AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಬಾಂಗ್ಲಾ ಪಂದ್ಯಗಳ ಸ್ಥಳ ಬದಲಾವಣೆ; ಬಿಸಿಸಿಐ ಮಹತ್ವದ ನಿರ್ಧಾರ

Bangladesh T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ಪಂದ್ಯಗಳ ವೇಳಾಪಟ್ಟಿ ಬದಲಾವಣೆಯಾಗುವ ಸಾಧ್ಯತೆಯಿದೆ. ಮುಸ್ತಾಫಿಜುರ್ ರೆಹಮಾನ್ ವಿಚಾರದ ನಂತರ ಬಾಂಗ್ಲಾ ಕ್ರಿಕೆಟ್ ಮಂಡಳಿ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಲು ಒತ್ತಾಯಿಸಿತ್ತು. ಆದರೆ ಬಿಸಿಸಿಐ ಒಪ್ಪದೆ, ಬಾಂಗ್ಲಾ ತಂಡದ ಪಂದ್ಯಗಳನ್ನು ಕೋಲ್ಕತ್ತಾ, ಮುಂಬೈನಿಂದ ದಕ್ಷಿಣ ಭಾರತದ ಚೆನ್ನೈ, ತಿರುವನಂತಪುರಂಗೆ ಸ್ಥಳಾಂತರಿಸಲು ಚಿಂತಿಸಿದೆ. ಭದ್ರತೆಯ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

T20 World Cup 2026: ಬಾಂಗ್ಲಾ ಪಂದ್ಯಗಳ ಸ್ಥಳ ಬದಲಾವಣೆ; ಬಿಸಿಸಿಐ ಮಹತ್ವದ ನಿರ್ಧಾರ
Bangladesh
ಪೃಥ್ವಿಶಂಕರ
|

Updated on:Jan 12, 2026 | 4:13 PM

Share

2026 ರ ಟಿ20 ವಿಶ್ವಕಪ್‌ (T20 World Cup 2026) ವೇಳಾಪಟ್ಟಿ ಬದಲಾಗುವ ಸೂಚನೆಗಳು ಸಿಕ್ಕಿವೆ. ಬಾಂಗ್ಲಾದೇಶ ವೇಗಿ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ (IPL) ಕೈಬಿಟ್ಟ ಬಳಿಕ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಭಾರತದಲ್ಲಿ ಟಿ20 ವಿಶ್ವಕಪ್ ಆಡಲು ಹಿಂದೇಟು ಹಾಕುತ್ತಿದೆ. ವೇಳಾಪಟ್ಟಿಯ ಪ್ರಕಾರ, ಬಾಂಗ್ಲಾದೇಶದ ಪಂದ್ಯಗಳು ಕೋಲ್ಕತ್ತಾ ಮತ್ತು ಮುಂಬೈನಲ್ಲಿ ನಡೆಯಬೇಕಿತ್ತು. ಆದರೆ ಭದ್ರತೆಯ ದೃಷ್ಟಿಯಿಂದ ಬಾಂಗ್ಲಾದೇಶ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿರಲು ನಿರ್ಧರಿಸಿದೆ. ಇದರ ಜೊತೆಗೆ ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸಬೇಕು ಎಂಬ ಬೇಡಿಕೆಯನ್ನು ಐಸಿಸಿ ಮುಂದಿಟ್ಟಿದೆ. ಆದರೆ ಐಸಿಸಿ ಹಾಗೂ ಬಿಸಿಸಿಐ ಮಾತ್ರ ಇದಕ್ಕೆ ಸಿದ್ಧವಿಲ್ಲ. ಆದಾಗ್ಯೂ ಸಧ್ಯಕ್ಕೆ ಸಿಕ್ಕಿರುವ ಮಾಹಿತಿ ಪ್ರಕಾರ, ಬಾಂಗ್ಲಾದೇಶ ತಂಡದ ಪಂದ್ಯಗಳ ಸ್ಥಳಗಳನ್ನು ಭಾರತದಲ್ಲೇ ಬೇರೆಡೆಗೆ ಸ್ಥಳಾಂತರಿಸಲು ಬಿಸಿಸಿಐ (BCCI) ಚಿಂತಿಸಿದೆ.

ಬಾಂಗ್ಲಾ ಪಂದ್ಯಗಳ ಸ್ಥಳ ಬದಲಾವಣೆ

ಕ್ರಿಕ್‌ಬಜ್ ವರದಿಯ ಪ್ರಕಾರ, ಬಾಂಗ್ಲಾದೇಶದ ಪಂದ್ಯಗಳ ಸ್ಥಳವನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸುವ ಸಾಧ್ಯತೆ ಕಡಿಮೆಯದ್ದು, ದಕ್ಷಿಣ ಭಾರತದಲ್ಲಿ ಪಂದ್ಯಗಳನ್ನು ನಡೆಸುವ ಸಾಧ್ಯತೆ ಹೆಚ್ಚು ಎಂದು ವರದಿಯಾಗಿದೆ. ಇದರರ್ಥ ಬಾಂಗ್ಲಾದೇಶ ತಂಡದ ಪಂದ್ಯಗಳನ್ನು ಕೋಲ್ಕತ್ತಾ ಮತ್ತು ಮುಂಬೈ ಬದಲಿಗೆ ಚೆನ್ನೈ ಮತ್ತು ತಿರುವನಂತಪುರದಲ್ಲಿ ನಡೆಸಬಹುದು.

