AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2026: ಟಿ20 ವಿಶ್ವಕಪ್​ಗೆ ಸ್ಕಾಟ್ಲೆಂಡ್ ಎಂಟ್ರಿ; ಯಾವ ಗುಂಪಿನಲ್ಲಿ ಸ್ಥಾನ?

2026 T20 World Cup Shocker: 2026ರ ಟಿ20 ವಿಶ್ವಕಪ್​ನಿಂದ ಬಾಂಗ್ಲಾದೇಶ ತಂಡ ಅನಿರೀಕ್ಷಿತವಾಗಿ ಹಿಂದೆ ಸರಿದಿದೆ. ಪಂದ್ಯಗಳ ಸ್ಥಳಾಂತರಕ್ಕೆ ಅಸಮಾಧಾನಗೊಂಡು ಬಾಂಗ್ಲಾ ಕ್ರಿಕೆಟ್ ಮಂಡಳಿ ಈ ನಿರ್ಧಾರ ತೆಗೆದುಕೊಂಡಿದೆ. ಇದರ ಪರಿಣಾಮವಾಗಿ, ಸ್ಕಾಟ್‌ಲೆಂಡ್‌ ತಂಡಕ್ಕೆ ವಿಶ್ವಕಪ್‌ನಲ್ಲಿ ಆಡುವ ಅವಕಾಶ ಲಭಿಸಿದೆ. ಸ್ಕಾಟ್‌ಲೆಂಡ್‌ ಈ ಹಿಂದೆ ಅರ್ಹತೆ ಗಳಿಸದಿದ್ದರೂ, ಈಗ ಸಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಇದು ಸ್ಕಾಟ್‌ಲೆಂಡ್‌ಗೆ ಸತತ ಐದನೇ ಟಿ20 ವಿಶ್ವಕಪ್ ಆಗಲಿದೆ, ಆದರೂ ಅವರ ದಾಖಲೆ ಅಷ್ಟೇನೂ ಉತ್ತಮವಾಗಿಲ್ಲ.

T20 World Cup 2026: ಟಿ20 ವಿಶ್ವಕಪ್​ಗೆ ಸ್ಕಾಟ್ಲೆಂಡ್ ಎಂಟ್ರಿ; ಯಾವ ಗುಂಪಿನಲ್ಲಿ ಸ್ಥಾನ?
Scotland
ಪೃಥ್ವಿಶಂಕರ
|

Updated on: Jan 22, 2026 | 6:31 PM

Share

2026 ರ ಟಿ20 ವಿಶ್ವಕಪ್‌ (T20 World Cup 2026) ಆರಂಭಕ್ಕೆ ಇನ್ನು ಕೆಲವೇ ಕೆಲವು ದಿನಗಳು ಬಾಕಿ ಉಳಿದಿವೆ. ಆದರೆ ಅದಕ್ಕೂ ಮುನ್ನ ಈ ಟೂರ್ನಿಯಲ್ಲಿ ಮಹತ್ತರ ಬದಲಾವಣೆಯೊಂದಾಗಿದ್ದು, ಬಾಂಗ್ಲಾದೇಶ ತಂಡ ಟಿ20 ವಿಶ್ವಕಪ್​ನಿಂದ ಹಿಂದೆ ಸರಿದಿದೆ. ಭಾರತದಿಂದ ತನ್ನ ತಂಡದ ಪಂದ್ಯಗಳನ್ನು ಶ್ರೀಲಂಕಾಕ್ಕೆ ಸ್ಥಳಾಂತರಿಸದಿರುವುದರಿಂದ ಅಸಮಾಧಾನಗೊಂಡಿರುವ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ತನ್ನ ತಂಡದ ಹೆಸರನ್ನು ಟೂರ್ನಿಯಿಂದ ಹಿಂಪಡೆದಿದೆ. ಬಾಂಗ್ಲಾದೇಶ ತನ್ನ ತಂಡವನ್ನು ಭಾರತಕ್ಕೆ ಕಳುಹಿಸದಿದ್ದರೆ, ಅದರ ಸ್ಥಾನದಲ್ಲಿ ಸ್ಕಾಟ್ಲೆಂಡ್​ಗೆ ಟಿ20 ವಿಶ್ವಕಪ್ ಆಡುವ ಅವಕಾಶ ನೀಡಲಾಗುವುದು ಎಂದು ಐಸಿಸಿ ಎಚ್ಚರಿಕೆ ನೀಡಿತ್ತು. ಆ ಪ್ರಕಾರ, ಸ್ಕಾಟಿಷ್ ತಂಡ ಮಿನಿ ವಿಶ್ವಕಪ್ ಸಮರದಲ್ಲಿ ಕಾಣಿಸಿಕೊಳ್ಳಲಿದೆ.

