ಭಾರತ- ಪಾಕ್ ಮುಖಾಮುಖಿಯಲ್ಲಿ ಟಾಸ್ ಗೆದ್ದವರೇ ಬಾಸ್..! ಯಾಕೆ ಗೊತ್ತಾ? ಈ ಅಂಕಿ ಅಂಶ ನೋಡಿ

IND vs Pak, T20 World Cup 2024: ಭಾರತ ಮತ್ತು ಪಾಕಿಸ್ತಾನ ನಡುವೆ ಒಟ್ಟು 12 ಪಂದ್ಯಗಳು ನಡೆದಿವೆ. ಇದರಲ್ಲಿ ಮೊದಲು ಬೌಲಿಂಗ್ ಮಾಡಿದ ತಂಡ ಒಂಬತ್ತು ಪಂದ್ಯಗಳನ್ನು ಗೆದ್ದಿದೆ. ಹೀಗಿರುವಾಗ ನಾಳೆ ನ್ಯೂಯಾರ್ಕ್​ನಲ್ಲಿ ನಡೆಯಲಿರುವ ವಿಶ್ವಕಪ್ 2024ರ ಹೈವೋಲ್ಟೇಜ್ ಪಂದ್ಯದಲ್ಲಿ ವಿಜೇತರನ್ನು ಟಾಸ್ ಸಂದರ್ಭದಲ್ಲಿ ನಿರ್ಧರಿಸಲಾಗುತ್ತದೆ ಎಂದರೆ ತಪ್ಪಾಗದು.

ಭಾರತ- ಪಾಕ್ ಮುಖಾಮುಖಿಯಲ್ಲಿ ಟಾಸ್ ಗೆದ್ದವರೇ ಬಾಸ್..! ಯಾಕೆ ಗೊತ್ತಾ? ಈ ಅಂಕಿ ಅಂಶ ನೋಡಿ
ಭಾರತ- ಪಾಕಿಸ್ತಾನ
Follow us
|

Updated on: Jun 08, 2024 | 8:43 PM

ಕ್ರಿಕೆಟ್ ಲೋಕದಲ್ಲಿ ಭಾರತ ಹಾಗೂ ಪಾಕಿಸ್ತಾನ (India vs Pakistan) ನಡುವಿನ ಕದನಕ್ಕೆ ವಿಶಿಷ್ಟ ಸ್ಥಾನಮಾನಗಳಿವೆ. ಅದರಲ್ಲೂ ಟಿ20 ವಿಶ್ವಕಪ್​ನಲ್ಲಿ (T20 World Cup 2024) ಉಭಯ ತಂಡಗಳು ಮುಖಾಮುಖಿಯಾದಾಗಲ್ಲಂತೂ ಪಂದ್ಯದ ಬಿಸಿ ಉತ್ತುಂಗದಲ್ಲಿರುತ್ತದೆ. ಈ ಮಾದರಿಯಲ್ಲಿ 2007 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆದ ವಿಶ್ವಕಪ್‌ನಲ್ಲಿ ಭಾರತ ಮತ್ತು ಪಾಕಿಸ್ತಾನ ಎರಡು ಬಾರಿ ಮುಖಾಮುಖಿಯಾಗಿದ್ದವು. ಲೀಗ್ ಹಂತದಲ್ಲಿ ಮೊದಲ ಬಾರಿಗೆ ಮತ್ತು ಫೈನಲ್‌ನಲ್ಲಿ ಎರಡನೇ ಬಾರಿಗೆ ಪಂದ್ಯ ನಡೆದಿತ್ತು. ಆ ಆವೃತ್ತಿಯಲ್ಲಿ ಭಾರತ ಎರಡೂ ಪಂದ್ಯಗಳನ್ನು ಗೆದ್ದುಕೊಂಡಿತು. ಅಂದಿನಿಂದ ಇಲ್ಲಿಯವರೆಗೆ ಆಡಿದ ಏಳು ಆವೃತ್ತಿಗಳ ವಿಶ್ವಕಪ್‌ನಲ್ಲಿ ಎರಡೂ ತಂಡಗಳು ಐದು ಬಾರಿ ಮುಖಾಮುಖಿಯಾಗಿವೆ. ಈ ಐದು ಮುಖಾಮುಖಿಯಲ್ಲಿ ಎರಡನೇ ಬಾರಿಗೆ ಬ್ಯಾಟಿಂಗ್ ಮಾಡಿದ ತಂಡವು ಎಲ್ಲಾ ಪಂದ್ಯಗಳನ್ನು ಗೆದ್ದಿದೆ. ಹೀಗಾಗಿಯೇ ಈ ಉಭಯರ ಮುಖಾಮುಖಿಯಲ್ಲಿ ಟಾಸ್ ಗೆದ್ದ ತಂಡಕ್ಕೆ ಹೆಚ್ಚು ಲಾಭವಾಗಲಿದೆ.

