AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs PAK: ಕೊಲಂಬೊದಲ್ಲಿ ಕಕ್ಕಾಬಿಕ್ಕಿಯಾದ ಪಾಕಿಸ್ತಾನ; ಭಾರತಕ್ಕೆ 61 ರನ್ ಜಯ

India vs Pakistan T20 World Cup 2026: 2026ರ ಟಿ20 ವಿಶ್ವಕಪ್‌ನಲ್ಲಿ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಭಾರತ-ಪಾಕಿಸ್ತಾನ ಪಂದ್ಯದಲ್ಲಿ ಭಾರತ ಭರ್ಜರಿ ಗೆಲುವು ಸಾಧಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಇಶಾನ್ ಕಿಶನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 175 ರನ್ ಗಳಿಸಿ, ಪಾಕಿಸ್ತಾನಕ್ಕೆ 176 ರನ್ ಗಳ ಗುರಿ ನೀಡಿತ್ತು. ಭಾರತದ ಕರಾರುವಕ್ಕಾದ ಬೌಲಿಂಗ್ ದಾಳಿಗೆ ಕಕ್ಕಾಬಿಕ್ಕಿಯಾದ ಪಾಕಿಸ್ತಾನ 114 ರನ್‌ಗಳಿಗೆ ಆಲೌಟ್ ಆಗಿ, ಸೋಲಪ್ಪಿಕೊಂಡಿತು.

IND vs PAK: ಕೊಲಂಬೊದಲ್ಲಿ ಕಕ್ಕಾಬಿಕ್ಕಿಯಾದ ಪಾಕಿಸ್ತಾನ; ಭಾರತಕ್ಕೆ 61 ರನ್ ಜಯ
Team India
ಪೃಥ್ವಿಶಂಕರ
|

Updated on:Feb 15, 2026 | 10:54 PM

Share

ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ 2026 ರ ಟಿ20 ವಿಶ್ವಕಪ್​ನಲ್ಲಿ (T20 World Cup 2026) ಭಾರತ ಹಾಗೂ ಪಾಕಿಸ್ತಾನ (India vs Pakistan) ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ಇಶಾನ್ ಕಿಶನ್ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ 175 ರನ್ ಕಲೆಹಾಕಿ, ಪಾಕಿಸ್ತಾನಕ್ಕೆ 176 ರನ್​ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಪಾಕಿಸ್ತಾನ, ಭಾರತದ ಕರಾರುವಕ್ಕಾದ ದಾಳಿಗೆ ಕಕ್ಕಾಬಿಕ್ಕಿಯಾಗಿ ಪೂರ್ಣ 20 ಓವರ್​ಗಳನ್ನು ಆಡಲಾಗದೆ 114 ರನ್​ಗಳಿಗೆ ಆಲೌಟ್ ಆಯಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಇನ್ನೊಂದು ಪಂದ್ಯ ಬಾಕಿ ಇರುವಂತೆಯೇ ಸೂಪರ್ 8 ಸುತ್ತಿಗೆ ಟಿಕೆಟ್ ಖಚಿತಪಡಿಸಿಕೊಂಡಿದೆ. ಹಾಗೆಯೇ ಟಿ20 ವಿಶ್ವಕಪ್​ನಲ್ಲಿ ಪಾಕಿಸ್ತಾನ ವಿರುದ್ಧ ಗೆಲುವಿನ ಅಂತರವನ್ನು8-1 ಕ್ಕೆ ಕೊಂಡೊಯ್ದಿದೆ.