ಮೇಲೆ ಹೇಳಿದಂತೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಹತ್ಯೆಯ ವಿರುದ್ಧದ ಪ್ರತಿಭಟನೆಗಳಿಗೆ ಪ್ರತಿಕ್ರಿಯೆಯಾಗಿ ಬಿಸಿಸಿಐ ಬಾಂಗ್ಲಾದೇಶದ ಆಟಗಾರ ಮುಸ್ತಾಫಿಜುರ್ ರೆಹಮಾನ್ ಅವರನ್ನು ಐಪಿಎಲ್‌ನಿಂದ ಹೊರಹಾಕಿತು. ಈ ಕ್ರಮಕ್ಕೆ ಪ್ರತಿಕ್ರಿಯೆಯಾಗಿ, ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯು ಐಸಿಸಿಗೆ ಇಮೇಲ್ ಮಾಡಿ, ತನ್ನ ತಂಡದ 2026 ರ ಟಿ20 ವಿಶ್ವಕಪ್ ಪಂದ್ಯಗಳನ್ನು ಸ್ಥಳಾಂತರಿಸುವಂತೆ ಕೋರಿತು. ಅದರಂತೆ ಬಾಂಗ್ಲಾದೇಶದ ಪಂದ್ಯಗಳ ಸ್ಥಳಗಳನ್ನು ಬದಲಾವಣೆ ಮಾಡಲು ಬಿಸಿಸಿಐ ಮುಂದಾಗಿದೆ. ಆದಾಗ್ಯೂ, ಬಿಸಿಸಿಐನ ಈ ನಿರ್ಧಾರವನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಒತ್ತಾಯದಿಂದ ತೆಗೆದುಕೊಂಡಿದೆ ಎಂದು ಹೇಳುವುದು ಕಷ್ಟ. ಏಕೆಂದರೆ ಉತ್ತರ ಭಾರತದಲ್ಲಿ ಬಾಂಗ್ಲಾದೇಶದ ಪಂದ್ಯಗಳನ್ನು ಆಯೋಜಿಸುವುದು ಕಷ್ಟಕರ ಎಂಬುದನ್ನು ಅರಿತಿರುವ ಬಿಸಿಸಿಐ, ಅದರ ಪಂದ್ಯಗಳನ್ನು ದಕ್ಷಿಣ ಭಾರತಕ್ಕೆ ಸ್ಥಳಾಂತರಿಸಲು ನೋಡುತ್ತಿದೆ.

T20 World Cup 2026: ಟಿ20 ವಿಶ್ವಕಪ್​ನಿಂದ ಬಾಂಗ್ಲಾ ಹಿಂದೆ ಸರಿದರೆ ಯಾವ ತಂಡಕ್ಕೆ ಅವಕಾಶ?

ಬಾಂಗ್ಲಾದೇಶದ ಪ್ರಸ್ತುತ ವೇಳಾಪಟ್ಟಿ

ಬಾಂಗ್ಲಾದೇಶ ಫೆಬ್ರವರಿ 7 ರಂದು 2026 ರ ಟಿ20 ವಿಶ್ವಕಪ್‌ನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ವೇಳಾಪಟ್ಟಿಯ ಪ್ರಕಾರ, ಅದು ತನ್ನ ಮೊದಲ ಪಂದ್ಯವನ್ನು ಕೋಲ್ಕತ್ತಾದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಡಬೇಕಿತ್ತು. ಇದರ ನಂತರ, ಫೆಬ್ರವರಿ 9 ರಂದು ಇಟಲಿ ಮತ್ತು ಫೆಬ್ರವರಿ 14 ರಂದು ಇಂಗ್ಲೆಂಡ್ ವಿರುದ್ಧ ಸೆಣಸಲಿದೆ. ಈ ಎರಡೂ ಪಂದ್ಯಗಳು ಸಹ ಕೋಲ್ಕತ್ತಾದಲ್ಲಿ ನಡೆಯಲಿವೆ. ಬಾಂಗ್ಲಾದೇಶ ಫೆಬ್ರವರಿ 17 ರಂದು ಮುಂಬೈನಲ್ಲಿ ನೇಪಾಳ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು ಆಡಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Mon, 12 January 26

ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?