ಟಾಸ್ ಗೆದ್ದವರೇ ಬಾಸ್

ಈ ಐದು ಮುಖಾಮುಖಿಯಲ್ಲಿ ಭಾರತ 4 ಪಂದ್ಯಗಳನ್ನು ಗೆದ್ದಿದ್ದರೆ, ಪಾಕಿಸ್ತಾನ ಒಂದು ಪಂದ್ಯವನ್ನು ಗೆದ್ದಿದೆ. 2021 ರಲ್ಲಿ ನಡೆದ ವಿಶ್ವಕಪ್​ನಲ್ಲಿ ಮೊದಲು ಬೌಲಿಂಗ್ ಮಾಡಿದ್ದ ಪಾಕಿಸ್ತಾನ ಭಾರತವನ್ನು ಸೋಲಿಸಿತ್ತು. ಅಂದರೆ ಎರಡನೇ ಬ್ಯಾಟಿಂಗ್ ಮಾಡಿದ ತಂಡ ಶೇ.71ರಷ್ಟು ಪಂದ್ಯಗಳನ್ನು ಗೆದ್ದಿದೆ. ನಾವು ಒಟ್ಟಾರೆ ಟಿ20 ದಾಖಲೆಯ ಬಗ್ಗೆ ಮಾತನಾಡುವುದಾದರೆ, ಭಾರತ ಮತ್ತು ಪಾಕಿಸ್ತಾನ ನಡುವೆ ಒಟ್ಟು 12 ಪಂದ್ಯಗಳು ನಡೆದಿವೆ. ಇದರಲ್ಲಿ ಮೊದಲು ಬೌಲಿಂಗ್ ಮಾಡಿದ ತಂಡ ಒಂಬತ್ತು ಪಂದ್ಯಗಳನ್ನು ಗೆದ್ದಿದೆ. ಹೀಗಿರುವಾಗ ನಾಳೆ ನ್ಯೂಯಾರ್ಕ್​ನಲ್ಲಿ ನಡೆಯಲಿರುವ ವಿಶ್ವಕಪ್ 2024ರ ಹೈವೋಲ್ಟೇಜ್ ಪಂದ್ಯದಲ್ಲಿ ವಿಜೇತರನ್ನು ಟಾಸ್ ಸಂದರ್ಭದಲ್ಲಿ ನಿರ್ಧರಿಸಲಾಗುತ್ತದೆ ಎಂದರೆ ತಪ್ಪಾಗದು.

T20 World Cup 2024: ಭಾರತ-ಪಾಕಿಸ್ತಾನ ಪಂದ್ಯಕ್ಕೂ ಮುನ್ನ ಫನ್ನಿ ಮೀಮ್ಸ್ ವೈರಲ್

ಭಾರತ-ಪಾಕ್ ಪಂದ್ಯದಲ್ಲಿ ಟಾಸ್ ಏಕೆ ಮುಖ್ಯ?