ಭಾರತಕ್ಕೆ ಏಕಪಕ್ಷೀಯ ಗೆಲುವು

ವಾಸ್ತವವಾಗಿ ಉಭಯ ತಂಡಗಳ ನಡುವಿನ ಈ ಪಂದ್ಯ ನಡೆಯುವುದು ಅನುಮಾನವಾಗಿತ್ತು. ಇದಕ್ಕೆ ಕಾರಣ, ಪಾಕಿಸ್ತಾನ ಸರ್ಕಾರ ತೆಗೆದುಕೊಂಡಿದ್ದ ನಿರ್ಧಾರ. ಬಾಂಗ್ಲಾದೇಶ ತಂಡವನ್ನು ಟಿ20 ವಿಶ್ವಕಪ್​ನಿಂದ ಹೊರಹಾಕಿದ್ದಕ್ಕೆ ಮುನಿದಿದ್ದ ಪಾಕ್ ಸರ್ಕಾರ, ನಮ್ಮ ತಂಡ ಟೀಂ ಇಂಡಿಯಾ ವಿರುದ್ಧದ ಪಂದ್ಯವನ್ನು ಆಡುವುದಿಲ್ಲ ಎಂದಿತ್ತು. ಆದರೆ ಆ ಬಳಿಕ ಪಾಕ್ ಸರ್ಕಾರದ ಮನವೊಲಿಸುವಲ್ಲಿ ಐಸಿಸಿ ಯಶಸ್ವಿಯಾಗಿತ್ತು. ಅದರಂತೆ ನಡೆದಿದ್ದ ಈ ಪಂದ್ಯವನ್ನು ಟೀಂ ಇಂಡಿಯಾ ಏಕಪಕ್ಷೀಯಾವಾಗಿ ಗೆದ್ದುಕೊಂಡಿತು.

ಭಾರತಕ್ಕೆ ಆರಂಭಿಕ ಆಘಾತ

ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕಿಸ್ತಾನ ತಂಡ ಮೊದಲು ಬೌಲಿಂಗ್ ಆಯ್ದುಕೊಂಡು, ಮೊದಲ ಓವರ್‌ನಲ್ಲಿಯೇ ಸ್ಫೋಟಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಅವರನ್ನು 0 ರನ್‌ಗೆ ಔಟ್ ಮಾಡಿತು. ಇದರ ಹೊರತಾಗಿಯೂ ಪಾಕ್ ತಂಡಕ್ಕೆ ಪಂದ್ಯದ ಮೇಲೆ ಹಿಡಿತ ಸಾಧಿಸಲು ಸಾಧ್ಯವಾಗಲಿಲ್ಲ. ಇದಕ್ಕೆ ಕಾರಣ ಪಾಕೆಟ್ ಡೈನಮೋ ಇಶಾನ್ ಕಿಶನ್, ಪಾಕ್ ತಂಡದ ಪ್ರತಿ ಬೌಲರ್‌ಗಳನ್ನು ಕಾಡಿದ ಕಿಶನ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿಕೊಟ್ಟರು. ಇದರ ಜೊತೆಗೆ ಕೇವಲ 40 ಎಸೆತಗಳಲ್ಲಿ 77 ರನ್‌ಗಳ ಬಿರುಸಿನ ಇನ್ನಿಂಗ್ಸ್ ಆಡಿ, ಪಾಕಿಸ್ತಾನವನ್ನು ಆರಂಭದಲ್ಲೇ ಪಂದ್ಯದಿಂದ ಹೊರದಬ್ಬಿದರು.

175 ರನ್ ಕಲೆಹಾಕಿದ ಭಾರತ

ಆದಾಗ್ಯೂ ಇಶಾನ್ ಕಿಶನ್ ಹೊರತುಪಡಿಸಿ, ಭಾರತದ ಯಾವ ಬ್ಯಾಟ್ಸ್‌ಮನ್‌ಗೂ ಪಾಕ್ ವಿರುದ್ಧ ಮುಕ್ತವಾಗಿ ಬ್ಯಾಟ್ ಬೀಸಲು ಸಾಧ್ಯವಾಗಲಿಲ್ಲ. ಆದಾಗ್ಯೂ ನಾಯಕ ಸೂರ್ಯಕುಮಾರ್ ಯಾದವ್ (32 ರನ್) ಮತ್ತು ತಿಲಕ್ ವರ್ಮಾ (25 ರನ್) ತಾಳ್ಮೆಯ ಇನ್ನಿಂಗ್ಸ್ ಕಟ್ಟುವ ಮೂಲಕ ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ಯುವಲ್ಲಿ ನೆರವಾದರು. ಇವರ ಜೊತೆಗೆ ಶಿವಂ ದುಬೆ (27 ರನ್) ಮತ್ತು ರಿಂಕು ಸಿಂಗ್ (11 ರನ್) ಕೂಡ ಕೊನೆಯ ಓವರ್‌ಗಳಲ್ಲಿ ಉಪಯುಕ್ತ ಇನ್ನಿಂಗ್ಸ್ ಆಡಿ ತಂಡವನ್ನು 175 ರನ್​ಗಳಿಗೆ ಕೊಂಡೊಯ್ದರು.

