂಡ ಟಿ20 ವಿಶ್ವಕಪ್​ನಿಂದ ಹೊರಬಿದ್ದಿದೆ.

ಈ ಕಳಪೆ ಪ್ರದರ್ಶನದ ಬೆನ್ನಲ್ಲೇ ಪಾಕಿಸ್ತಾನ್ ತಂಡದ ವಿರುದ್ಧ ಅಭಿಮಾನಿಗಳಿಂದ ಭಾರೀ ಆಕ್ರೋಶಗಳು ವ್ಯಕ್ತವಾಗಿದ್ದವು. ಇದೀಗ ಟೀಕೆ-ಟಿಪ್ಪಣಿಗಳು ಮುಂದುವರೆದಿದ್ದು, ಈ ಟೀಕೆಗಳಿಗೆ ಪಾಕಿಸ್ತಾನ್ ತಂಡದ ಎಡಗೈ ವೇಗಿ ಶಾಹೀನ್ ಅಫ್ರಿದಿ ಬೇಸರ ವ್ಯಕ್ತಪಡಿಸಿದ್ದಾರೆ.

ಶಾಹೀನ್ ಹೇಳಿದ್ದೇನು?

ಒಳ್ಳೆಯ ಸಮಯದಲ್ಲಿ ಎಲ್ಲರೂ ನಿಮ್ಮೊಂದಿಗೆ ನಿಲ್ಲುತ್ತಾರೆ. ಆದರೆ ತಂಡದ ಕೆಟ್ಟ ಸಂದರ್ಭಗಳಲ್ಲಿ ಅಭಿಮಾನಿಗಳು ನಮ್ಮ ಜೊತೆ ನಿಲ್ಲಬೇಕು. ಪಾಕಿಸ್ತಾನ್ ಗಲ್ಲಿ ಕ್ರಿಕೆಟ್ ತಂಡವಲ್ಲ. ಈ ತಂಡ ನಿಮ್ಮದೇ. ಹೀಗಾಗಿ ನಮಗೆ ನಿಮ್ಮ ಬೆಂಬಲ ಅಗತ್ಯವಿದೆ ಎಂದು ಶಾಹೀನ್ ಅಫ್ರಿದಿ ಹೇಳಿದ್ದಾರೆ.

ಶಾಹೀನ್ ಅಫ್ರಿದಿಯ ಈ ಭಾವನಾತ್ಮಕ ಹೇಳಿಕೆಯು ಈಗ ಚರ್ಚೆಗೆ ಗ್ರಾಸವಾಗಿದೆ. ಏಕೆಂದರೆ ಯುಎಸ್​ಎ ನಂತಹ ತಂಡದ ವಿರುದ್ಧವೇ ಪಾಕ್ ಪಡೆ ಸೋತಿದೆ. ಇದಾಗ್ಯೂ ನಿಮ್ಮ ಯಾರೂ ಪ್ರಶ್ನೆ ಮಾಡಬಾರದು, ಟೀಕೆ ಮಾಡಬಾರದೆಂದು ಬಯಸುವುದು ಆತ್ಮ ವಿಶ್ವಾಸದ ಪರಮಾವಧಿ ಎಂದು ಅನೇಕರು ಸೋಷಿಯಲ್ ಮೀಡಿಯಾ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಒಂದು ತಂಡ ಮೂರು ಬಾಗಿಲು:

ಪ್ರಸ್ತುತ ಪಾಕಿಸ್ತಾನ್ ತಂಡವು ಒಡೆದ ಮನೆಯಂತಾಗಿದೆ. ಇಲ್ಲಿ ತಂಡವು ಒಂದೇ ಆಗಿದ್ದರೂ, ಆಟಗಾರರಲ್ಲಿ ಮೂರು ಗುಂಪುಗಳಿವೆ ಎಂಬ ಆರೋಪ ಕೇಳಿ ಬಂದಿವೆ. ಈ ಬಣಗಳ ಪ್ರತಿಷ್ಠೆಯಿಂದಾಗಿಯೇ ಈ ಬಾರಿಯ ಟಿ20 ವಿಶ್ವಕಪ್​ನ ಮೊದಲ ಸುತ್ತಿನಲ್ಲಿಯೇ ಪಾಕ್ ಪಡೆ ಮುಗ್ಗರಿಸಿದೆ ಎಂಬ ಮಾತುಗಳು ಸಹ ಕೇಳಿ ಬರುತ್ತಿವೆ.

ಪಾಕ್ ಕೊನೆಯ ಪಂದ್ಯ:

ಪಾಕಿಸ್ತಾನ್ ತಂಡ ಐರ್ಲೆಂಡ್ ವಿರುದ್ಧ ತನ್ನ ಕೊನೆಯ ಪಂದ್ಯವನ್ನು ಆಡಬೇಕಾಗಿದೆ. ಈ ಪಂದ್ಯ ಭಾನುವಾರ ಲಾಡರ್‌ಹಿಲ್‌ನಲ್ಲಿ ನಡೆಯಲಿದ್ದು, ಈ ಪಂದ್ಯದ ಬಳಿಕ ಪಾಕ್ ಪಡೆ ತವರಿಗೆ ಹಿಂತಿರುಗಲಿದೆ.

ಇದನ್ನೂ ಓದಿ: T20 World Cup 2024: ಆಂಗ್ಲರ ಕೈ ಹಿಡಿದ ಆಸ್ಟ್ರೇಲಿಯನ್ನರು

ಆದರೆ ತನ್ನ ಕೊನೆಯ ಪಂದ್ಯದಲ್ಲಿ ಗೆಲ್ಲಬೇಕೆಂಬ ಪಣ ತೊಟ್ಟಿರುವ ಪಾಕಿಸ್ತಾನ್ ಆಸೆಗೆ ವರುಣ ಅವಕೃಪೆ ತೋರುವ ಸಾಧ್ಯತೆಯಿದೆ. ಏಕೆಂದರೆ ಕಳೆದ ಕೆಲ ದಿನಗಳಿಂದ ಫ್ಲೋರಿಡಾದಲ್ಲಿ ಭಾರೀ ಮಳೆಯಾಗುತ್ತಿದೆ. ಅದರಲ್ಲೂ ಶನಿವಾರ ನಡೆಯಬೇಕಿದ್ದ ಭಾರತ ಮತ್ತು ಕೆನಡಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾಗಿತ್ತು. ಹೀಗಾಗಿ ಇಂದು ಪಾಕಿಸ್ತಾನ್ ಮತ್ತು ಐರ್ಲೆಂಡ್ ನಡುವಣ ಪಂದ್ಯ ನಡೆಯುವುದು ಡೌಟ್ ಎನ್ನಬಹುದು.

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