17 ವರ್ಷಗಳ ಬಳಿಕ ಒಂದೇ ಗ್ರೂಪ್ ಮತ್ತು ಟೀಮ್ ಇಂಡಿಯಾದ ಕಹಿ ನೆನಪು!

T20 World Cup 2026: ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿಯಲಿವೆ. ಈ ತಂಡಗಳನ್ನು 2 ಗ್ರೂಪ್​ಗಳಾಗಿ ವಿಂಗಡಿಸಲಾಗಿದೆ. ಅದರಂತೆ ಗ್ರೂಪ್-1 ರಲ್ಲಿ ಭಾರತ, ಝಿಂಬಾಬ್ವೆ, ಸೌತ್ ಆಫ್ರಿಕಾ ಹಾಗೂ ವೆಸ್ಟ್ ಇಂಡೀಸ್​ಗಳು ಕಣಕ್ಕಿಳಿಯಲಿವೆ. ದ್ವಿತೀಯ ಸುತ್ತಿನಲ್ಲಿ ಈ ತಂಡಗಳು ಮುಖಾಮುಖಿಯಾಗಲಿವೆ.

17 ವರ್ಷಗಳ ಬಳಿಕ ಒಂದೇ ಗ್ರೂಪ್ ಮತ್ತು ಟೀಮ್ ಇಂಡಿಯಾದ ಕಹಿ ನೆನಪು!
Team India

Updated on: Feb 21, 2026 | 12:53 PM

ಬರೋಬ್ಬರಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ನ ಸೂಪರ್-8 ಸುತ್ತಿನಲ್ಲಿ ಭಾರತ, ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಒಂದೇ ಗ್ರೂಪ್​ನಲ್ಲಿ ಕಾಣಿಸಿಕೊಂಡಿದೆ. ಈ ಹಿಂದೆ 2009ರ ಟಿ20 ವಿಶ್ವಕಪ್​ನಲ್ಲಿ ಈ ಮೂರು ತಂಡಗಳು ಸೇಮ್ ಗ್ರೂಪ್​ನಲ್ಲಿ ಸ್ಥಾನ ಪಡೆದಿದ್ದವು. ಇದೀಗ ಹದಿನೇಳು ವರ್ಷಗಳ ಬಳಿಕ ಮತ್ತೊಮ್ಮೆ ಬಲಿಷ್ಠ ಮೂರು ತಂಡಗಳು ಒಂದೇ ಗ್ರೂಪ್​ನಲ್ಲಿ ಕಾಣಿಸಿಕೊಂಡಿದೆ.

ಟೀಮ್ ಇಂಡಿಯಾದ ಕಹಿ ನೆನಪು:

2007ರ ಟಿ20 ವಿಶ್ವಕಪ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ್ದ ಟೀಮ್ ಇಂಡಿಯಾ 2009 ರಲ್ಲಿ ದ್ವಿತೀಯ ಸುತ್ತಿನಲ್ಲೇ ಹೊರಬಿದ್ದಿತ್ತು. ಇದಕ್ಕೆ ಕಾರಣವಾಗಿದ್ದು ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್.

  • ದ್ವಿತೀಯ ಸುತ್ತಿನಲ್ಲಿ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್​ಗಳ ಸೋಲನುಭವಿಸಿತ್ತು.
  • ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು 3 ರನ್​ಗಳಿಂದ ಸೋಲೊಪ್ಪಿಕೊಂಡಿದ್ದರು.
  • ಭಾರತ ತಂಡವನ್ನು 12 ರನ್​ಗಳಿಂದ ಸೋಲಿಸುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿತ್ತು.

ಈ ನಾಲ್ಕು ತಂಡಗಳಲ್ಲಿ 2009 ರಲ್ಲಿ ಸೆಮಿಫೈನಲ್​ಗೇರಿದ್ದು ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್. ಅಂದರೆ ಭಾರತ ಮತ್ತು ಇಂಗ್ಲೆಂಡ್ ತಂಡಗಳು ದ್ವಿತೀಯ ಸುತ್ತಿನಲ್ಲೇ ಹೊರಬಿದ್ದಿದ್ದವು.