ಈ ಮೊದಲು ಐಸಿಸಿ ಪ್ರಕಟಿಸಿದ ವೇಳಾಪಟ್ಟಿಯ ಪ್ರಕಾರ, ಬಾಂಗ್ಲಾದೇಶ ತಂಡವನ್ನು ಸಿ ಗುಂಪಿನಲ್ಲಿ ಇರಿಸಲಾಗಿತ್ತು. ಈ ಗುಂಪಿನಲ್ಲಿ ಬಾಂಗ್ಲಾದೇಶ ತಂಡವನ್ನು ಹೊರತುಪಡಿಸಿ ಇಂಗ್ಲೆಂಡ್, ಇಟಲಿ, ನೇಪಾಳ ಹಾಗೂ ವೆಸ್ಟ್ ಇಂಡೀಸ್ ತಂಡಗಳು ಇದ್ದವು. ಇದೀಗ ಬಾಂಗ್ಲಾದೇಶ ಹೊರಬಿದ್ದಿರುವುದರಿಂದ ಅದರ ಜಾಗದಲ್ಲಿ ಸ್ಕಾಟ್ಲೆಂಡ್ ಆಡಲಿದೆ. ವೇಳಾಪಟ್ಟಿಯ ಪ್ರಕಾರ ಸ್ಕಾಟ್ಲೆಂಡ್ ತನ್ನ ಮೊದಲ ಪಂದ್ಯವನ್ನು ಫೆಬ್ರವರಿ 7 ರಂದು ವೆಸ್ಟ್ ಇಂಡೀಸ್ ವಿರುದ್ಧ ಆಡಲಿದೆ.

ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್‌ ದಾಖಲೆ ಹೇಗಿದೆ?

ಈ ವರ್ಷದ ಟಿ20 ವಿಶ್ವಕಪ್‌ಗೆ ಅರ್ಹತೆ ಪಡೆಯುವಲ್ಲಿ ಸ್ಕಾಟ್ಲೆಂಡ್ ವಿಫಲವಾಯಿತು. ಯುರೋಪಿಯನ್ ಅರ್ಹತಾ ಸುತ್ತಿನಲ್ಲಿ ಸ್ಕಾಟ್ಲೆಂಡ್ ನಾಲ್ಕನೇ ಸ್ಥಾನ ಗಳಿಸಿತು, ಆದರೆ ಈಗ ಸ್ಕಾಟ್ಲೆಂಡ್​ಗೆ ಪಂದ್ಯಾವಳಿಯಲ್ಲಿ ಆಡಲು ಅವಕಾಶ ಸಿಕ್ಕಿದೆ. ಐಸಿಸಿ ಇನ್ನೂ ಯಾವುದೇ ಘೋಷಣೆ ಮಾಡದಿದ್ದರೂ, ನಿಯಮಗಳ ಪ್ರಕಾರ ಸ್ಕಾಟ್ಲೆಂಡ್‌ನ ಸ್ಥಾನ ಖಚಿತವೆಂದು ಪರಿಗಣಿಸಲಾಗಿದೆ. ಇದು ಸಂಭವಿಸಿದಲ್ಲಿ, ಸ್ಕಾಟ್ಲೆಂಡ್ ತಂಡ ಸತತ ಐದನೇ ಬಾರಿಗೆ ಟಿ20 ವಿಶ್ವಕಪ್‌ನಲ್ಲಿ ಆಡಲಿದೆ.

