
2026 ರ ಟಿ20 ವಿಶ್ವಕಪ್‌ನಲ್ಲಿ (T20 World Cup 2026) ಭಾರತ ಮತ್ತು ಪಾಕಿಸ್ತಾನ (India vs Pakistan) ನಡುವಿನ ಪಂದ್ಯಕ್ಕೆ ಇನ್ನು ಕೆಲವೇ ಗಂಟೆಗಳು ಬಾಕಿ ಉಳಿದಿವೆ. ಕ್ರಿಕೆಟ್ ಲೋಕದ ಬದ್ಧವೈರಿಗಳೆನಿಸಿಕೊಂಡಿರುವ ಭಾರತ ಮತ್ತು ಪಾಕಿಸ್ತಾನ ತಂಡಗಳು ಶ್ರೀಲಂಕಾದ ಪ್ರೇಮದಾಸ ಕ್ರೀಡಾಂಗಣದಲ್ಲಿ ನಾಳೆ, ಅಂದರೆ ಫೆಬ್ರವರಿ 15, 2026 ರಂದು ಮುಖಾಮುಖಿಯಾಗುತ್ತಿವೆ. ಆದರೆ ಈ ಪಂದ್ಯಕ್ಕೆ ವರುಣ ಅಡ್ಡಿಪಡಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಈ ಆತಂಕದ ನಡುವೆ ಪ್ರೇಮದಾಸ ಕ್ರೀಡಾಂಗಣದಲ್ಲಿ ಉಭಯ ತಂಡಗಳ ಪ್ರದರ್ಶನ (Premadasa Stadium records) ಹೇಗಿದೆ ಎಂಬುದನ್ನು ನೋಡುವುದಾದರೆ..
ಎರಡೂ ತಂಡಗಳು ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಒಮ್ಮೆ ಮಾತ್ರ ಮುಖಾಮುಖಿಯಾಗಿವೆ. ಇದಲ್ಲದೆ, ಭಾರತ ಈ ಕ್ರೀಡಾಂಗಣದಲ್ಲಿ 15 ಪಂದ್ಯಗಳನ್ನು ಮತ್ತು ಪಾಕಿಸ್ತಾನ 7 ಪಂದ್ಯಗಳನ್ನು ಆಡಿದೆ. ಈ ಮೈದಾನದಲ್ಲಿ ಭಾರತ ತಂಡ ಒಟ್ಟು 15 ಟಿ20 ಅಂತರರಾಷ್ಟ್ರೀಯ ಪಂದ್ಯಗಳನ್ನು ಆಡಿದೆ. ಈ ಪೈಕಿ 11 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ. ಇದರಲ್ಲಿ ಪಾಕಿಸ್ತಾನ ವಿರುದ್ಧದ ಒಂದು ಪಂದ್ಯವೂ ಸೇರಿದೆ. 2012 ರಲ್ಲಿ ನಡೆದ ಆ ಪಂದ್ಯವನ್ನು ಭಾರತ 8 ವಿಕೆಟ್‌ಗಳಿಂದ ಗೆದ್ದಿತ್ತು.
ಈ ಕ್ರೀಡಾಂಗಣದಲ್ಲಿ ಭಾರತ 4 ಟಿ20 ಪಂದ್ಯಗಳನ್ನು ಸೋತಿದ್ದು, ಅದರಲ್ಲಿ 3 ಪಂದ್ಯಗಳನ್ನು ಶ್ರೀಲಂಕಾ ವಿರುದ್ಧ ಮತ್ತು ಒಂದು ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಸೋಲನುಭವಿಸಿದೆ. ಶಿಖರ್ ಧವನ್ ಈ ಕ್ರೀಡಾಂಗಣದಲ್ಲಿ ಭಾರತದ ಪರ ಟಿ20 ಪಂದ್ಯಗಳಲ್ಲಿ 284 ರನ್ ಗಳಿಸಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಏತನ್ಮಧ್ಯೆ, ಯುಜ್ವೇಂದ್ರ ಚಾಹಲ್ 12 ವಿಕೆಟ್‌ಗಳೊಂದಿಗೆ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ. ಆದರೆ ಇವರಿಬ್ಬರು ಈಗ ತಂಡದಲ್ಲಿಲ್ಲ.
ಪಾಕಿಸ್ತಾನ ಕ್ರಿಕೆಟ್ ತಂಡವು ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಒಟ್ಟು 7 ಟಿ20 ಪಂದ್ಯಗಳನ್ನು ಆಡಿದೆ. ಈ ಪೈಕಿ 5 ಪಂದ್ಯಗಳನ್ನು ಗೆದ್ದು 2 ಪಂದ್ಯಗಳಲ್ಲಿ ಸೋತಿದೆ. ಇದರಲ್ಲಿ ಶ್ರೀಲಂಕಾ ವಿರುದ್ಧ 3 ಪಂದ್ಯಗಳು ಮತ್ತು ಆಸ್ಟ್ರೇಲಿಯಾ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧ ತಲಾ 1 ಪಂದ್ಯವನ್ನು ಸೋಲಿಸಿದೆ. ಪ್ರೇಮದಾಸ ಕ್ರೀಡಾಂಗಣದಲ್ಲಿ ಪಾಕಿಸ್ತಾನ ಪರ ಅತಿ ಹೆಚ್ಚು ಟಿ20 ರನ್ ಗಳಿಸಿದ ಆಟಗಾರ (182 ರನ್) ಉಮರ್ ಅಕ್ಮಲ್ ಆಗಿದ್ದರೆ, ಸಯೀದ್ ಅಜ್ಮಲ್ 8 ವಿಕೆಟ್‌ಗಳೊಂದಿಗೆ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.
IND vs PAK: ವಿಮಾನ, ಹೋಟೆಲ್ ರೂಂ ಬೆಲೆ ದುಪ್ಪಟ್ಟು; ಕೊಲಂಬೊದಲ್ಲಿ ಜನ ಜಾತ್ರೆ
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್, ಶಿವಂ ದುಬೆ, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ರಿಂಕು ಸಿಂಗ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್.
ಪಾಕಿಸ್ತಾನ ತಂಡ: ಸಲ್ಮಾನ್ ಅಲಿ ಅಘಾ (ನಾಯಕ), ಸಾಹಿಬ್ಜಾದಾ ಫರ್ಹಾನ್, ಅಬ್ರಾರ್ ಅಹ್ಮದ್, ಬಾಬರ್ ಆಝಂ, ಫಹೀಮ್ ಅಶ್ರಫ್, ಫಖರ್ ಜಮಾನ್, ಖವಾಜಾ ನಫೆ, ಮೊಹಮ್ಮದ್ ನವಾಜ್, ಮೊಹಮ್ಮದ್ ಸಲ್ಮಾನ್ ಮಿರ್ಜಾ, ನಸೀಮ್ ಶಾ, ಉಸ್ಮಾನ್ ತಾರಿಕ್, ಸೈಮ್ ಅಯೂಬ್, ಶಾಹೀನ್ ಶಾ ಅಫ್ರಿದಿ, ಶಾದಾಬ್ ಖಾನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