ಪಂದ್ಯಗಳು ರಾತ್ರಿ ನಡೆಯುವುದೇ ಹೆಚ್ಚು

ಸಾಮಾನ್ಯವಾಗಿ, ಟಿ20 ಸ್ವರೂಪದಲ್ಲಿ, ಹೆಚ್ಚಿನ ಪಂದ್ಯಗಳು ರಾತ್ರಿಯಲ್ಲಿ ಪ್ರಾರಂಭವಾಗುತ್ತವೆ. ಅಲ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ಬ್ಯಾಟಿಂಗ್ ಮಾಡುವ ತಂಡವು ಇಬ್ಬನಿಯಿಂದಾಗಿ ಪ್ರಯೋಜನವನ್ನು ಪಡೆಯುತ್ತದೆ. ಏಕೆಂದರೆ ಚೆಂಡು ಒದ್ದೆಯಾಗಿರುವುದರಿಂದ, ಬೌಲರ್​ಗಳಿಗೆ ಚೆಂಡಿನ ಮೇಲೆ ಹಿಡಿತ ಸಾಧಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಬೌಲರ್​ಗಳು ಚೆಂಡಿನ ಮೇಲೆ ನಿಯಂತ್ರಣ ಕಳೆದುಕೊಳ್ಳುತ್ತಾರೆ. ಇದರ ಲಾಭ ಪಡೆಯುವ ಬ್ಯಾಟ್ಸ್‌ಮನ್​ಗಳು ಸುಲಭವಾಗಿ ರನ್ ಬೆನ್ನಟ್ಟುತ್ತಾರೆ. ಆದರೆ ನಾಳಿನ ಪಂದ್ಯ ಕೊಂಚ ಭಿನ್ನವಾಗಿರಲಿದೆ. ಏಕೆಂದರೆ ಜೂನ್ 9 ರಂದು ನಡೆಯಲಿರುವ ಭಾರತ-ಪಾಕಿಸ್ತಾನ ಪಂದ್ಯವು ಸ್ಥಳೀಯ ಕಾಲಮಾನದ ಪ್ರಕಾರ ಹಗಲಿನಲ್ಲಿ ನಡೆಯಲ್ಲಿದೆ.

ಉಭಯ ತಂಡಗಳಿಗೂ ಒತ್ತಡ

ಭಾರತ ಮತ್ತು ಪಾಕಿಸ್ತಾನ ನಡುವಿನ ರಾಜಕೀಯ ಕದನಗಳು ಮತ್ತು ಗಡಿ ವಿವಾದಗಳ ಕಾರಣದಿಂದಾಗಿ ಉಭಯ ತಂಡಗಳು ಈ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿರುತ್ತವೆ. ಹೆಚ್ಚಿನ ಒತ್ತಡದ ಪಂದ್ಯದಲ್ಲಿ, ಮೊದಲು ಬ್ಯಾಟಿಂಗ್ ಮಾಡುವ ತಂಡದ ಮೇಲೆ ಒತ್ತಡವು ಹೆಚ್ಚಾಗಿ ಇರುತ್ತದೆ. ಏಕೆಂದರೆ ನಂತರ ಬ್ಯಾಟಿಂಗ್ ಮಾಡುವ ತಂಡಕ್ಕೆ ನಿರ್ದೀಷ್ಟ ಗುರಿ ತಿಳಿದಿರುತ್ತದೆ.

ಡ್ರಾಪ್-ಇನ್ ಪಿಚ್

ನ್ಯೂಯಾರ್ಕ್‌ನಲ್ಲಿ ಹೊಸದಾಗಿ ನಿರ್ಮಿಸಲಾದ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ಡ್ರಾಪ್-ಇನ್ ಪಿಚ್ ಅನ್ನು ಬಳಸಲಾಗುತ್ತಿದೆ. ಇದನ್ನು ಆಸ್ಟ್ರೇಲಿಯಾದಿಂದ ಆಮದು ಮಾಡಿಕೊಂಡು ಅಳವಡಿಸಲಾಗಿದೆ. ಇಂತಹ ಪಿಚ್‌ಗಳನ್ನು ಹೊಂದಿಸಲು ಸುಮಾರು ಒಂದು ವರ್ಷವಾದರೂ ಸಮಯ ಬೇಕಾಗುತ್ತದೆ. ಆದರೆ ಈ ಪಿಚ್ ಸಿದ್ಧಪಡಿಸಿ ಸರಿಯಾಗಿ 3 ತಿಂಗಳು ಕಳೆದಿಲ್ಲ. ಇದರ ಪರಿಣಾಮವನ್ನು ಭಾರತ-ಐರ್ಲೆಂಡ್ ನಡುವಿನ ಪಂದ್ಯದಲ್ಲಿಯೇ ಕಾಣಲಾಯಿತು.