ಟಿ20 ವಿಶ್ವಕಪ್‌ನಲ್ಲಿ ಸ್ಕಾಟ್ಲೆಂಡ್‌ನ ದಾಖಲೆ ಅಷ್ಟೊಂದು ಉತ್ತಮವಾಗಿಲ್ಲ. ಆರು ಬಾರಿ ಟೂರ್ನಮೆಂಟ್‌ನಲ್ಲಿ ಭಾಗವಹಿಸಿರುವ ಸ್ಕಾಟ್ಲೆಂಡ್, 22 ಪಂದ್ಯಗಳನ್ನು ಆಡಿದ್ದು, ಕೇವಲ ಏಳರಲ್ಲಿ ಗೆಲುವು ಮತ್ತು 13 ಪಂದ್ಯಗಳಲ್ಲಿ ಸೋಲು ಕಂಡಿದೆ. 2021 ರಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಸ್ಕಾಟ್ಲೆಂಡ್, ಸೂಪರ್ 12 ಸುತ್ತಿಗೆ ಅರ್ಹತೆ ಪಡೆದಿತ್ತು. ಸ್ಕಾಟ್ಲೆಂಡ್ ಎಂದಿಗೂ ಗುಂಪು ಹಂತವನ್ನು ಮೀರಿ ಮುಂದಕ್ಕೆ ಸಾಗಿಲ್ಲ (ಸೂಪರ್ 12 ಗಳನ್ನು ಹೊರತುಪಡಿಸಿ). ಆದಾಗ್ಯೂ ಸ್ಕಾಟ್ಲೆಂಡ್ ತಂಡವನ್ನು ಸುಲಭವಾಗಿ ಪರಿಗಣಿಸುವಂತಿಲ್ಲ.

T20 World Cup 2026: ಟಿ20 ವಿಶ್ವಕಪ್​ ಬಹಿಷ್ಕರಿಸಿದ ಬಾಂಗ್ಲಾದೇಶ

ಈ ಮೊದಲು ಸ್ಕಾಟ್ಲೆಂಡ್​ಗೆ ಅದೃಷ್ಟ ಒಲಿದಿತ್ತು

2009 ರಲ್ಲಿ ಇಂಗ್ಲೆಂಡ್​ನಲ್ಲಿ ಟಿ20 ವಿಶ್ವಕಪ್​ ಅನ್ನು ಆಯೋಜಿಸಿದ್ದಾಗ ಇದೇ ರೀತಿಯ ಪರಿಸ್ಥಿತಿ ಕಂಡುಬಂದಿತ್ತು. ಆ ಸಮಯದಲ್ಲಿ ಜಿಂಬಾಬ್ವೆ ಮತ್ತು ಯುಕೆ ಸರ್ಕಾರದ ನಡುವಿನ ಸಂಬಂಧಗಳು ಹದಗೆಟ್ಟಿದ್ದವು. ಅಂತಿಮವಾಗಿ ಕ್ರಿಕೆಟ್‌ನ ಹಿತಾಸಕ್ತಿಯಿಂದ ಜಿಂಬಾಬ್ವೆ ಪಂದ್ಯಾವಳಿಯಿಂದ ಹಿಂದೆ ಸರಿದಿತ್ತು. ಇದರ ಪರಿಣಾಮವಾಗಿ ಸ್ಕಾಟ್ಲೆಂಡ್ ಅಸೋಸಿಯೇಟ್ ತಂಡವಾಗಿ ಅರ್ಹತೆ ಪಡೆದಿತ್ತು. ಆದರೆ ಈ ಪಂದ್ಯಾವಳಿಯಲ್ಲಿ ಜಿಂಬಾಬ್ವೆ ಭಾಗವಹಿಸದಿದ್ದರೂ ಸಹ ಪಂದ್ಯಾವಳಿಯಿಂದ ಸಿಗಬೇಕಿದ್ದ ಆದಾಯವನ್ನು ಪರಿಹಾರವಾಗಿ ಪಡೆದುಕೊಂಡಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
ಪ್ರಮಾಣವಚನಕ್ಕೂ ಮುನ್ನವೇ ಡಿಕೆಶಿ​​​ ನಿವಾಸಕ್ಕೆ ಭದ್ರತೆ ಹೇಗಿದೆ ನೋಡಿ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