IND vs PAK: ಚೊಚ್ಚಲ ಪಂದ್ಯದಲ್ಲೇ ದಾಖಲೆಯ ಅರ್ಧಶತಕ ಬಾರಿಸಿದ ಇಶಾನ್ ಕಿಶನ್

ಆರಂಭದಲ್ಲೇ ಕುಸಿದ ಪಾಕಿಸ್ತಾನ

ಈ ಗುರಿ ಬೆನ್ನಟ್ಟಿದ ಪಾಕಿಸ್ತಾನದ ಆರಂಭವೂ ಕೂಡ ಟೀಂ ಇಂಡಿಯಾದಂತೆ ಇತ್ತು. ಹಾರ್ದಿಕ್ ಪಾಂಡ್ಯ ಮೊದಲ ಓವರ್‌ನಲ್ಲಿ ಸಾಹಿಬ್‌ಜಾದಾ ಫರ್ಹಾನ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ಆದರೆ, ಆ ನಂತರದ ಕಥೆ ಸಂಪೂರ್ಣವಾಗಿ ಭಿನ್ನವಾಗಿತ್ತು. ಮೊದಲ ವಿಕೆಟ್ ಪತನದ ಬಳಿಕ ಟೀಂ ಇಂಡಿಯಾ ಪರ ಇಶಾನ್ ಕಿಶನ್ ಅಬ್ಬರದ ಇನ್ನಿಂಗ್ಸ್ ಆಡಿದರೆ, ಇತ್ತ ಪಾಕಿಸ್ತಾನದ ಬ್ಯಾಟರ್​ಗಳ ಮೇಲೆ ಟೀಂ ಇಂಡಿಯಾ ಬೌಲರ್‌ಗಳು ಸವಾರಿ ನಡೆಸಿದರು. ಎರಡನೇ ಓವರ್‌ನಲ್ಲಿ ಜಸ್ಪ್ರೀತ್ ಬುಮ್ರಾ ಆರು ಎಸೆತಗಳಲ್ಲಿ ಸ್ಯಾಮ್ ಅಯೂಬ್ ಮತ್ತು ನಾಯಕ ಸಲ್ಮಾನ್ ಅಘಾ ಅವರನ್ನು ಔಟ್ ಮಾಡುವ ಮೂಲಕ ಪಾಕ್ ತಂಡಕ್ಕೆ ಬ್ಯಾಕ್ ಟು ಬ್ಯಾಕ್ ಆಘಾತ ನೀಡಿದರು.