ಇದೀಗ ಬರೋಬ್ಬರಿ 17 ವರ್ಷಗಳ ಬಳಿಕ ಗ್ರೂಪ್​-1 ರಲ್ಲಿ ಭಾರತ, ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಕಾಣಿಸಿಕೊಂಡಿವೆ. ಇಲ್ಲಿ ನಾಲ್ಕನೇ ತಂಡವಾಗಿ ಇಂಗ್ಲೆಂಡ್ ಬದಲಿಗೆ ಝಿಂಬಾಬ್ವೆ ತಂಡವಿದೆ.

ಅಂದರೆ 17 ವರ್ಷಗಳ ಹಿಂದೆ ಟೀಮ್ ಇಂಡಿಯಾ ಯಾವ ಎರಡು ತಂಡಗಳ ವಿರುದ್ಧ ಸೋತು ಟೂರ್ನಿಯಿಂದ ಹೊರಬಿದ್ದಿತ್ತೋ ಇದೀಗ ಅದೇ ತಂಡಗಳು ಎದುರಾಳಿಗಳಾಗಿ ಸಿಕ್ಕಿದ್ದಾರೆ. ಅದರಲ್ಲೂ ಭಾರತ ತಂಡದ ವಿರುದ್ಧ ಸೆಣಸಲಿರುವ ಸೌತ್ ಆಫ್ರಿಕಾ, ವೆಸ್ಟ್ ಇಂಡೀಸ್ ಮತ್ತು ಝಿಂಬಾಬ್ವೆ ಮೊದಲ ಸುತ್ತಿನಲ್ಲಿ ಯಾವುದೇ ಪಂದ್ಯವನ್ನು ಸೋತಿರಲಿಲ್ಲ ಎಂಬುದು ಉಲ್ಲೇಖಾರ್ಹ.

ಇತ್ತ ಟೀಮ್ ಇಂಡಿಯಾ ತವರಿನಲ್ಲಿ ಮೂರು ಪಂದ್ಯಗಳನ್ನಾಡಿದರೂ ನಿರೀಕ್ಷಿತ ಪ್ರದರ್ಶನ ಮೂಡಿಬಂದಿಲ್ಲ. ಹೀಗಾಗಿ ಭರ್ಜರಿ ಫಾರ್ಮ್​ನಲ್ಲಿರುವ ಸೌತ್ ಆಫ್ರಿಕಾ ಮತ್ತು ವೆಸ್ಟ್ ಇಂಡೀಸ್ ವಿರುದ್ಧದ ಗೆಲುವು ಅಂದುಕೊಂಡಷ್ಟು ಸುಲಭವಲ್ಲ.

ಭಾರತದ ಪಂದ್ಯಗಳ ವೇಳಾಪಟ್ಟಿ (ಸೂಪರ್-8)

  • ಭಾರತ vs ಸೌತ್ ಆಫ್ರಿಕಾ: ಫೆಬ್ರವರಿ 22 (ಸಂಜೆ 7:00 IST), ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್.
  • ಭಾರತ vs ಝಿಂಬಾಬ್ವೆ: ಫೆಬ್ರವರಿ 26 (ಸಂಜೆ 7:00 IST), ಎಂ.ಎ. ಚಿದಂಬರಂ ಸ್ಟೇಡಿಯಂ, ಚೆನ್ನೈ.
  • ಭಾರತ vs ವೆಸ್ಟ್ ಇಂಡೀಸ್: ಮಾರ್ಚ್ 1 (ಸಂಜೆ 7:00 IST), ಈಡನ್ ಗಾರ್ಡನ್ಸ್, ಕೋಲ್ಕತ್ತಾ.

 

Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us