ಪಿಚ್​ನಲ್ಲಿ ಅಸಮ ಬೌನ್ಸ್, ಅತಿಯಾದ ಸ್ವಿಂಗ್ ಮತ್ತು ಕಳಪೆ ಔಟ್‌ಫೀಲ್ಡ್ ಕಂಡುಬಂದ ಕಾರಣ ತರಾತುರಿಯಲ್ಲಿ ನಿರ್ಮಿಸಲಾದ ಪಿಚ್‌ಗಳನ್ನು ಹೆಚ್ಚು ಟೀಕಿಸಲಾಗುತ್ತಿದೆ. ಬೆಳಗ್ಗೆ ಆರಂಭವಾಗುವ ಪಂದ್ಯದಲ್ಲಿ ಬೌಲರ್‌ಗಳ ಸಹಾಯ ಪಡೆಯುತ್ತಿದ್ದಾರೆ. ಆದರೆ ದಿನ ಕಳೆದಂತೆ ಸೂರ್ಯನ ಬೆಳಕಿನಿಂದ ಬ್ಯಾಟಿಂಗ್ ಸುಲಭವಾಗುತ್ತಿದೆ. ಆದ್ದರಿಂದ ಇಲ್ಲಿಯೂ ಮೊದಲು ಬೌಲಿಂಗ್ ಮಾಡುವ ತಂಡಕ್ಕೆ ಅನುಕೂಲವೇ ಹೆಚ್ಚು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ಮೃತ ರೇಣುಕಾ ತಾಯಿ, ಪತ್ನಿ ಕಣ್ಣೀರು: ಸಾಂತ್ವನ ಹೇಳಿದ ರಂಭಾಪುರಿ ಶ್ರೀಗಳು
ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು
ರೇಣುಕಾ ಸ್ವಾಮಿ ಕೊಲೆ ಕೇಸ್​ನ ಆರೋಪಿ ದರ್ಶನ್​ ಬಗ್ಗೆ ಸುದೀಪ್​ ಮೊದಲ ಮಾತು
ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್
ಪವಿತ್ರಾ ಮನೆಯಲ್ಲಿ ಸ್ಥಳ ಮಹಜರು ವೇಳೆ ನಗ್ತಾ ಸಾಗಿದ ಆರೋಪಿ ಪವನ್
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
ರೇಣುಕಾ ಸ್ವಾಮಿ ಪ್ರಕರಣ: ಕಾರು ಚಾಲಕನ ಕುಟುಂಬದ ಗೋಳು ಕೇಳೋರ್ಯಾರು?
ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ
ಪೆಟ್ರೋಲ್ -ಡೀಸೆಲ್ ದರ ಏರಿಕೆ ವಿರುದ್ಧ ನಾರಿಯರು ಕಿಡಿ
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..
ರೇಣುಕಾ ಸ್ವಾಮಿ ಅಪಹರಣಕ್ಕೆ ಬಳಕೆ ಆಗಿದ್ದ ಕಾರು ಜಪ್ತಿ; ಇಲ್ಲಿದೆ ವಿಡಿಯೋ..
ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ
ಬಳ್ಳಾರಿ: ನೋಬಲ್ ಬುಕ್ ಆಫ್ ರೆಕಾರ್ಡ್ಸ್​​​ಗೆ ಸೇರಿದ 4 ತಿಂಗಳ ಮಗು ಸಾಯಿರಾ
ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ
ಶ್ವಾಸಕೋಶದ ಸಾಮರ್ಥ್ಯ ಹೆಚ್ಚಿಸುವ ಆಸನ ಅರ್ಧ ಚಕ್ರಾಸನ
ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?
ಪವಿತ್ರಾ ಗೌಡ ಮನೆಯಲ್ಲಿ ಮಹಜರು; ಹೇಗಿದೆ ಕೊಲೆ ಆರೋಪಿಯ ಬಂಗಲೆ?
ವಿಡಿಯೋ: ಆದಿಚುಂಚನಗಿರಿಗೆ ಸೆಂಟ್ರಲ್ ಮಿನಿಸ್ಟರ್ ಕುಮಾರಣ್ಣ ಖಡಕ್​ ಎಂಟ್ರಿ
ವಿಡಿಯೋ: ಆದಿಚುಂಚನಗಿರಿಗೆ ಸೆಂಟ್ರಲ್ ಮಿನಿಸ್ಟರ್ ಕುಮಾರಣ್ಣ ಖಡಕ್​ ಎಂಟ್ರಿ