114 ರನ್​ಗಳಿಗೆ ಪಾಕ್ ಇನ್ನಿಂಗ್ಸ್ ಅಂತ್ಯ

ಇದಾದ ನಂತರ, ದಾಳಿಗಿಳಿದ ಭಾರತದ ಸ್ಪಿನ್ನರ್‌ಗಳು ಪಾಕಿಸ್ತಾನಿ ಬ್ಯಾಟ್ಸ್‌ಮನ್‌ಗಳನ್ನು ಒಬ್ಬೊಬ್ಬರನ್ನಾಗಿ ಪೆವಿಲಿಯನ್‌ಗೆ ಕಳುಹಿಸಿದರು. ಅಕ್ಷರ್ ಪಟೇಲ್, ಬಾಬರ್ ಆಝಂ ಅವರನ್ನು 5 ರನ್‌ಗಳಿಗೆ ಔಟ್ ಮಾಡಿದರೆ, ತಿಲಕ್ ವರ್ಮಾ, ಶದಾಬ್ ಖಾನ್ ಅವರ ವಿಕೆಟ್ ಪಡೆದರು. ಪಾಕ್ ಪರ ಏಕಾಂಗಿ ಹೋರಾಟ ನೀಡಿದ ಉಸ್ಮಾನ್ ಖಾನ್ 44 ರನ್​ಗಳ ಇನ್ನಿಂಗ್ಸ್ ಆಡಿದರು. ಅಂತಿಮವಾಗಿ, ಪಾಕಿಸ್ತಾನ 18 ಓವರ್‌ಗಳಲ್ಲಿ ಕೇವಲ 114 ರನ್‌ಗಳಿಗೆ ಆಲೌಟ್ ಆಯಿತು. ಟೀಂ ಇಂಡಿಯಾ ಪರ ಹಾರ್ದಿಕ್, ಬುಮ್ರಾ, ಅಕ್ಷರ್ ಮತ್ತು ವರುಣ್ ಚಕ್ರವರ್ತಿ ತಲಾ 2 ವಿಕೆಟ್ ಪಡೆದರೆ, ತಿಲಕ್ ಮತ್ತು ಕುಲ್ದೀಪ್ ಯಾದವ್ ತಲಾ 1 ವಿಕೆಟ್ ಪಡೆದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:19 pm, Sun, 15 February 26

‘ಬಿಗ್​​ಬಾಸ್ ಬಳಿಕ ಹೇಗಿದೆ ಜೀವನ?’ ಕಾರ್ತಿಕ್ ಮಹೇಶ್ ಮಾತು: ವಿಡಿಯೋ ನೋಡಿ
‘ಬಿಗ್​​ಬಾಸ್ ಬಳಿಕ ಹೇಗಿದೆ ಜೀವನ?’ ಕಾರ್ತಿಕ್ ಮಹೇಶ್ ಮಾತು: ವಿಡಿಯೋ ನೋಡಿ
ರಂಗೋಲಿಯಲ್ಲಿ ಅರಳಿದ ಶಿವ: ಡ್ರೋಣ್ ನಲ್ಲಿ ಶಿವನ ಚಿತ್ರ ಸೆರೆ
ರಂಗೋಲಿಯಲ್ಲಿ ಅರಳಿದ ಶಿವ: ಡ್ರೋಣ್ ನಲ್ಲಿ ಶಿವನ ಚಿತ್ರ ಸೆರೆ
ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ
ಇಶಾ ಫೌಂಡೇಷನ್​​ನಲ್ಲಿ ಅದ್ದೂರಿ ಶಿವರಾತ್ರಿ ಸಂಭ್ರಮ; ನೇರ ಪ್ರಸಾರ ಇಲ್ಲಿದೆ
50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
50ನೇ ಸಿನಿಮಾ ‘ಕಿಂಗ್’ ಬಗ್ಗೆ ಲೂಸ್ ಮಾದ ಯೋಗಿ ಮಾತು: ವಿಡಿಯೋ ನೋಡಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಕರಾವಳಿ ಯುವತಿಯರೇ ಟಾರ್ಗೆಟ್: ಇದು ಮಂಗಳೂರು ಮನ್ಮಥನ ಭಯಾನಕ ಸ್ಟೋರಿ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ಮಹಾಶಿವರಾತ್ರಿ ಸಂಭ್ರಮದ ಮಧ್ಯೆ ಶಿವಲಿಂಗ ಮೂರ್ತಿ ಭಗ್ನ: ರೊಚ್ಚಿಗೆದ್ದ ಜನ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಬಲಿಷ್ಠ ಸ್ಥಿತಿಯಲ್ಲಿ ಕರ್ನಾಟಕ
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ರಣಜಿ ಟ್ರೋಫಿ ಸೆಮಿಫೈನಲ್; ಸತತ 2ನೇ ಶತಕ ಸಿಡಿಸಿದ ರಾಹುಲ್
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಕುಟುಂಬ ಸಮೇತ ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ರಿಷಬ್ ಶೆಟ್ಟಿ; ವಿಡಿಯೋ
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP
ಗಂಡನ ಸ್ನೇಹಿತನ ಮನೇಲಿ ಸಿಕ್ಕಿಬಿದ್ದ ಆಂಟಿ: ಶಾಕಿಂಗ್ ಕಾರಣ ಬಿಚ್ಚಿಟ್ಟ SP