T20 World Cup: ಭಾರತದ ವಿರುದ್ಧ ಸೋತರೂ ದಿಟ್ಟ ಹೋರಾಟ ನೀಡಿದ ಯುಎಸ್ಎ
India vs USA: ಮುಂಬೈನ ವಾಂಖೆಡೆಯಲ್ಲಿ ನಡೆದ 2026ರ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ಅಮೆರಿಕ ವಿರುದ್ಧ ಸುಲಭ ಜಯ ಸಾಧಿಸಿದೆ. ಹಾಲಿ ಚಾಂಪಿಯನ್ ಭಾರತ ಗೆಲುವಿನ ಶುಭಾರಂಭ ಮಾಡಿತು. 161 ರನ್‌ಗಳಿಗೆ ಭಾರತವನ್ನು ಕಟ್ಟಿಹಾಕಿದ ಅಮೆರಿಕದ ಬೌಲರ್‌ಗಳು ಗಮನ ಸೆಳೆದರು. ಆದರೂ ಭಾರತದ ಬೌಲಿಂಗ್ ದಾಳಿಗೆ ಎದುರಾಗಿ ಅಮೆರಿಕ 132 ರನ್ ಗಳಿಸಲಷ್ಟೇ ಶಕ್ತವಾಗಿ 30 ರನ್‌ಗಳಿಂದ ಸೋಲೊಪ್ಪಿಕೊಂಡಿತು, ಆದರೂ ದಿಟ್ಟ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆ ಗಳಿಸಿತು.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಮೆರಿಕ (India vs USA) ನಡುವಿನ 2026 ರ ಟಿ20 ವಿಶ್ವಕಪ್ (T20 World Cup 2026) ಮೂರನೇ ಪಂದ್ಯದಲ್ಲಿ ಆತಿಥೇಯ ಭಾರತ ತಂಡ ಸುಲಭ ಜಯ ದಾಖಲಿಸಿತು. ಇದರೊಂದಿಗೆ ಹಾಲಿ ಚಾಂಪಿಯನ್ ಆಗಿ ಪಂದ್ಯಾವಳಿಗಿಳಿದಿರುವ ಭಾರತ ಗೆಲುವಿನ ಶುಭಾರಂಭ ಮಾಡಿದೆ. ಇತ್ತ ಭಾರತದ ವಿರುದ್ಧ ಸೋತರೂ ಅನಾನುಭವಿ ಅಮೆರಿಕ ತಂಡ ದಿಟ್ಟ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಟೀಂ ಇಂಡಿಯಾವನ್ನು ಕೇವಲ 161 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಅಮೆರಿಕ ಬೌಲರ್‌ಗಳು ಯಶಸ್ವಿಯಾದರು. ಆದಾಗ್ಯೂ ಈ ಗುರಿ ಬೆನ್ನಟ್ಟಿದ ಅಮೆರಿಕ ತಂಡದ ಬ್ಯಾಟಿಂಗ್ ವಿಭಾಗದ ಭಾರತದ ಬೌಲಿಂಗ್ ದಾಳಿಯ ಮುಂದೆ ತತ್ತರಿಸಿ 20 ಓವರ್‌ಗಳಲ್ಲಿ 132 ರನ್ಗಳನಷ್ಟೇ ಕಲೆಹಾಕಲು ಶಕ್ತವಾಗಿ 29 ರನ್‌ಗಳಿಂದ ಸೋಲೊಪ್ಪಿಕೊಂಡಿತು.
ಸೂರ್ಯಕುಮಾರ್ ಅರ್ಧಶತಕ
ವಾಂಖೆಡೆಯಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಆರಂಭ ನಿರೀಕ್ಷೆಯಂತೆ ಇರಲಿಲ್ಲ. ಅಭಿಷೇಕ್ ಶರ್ಮಾ ಗೋಲ್ಡನ್ ಡಕ್‌ಗೆ ಬಲಿಯಾದರು. ಆ ಬಳಿಕ ಇಶಾನ್ ಕಿಶನ್, ತಿಲಕ್ ವರ್ಮಾ, ಶಿವಂ ದುಬೆ ಬೇಗನೆ ವಿಕೆಟ್ ಒಪ್ಪಿಸಿದರು. ಹೀಗಾಗಿ ತಂಡ ಪವರ್‌ಪ್ಲೇನಲ್ಲಿ ನಾಲ್ಕು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಆದರೆ ನಾಯಕನ ಇನ್ನಿಂಗ್ಸ್ ಆಡಿದ ಸೂರ್ಯಕುಮಾರ್ ಯಾದವ್ ಕೊನೆಯವರೆಗೂ ಅಜೇಯರಾಗಿ ಉಳಿದು, 49 ಎಸೆತಗಳಲ್ಲಿ 84 ರನ್ ಗಳಿಸಿದರು. 171.42 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಸೂರ್ಯ ತಮ್ಮ ಇನ್ನಿಂಗ್ಸ್ ನಾಲ್ಕು ಸಿಕ್ಸರ್‌ಗಳು ಮತ್ತು 10 ಬೌಂಡರಿಗಳನ್ನು ಬಾರಿಸಿದರು.
T20 World Cup: ಬಂದ ಪುಟ್ಟ ಹೋದ ಪುಟ್ಟ; ಭಾರತದ ಬ್ಯಾಟಿಂಗ್ ಬಂಡವಾಳ ಬಯಲು
ಭಾರತದ ಬಿಗಿ ಬೌಲಿಂಗ್
162 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಅಮೆರಿಕ ತಂಡ ಕೂಡ ಭಾರತೀಯ ಬೌಲರ್‌ಗಳ ಮುಂದೆ ಮುಗ್ಗರಿಸಿತು. ಎರಡನೇ ಓವರ್‌ನಲ್ಲಿ ಗೌಸ್ ಅವರನ್ನು ಔಟ್ ಮಾಡುವ ಮೂಲಕ ಮೊಹಮ್ಮದ್ ಸಿರಾಜ್ ಅಮೆರಿಕಕ್ಕೆ ಆಘಾತ ನೀಡಿದರು. ನಂತರ ಅರ್ಷದೀಪ್ ಸಿಂಗ್ ಅಮೆರಿಕದ ನಾಯಕ ಮೋನಾಂಕ್ ಪಟೇಲ್ ಅವರನ್ನು ಶೂನ್ಯಕ್ಕೆ ಔಟ್ ಮಾಡಿದರು. ಆ ಬಳಿಕವೂ ಅಮೆರಿಕ ತಂಡಕ್ಕೆ ಚೇತರಿಸಿಕೊಳ್ಳಲು ಸಾಧ್ಯವಾಗಲಿಲ್ಲ. ತಂಡದ ಪರ ಮಿಲಿಂದ್ (34) ಮತ್ತು ಸಂಜಯ್ (37) ಸ್ವಲ್ಪ ಹೋರಾಟ ನೀಡಿದರಾದರೂ ತಂಡವನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಅಂತಿಮವಾಗಿ ಅಮೆರಿಕ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 132 ರನ್‌ಗಳಿಗೆ ಸೀಮಿತವಾಯಿತು. ಭಾರತ ಪರ ಸಿರಾಜ್ 3, ಅರ್ಶ್‌ದೀಪ್ 2 ಮತ್ತು ಅಕ್ಷರ್ ಪಟೇಲ್ 2 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:46 pm, Sat, 7 February 26
